Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 12:15 - ಕನ್ನಡ ಸತ್ಯವೇದವು C.L. Bible (BSI)

15 ಫರೋಹನ ಪದಾಧಿಕಾರಿಗಳು ಆಕೆಯನ್ನು ನೋಡಿಬಂದು ಆಕೆಯ ಚೆಲುವನ್ನು ಅವನ ಮುಂದೆ ಹೊಗಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಫರೋಹನ ರಾಜಕುಮಾರರು ಆಕೆಯನ್ನು ನೋಡಿ ಬಂದು, ಅವನ ಮುಂದೆ ಹೊಗಳಲಾಗಿ ಫರೋಹನು ಆ ಸ್ತ್ರೀಯನ್ನು ಅರಮನೆಗೆ ಕರೆಯಿಸಿ ಆಕೆಯ ನಿಮಿತ್ತ ಅಬ್ರಾಮನಿಗೆ ಉಪಕಾರ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಫರೋಹನ ಪ್ರಧಾನರು ಆಕೆಯನ್ನು ನೋಡಿ ಬಂದು ಅವನ ಮುಂದೆ ಹೊಗಳಲಾಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಈಜಿಪ್ಟಿನ ಕೆಲವು ನಾಯಕರು ಸಹ ಆಕೆಯನ್ನು ಕಂಡರು. ಅವರು ಫರೋಹನ ಬಳಿಗೆ ಹೋಗಿ ಆಕೆಯ ಅಮೋಘ ಸೌಂದರ್ಯವನ್ನು ತಿಳಿಸಿದರು. ಬಳಿಕ ಆ ನಾಯಕರು ಸಾರಯಳನ್ನು ಫರೋಹನ ಬಳಿಗೆ ಕರೆದೊಯ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಫರೋಹನ ಅಧಿಕಾರಿಗಳು ಆಕೆಯನ್ನು ನೋಡಿ, ಫರೋಹನ ಮುಂದೆ ಆಕೆಯನ್ನು ಹೊಗಳಿ, ಆ ಸ್ತ್ರೀಯನ್ನು ಅವನ ಅರಮನೆಗೆ ಕರೆದುಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 12:15
18 ತಿಳಿವುಗಳ ಹೋಲಿಕೆ  

ಅಲ್ಲಿದ್ದಾಗ ಅಬ್ರಹಾಮನು ತನ್ನ ಹೆಂಡತಿ ಸಾರಳು ತನಗೆ ತಂಗಿಯಾಗಬೇಕೆಂದು ಹೇಳಿಕೊಂಡನು. ಈ ಕಾರಣ ಗೆರಾರಿನ ಅರಸನಾದ ಅಬೀಮೆಲೆಕನು ಆಕೆಯನ್ನು ಕರೆಸಿ ತನ್ನ ಮನೆಯಲ್ಲಿ ಸೇರಿಸಿಕೊಂಡನು.


ವಿವಾಹಬಂಧನವನ್ನು ಎಲ್ಲರೂ ಗೌರವಿಸಲಿ; ದಂಪತಿಗಳ ಸಂಬಂಧವು ನಿಷ್ಕಳಂಕವಾಗಿರಲಿ. ಕಾಮುಕರೂ ವ್ಯಭಿಚಾರಿಗಳೂ ದೇವರ ನ್ಯಾಯತೀರ್ಪಿಗೆ ಗುರಿಯಾಗುತ್ತಾರೆ.


ಈಜಿಪ್ಟಿನ ಅರಸನು ಗಡಿಬಿಡಿಯ ಮಾತಾಡಿ ಸದಾವಕಾಶವನ್ನು ಕಳೆದುಕೊಂಡವನೆಂದು ಕರೆಸಿಕೊಂಡ ವ್ಯಕ್ತಿ.


ಸುಳ್ಳುವರದಿಗೆ ಕಿವಿಗೊಡುವ ರಾಜಸೇವಕರೆಲ್ಲರು ದುರುಳರು.


ಅಂತೆಯೆ ನೆರೆಯವನ ಸತಿಯನ್ನು ಕೂಡುವವನ ಗತಿಯು; ಆಕೆಯನ್ನು ಮುಟ್ಟುವವನು ತಪ್ಪಿಸಿಕೊಳ್ಳನು ದಂಡನೆಯನ್ನು.


ಅರಸಿರಿ ಪ್ರಭುವನೂ ಆತನ ಶಕ್ತಿಯನೂ I ಅಪೇಕ್ಷಿಸಿ ನಿತ್ಯವೂ ಆತನ ದರ್ಶನವನು II


ಮುರಿದ ಜೊಂಡಿಗೆ ಸಮಾನವಾದ ಈಜಿಪ್ಟಿನ ಮೇಲೆ ನಿನಗೆ ಭರವಸೆಯಿದೆಯಷ್ಟೆ. ಅಂಥ ಜೊಂಡನ್ನು ಊರಿಕೊಳ್ಳುವವನ ಕೈಯನ್ನೇ ಚುಚ್ಚಿ ತಿವಿಯುವ ಕೋಲು ಅದು. ಈಜಿಪ್ಟಿನ ರಾಜ ಫರೋಹನಲ್ಲಿ ಭರವಸೆಯಿಟ್ಟವರಿಗೆ ಆಗುವ ಗತಿ ಇದೇ.’


ಸೊಲೊಮೋನನು ಈಜಿಪ್ಟಿನ ಅರಸ ಫರೋಹನ ಮಗಳನ್ನು ಮದುವೆಮಾಡಿಕೊಂಡು ಅವನ ಅಳಿಯನಾದ. ತನ್ನ ಅರಮನೆಯನ್ನು, ಸರ್ವೇಶ್ವರನ ಮಹಾದೇವಾಲಯವನ್ನು ಹಾಗು ಜೆರುಸಲೇಮಿನ ಸುತ್ತಣ ಗೋಡೆಯನ್ನು ಕಟ್ಟಿಮುಗಿಸುವ ತನಕ ಆಕೆಯನ್ನು ದಾವೀದನಗರದಲ್ಲೇ ಇರಿಸಿಕೊಂಡನು.


ನಡೆದ ಸಂಗತಿ ಫರೋಹನಿಗೆ ಮುಟ್ಟಿತು. ಅವನು ಮೋಶೆಯನ್ನು ಕೊಲ್ಲಿಸಬೇಕೆಂದು ಆಲೋಚಿಸುತ್ತಿದ್ದನು. ಆದುದರಿಂದ ಮೋಶೆ ಫರೋಹನ ಬಳಿಯಿಂದ ಪಲಾಯನಗೈದು ಮಿದ್ಯಾನ್ ನಾಡನ್ನು ಸೇರಿದನು.


ಅಷ್ಟರಲ್ಲಿ ಫರೋಹನ ಪುತ್ರಿ ಸ್ನಾನಕ್ಕಾಗಿ ಆ ನದಿಯ ಬಳಿಗೆ ಇಳಿದು ಬಂದಳು. ಆಕೆಯ ಗೆಳತಿಯರು ನದಿಯ ದಡದಲ್ಲಿ ತಿರುಗಾಡುತ್ತಿದ್ದರು. ಆಕೆ ಜಂಬುಹುಲ್ಲಿನ ನಡುವೆ ಪೆಟ್ಟಿಗೆಯೊಂದನ್ನು ಕಂಡಳು. ದಾಸಿಯೊಬ್ಬಳನ್ನು ಕಳಿಸಿ ಅದನ್ನು ತರಿಸಿದಳು.


ಎರಡು ವರ್ಷಗಳಾದ ಮೇಲೆ ಫರೋಹನಿಗೆ ಒಂದು ಕನಸುಬಿತ್ತು. ಆ ಕನಸಿನಲ್ಲಿ ಅವನು ನೈಲ್ ನದಿಯ ತೀರದಲ್ಲಿ ನಿಂತಿದ್ದನು.


ಫರೋಹನು ಆ ಇಬ್ಬರು ನೌಕರರ ಮೇಲೆ, ಅಂದರೆ ಪಾನಸೇವಕರಲ್ಲಿ ಮುಖ್ಯಸ್ಥನ ಮೇಲೆಯೂ ಅಡಿಗೆಭಟ್ಟರ ಮುಖ್ಯಸ್ಥನ ಮೇಲೆಯೂ ಕೋಪಗೊಂಡು,


“ನರಪುತ್ರನೇ, ನೀನು ಈಜಿಪ್ಟಿನ ಅರಸ ಫರೋಹನನ್ನು ಕುರಿತು ಶೋಕಗೀತೆಯೊಂದನ್ನು ನುಡಿ : “ನೀನು ಮೃಗರಾಜನೆನಿಸಿಕೊಂಡಿರುವೆ ಜನಾಂಗಗಳಲ್ಲಿ, ಇಗೋ ದೊಡ್ಡ ಮೊಸಳೆಯಾಗಿಬಿಟ್ಟಿರುವೆ ಮಹಾನದಿಯಲ್ಲಿ. ನೀನಿದ್ದ ನದಿಗಳ ಭೇದಿಸಿಕೊಂಡು ಬಂದು, ಕಾಲಿಂದ ನೀ ಕಲಕಿರುವೆ ಅದರ ನೀರನ್ನು, ತುಳಿದು ಬದಿಮಾಡಿರುವೆ ಜನಾಂಗವೆಂಬ ಹೊಳೆಯನ್ನು.”


ಆ ಕೊಡದಿಂದ ಕುಡಿದ ಮತ್ತಿತರರು ಇವರು: ಈಜಿಪ್ಟಿನ ಅರಸ ಫರೋಹನು ಅವನ ಸೇವಕರು, ಮಂತ್ರಿಗಳು, ಎಲ್ಲ ಪ್ರಜೆಗಳು ಮತ್ತು ಅಲ್ಲಿನ ವಿದೇಶೀಯರು;


ಅಬ್ರಾಮನು ಈಜಿಪ್ಟಿಗೆ ಬಂದಾಗ ಈಜಿಪ್ಟಿನವರು ಅವನ ಸಂಗಡ ಇದ್ದ ಹೆಣ್ಣು ಬಹಳ ಚೆಲುವೆಯೆಂದುಕೊಂಡರು


ಅಲ್ಲಿಯ ಜನರು ಅವನ ಹೆಂಡತಿಯ ವಿಷಯವಾಗಿ ವಿಚಾರಿಸಿದರು. “ಅವಳು ನನ್ನ ತಂಗಿ”, ಎಂದು ಇಸಾಕನು ಹೇಳಿದನು. ರೆಬೆಕ್ಕಳು ಬಲು ಚೆಲುವೆಯಾಗಿದ್ದರಿಂದ ಆಕೆಯ ನಿಮಿತ್ತ ತನ್ನನ್ನು ಕೊಂದಾರು ಎಂದು ಹೆದರಿ ಹಾಗೆ ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು