Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 12:8 - ಕನ್ನಡ ಸತ್ಯವೇದವು C.L. Bible (BSI)

8 ಬಳಿಕ ಅವನು ಅಲ್ಲಿಂದ ದಕ್ಷಿಣಕ್ಕೆ ಹೊರಟು ಬೇತೇಲಿಗೆ ಪೂರ್ವಕ್ಕಿರುವ ಗುಡ್ಡಗಾಡಿಗೆ ಬಂದು ಗುಡಾರ ಹಾಕಿ ನೆಲಸಿದನು. ಪಶ್ಚಿಮಕ್ಕೆ ಬೇತೇಲೂ ಪೂರ್ವಕ್ಕೆ ಆಯಿ ಎಂಬ ಊರು ಇದ್ದವು. ಅಲ್ಲೂ ಸರ್ವೇಶ್ವರ ಸ್ವಾಮಿಗೆ ಒಂದು ಬಲಿಪೀಠವನ್ನು ಕಟ್ಟಿಸಿ ಅವರ ನಾಮಸ್ಮರಣೆಮಾಡಿ ಆರಾಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವನು ಅಲ್ಲಿಂದ ಹೊರಟು ಬೇತೇಲಿನ ಪೂರ್ವದಲ್ಲಿರುವ ಗುಡ್ಡಕ್ಕೆ ಬಂದು ತನ್ನ ಗುಡಾರವನ್ನು ಹಾಕಿ ಇಳಿದುಕೊಂಡನು. ಪಶ್ಚಿಮಕ್ಕೆ ಬೇತೇಲ್, ಪೂರ್ವಕ್ಕೆ ಆಯಿ ಎಂಬ ಊರುಗಳಿದ್ದವು. ಅಲ್ಲಿಯೂ ಅಬ್ರಾಮನು ಯೆಹೋವನಿಗೋಸ್ಕರ ಯಜ್ಞವೇದಿಯನ್ನು ಕಟ್ಟಿಸಿ ಆತನ ಹೆಸರಿನಲ್ಲಿ ಆರಾಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅವನು ಅಲ್ಲಿಂದ ಹೊರಟು ಬೇತೇಲಿಗೆ ಮೂಡಲಲ್ಲಿರುವ ಗುಡ್ಡಕ್ಕೆ ಬಂದು ತನ್ನ ಗುಡಾರವನ್ನು ಹಾಕಿಸಿ ಇಳುಕೊಂಡನು; ಪಶ್ಚಿಮಕ್ಕೆ ಬೇತೇಲೂ ಪೂರ್ವಕ್ಕೆ ಆಯಿ ಎಂಬ ಊರೂ ಇದ್ದವು. ಅಲ್ಲಿಯೂ ಯೆಹೋವನಿಗೋಸ್ಕರ ಯಜ್ಞವೇದಿಯನ್ನು ಕಟ್ಟಿಸಿ ಆತನ ಹೆಸರನ್ನು ಹೇಳಿಕೊಂಡು ಆರಾಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆಮೇಲೆ ಅಬ್ರಾಮನು ಆ ಸ್ಥಳದಿಂದ ಹೊರಟು ಬೇತೇಲಿಗೆ ಪೂರ್ವದಲ್ಲಿರುವ ಗುಡ್ಡಗಳ ಬಳಿಗೆ ಪ್ರಯಾಣ ಮಾಡಿದನು. ಅಲ್ಲಿ ಅಬ್ರಾಮನು ತನ್ನ ಗುಡಾರಗಳನ್ನು ಹಾಕಿದನು. ಪಶ್ಚಿಮಕ್ಕೆ ಬೇತೇಲ್ ಪಟ್ಟಣವಿತ್ತು, ಪೂರ್ವಕ್ಕೆ ಆಯಿ ಪಟ್ಟಣವಿತ್ತು. ಆ ಸ್ಥಳದಲ್ಲಿ ಅವನು ಯೆಹೋವನಿಗೋಸ್ಕರ ಒಂದು ಯಜ್ಞವೇದಿಕೆಯನ್ನು ಕಟ್ಟಿ ಅಲ್ಲಿ ಅವನು ಯೆಹೋವನನ್ನು ಆರಾಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅಲ್ಲಿಂದ ಅವರು ಬೇತೇಲಿನ ಪೂರ್ವದ ಬೆಟ್ಟಕ್ಕೆ ಹೋಗಿ, ಪಶ್ಚಿಮಕ್ಕೆ ಬೇತೇಲ್, ಪೂರ್ವಕ್ಕೆ ಆಯಿ ಎಂಬ ಊರೂ ಇರುವ ಹಾಗೆ ತನ್ನ ಗುಡಾರವನ್ನು ಹಾಕಿಕೊಂಡನು. ಅಲ್ಲಿ ಯೆಹೋವ ದೇವರಿಗೆ ಬಲಿಪೀಠವನ್ನು ಕಟ್ಟಿ, ಯೆಹೋವ ದೇವರ ಹೆಸರನ್ನು ಆರಾಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 12:8
33 ತಿಳಿವುಗಳ ಹೋಲಿಕೆ  

ಗೆಬ, ಮಿಕ್ಮಾಷ್, ಅಯ್ಯಾ, ಗ್ರಾಮಸಹಿತವಾದ ಬೇತೇಲ್ ಎಂಬ ಊರುಗಳು;


ತರುವಾಯ ಸೇತನು ಸಹ ಒಬ್ಬ ಮಗನನ್ನು ಪಡೆದು ಅವನಿಗೆ “ಏನೋಷ್” ಎಂದು ಹೆಸರಿಟ್ಟನು. ಜನರು “ಸರ್ವೇಶ್ವರ” ಎಂಬ ಹೆಸರನ್ನು ಆರಾಧಿಸುವುದಕ್ಕೆ ಪ್ರಾರಂಭಿಸಿದ್ದು ಆ ಕಾಲದಲ್ಲಿಯೇ.


ಅಬ್ರಹಾಮನು ಆ ಬೇರ್ಷೆಬದಲ್ಲೇ ಒಂದು ಪಿಚುಲ ವೃಕ್ಷವನ್ನು ನೆಟ್ಟು ನಿತ್ಯದೇವರಾದ ಸರ್ವೇಶ್ವರ ಸ್ವಾಮಿಯ ನಾಮಸ್ಮರಣೆ ಮಾಡಿ, ಅಲ್ಲಿ ಆರಾಧನೆ ಮಾಡಿದನು.


ಯೇಸುಕ್ರಿಸ್ತರು ನಮಗೂ ಸಮಸ್ತ ದೇವಜನರಿಗೂ ಪ್ರಭುವಾಗಿದ್ದಾರೆ.


‘ಲೂಜ್’ ಎಂದು ಹೆಸರು ಪಡೆದಿದ್ದ ಆ ಊರಿಗೆ ‘ಬೇತೇಲ್’ ಎಂದು ನಾಮಕರಣ ಮಾಡಿದನು.


ಬೇತೇಲಿಗೂ ಆಯಿ ಎಂಬ ಊರಿಗೂ ನಡುವೆ ತಾನು ಹಿಂದೆ ಗುಡಾರ ಹಾಕಿ ಬಲಿಪೀಠವನ್ನು ಕಟ್ಟಿದ ಕ್ಷೇತ್ರವನ್ನು ತಲುಪಿದನು. ಅಲ್ಲಿ ಸರ್ವೇಶ್ವರ ಸ್ವಾಮಿಯ ನಾಮಸ್ಮರಣೆ ಮಾಡಿ ಆರಾಧಿಸಿದನು.


ಪ್ರಭುವಿನ ನಾಮಸ್ಮರಣೆ ಮಾಡುವವರೆಲ್ಲ ಪಡೆಯುವರಾಗ ಜೀವೋದ್ಧಾರ.


ಆದರೆ ಸರ್ವೇಶ್ವರಸ್ವಾಮಿಯ ನಾಮಸ್ಮರಣೆ ಮಾಡುವವರೆಲ್ಲರೂ ಜೀವೋದ್ಧಾರವನ್ನು ಪಡೆಯುವರು. ಅವರೇ ತಿಳಿಸಿರುವಂತೆ ಸಿಯೋನ್ ಪರ್ವತದಲ್ಲೂ ಜೆರುಸಲೇಮಿನಲ್ಲೂ ಅನೇಕರಿಗೆ ಮುಕ್ತಿ ದೊರಕುವುದು. ಅಳಿದುಳಿದವರಲ್ಲಿ ಆ ಸ್ವಾಮಿಯ ಕರೆಹೊಂದಿದವರು ಬದುಕುವರು.”


ಶತ್ರುಸೇನೆ ಅಯ್ಯಾಥಿನ ಮೇಲೆ ಬಂದು ಇಳಿದಿದೆ. ಮಿಗ್ರೋನನ್ನು ಹಾದುಹೋಗಿದೆ; ಮಿಕ್ಮಾಷಿನಲ್ಲಿ ತನ್ನ ಸಾಮಗ್ರಿಗಳನ್ನು ಬಿಟ್ಟಿದೆ.


ಕೂಗಿ ಕರೆದೆನಾಗ ಪ್ರಭುವಿನ ಸಿರಿ ನಾಮವನು I “ಪ್ರಭು, ಉಳಿಸೆನ್ನ ಪ್ರಾಣವನು” ಎಂದು ಬೇಡಿದೆನು II


ಚಮಾರಯಿಮ್, ಬೇತೇಲ್, ಅವ್ವೀಮ್, ಪಾರಾ,


ಇತ್ತ ಆಯಿಯಲ್ಲಿ ಹಾಗೂ ಬೇತೇಲಿನಲ್ಲಿ ಗಂಡಸರು ಇರಲಿಲ್ಲ. ಊರಬಾಗಿಲುಗಳನ್ನು ತೆರೆದಿಟ್ಟು ಎಲ್ಲರೂ ಇಸ್ರಯೇಲರನ್ನು ಹಿಂದಟ್ಟಿ ಹೋಗಿದ್ದರು.


ಅಂತೆಯೇ ಯೆಹೋಶುವನು ಯೋಧರೆಲ್ಲರ ಸಹಿತವಾಗಿ ಆಯಿಗೆ ಹೊರಡಲು ಸಿದ್ಧನಾದನು. ಮೂವತ್ತು ಸಾವಿರ ಯುದ್ಧವೀರರನ್ನು ಆರಿಸಿಕೊಂಡನು.


ಯೆಹೋಶುವನು ಕೆಲವು ಜನರನ್ನು ಕರೆದು, “ನೀವು ಬೇತೇಲಿನ ಪೂರ್ವಕ್ಕೂ ಬೇತಾವೆನಿನ ಸಮೀಪದಲ್ಲೂ ಇರುವ ‘ಆಯಿ’ ಎಂಬ ಪ್ರಾಂತ್ಯಕ್ಕೆ ಹೋಗಿ ಬೇಹುನೋಡಿ ಬನ್ನಿ,” ಎಂದು ಹೇಳಿ ಅವರನ್ನು ಜೆರಿಕೋವಿನಿಂದ ಕಳಿಸಿದನು. ಅವರು ಹೋಗಿ ಆಯಿ ಎಂಬ ಊರನ್ನು ಸಂಚರಿಸಿ ಬೇಹು ನೋಡಿ ಹಿಂದಿರುಗಿ ಬಂದರು.


ಕಷ್ಟಕಾಲದಲ್ಲಿ ನನ್ನ ವಿಜ್ಞಾಪನೆಯನ್ನು ಆಲಿಸಿ, ನಾನು ಹೋದ ಕಡೆಯೆಲ್ಲ ನನ್ನೊಂದಿಗಿದ್ದ ದೇವರಿಗೆ ಅಲ್ಲೊಂದು ಬಲಿಪೀಠವನ್ನು ಕಟ್ಟಿಸುತ್ತೇನೆ,” ಎಂದು ಹೇಳಿದನು.


ದೇವರು ವಾಗ್ದಾನ ಮಾಡಿದ ನಾಡಿಗೆ ಬಂದಾಗಲೂ ಆತನು ಅದೇ ವಿಶ್ವಾಸದ ನಿಮಿತ್ತ ಒಬ್ಬ ಅನ್ಯದೇಶಿಯನಂತೆ ಬಾಳಿದನು. ಡೇರೆಗಳಲ್ಲಿದ್ದುಕೊಂಡು ಒಬ್ಬ ಪ್ರವಾಸಿಗನಂತೆ ಜೀವಿಸಿದನು. ಅದೇ ವಾಗ್ದಾನಕ್ಕೆ ಸಹಬಾಧ್ಯಸ್ಥರಾದ ಇಸಾಕನೂ ಯಕೋಬನೂ ಅವನಂತೆಯೇ ಡೇರೆಗಳಲ್ಲಿ ವಾಸಿಸಿದರು.


ನೋಹನು ಸರ್ವೇಶ್ವರ ಸ್ವಾಮಿಗೆ ಒಂದು ಬಲಿಪೀಠವನ್ನು ಕಟ್ಟಿದನು. ಶುದ್ಧವಾದ ಎಲ್ಲ ಪ್ರಾಣಿಪಕ್ಷಿಗಳಿಂದ ಆಯ್ದು ಆ ಪೀಠದ ಮೇಲೆ ದಹನಬಲಿಯನ್ನು ಅರ್ಪಿಸಿದನು.


ಅಲ್ಲಿಂದ ಮುಂದೆ ಪ್ರಯಾಣ ಮಾಡುತ್ತಾ


ಅಬ್ರಾಮನು ಅಲ್ಲಿಂದ ಹೊರಟು ಅಲ್ಲಲ್ಲಿ ಗುಡಾರ ಹಾಕಿಸಿಕೊಳ್ಳುತ್ತಾ, ಹೆಬ್ರೋನಿನಲ್ಲಿರುವ ಮಮ್ರೆವೃಕ್ಷಗಳ ತೋಪಿಗೆ ಬಂದು ವಾಸಮಾಡಿದನು. ಸರ್ವೇಶ್ವರ ಸ್ವಾಮಿಗೆ ಅಲ್ಲಿ ಒಂದು ಬಲಿಪೀಠವನ್ನು ಕಟ್ಟಿಸಿದನು.


ದೇವರು ಹೇಳಿದ ಸ್ಥಳಕ್ಕೆ ಬಂದು ಸೇರಿದಾಗ ಅಬ್ರಹಾಮನು ಅಲ್ಲಿ ಒಂದು ಬಲಿಪೀಠವನ್ನು ಕಟ್ಟಿದ. ಕಟ್ಟಿಗೆಯನ್ನು ಅದರ ಮೇಲೆ ಒಟ್ಟಿ, ಮಗ ಇಸಾಕನ ಕೈಕಾಲುಗಳನ್ನು ಬಿಗಿದು, ಕಟ್ಟಿಗೆಗಳ ಮೇಲೆ ಅವನನ್ನು ಕೆಡವಿದ.


ಇಸಾಕನು ಒಂದು ಬಲಿಪೀಠವನ್ನು ಕಟ್ಟಿಸಿ ಸರ್ವೇಶ್ವರ ಸ್ವಾಮಿಯ ನಾಮಸ್ಮರಣೆ ಮಾಡಿ ಆರಾಧಿಸಿ, ಅಲ್ಲಿ ಗುಡಾರ ಹಾಕಿಸಿಕೊಂಡನು. ಅವನ ಕೆಲಸಗಾರರು ಅಲ್ಲಿಯೂ ಒಂದು ಬಾವಿಯನ್ನು ತೋಡಿದರು.


ಅವರು ಹೊಂಚುಹಾಕುವ ಸಲುವಾಗಿ ಬೇತೇಲಿಗೂ ಆಯಿಗೂ ನಡುವೆ ಆಯಿಯ ಪಶ್ಚಿಮಕ್ಕೆ ಹೋಗಿ ಅಡಗಿಕೊಂಡರು. ಯೆಹೋಶುವನು ಆ ರಾತ್ರಿಯಲ್ಲಿ ಜನರ ಮಧ್ಯೆ ಕಳೆದನು.


ಯೆಹೋಶುವ ಸುಮಾರು ಐದು ಸಾವಿರ ಜನರನ್ನು ಆರಿಸಿಕೊಂಡು ಬೇತೇಲಿಗೂ ಆಯಿಗೂ ನಡುವೆ ನಗರದ ಪಶ್ಚಿಮದಲ್ಲಿ ಹೊಂಚಿನೋಡುವುದಕ್ಕಾಗಿ ಇರಿಸಿದನು.


ಹೀಗೆ ಬಹುಮಾನ ಪಡೆದವರು ಇವರು: ಬೇತೇಲಿನವರು, ದಕ್ಷಿಣ ಪ್ರಾಂತ್ಯದ ರಾಮೋತಿನವರು, ಯತ್ತೀರಿನವರು,


ಲಾಬಾನನು, ಯಕೋಬನನ್ನು ಎದುರುಗೊಂಡಾಗ ಯಕೋಬನು ಬೆಟ್ಟದಲ್ಲಿ ಗುಡಾರವನ್ನು ಹಾಕಿಸಿಕೊಂಡಿದ್ದನು. ಲಾಬಾನನು ಕೂಡ ತನ್ನವರೊಡನೆ ಅದೇ ಗಿಲ್ಯಾದ್ ಬೆಟ್ಟದಲ್ಲಿ ಗುಡಾರ ಹಾಕಿಸಿದನು.


ಅಲ್ಲೇ ಒಂದು ಬಲಿಪೀಠವನ್ನು ಕಟ್ಟಿಸಿ ಅದಕ್ಕೆ 'ಏಲ್ - ಏಲೋಹೆ - ಇಸ್ರಯೇಲ್’ ಎಂದು ಹೆಸರಿಟ್ಟನು.


ಯಕೋಬನು ತನ್ನ ಅಣ್ಣನ ಬಳಿಯಿಂದ ಓಡಿಹೋಗುವಾಗ ದೇವರು ಅವನಿಗೆ ಪ್ರತ್ಯಕ್ಷವಾದುದು ಅಲ್ಲಿಯೇ. ಎಂದೇ ಅವನು ಅಲ್ಲಿ ಒಂದು ಬಲಿಪೀಠವನ್ನು ಕಟ್ಟಿಸಿ, ಆ ಸ್ಥಳಕ್ಕೆ ‘ಏಲ್ ಬೇತೇಲ್’ ಎಂದು ಹೆಸರಿಟ್ಟನು.


ಆ ಸ್ಥಳದಲ್ಲಿ ಮೋಶೆ ಒಂದು ಬಲಿಪೀಠವನ್ನು ಕಟ್ಟಿಸಿ ಅದಕ್ಕೆ, ‘ಯಾವ್ವೆನಿಸ್ಸಿ’ ಎಂದು ಹೆಸರಿಟ್ಟನು.


ಸರ್ವೇಶ್ವರನ ದಾಸ ಮೋಶೆ ಇಸ್ರಯೇಲರಿಗೆ ಆಜ್ಞಾಪಿಸಿದ್ದಂತೆ ಹಾಗೂ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವಂತೆ ಯೆಹೋಶುವನು ಇಸ್ರಯೇಲ್ ದೇವರಾದ ಸರ್ವೇಶ್ವರನಿಗೆ ಏಬಾಲ್ ಬೆಟ್ಟದಲ್ಲಿ ಒಂದು ಬಲಿಪೀಠವನ್ನು ಕಟ್ಟಿಸಿದನು. ಯಾವ ಕಬ್ಬಿಣವೂ ಮುಟ್ಟದ ಹುಟ್ಟುಕಲ್ಲುಗಳಿಂದಲೇ ಅದನ್ನು ಕಟ್ಟಿಸಿದನು.


ರೂಬೇನ್ಯರು, ಗಾದ್ಯರು ಹಾಗೂ ಮನಸ್ಸೆಕುಲದ ಅರ್ಧಜನರು ಕಾನಾನ್ ನಾಡಿನಲ್ಲಿರುವ ಜೋರ್ಡನ್ ತೀರಪ್ರದೇಶಕ್ಕೆ ಬಂದಾಗ ಅಲ್ಲಿ ಒಂದು ಮಹಾಬಲಿಪೀಠವನ್ನು ಕಟ್ಟಿದರು.


ಗಿದ್ಯೋನನು ಅಲ್ಲೇ ಸರ್ವೇಶ್ವರನಿಗಾಗಿ ಒಂದು ಬಲಿಪೀಠವನ್ನು ಕಟ್ಟಿ ಅದಕ್ಕೆ ‘ಯೆಹೋವ ಷಾಲೋಮ್’ ಎಂದು ಹೆಸರಿಟ್ಟನು; ಅದು ಈವರೆಗೂ ಅಬೀಯೆಜೆರ್ ಗೋತ್ರದವರ ಒಫ್ರದಲ್ಲಿರುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು