ಆದಿಕಾಂಡ 11:9 - ಕನ್ನಡ ಸತ್ಯವೇದವು C.L. Bible (BSI)9 ಹೀಗೆ ಸರ್ವೇಶ್ವರ ಇಡೀ ಜಗತ್ತಿನ ಭಾಷೆಯನ್ನು ಗಲಿಬಿಲಿಗೊಳಿಸಿ ಅಲ್ಲಿಂದ ಜನರನ್ನು ಜಗದೆಲ್ಲೆಡೆಗೆ ಚದರಿಸಿದ ಕಾರಣ ಆ ಪಟ್ಟಣಕ್ಕೆ ‘ಬಾಬೆಲೋನ್’ ಎಂದು ಹೆಸರಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಸಮಸ್ತ ಲೋಕದ ಭಾಷೆಯನ್ನು ಯೆಹೋವನು ಅಲ್ಲಿ ಗಲಿಬಿಲಿ ಮಾಡಿ, ಅವರನ್ನು ಭೂಲೋಕದಲ್ಲೆಲ್ಲಾ ಚದರಿಸಿದ್ದರಿಂದ ಆ ಪಟ್ಟಣಕ್ಕೆ ಬಾಬೆಲ್ (ದೇವರ ಬಾಗಿಲು) ಎಂಬ ಹೆಸರಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಸಮಸ್ತಲೋಕದ ಭಾಷೆಯನ್ನು ಯೆಹೋವನು ಅಲ್ಲಿ ತಾರುಮಾರುಮಾಡಿ ಅವರನ್ನು ಅಲ್ಲಿಂದ ಭೂಲೋಕದಲ್ಲೆಲ್ಲಾ ಚದರಿಸಿದ್ದರಿಂದ ಆ ಪಟ್ಟಣಕ್ಕೆ ಬಾಬೆಲ್ ಎಂಬ ಹೆಸರಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಯೆಹೋವನು ಇಡೀ ಲೋಕದ ಭಾಷೆಯನ್ನು ತಾರುಮಾರು ಮಾಡಿದ್ದು ಆ ಸ್ಥಳದಲ್ಲೇ. ಆದ್ದರಿಂದ ಆ ಸ್ಥಳಕ್ಕೆ ಬಾಬಿಲೋನ್ ಎಂದು ಹೆಸರಾಯಿತು. ಹೀಗೆ ಯೆಹೋವನು ಜನರನ್ನು ಆ ಸ್ಥಳದಿಂದ ಭೂಮಿಯಲ್ಲೆಲ್ಲಾ ಚದರಿಸಿಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಆದಕಾರಣ ಅದಕ್ಕೆ, ಬಾಬೆಲ್ ಎಂದು ಹೆಸರಾಯಿತು. ಏಕೆಂದರೆ ಅಲ್ಲಿ ಯೆಹೋವ ದೇವರು ಇಡೀ ಜಗತ್ತಿನ ಭಾಷೆಗಳನ್ನು ಗಲಿಬಿಲಿ ಮಾಡಿದರು. ಅಲ್ಲಿಂದ ಯೆಹೋವ ದೇವರು ಅವರನ್ನು ಭೂಲೋಕದಲ್ಲೆಲ್ಲಾ ಚದರಿಸಿಬಿಟ್ಟರು. ಅಧ್ಯಾಯವನ್ನು ನೋಡಿ |