Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 11:8 - ಕನ್ನಡ ಸತ್ಯವೇದವು C.L. Bible (BSI)

8 ಅಂತೆಯೇ ಮಾಡಿ ಅವರನ್ನು ಅಲ್ಲಿಂದ ಜಗದೆಲ್ಲೆಡೆಗೆ ಚದರಿಸಿಬಿಟ್ಟರು. ಜನರು ಆ ಪಟ್ಟಣ ಕಟ್ಟುವುದನ್ನು ನಿಲ್ಲಿಸಿಬಿಟ್ಟರು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯೆಹೋವನು ಅದೇ ಪ್ರಕಾರ ಅವರನ್ನು ಭೂಲೋಕದಲ್ಲೆಲ್ಲಾ ಚದರಿಸಿ ಬಿಟ್ಟನು. ಅವರು ಆ ಪಟ್ಟಣ ಕಟ್ಟುವುದನ್ನು ನಿಲ್ಲಿಸಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಹಾಗೆಯೇ ಮಾಡಿ ಯೆಹೋವನು ಅವರನ್ನು ಅಲ್ಲಿಂದ ಭೂಲೋಕದಲ್ಲೆಲ್ಲಾ ಚದರಿಸಿದನು. ಅವರು ಆ ಪಟ್ಟಣ ಕಟ್ಟುವದನ್ನು ನಿಲ್ಲಿಸಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಅಂತೆಯೇ ಯೆಹೋವನು ಜನರನ್ನು ಭೂಮಿಯ ಮೇಲೆಲ್ಲಾ ಚದರಿಸಿಬಿಟ್ಟನು. ಆದ್ದರಿಂದ ಆ ಪಟ್ಟಣವನ್ನು ಕಟ್ಟಿ ಪೂರೈಸಲು ಅವರಿಗೆ ಸಾಧ್ಯವಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆದ್ದರಿಂದ ಯೆಹೋವ ದೇವರು ಅವರನ್ನು ಅಲ್ಲಿಂದ ಭೂಮಿಯ ಮೇಲೆಲ್ಲಾ ಚದರಿಸಿದರು. ಆಗ ಅವರು ಆ ಪಟ್ಟಣ ಕಟ್ಟುವುದನ್ನು ನಿಲ್ಲಿಸಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 11:8
10 ತಿಳಿವುಗಳ ಹೋಲಿಕೆ  

ಗರ್ವ ಹೃದಯಿಗಳನಾತ ಚದರಿಸಿರುವನು I ಪ್ರದರ್ಶಿಸಿರುವನು ತನ್ನ ಬಾಹುಬಲವನು II


ಪರಾತ್ಪರ ದೇವರು ಜನಾಂಗಗಳನು ಬೇರೆಬೇರೆಮಾಡಿದಾಗ, ಅವರವರಿಗೆ ಸ್ವದೇಶಗಳನು ವಿಂಗಡಿಸಿಕೊಟ್ಟಾಗ, ದೇವಕುವರರ ಸಂಖ್ಯಾನುಸಾರ ಪ್ರದೇಶಗಳನು ಗೊತ್ತುಮಾಡಿದಾಗ.


ಸಂತತಿ - ಜನಾಂಗಗಳ ಪ್ರಕಾರ ಇವರೇ ನೋಹನ ವಂಶದವರು. ಜಲಪ್ರಳಯವಾದ ನಂತರ ಭೂಮಿಯ ಮೇಲೆ ಹರಡಿಕೊಂಡ ಜನಾಂಗಗಳು ಇವರೇ.


ಎಬರನಿಗೆ ಇಬ್ಬರು ಮಕ್ಕಳು. ಒಬ್ಬನಿಗೆ ಪೆಲೆಗೆಂಬ ಹೆಸರು. ಇವನ ಕಾಲದಲ್ಲೇ ಭೂಜನದ ವಿಭಜನೆ ಆದುದು. ಅವನ ತಮ್ಮನ ಹೆಸರು ಯೊಕ್ತಾನ್.


ಹೀಗೆ ಸರ್ವೇಶ್ವರ ಇಡೀ ಜಗತ್ತಿನ ಭಾಷೆಯನ್ನು ಗಲಿಬಿಲಿಗೊಳಿಸಿ ಅಲ್ಲಿಂದ ಜನರನ್ನು ಜಗದೆಲ್ಲೆಡೆಗೆ ಚದರಿಸಿದ ಕಾರಣ ಆ ಪಟ್ಟಣಕ್ಕೆ ‘ಬಾಬೆಲೋನ್‍’ ಎಂದು ಹೆಸರಾಯಿತು.


ಒಂದು ಪಟ್ಟಣವನ್ನು ಕಟ್ಟೋಣ; ಆಕಾಶವನ್ನು ಮುಟ್ಟುವಂಥ ಗೋಪುರವನ್ನು ನಿರ್ಮಿಸಿ ಪ್ರಖ್ಯಾತಿ ಪಡೆಯೋಣ. ಹೀಗೆ ಮಾಡಿದರೆ ನಾವು ಜಗದಲ್ಲೆಲ್ಲಾ ಚದರಿಹೋಗುವುದಕ್ಕೆ ಆಸ್ಪದವಿರುವುದಿಲ್ಲ” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು. ಕಟ್ಟುವಾಗ ಕಲ್ಲಿಗೆ ಬದಲಾಗಿ ಇಟ್ಟಿಗೆಯನ್ನೂ ಗಾರೆಗೆ (ಸುಣ್ಣಕ್ಕೆ) ಬದಲಾಗಿ ಕಲ್ಲರಗನ್ನೂ ಉಪಯೋಗಿಸಿದರು.


ಅವರ ಕೋಪ ಭೀಕರ, ಅದಕ್ಕಿರಲಿ ಧಿಕ್ಕಾರ! ಅವರ ರೌದ್ರ - ಕ್ರೂರ, ಅದಕ್ಕಿರಲಿ ಧಿಕ್ಕಾರ! ವಿಭಾಗಿಸುವೆನವರನು ಯಕೋಬ ಕುಲದಲಿ ಚದರಿಸುವೆನವರನು ಇಸ್ರಯೇಲರಲಿ.


ಕಾಡುಕೋಣದ ಕೊಂಬಿನ ಬಲವನು ನನಗಿತ್ತಿರುವೆ I ಚೈತನ್ಯದ ತೈಲದಿಂದ ನನ್ನನು ಅಭ್ಯಂಜಿಸಿರುವೆ II


ದೇಶ - ಭಾಷಾ - ಕುಲ - ಜನಾಂಗಗಳ ಪ್ರಕಾರ ಇವರೇ ಯೆಫೆತನ ವಂಶದವರು.


ವ್ಯರ್ಥವಾಗಿಪನು ಪ್ರಭು ರಾಷ್ಟ್ರಯೋಜನೆಗಳನು I ನಿರರ್ಥಕವಾಗಿಪನು ಜನರ ದುಷ್ಟಸಂಕಲ್ಪಗಳನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು