Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 12:2 - ಕನ್ನಡ ಸತ್ಯವೇದವು C.L. Bible (BSI)

2 ನಾನು ನಿನ್ನನ್ನು ದೊಡ್ಡ ಜನಾಂಗವಾಗಿ ಮಾಡುತ್ತೇನೆ. ನಿನ್ನನ್ನು ಆಶೀರ್ವದಿಸಿ ನಿನ್ನ ಹೆಸರಿಗೆ ಘನತೆಗೌರವವನ್ನು ತರುತ್ತೇನೆ. ನೀನೇ ಆದರ್ಶದ ಆಶೀರ್ವಾದವಾಗಿ ಬೆಳಗುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಾನು ನಿನ್ನನ್ನು ಮಹಾ ಜನಾಂಗವಾಗುವಂತೆ ಮಾಡಿ, ಆಶೀರ್ವದಿಸಿ, ನಿನ್ನ ಹೆಸರನ್ನು ಪ್ರಖ್ಯಾತಿಗೆ ತರುವೆನು. ನೀನು ಆಶೀರ್ವಾದದ ನಿಧಿಯಾಗುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನಾನು ನಿನ್ನನ್ನು ದೊಡ್ಡ ಜನಾಂಗವಾಗುವಂತೆ ಮಾಡಿ ಆಶೀರ್ವದಿಸಿ ನಿನ್ನ ಹೆಸರನ್ನು ಪ್ರಖ್ಯಾತಿಗೆ ತರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನಾನು ನಿನ್ನನ್ನು ಆಶೀರ್ವದಿಸುವೆನು; ನಿನ್ನನ್ನು ದೊಡ್ಡ ಜನಾಂಗವನ್ನಾಗಿ ಮಾಡಿ ನಿನ್ನ ಹೆಸರನ್ನು ಪ್ರಖ್ಯಾತಿಪಡಿಸುವೆನು; ನೀನು ಆಶೀರ್ವಾದದಾಯಕನಾಗುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ನಾನು ನಿನ್ನನ್ನು ದೊಡ್ಡ ಜನಾಂಗದವನನ್ನಾಗಿ ಮಾಡಿ, ನಿನ್ನನ್ನು ಆಶೀರ್ವದಿಸಿ, ನಿನ್ನ ಹೆಸರನ್ನು ಪ್ರಸಿದ್ಧ ಮಾಡುವೆನು. ನೀನು ಆಶೀರ್ವಾದವಾಗಿ ಇರುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 12:2
38 ತಿಳಿವುಗಳ ಹೋಲಿಕೆ  

ನೀನು ಹೋದಕಡೆಯೆಲ್ಲಾ ನಿನ್ನ ಸಂಗಡ ಇದ್ದೆ. ನಿನ್ನ ಶತ್ರುಗಳನ್ನೆಲ್ಲ ನಿನ್ನ ಕಣ್ಮುಂದೆಯೆ ಸದೆಬಡಿದೆ. ಜಗದ ಮಹಾತ್ಮರ ಹೆಸರಿನಂತೆ ನಿನ್ನ ಹೆಸರನ್ನು ಪ್ರಸಿದ್ಧಗೊಳಿಸುವೆನು.


ಇದರಿಂದಾಗಿ ಅಬ್ರಹಾಮನಿಗೆ ದೊರಕಿದ ಸೌಭಾಗ್ಯ, ಕ್ರಿಸ್ತಯೇಸುವಿನ ಮುಖಾಂತರ ಅನ್ಯಧರ್ಮೀಯರಿಗೂ ದೊರಕುವಂತಾಯಿತು; ವಿಶ್ವಾಸದ ಮೂಲಕವಾಗಿ, ದೇವರು ವಾಗ್ದಾನ ಮಾಡಿದ ಪವಿತ್ರಾತ್ಮ ನಮಗೂ ದೊರಕುವಂತಾಯಿತು.


ಅವನಿಂದ ಮಹಾ ಬಲಿಷ್ಠವಾದ ರಾಷ್ಟ್ರವೊಂದು ಹುಟ್ಟಬೇಕಾಗಿದೆ. ಅವನ ಮುಖಾಂತರ ಜಗದ ಎಲ್ಲ ರಾಷ್ಟ್ರಗಳಿಗೆ ನನ್ನ ಆಶೀರ್ವಾದ ದೊರಕಬೇಕಾಗಿದೆ.


ಇದಲ್ಲದೆ ಅವನಿಗೆ ದೇವರು, “ನಾನೇ ಸರ್ವವಲ್ಲಭನಾದ ದೇವರು; ನೀನು ವೃದ್ಧಿಯಾಗಿ ಬಹುಸಂತಾನವುಳ್ಳವನಾಗು. ನಿನ್ನಿಂದ ರಾಷ್ಟ್ರವೊಂದು ಉಂಟಾಗುವುದು, ಅನೇಕ ರಾಷ್ಟ್ರಗಳೂ ರಾಜರುಗಳೂ ನಿನ್ನಿಂದ ಹುಟ್ಟುವರು.


ಆಗ ದೇವರು, “ನಾನೇ ದೇವರು, ನಿನ್ನ ತಂದೆ ಆರಾಧಿಸಿದ ದೇವರು, ನೀನು ಈಜಿಪ್ಟ್ ದೇಶಕ್ಕೆ ಹೋಗಲು ಅಂಜಬೇಡ; ಅಲ್ಲಿ ನಿನ್ನಿಂದ ಮಹಾಜನಾಂಗ ಉತ್ಪನ್ನವಾಗುವಂತೆ ಮಾಡುವೆನು;


ನಿನ್ನ ತಂದೆ ಅಬ್ರಹಾಮನು ನನ್ನ ಮಾತನ್ನು ಕೇಳಿ ನಾನು ಹೇಳಿದಂತೆ ಮಾಡಿದನು; ನನ್ನ ಆಜ್ಞಾವಿಧಿಗಳನ್ನೂ ನೇಮನಿಯಮಗಳನ್ನೂ ಕೈಗೊಂಡು ನಡೆದನು. ಆದುದರಿಂದ ನಾನು ಅವನಿಗೆ ಮಾಡಿದ ಪ್ರಮಾಣವನ್ನು ನೆರವೇರಿಸುತ್ತೇನೆ.


ಸರ್ವೇಶ್ವರ ನನ್ನೊಡೆಯನನ್ನು ಯಥೇಚ್ಛವಾಗಿ ಆಶೀರ್ವದಿಸಿದ್ದಾರೆ; ದನಕುರಿಗಳನ್ನೂ ಬೆಳ್ಳಿಬಂಗಾರವನ್ನೂ ದಾಸದಾಸಿಯರನ್ನೂ ಒಂಟೆಗಳನ್ನೂ ಹೇಸರಗತ್ತೆಗಳನ್ನೂ ಕೊಟ್ಟಿದ್ದಾರೆ. ನನ್ನೊಡೆಯ ಐಶ್ವರ್ಯವಂತ.


ಆದ್ದರಿಂದ ಯಾರು ವಿಶ್ವಾಸದಿಂದ ಜೀವಿಸುತ್ತಾರೋ ಅವರೇ ಅಬ್ರಹಾಮನ ಮಕ್ಕಳೆಂದು ತಿಳಿದುಕೊಳ್ಳಿ.


ಆದರೂ ಇಸ್ರಯೇಲನ ವಂಶವು ಅಭಿವೃದ್ಧಿಯಾಗಿ ಹೆಚ್ಚಿನ ಸಂಖ್ಯೆಯಲ್ಲಿ ಬೆಳೆಯಿತು. ಅವರು ಶಕ್ತಿಶಾಲಿಗಳಾದರು. ಆ ದೇಶದಲ್ಲೆಲ್ಲಾ ತುಂಬಿಕೊಂಡರು.


ನಿನ್ನ ಸಂತಾನದವರನ್ನು ಭೂಮಿಯ ಧೂಳಿನಷ್ಟು ಅಸಂಖ್ಯಾತರನ್ನಾಗಿ ಮಾಡುತ್ತೇನೆ. ಭೂಮಿಯ ಧೂಳನ್ನು ಲೆಕ್ಕಿಸಲು ಸಾಧ್ಯವಾದಲ್ಲಿ ನಿನ್ನ ಸಂತಾನದವರನ್ನು ಲೆಕ್ಕಿಸಲು ಸಾಧ್ಯವಾದೀತು.


ಸರ್ವೇಶ್ವರ ಬಳಿಕ ಅಬ್ರಾಮನನ್ನು ಹೊರಗೆ ಕರೆತಂದು, “ಆಕಾಶದ ಕಡೆಗೆ ನೋಡು. ಆ ನಕ್ಷತ್ರಗಳನ್ನು ನಿನ್ನಿಂದಾದರೆ ಲೆಕ್ಕಿಸು. ನಿನ್ನ ಸಂತಾನವು ಅಷ್ಟು ಅಸಂಖ್ಯಾತವಾಗುವುದು!” ಎಂದರು.


ಆಗ ನೀವು ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ, ಅರಾಮ್ಯನಾದ ನಮ್ಮ ಮೂಲಪಿತೃವು ಗತಿಯಿಲ್ಲದವನಾಗಿ ಸ್ವಲ್ಪ ಮಂದಿಯೊಡನೆ ಈಜಿಪ್ಟ್ ದೇಶಕ್ಕೆ ಹೋಗಿ ಅಲ್ಲಿ ಇಳಿದುಕೊಂಡನು. ಅಲ್ಲಿ ಅವನ ಸಂತಾನದವರು ಹೆಚ್ಚಿ ಮಹಾಬಲಿಷ್ಠ ಜನಾಂಗವಾದರು.


ಆದಕಾರಣ ನೀನು ನನಗೆ ಅಡ್ಡಬರಬೇಡ. ನನ್ನ ಕೋಪಾಗ್ನಿ ಉರಿಯಲಿ. ಅವರನ್ನು ಸುಟ್ಟು ಭಸ್ಮ ಮಾಡುವೆನು. ಬಳಿಕ ನಿನ್ನಿಂದಲೇ ಬೇರೆ ಒಂದು ದೊಡ್ಡ ಜನಾಂಗ ಉದಯಿಸುವಂತೆ ಮಾಡುವೆನು,” ಎಂದು ಹೇಳಿದರು.


ನಿನ್ನ ಸಂತತಿ ಭೂಮಿಯ ಧೂಳಿನಂತೆ ಅಸಂಖ್ಯ ಆಗುವುದು; ನೀನು ಪೂರ್ವಪಶ್ಚಿಮ - ದಕ್ಷಿಣೋತ್ತರ ದಿಕ್ಕುಗಳಿಗೆ ಹರಡಿಕೊಳ್ಳುವೆ. ನಿನ್ನ ಮುಖಾಂತರ ಹಾಗೂ ನಿನ್ನ ಸಂತತಿಯ ಮುಖಾಂತರ ಜಗದ ಎಲ್ಲ ರಾಷ್ಟ್ರಗಳೂ ಆಶೀರ್ವಾದ ಪಡೆಯುವುವು.


ಸೇವೆಗೈಯಲಿ ನಿನಗೆ ಹೊರನಾಡುಗಳು ಅಡ್ಡಬೀಳಲಿ ನಿನಗೆ ಹೊರಜನಾಂಗಗಳು ಒಡೆಯನಾಗು ಸೋದರರಿಗೆ ಅಡ್ಡಬೀಳಲಿ ತಾಯಕುಡಿ ನಿನಗೆ ಶಾಪವಿರಲಿ ನಿನ್ನನ್ನು ಶಪಿಸುವವರಿಗೆ ಆಶೀರ್ವಾದವು ನಿನ್ನನ್ನು ಹರಸುವವರಿಗೆ!”


ದೇವರು ಆ ಬಯಲುಸೀಮೆಯ ಪಟ್ಟಣಗಳನ್ನು ನಾಶಮಾಡಿದಾಗ ಲೋಟನು ವಾಸವಾಗಿದ್ದ ಊರುಗಳನ್ನೇನೋ ಹಾಳುಮಾಡಿದರು, ಆದರೆ ಅಬ್ರಹಾಮನನ್ನು ನೆನಪಿಗೆ ತಂದುಕೊಂಡು ಲೋಟನನ್ನು ತಪ್ಪಿಸಿ ಕಾಪಾಡಿದರು.


ತಾನು ಸುನ್ನತಿಮಾಡಿಸಿಕೊಳ್ಳುವ ಮೊದಲೇ ಅಬ್ರಹಾಮನು ಇಟ್ಟ ವಿಶ್ವಾಸದಿಂದಾಗಿ ದೇವರು ಆತನನ್ನು ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಂಡರು. ಅನಂತರವೇ ಆತನು ಸುನ್ನತಿಯನ್ನು ಗುರುತಾಗಿಯೂ ಮುದ್ರೆಯನ್ನಾಗಿಯೂ ಪಡೆದನು. ಹೀಗೆ, ಸುನ್ನತಿ ಮಾಡಿಸಿಕೊಳ್ಳದಿದ್ದರೂ ವಿಶ್ವಾಸಿಸುವ ಎಲ್ಲರಿಗೆ ದೇವರೊಡನೆ ಸತ್ಸಂಬಂಧ ದೊರಕುವಂತೆ ಅಬ್ರಹಾಮನು ಮೂಲಪಿತನಾದನು.


ಆಗಲಿ, ನಾನು ಇವರಿಗೆ ದೊಡ್ಡ ರೋಗವನ್ನು ಬರಮಾಡಿ ಇವರನ್ನು ನಿರ್ಮೂಲ ಮಾಡಿಬಿಡುತ್ತೇನೆ; ಇವರಿಗಿಂತ ದೊಡ್ಡದೂ ಬಲಿಷ್ಠವೂ ಆದ ಜನಾಂಗವೊಂದನ್ನು ನಿನ್ನಿಂದಲೇ ಹುಟ್ಟಿಸುವೆನು,” ಎಂದು ಹೇಳಿದರು.


ಅರಸ ದಾವೀದನ ಸೇವಕರು ನಮ್ಮ ಒಡೆಯನೂ ಅರಸನೂ ಆದ ದಾವೀದನ ಮುಂದೆ ಬಂದು, ‘ನಿಮ್ಮ ದೇವರು ನಿಮ್ಮ ಹೆಸರಿಗಿಂತಲೂ ಸೊಲೊಮೋನನ ಹೆಸರನ್ನು ಪ್ರಸಿದ್ಧಿಗೆ ತರಲಿ! ರಾಜ್ಯವನ್ನು ನಿಮ್ಮ ಕಾಲದಲ್ಲಿ ಇದ್ದುದಕ್ಕಿಂತ ಅವನ ಕಾಲದಲ್ಲಿ ಹೆಚ್ಚು ಅಭಿವೃದ್ಧಿಗೊಳಿಸಲಿ!’ ಎಂದು ಅವನನ್ನು ಹರಸಿದ್ದಾರೆ. ಅರಸನು ತನ್ನ ಹಾಸಿಗೆಯ ಮೇಲೆ ಬಿದ್ದುಕೊಂಡು,


ಪುರಾತನ ಕಾಲದಲ್ಲಿ ನಮ್ಮ ಪಿತೃಗಳಿಗೆ ಪ್ರಮಾಣಮಾಡಿದಂತೆ ಯಕೋಬ ವಂಶದವರಿಗೆ ನಂಬಿಕಸ್ಥರಾಗಿರಿ. ಅಬ್ರಹಾಮನ ವಂಶದವರಿಗೆ ಪ್ರೀತಿಪರರಾಗಿರಿ.


ಅವನು ತನ್ನ ಪುತ್ರಪೌತ್ರರಿಗೆ, ‘ನೀವು ನ್ಯಾಯನೀತಿಯನ್ನು ಪಾಲಿಸುತ್ತಾ ಸರ್ವೇಶ್ವರ ಸ್ವಾಮಿಯ ಮಾರ್ಗದಲ್ಲೇ ನಡೆಯಬೇಕು; ಹಾಗೆ ಮಾಡಿದರೆ ವಾಗ್ದಾನ ಮಾಡಿದುದನ್ನೆಲ್ಲ ಈಡೇರಿಸುವರು,’ ಎಂದು ಬೋಧಿಸಲೆಂದೇ ನಾನು ಅವನನ್ನು ಆರಿಸಿಕೊಂಡಿದ್ದೇನೆ".


ಅಬ್ರಹಾಮನು ಆಗ ತುಂಬು ವಯಸ್ಸಿನ ಮುದುಕ. ಸರ್ವೇಶ್ವರ ಸ್ವಾಮಿ ಅವನ ಎಲ್ಲ ಕೆಲಸಕಾರ್ಯಗಳನ್ನು ಆಶೀರ್ವದಿಸಿದ್ದರು.


ಅಬ್ರಹಾಮನು ಕಾಲವಾದ ಬಳಿಕ ಅವನ ಮಗ ಇಸಾಕನನ್ನು ದೇವರು ಆಶೀರ್ವದಿಸಿದರು. ಇಸಾಕನು ‘ಲಹೈರೋಯಿ’ ಎಂಬ ಬಾವಿಯ ಹತ್ತಿರ ವಾಸವಾಗಿದ್ದನು.


ನಾನು ಹೇಳುವ ನಾಡಿನಲ್ಲಿ ಇದ್ದು ಪ್ರವಾಸ ಮಾಡುತ್ತಿರು. ನಾನು ನಿನ್ನ ಸಂಗಡವಿದ್ದು ನೀನು ಏಳಿಗೆಯಾಗುವಂತೆ ಮಾಡುತ್ತೇನೆ; ಈ ನಾಡೆಲ್ಲವನ್ನು ನಿನಗೂ ನಿನ್ನ ಸಂತತಿಗೂ ಕೊಡುತ್ತೇನೆ.


ಅದಕ್ಕೆ ದೇವರು, “ನೀನು ಅವರ ಜೊತೆಯಲ್ಲಿ ಹೋಗಬಾರದು. ಆ ಜನಾಂಗದವರು ನನ್ನ ಆಶೀರ್ವಾದ ಹೊಂದಿದವರು. ಅವರನ್ನು ಶಪಿಸಬಾರದು,” ಎಂದು ಹೇಳಿಬಿಟ್ಟರು.


ಆ ಜನರನ್ನು ಆಶೀರ್ವದಿಸಬೇಕೆಂಬ ಆದೇಶ ನನಗಿರುವುದು; ಸರ್ವೇಶ್ವರನಿತ್ತ ಆಶೀರ್ವಾದವನ್ನು ನಾನು ಮಾರ್ಪಡಿಸಲಾಗದು.


ಅಭಿವೃದ್ಧಿಯಾದರು ಆತನಾಶೀರ್ವಾದದಿಂದಲೆ I ಅವರಿಗಿರಲಿಲ್ಲ ದನಕರುಗಳಾವುದರ ಕೊರತೆ II


ನಾನು ಅವರನ್ನೂ ನನ್ನ ಪರ್ವತದ ಸುತ್ತಣ ಪ್ರದೇಶಗಳನ್ನೂ ಆಶೀರ್ವದಿಸಿ ಸುಖಪಡಿಸುವೆನು; ಕಾಲಕ್ಕೆ ಸರಿಯಾಗಿ ಮಳೆಯನ್ನು ಸುರಿಸುವೆನು; ಶುಭದಾಯಕ ವೃಷ್ಟಿ ಆಗುವುದು.


ಜುದೇಯದ ಕುಲಸ್ಥರೇ, ಇಸ್ರಯೇಲ್ ವಂಶಜರೇ, ರಾಷ್ಟ್ರಗಳಲ್ಲಿ ನಿಮ್ಮ ಹೆಸರು ಶಾಪಕ್ಕೆ ಅಡ್ಡ ಹೆಸರಾಗಿತ್ತು. ಆದರೆ ನಾನು ನಿಮ್ಮನ್ನು ಉದ್ಧರಿಸಿ ನಿಮ್ಮ ಹೆಸರು ಶುಭಸೂಚ್ಯವಾಗುವಂತೆ ಮಾಡುವೆನು. ಹೆದರಬೇಡಿ; ನಿಮ್ಮ ಕೈ ಮುಂದಾಗಲಿ.”


ಇಷ್ಮಾಯೇಲನ ವಿಷಯದಲ್ಲಿ ನೀನು ಮಾಡಿದ ಬಿನ್ನಹವನ್ನು ಕೇಳಿದ್ದೇನೆ. ಅವನನ್ನೂ ಆಶೀರ್ವದಿಸಿದ್ದೇನೆ. ಅವನನ್ನು ಅಭಿವೃದ್ಧಿಮಾಡಿ ಅವನಿಗೆ ಅತ್ಯಧಿಕವಾದ ಸಂತತಿಯನ್ನು ಕೊಡುತ್ತೇನೆ. ಅವನು ಹನ್ನೆರಡು ಮಂದಿ ಅಧಿಪತಿಗಳಿಗೆ ಮೂಲಪಿತನಾಗುವನು. ಅವನ ಸಂತತಿಯನ್ನು ದೊಡ್ಡ ರಾಷ್ಟ್ರವನ್ನಾಗಿ ಮಾಡುತ್ತೇನೆ.


ನಿನ್ನ ನೀಚತನದಿಂದ ನಿನ್ನಂಥವನಿಗೇ ನಷ್ಟ ನಿನ್ನ ಸಜ್ಜನಿಕೆಯಿಂದ ನರಜನ್ಮದವನಿಗೇ ಲಾಭ.


ನೆನೆಯಿರಿ ನಿಮ್ಮ ಮೂಲಪುರುಷ ಅಬ್ರಹಾಮನನು ಅವನ ಸತಿ ಸಾರಳನು. ಅಬ್ರಹಾಮನನ್ನು ನಾ ಕರೆದಾಗ ಆತನು ಒಬ್ಬಂಟಿಗನು ಆಶೀರ್ವಾದದಿ ನಾ ಬೆಳೆಸಿದೆ ಆತನ ಸಂತಾನವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು