Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 13:10 - ಕನ್ನಡ ಸತ್ಯವೇದವು C.L. Bible (BSI)

10 ಲೋಟನು ಕಣ್ಣೆತ್ತಿ ನೋಡಿದನು. ಜೋರ್ಡನ್ ನದಿಯ ಸುತ್ತಲಿನ ಪ್ರದೇಶ ಚೋಗರೂರಿನವರೆಗೂ ಎಲ್ಲೆಲ್ಲೂ ನೀರಾವರಿ ಆಗಿರುವುದು ಕಾಣಿಸಿತು. ಸರ್ವೇಶ್ವರ, ಸೋದೋಮ್ - ಗೊಮೋರ ಪಟ್ಟಣಗಳನ್ನು ವಿನಾಶ ಮಾಡುವುದಕ್ಕೆ ಮುಂಚೆ ಈ ಪ್ರಾಂತ್ಯವು ಸರ್ವೇಶ್ವರನ ಉದ್ಯಾನ ವನದಂತೆ, ಈಜಿಪ್ಟಿನ ದೇಶದಂತೆ, ನೀರಿನ ಸೌಕರ್ಯಪಡೆದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಲೋಟನು ಕಣ್ಣೆತ್ತಿ ನೋಡಲಾಗಿ, ಯೊರ್ದನ್ ಹೊಳೆಯ ಸುತ್ತಲಿನ ಪ್ರದೇಶವು ಚೋಗರಿನವರೆಗೆ ನೀರಾವರಿಯ ಪ್ರದೇಶವೆಂದು ತಿಳಿದುಕೊಂಡನು. ಯೆಹೋವನು ಸೊದೋಮ್ ಗೊಮೋರ ಪಟ್ಟಣಗಳನ್ನು ನಾಶಮಾಡುವುದಕ್ಕಿಂತ ಮೊದಲು ಆ ಸೀಮೆಯು ಯೆಹೋವನ ವನದಂತೆಯೂ, ಐಗುಪ್ತ ದೇಶದಂತೆಯೂ ನೀರಾವರಿಯ ಪ್ರದೇಶವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಲೋಟನು ಕಣ್ಣೆತ್ತಿ ನೋಡಲಾಗಿ ಯೊರ್ದನ್ ಹೊಳೆಯ ಸುತ್ತಲಿನ ಪ್ರದೇಶವು ಚೋಗರೂರಿನ ತನಕ ಎಲ್ಲಾ ಕಡೆಯಲ್ಲಿಯೂ ನೀರಾವರಿಯ ಸ್ಥಳವೆಂದು ತಿಳುಕೊಂಡನು. ಯೆಹೋವನು ಸೊದೋಮ್‍ಗೊಮೋರ ಪಟ್ಟಣಗಳನ್ನು ನಾಶಮಾಡುವದಕ್ಕಿಂತ ಮುಂಚೆ ಆ ಸೀಮೆಯು ಯೆಹೋವನ ವನದಂತೆಯೂ ಐಗುಪ್ತದೇಶದಂತೆಯೂ ನೀರಾವರಿಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಲೋಟನು ಕಣ್ಣೆತ್ತಿ ನೋಡಿದಾಗ ಜೋರ್ಡನ್ ಕಣಿವೆಯೆಲ್ಲಾ ಕಾಣಿಸಿತು. ಅಲ್ಲಿ ಬೇಕಾದಷ್ಟು ನೀರಿರುವುದನ್ನು ಲೋಟನು ನೋಡಿದನು. (ಆ ಕಾಲದಲ್ಲಿ ಸೊದೋಮ್ ಮತ್ತು ಗೊಮೋರ ಪಟ್ಟಣಗಳು ಯೆಹೋವನಿಂದ ನಾಶವಾಗಿರಲಿಲ್ಲ. ಆ ಕಾಲದಲ್ಲಿ ಜೋರ್ಡನ್ ಕಣಿವೆಯು ಚೋಗರ್ ತನಕ ಯೆಹೋವನ ತೋಟದಂತಿತ್ತು. ಅದು ಈಜಿಪ್ಟಿನ ಭೂಮಿಯಂತೆ ಫಲವತ್ತಾಗಿತ್ತು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಲೋಟನು ತನ್ನ ಕಣ್ಣುಗಳನ್ನೆತ್ತಿ ನೋಡಿ ಯೊರ್ದನಿನ ಮೈದಾನವನ್ನೆಲ್ಲಾ ಕಂಡನು. ಏಕೆಂದರೆ ಯೆಹೋವ ದೇವರು ಸೊದೋಮನ್ನೂ ಗೊಮೋರವನ್ನೂ ನಾಶ ಮಾಡುವುದಕ್ಕಿಂತ ಮುಂಚೆ, ಅದೆಲ್ಲಾ ಚೋಗರಿನವರೆಗೆ ನೀರಾವರಿ ಪ್ರದೇಶವಾಗಿದ್ದು, ಯೆಹೋವ ದೇವರ ತೋಟದಂತೆಯೂ ಈಜಿಪ್ಟ್ ದೇಶದಂತೆಯೂ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 13:10
26 ತಿಳಿವುಗಳ ಹೋಲಿಕೆ  

ದಕ್ಷಿಣ ಪ್ರದೇಶ, ಚೋಗರೂರಿನ ತನಕ ಇದ್ದ ಜೆರಿಕೋ ಖರ್ಜೂರಗಳ ಪಟ್ಟಣದ ಸುತ್ತಲಿನ ಬಯಲು, ಇದನ್ನೆಲ್ಲಾ ಅವನಿಗೆ ತೋರಿಸಿದರು.


ಸರ್ವೇಶ್ವರನಾದ ನಾನು ಸಂತೈಸದೆ ಬಿಡೆನು ಸಿಯೋನನ್ನು, ಉದ್ಧರಿಸುವೆನು ಆ ಹಾಳುಬಿದ್ದ ಸ್ಥಳಗಳೆಲ್ಲವನು. ಮಾರ್ಪಡಿಸುವೆನು ಕಾಡುನೆಲವನು ಏದೆನ್ ಉದ್ಯಾನದಂತೆ ಮರುಭೂಮಿಯನು, ದೇವತೆಗಳ ಉದ್ಯಾನವಾಗುವಂತೆ ಹರ್ಷೋಲ್ಲಾಸ, ಸ್ತುತಿಸ್ತೋತ್ರ, ಮಧುರಗಾನ ಅಲ್ಲಿ ನೆಲೆಸುವಂತೆ.


ಆಗ ಸೊದೋಮ್, ಗೊಮೋರ, ಅದ್ಮಾಹ, ಚೆಬೋಯಿಮ್, ಚೋಗರ್ ಎಂಬ ಬೇಲಗ್ ಈ ಪಟ್ಟಣಗಳ ರಾಜರು ಹೊರಟು ಅವರಿಗೆದುರಾಗಿ, ಅಂದರೆ


ಅದರ ಮುಂದೆ ಕಬಳಿಸುವ ಬೆಂಕಿ; ಅದರ ಹಿಂದೆ ಧಗಧಗಿಸುವ ಜ್ವಾಲೆ. ಅದು ಬರುವ ಮುನ್ನ ನಾಡು ಏದೆನ್ ಉದ್ಯಾನವನ; ಅದು ದಾಟಿದ ನಂತರ ಸುಡುಗಾಡು. ಅದರ ಆಪತ್ತಿನಿಂದ ಯಾರೂ ತಪ್ಪಿಸಿಕೊಳ್ಳುವಂತಿಲ್ಲ.


ಈಗ ಲವಣ ಸಮುದ್ರ ಎನಿಸಿಕೊಳ್ಳುವ ಸಿದ್ದೀಮ್ ತಗ್ಗುಪ್ರದೇಶದಲ್ಲಿ ಒಂದುಗೂಡಿದ್ದ ಸೊದೋಮಿನ ಅರಸ ಬೆರಗ, ಗೊಮೋರದ ಅರಸ ಬಿರ್ಶಗ, ಅದ್ಮಾಹದ ಅರಸ ಶಿನಾಬ, ಚೆಬೋಯಿಮನ ಅರಸ ಶೆಮೇಬರ, ಬೆಲಗಿನ (ಅಂದರೆ ಚೋಗರದ) ಅರಸ - ಈ ಐವರೊಡನೆ ಯುದ್ಧಮಾಡಿದರು.


ನೀನಿದ್ದೆ ದೇವರ ಉದ್ಯಾನವನದ ಏದೆನಿನೊಳು ಮಾಣಿಕ್ಯ, ಪುಷ್ಯರಾಗ, ಪಚ್ಚೆ, ಪೀತರತ್ನ, ಬೆರುಲ್ಲ, ವೈಡೂರ್ಯ, ನೀಲ, ಕೆಂಪರಲು, ಸ್ಫಟಿಕವೆಂಬ ನವರತ್ನಗಳಿಂದ ಭೂಷಿತನಾಗಿದ್ದೆ ನೀನು. ನಿನ್ನ ಕಿವಿಯೋಲೆ ಆಭರಣಗಳು ಸುವರ್ಣಖಚಿತವಾಗಿದ್ದವು. ನಿನ್ನ ಸೃಷ್ಟಿಯ ದಿನದಂದೇ ಸಿದ್ಧವಾಗಿದ್ದವವು.


ಅರಸನು ಜೋರ್ಡನಿನ ತಗ್ಗಿನಲ್ಲಿ ಸುಕ್ಕೋತಿಗೂ ಚಾರೆತಾನಿಗೂ ಮಧ್ಯದಲ್ಲಿರುವ ಮಣ್ಣು ನೆಲದ ಕುಲುಮೆಯಲ್ಲಿ ಎರಕಹೊಯ್ಸಿದನು.


ದೇವೋದ್ಯಾನದ ಇತರ ದೇವದಾರುಗಳಿಂದ ಅದನು ಮುಚ್ಚಲಾಗಲಿಲ್ಲ. ತುರಾಯಿ ಮರಗಳು ಅದರ ರೆಂಬೆಗಳಷ್ಟು ಉದ್ದವಾಗಿರಲಿಲ್ಲ. ಅತ್ತಿಮರಗಳು ಅದರ ಕೊಂಬೆಗಳಷ್ಟು ದಪ್ಪವಾಗಿರಲಿಲ್ಲ. ದೇವರವನದಲ್ಲಿನ ಯಾವ ಮರವೂ ಅದರಷ್ಟು ರಮಣೀಯವಿರಲಿಲ್ಲ.


ಹೆಷ್ಬೋನಿನ ಮತ್ತು ಎಲೆಯಾಲೆಯ ಜನರು ಅರಚಿಕೊಳ್ಳುತ್ತಿದ್ದಾರೆ. ಆ ಕೂಗು ಯಹಚಿನವರೆಗೆ ಕೇಳಿಸುತ್ತಿದೆ. ಚೋಯರಿನಿಂದ ಹೊರೊನಯಿಮಿನವರೆಗೆ ಮತ್ತು ಎಗ್ಲತ್ ಶೆಲೆಶೀಯದವರೆಗೆ ಆ ಕಿರಿಚಾಟ ಕೇಳಿಸುತ್ತಿದೆ. ನಿಮ್ರೀಮ್ ಹಳ್ಳವೂ ಹಾಳಾಗಿದೆ.


ಮೊರೆಯಿಡುತ್ತಿದೆ ಎನ್ನ ಮನ ಮೋವಾಬಿನ ನಿಮಿತ್ತ, ಪಲಾಯನ ಗೈದವರು ಓಡುತಿಹರು ಚೋಯರತ್ತ, ಎಗ್ಲತ್ ಶೆಲಿಶೀಯ ದತ್ತ, ಹತ್ತಿಹರು ಲೂಹೀತ್ ದಿಣ್ಣೆಯನ್ನು ಅಳುತ್ತ, ಪಿಡಿದಿಹರು ಹೊರೋನಯಿಮಿನ ದಾರಿಯನು ಹಾಳಾದೆವೆಂದು ಧ್ವನಿಗೈಯುತ.


ಒಣನೆಲವಾಗಿಸಿದನಾತ ಬುಗ್ಗೆಗಳನು I ಉಪ್ಪುನೆಲವಾಗಿಸಿದ ಫಲಭೂಮಿಯನು II


ಈ ಮನುಷ್ಯಪುತ್ರಿಯರ ಚೆಲುವನ್ನು ಕಂಡು ದೇವಪುತ್ರರು ತಮಗೆ ಇಷ್ಟಬಂದವರನ್ನೆಲ್ಲ ಮದುವೆಯಾದರು.


ಆಗ ಆ ಮಹಿಳೆ, “ಈ ಮರದ ಹಣ್ಣು ಊಟಕ್ಕೆ ಎಷ್ಟು ಚೆನ್ನಾಗಿದೆ, ನೋಟಕ್ಕೆ ಎಷ್ಟು ರಮಣೀಯವಾಗಿದೆ. ಜ್ಞಾನಾರ್ಜನೆಗೆ ಎಷ್ಟು ಆಕರ್ಷಣೀಯವಾಗಿದೆ” ಎಂದು ತಿಳಿದು, ಅದನ್ನು ತೆಗೆದುಕೊಂಡು ತಿಂದಳು; ಸಂಗಡವಿದ್ದ ಗಂಡನಿಗೂ ಕೊಟ್ಟಳು; ಅವನೂ ತಿಂದನು.


ತೆರಹನ ವಂಶವೃಕ್ಷ: ತೆರಹನಿಗೆ ಅಬ್ರಾಮ, ನಾಹೋರ, ಹಾರಾನ ಇವರು ಹುಟ್ಟಿದರು. ಹಾರಾನನಿಗೆ ಲೋಟನು ಹುಟ್ಟಿದನು.


ನಾಡೆಲ್ಲಾ ನಿನ್ನ ಕಣ್ಮುಂದಿದೆ. ದಯವಿಟ್ಟು ನನ್ನನ್ನು ಬಿಟ್ಟು ಬೇರೆ ಹೋಗು. ನೀನು ಎಡಗಡೆಗೆ ಹೋದರೆ ನಾನು ಬಲಗಡೆಗೆ ಹೋಗುತ್ತೇನೆ. ನೀನು ಬಲಗಡೆಗೆ ಹೋದರೆ ನಾನು ಎಡಗಡೆಗೆ ಹೋಗುತ್ತೇನೆ".


ಆದುದರಿಂದ ಲೋಟನು ಜೋರ್ಡನ್ ನದಿಯ ಸುತ್ತಲಿನ ಪ್ರದೇಶವನ್ನು ಆರಿಸಿಕೊಂಡು ಪೂರ್ವದಿಕ್ಕಿನ ಕಡೆಗೆ ಹೊರಟನು. ಹೀಗೆ ಅವರಿಬ್ಬರೂ ಬೇರೆ ಬೇರೆ ಆದರು.


ಈಜಿಪ್ಟ್ ದೇಶವು ನಿನ್ನ ಮುಂದಿದೆ; ಅದರಲ್ಲಿನ ಉತ್ತಮ ಭಾಗವನ್ನು ನಿನ್ನ ತಂದೆಗೂ ಸಹೋದರರಿಗೂ ವಾಸಸ್ಥಾನವಾಗಿ ನೇಮಿಸು; ಗೋಷೆನ್ ಪ್ರಾಂತ್ಯದಲ್ಲಿ ಬೇಕಾದರೆ ವಾಸಮಾಡಲಿ; ಅವರಲ್ಲಿ ನುರಿತವರು ಯಾರಾದರು ಇದ್ದರೆ ಅವರನ್ನು ನನ್ನ ದನಕರುಗಳ ಮೇಲ್ವಿಚಾರಣೆಗೆ ನೇಮಿಸು,” ಎಂದನು.


ಹೊಳೆ ಉಕ್ಕಿಬಂದರೂ ಅದು ಹೆದರುವುದಿಲ್ಲ ನೋಡು ಜೋರ್ಡನ್ ನದಿ ಅದರ ಬಾಯೊಳಗೆ ನುಗ್ಗಿದರೂ ಧೈರ್ಯದಿಂದಿರುವುದು!


“ನಿನ್ನ ಉತ್ತರಕ್ಕೆ ತನ್ನ ಕುವರಿಯರೊಂದಿಗೆ ವಾಸಿಸುವ ಸಮಾರಿಯ, ನಿನ್ನ ಅಕ್ಕ; ನಿನ್ನ ದಕ್ಷಿಣ ಕಡೆಯಲ್ಲಿ ಕುವರಿಯರೊಂದಿಗೆ ವಾಸಿಸುವ ಸೊದೋಮ್, ನಿನ್ನ ತಂಗಿ.


ಸೊದೋಮೆಂಬ ನಿನ್ನ ತಂಗಿಯ ದೋಷವನ್ನು ನೋಡು; ಗರ್ವಪಡುವುದು, ಹೊಟ್ಟೆ ತುಂಬಿಸಿಕೊಳ್ಳುವುದು, ಸ್ವಸುಖದಲ್ಲಿ ಮುಳುಗಿರುವುದು, ಇವು ಆಕೆಯಲ್ಲಿಯೂ ಆಕೆಯ ಕುವರಿಯರಲ್ಲೂ ಇದ್ದವು. ಅಲ್ಲದೆ ಅವರು ದೀನದಲಿತರಿಗೆ ಬೆಂಬಲವಾಗಿರಲಿಲ್ಲ.


ನಾನದನು ಅಷ್ಟೊಂದು ಸುಂದರಗೊಳಿಸಿದ್ದೆ ಶಾಖೋಪಶಾಖೆಗಳಿಂದ ಅಸೂಯೆಪಡುತ್ತಿದ್ದವು ಏದೇನಿನ ದೇವೋದ್ಯಾನದ ವೃಕ್ಷಗಳೆಲ್ಲ.


“ಪೂರ್ವದಲ್ಲಿ ಹವ್ರಾನ್, ದಮಸ್ಕ, ಗಿಲ್ಯಾದ್ ಇವುಗಳಿಗೂ ಇಸ್ರಯೇಲ್ ನಾಡಿಗೂ ಮಧ್ಯೆ ಜೋರ್ಡನ್ ಹೊಳೆ ಎಲ್ಲೆಯಾಗಿರುವುದು; ಉತ್ತರದ ಮೇರೆಯಿಂದ ಪೂರ್ವದ ಸಮುದ್ರದವರೆಗೆ ನೀವು ಗುರುತುಹಾಕಿಕೊಳ್ಳಬೇಕು. ಇದು ಪೂರ್ವದಿಕ್ಕಿನ ಮೇರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು