ಆದಿಕಾಂಡ 13:12 - ಕನ್ನಡ ಸತ್ಯವೇದವು C.L. Bible (BSI)12 ಅಬ್ರಾಮನು ಕಾನಾನ್ ನಾಡಿನಲ್ಲೇ ವಾಸಮಾಡಿದನು. ಲೋಟನು ಜೋರ್ಡನ್ ನದಿಯ ಸುತ್ತಣ ಊರುಗಳಲ್ಲಿ ವಾಸಮಾಡುತ್ತಾ ಸೋದೋಮ್‍ಗೆ ಸಮೀಪದಲ್ಲಿ ಗುಡಾರಹಾಕಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಹೀಗೆ ಅವರಿಬ್ಬರೂ ಪ್ರತ್ಯೇಕವಾದರು. ಅಬ್ರಾಮನು ಕಾನಾನ್ ದೇಶದಲ್ಲಿ ವಾಸಮಾಡಿದನು. ಲೋಟನು ಯೊರ್ದನ್ ಹೊಳೆಯ ಸುತ್ತಣ ಊರುಗಳಲ್ಲಿ ವಾಸ ಮಾಡುತ್ತಾ ಸೊದೋಮಿನ ಸಮೀಪದಲ್ಲಿ ಗುಡಾರ ಹಾಕಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಅಬ್ರಾಮನು ಕಾನಾನ್‍ದೇಶದಲ್ಲಿ ವಾಸಮಾಡಿದನು; ಲೋಟನು ಯೊರ್ದನ್ ಹೊಳೆಯ ಸುತ್ತಣ ಊರುಗಳಲ್ಲಿ ಗುಡಾರ ಹಾಕಿಸಿ ವಸತಿ ಮಾಡುತ್ತಾ ಸೊದೋವಿುಗೆ ಬಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಅಬ್ರಾಮನು ಕಾನಾನ್ ಪ್ರದೇಶದಲ್ಲಿ ಉಳಿದುಕೊಂಡನು. ಲೋಟನು ಕಣಿವೆಯಲ್ಲಿದ್ದ ಪಟ್ಟಣಗಳ ಮಧ್ಯದಲ್ಲಿ ವಾಸಿಸಿದನು; ದಕ್ಷಿಣದಲ್ಲಿದ್ದ ಸೊದೋಮಿನವರೆಗೂ ಗುಡಾರಗಳನ್ನು ಹಾಕಿಕೊಂಡು ಪಾಳೆಯಮಾಡಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಅಬ್ರಾಮನು ಕಾನಾನ್ ದೇಶದಲ್ಲಿ ವಾಸಮಾಡಿದನು. ಲೋಟನಾದರೋ ಸಮತಟ್ಟಾದ ಊರುಗಳಲ್ಲಿ ವಾಸಿಸುತ್ತಾ ಸೊದೋಮಿನ ಬಳಿ ತನ್ನ ಗುಡಾರವನ್ನು ಹಾಕಿದನು. ಅಧ್ಯಾಯವನ್ನು ನೋಡಿ |