Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 12:1 - ಕನ್ನಡ ಸತ್ಯವೇದವು C.L. Bible (BSI)

1 ಸರ್ವೇಶ್ವರ‍ಸ್ವಾಮಿ ಅಬ್ರಾಮನಿಗೆ ಹೀಗೆಂದರು - “ನೀನು ನಿನ್ನ ಸ್ವಂತ ನಾಡನ್ನೂ ಬಂಧುಬಳಗದವರನ್ನೂ ತವರು ಮನೆಯನ್ನೂ ಬಿಟ್ಟು ನಾನು ತೋರಿಸುವ ನಾಡಿಗೆ ಹೊರಟುಹೋಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನು ಅಬ್ರಾಮನಿಗೆ, “ನೀನು, ನಿನ್ನ ಸ್ವದೇಶವನ್ನೂ, ಬಂಧುಬಳಗವನ್ನೂ, ತಂದೆಯ ಮನೆಯನ್ನೂ ಬಿಟ್ಟು ನಾನು ತೋರಿಸುವ ದೇಶಕ್ಕೆ ಹೊರಟು ಹೋಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನು ಅಬ್ರಾಮನಿಗೆ - ನೀನು ಸ್ವದೇಶವನ್ನೂ ಬಂಧು ಬಳಗವನ್ನೂ ತಂದೆಯ ಮನೆಯನ್ನೂ ಬಿಟ್ಟು ನಾನು ತೋರಿಸುವ ದೇಶಕ್ಕೆ ಹೊರಟುಹೋಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನು ಅಬ್ರಾಮನಿಗೆ, “ನಿನ್ನ ದೇಶವನ್ನೂ ನಿನ್ನ ಜನರನ್ನೂ ಬಿಟ್ಟು ಹೊರಡು. ನಿನ್ನ ತಂದೆಯ ಕುಟುಂಬವನ್ನು ಬಿಟ್ಟು ನಾನು ತೋರಿಸುವ ದೇಶಕ್ಕೆ ಹೋಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರು ಅಬ್ರಾಮನಿಗೆ ಹೀಗೆ ಹೇಳಿದರು, “ನೀನು ನಿನ್ನ ಸ್ವದೇಶದಿಂದಲೂ ಬಂಧುಗಳಿಂದಲೂ ನಿನ್ನ ತಂದೆಯ ಮನೆಯಿಂದಲೂ ಹೊರಬಂದು, ನಾನು ನಿನಗೆ ತೋರಿಸುವ ನಾಡಿಗೆ ಹೋಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 12:1
20 ತಿಳಿವುಗಳ ಹೋಲಿಕೆ  

ಅಬ್ರಹಾಮನು ದೇವರ ಕರೆಗೆ ಓಗೊಡುವುದಕ್ಕೂ ವಿಶ್ವಾಸವೇ ಕಾರಣವಾಗಿತ್ತು. ಆತನು ಆ ಕರೆಗನುಸಾರವಾಗಿ ತಾನು ಬಾಧ್ಯವಾಗಿ ಹೊಂದಬೇಕಾಗಿದ್ದ ನಾಡಿಗೆ ಹೊರಟನು. ತಾನು ಸೇರಬೇಕಾಗಿದ್ದ ಸ್ಥಳ ಯಾವುದೆಂದು ತಿಳಿಯದಿದ್ದರೂ ಸ್ವದೇಶವನ್ನು ಬಿಟ್ಟು ತೆರಳಿದನು.


ಸರ್ವೇಶ್ವರಾ, ಅಬ್ರಾಮನನು ನೀವು ಆರಿಸಿಕೊಂಡಿರಿ ಬಾಬಿಲೋನಿನ ‘ಊರ್’ ನಗರದಿಂದ ಆತನನು ಬರಮಾಡಿದಿರಿ ದೇವರಾದ ನೀವೇ ಆತನಿಗೆ ‘ಅಬ್ರಹಾಮ’ ಎಂದು ಹೆಸರಿಟ್ಟಿರಿ.


ನೆನೆಯಿರಿ ನಿಮ್ಮ ಮೂಲಪುರುಷ ಅಬ್ರಹಾಮನನು ಅವನ ಸತಿ ಸಾರಳನು. ಅಬ್ರಹಾಮನನ್ನು ನಾ ಕರೆದಾಗ ಆತನು ಒಬ್ಬಂಟಿಗನು ಆಶೀರ್ವಾದದಿ ನಾ ಬೆಳೆಸಿದೆ ಆತನ ಸಂತಾನವನು.


ಸವೇಶ್ವರ ಬಳಿಕ ಅಬ್ರಾಮನಿಗೆ ಇಂತೆಂದರು: “ಈ ನಾಡನ್ನು ನಿನಗೆ ಸೊತ್ತಾಗಿ ಕೊಡಬೇಕೆಂದು ಬಾಬಿಲೋನಿನಲ್ಲಿರುವ ಊರ್ ಪಟ್ಟಣದಿಂದ ನಿನ್ನನ್ನು ಬರಮಾಡಿದ ಸರ್ವೇಶ್ವರ ನಾನೇ,” ಎಂದರು.


“ನರಪುತ್ರನೇ, ಇಸ್ರಯೇಲ್ ನಾಡಿನ ಹಾಳುಪ್ರದೇಶಗಳಲ್ಲಿ ವಾಸಿಸುವರು, ‘ಅಬ್ರಹಾಮನು ಒಂಟಿಗನಾಗಿದ್ದರೂ ಈ ನಾಡು ಅವನಿಗೆ ಸೊತ್ತಾಗಿ ಸಿಕ್ಕಿತು; ಅದು ಬಹುಜನರಾದ ನಮಗೆ ಸೊತ್ತಾಗಿ ಸಿಕ್ಕಿದ್ದು ಏನು ದೊಡ್ಡದು! ಎಂದುಕೊಳ್ಳುತ್ತಿದ್ದಾರೆ.


ಇದಲ್ಲದೆ: ಅನ್ಯಜನರನ್ನು ಬಿಟ್ಟು ಹೊರಬನ್ನಿ ಅವರಿಂದ ಬೇರ್ಪಟ್ಟು ಬಾಳಿರಿ ಮಲಿನವಾದುದನ್ನು ಮುಟ್ಟದಿರಿ.


ಬರಮಾಡಿದೆ ನಾನು ನಿನ್ನನ್ನು ಭೂಮಿಯ ಕಟ್ಟಕಡೆಯಿಂದ ಕರೆದುತಂದೆ ನಿನ್ನನ್ನು ದಿಗಂತದಿಂದ. ನಿನಗೆ ನಾನು ಇಂತೆಂದೆ : ನೀನೆನ್ನ ದಾಸ, ನಿನ್ನ ನಾ ತಿರಸ್ಕರಿಸದೆ ಆರಿಸಿಕೊಂಡೆ !


ಸ್ವರ್ಗದಿಂದ ಬಂದ ಮತ್ತೊಂದು ವಾಣಿಯನು ಕೇಳಿದೆ. ಅದು : ನನ್ನ ಜನರೇ, ಅವಳನ್ನು ತೊರೆದು ಹೊರಬನ್ನಿ ಪಾಲುಗಾರರಾಗದಿರಿ ಅವಳ ಪಾಪಗಳಲಿ ತುತ್ತಾಗದಿರಿ ಅವಳಿಗೆ ಬಂದೆರಗುವ ವಿಪತ್ತುಗಳಲಿ !


ನಾನು ದೇವರ ಸಂಕಲ್ಪಕ್ಕೆ ತಲೆಬಾಗಿ, ತಂದೆಯ ಮನೆಯನ್ನು ಬಿಟ್ಟು, ದೇಶಾಂತರ ಹೋಗಲು ಹೊರಟಾಗ ಈಕೆಗೆ, ‘ನಿನ್ನಿಂದ ನನಗೊಂದು ಉಪಕಾರವಾಗಬೇಕು; ಅದೇನೆಂದರೆ, ನಾವು ಹೋದಕಡೆಯೆಲ್ಲಾ ನಾನು ನಿನಗೆ ಅಣ್ಣನಾಗಬೇಕೆಂದು ಹೇಳು,’ ಎಂದು ತಿಳಿಸಿದೆ,” ಎಂದನು.


ನನ್ನ ಸ್ವಂತ ನಾಡಿಗೂ ನನ್ನ ಬಂಧುಬಳಗದವರ ಬಳಿಗೂ ಹೋಗಿ ಅವರಿಂದಲೇ ಅವನಿಗೆ ಹೆಣ್ಣು ತರಬೇಕು. ಹಾಗೆ ಮಾಡುತ್ತೇನೆಂದು ನೀನು ನನ್ನ ತೊಡೆಯ ಕೆಳಗೆ ಕೈಯಿಟ್ಟು ಇಹಪರಲೋಕಗಳ ಸರ್ವೇಶ್ವರನಾದ ದೇವರ ಮೇಲೆ ಪ್ರಮಾಣ ಮಾಡಬೇಕು,” ಎಂದು ಹೇಳಿದನು.


ಅಲ್ಲಿ ಸರ್ವೇಶ್ವರ ಸ್ವಾಮಿ ಇಸಾಕನಿಗೆ ದರ್ಶನ ಕೊಟ್ಟು ಇಂತೆಂದರು: “ನೀನು ಈಜಿಪ್ಟಿಗೆ ಹೋಗಬೇಡ;


ನನ್ನ ತಂದೆ ತಾತಂದಿರು ಗೋಜಾನ್, ಹಾರನ್, ರೆಚೆಪ್ ಎಂಬ ನಗರಗಳ ಜನರನ್ನು ಮತ್ತು ತೆಲಸ್ಸಾರ್ ಪ್ರಾಂತ್ಯದಲ್ಲಿರುವ ಎದೆನಿನ ಜನರನ್ನು ನಾಶಮಾಡಿದರು. ಆಗ ಅವರ ದೇವರುಗಳು ಅವರನ್ನು ರಕ್ಷಿಸಲಾಗಲಿಲ್ಲ.


ನನ್ನ ತಂದೆಯ ಮನೆಯಿಂದಲೂ ನಾನು ಹುಟ್ಟಿದ ನಾಡಿನಿಂದಲೂ ನನ್ನನ್ನು ಇಲ್ಲಿಗೆ ಕರೆತಂದು, ‘ನಿನ್ನ ಸಂತತಿಗೆ ಈ ನಾಡನ್ನು ಕೊಡುತ್ತೇನೆ,’ ಎಂದು ಪರಲೋಕ ದೇವರಾದ ಸರ್ವೇಶ್ವರ ಸ್ವಾಮಿ ಪ್ರಮಾಣಮಾಡಿ ಹೇಳಿದ್ದಾರೆ. ಅವರೇ ತಮ್ಮ ದೂತನನ್ನು ನಿನ್ನ ಮುಂದೆ ಕಳುಹಿಸಿ, ನೀನು ಅಲ್ಲಿಂದ ನನ್ನ ಮಗನಿಗೆ ಹೆಣ್ಣು ತರುವುದಕ್ಕೆ ಅನುಕೂಲ ಮಾಡಿಕೊಡುವರು.


ನನ್ನ ತಂದೆಯ ಮನೆಗೂ ನನ್ನ ಬಂಧುಬಳಗದವರ ಬಳಿಗೂ ಹೋಗಿ ಅವರಿಂದಲೇ ಹೆಣ್ಣನ್ನು ತರಬೇಕು’ ಎಂದು ಹೇಳಿ ನನ್ನಿಂದ ಪ್ರಮಾಣ ಮಾಡಿಸಿಕೊಂಡಿದ್ದಾರೆ.


ಅದಕ್ಕೆ ಅವನು, “ನಾನು ಬರುವುದಿಲ್ಲ; ನನ್ನ ಸ್ವದೇಶಕ್ಕೆ, ನನ್ನ ಸ್ವಜನರ ಬಳಿಗೆ ಹೋಗುತ್ತೇನೆ,” ಎಂದು ಉತ್ತರಿಸಿದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು