Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 13:13 - ಕನ್ನಡ ಸತ್ಯವೇದವು C.L. Bible (BSI)

13 ಸೋದೋಮಿನ ಪಟ್ಟಣದವರು ಬಹಳ ದುಷ್ಟರು; ಪ್ರಭುವಿನ ದೃಷ್ಟಿಯಲ್ಲಿ ಕಡುಪಾಪಿಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆದರೆ ಸೊದೋಮ್ ಪಟ್ಟಣದ ಜನರು ಯೆಹೋವನ ದೃಷ್ಟಿಯಲ್ಲಿ ಬಹು ದುಷ್ಟರೂ ಪಾಪಿಷ್ಠರು ಆಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆದರೆ ಸೊದೋಮ್ ಪಟ್ಟಣದವರು ದುಷ್ಟರೂ ಯೆಹೋವನಿಗೆ ಮಹಾಪರಾಧಿಗಳೂ ಆಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಸೊದೋಮಿನ ಜನರು ತುಂಬ ಕೆಟ್ಟವರಾಗಿದ್ದರು. ಅವರು ಯಾವಾಗಲೂ ಯೆಹೋವನಿಗೆ ವಿರೋಧವಾಗಿ ಪಾಪಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಸೊದೋಮಿನ ಜನರು ದುಷ್ಟರಾಗಿದ್ದರು ಮತ್ತು ಯೆಹೋವ ದೇವರ ವಿರುದ್ಧ ಬಹಳ ಪಾಪಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 13:13
27 ತಿಳಿವುಗಳ ಹೋಲಿಕೆ  

ಮುಖ್ಯವಾಗಿ, ತುಚ್ಛವಾದ ದೈಹಿಕ ವ್ಯಾಮೋಹಗಳಿಗೆ ಬಲಿಯಾಗಿರುವವರನ್ನು ಮತ್ತು ದೇವರ ಅಧಿಕಾರವನ್ನು ತೃಣೀಕರಿಸುವವರನ್ನು ಅವರು ಶಿಕ್ಷಿಸದೆ ಬಿಡುವುದಿಲ್ಲ.


ಸೊದೋಮ್, ಗೊಮೋರ ಮತ್ತು ಅವುಗಳ ಸುತ್ತಮುತ್ತಲಿನ ಪಟ್ಟಣಿಗರು ಆ ದೂತರಂತೆಯೇ ನಡೆದುಕೊಂಡರು. ಅಲ್ಲದೆ, ಅವರು ಅನೈತಿಕತೆಯಲ್ಲೂ ಪ್ರಕೃತಿ ವಿರುದ್ಧವಾದ ಲೈಂಗಿಕಕೃತ್ಯಗಳಲ್ಲೂ ಮಗ್ನರಾಗಿದ್ದರು. ಈ ಕಾರಣದಿಂದ ಅವರು ನಿತ್ಯಾಗ್ನಿಯ ಶಿಕ್ಷೆಗೆ ಗುರಿಯಾಗಿ ಇತರರಿಗೆ ಎಚ್ಚರಿಕೆಯನ್ನು ನೀಡುವ ನಿದರ್ಶನವಾಗಿದ್ದಾರೆ.


ಅಂತೆಯೇ ಪುರುಷರು ಸಹ ಸ್ವಾಭಾವಿಕವಾದ ಸ್ತ್ರೀಸಂಗವನ್ನು ತೊರೆದು, ತಮ್ಮತಮ್ಮಲ್ಲಿಯೇ ಕಾಮೋದ್ರೇಕಗೊಂಡರು; ಸಲಿಂಗಕಾಮಿಗಳಾದರು; ಲಜ್ಜಾಹೀನರಾಗಿ ವರ್ತಿಸಿದರು; ತಮ್ಮ ದುರ್ನಡತೆಗೆ ತಕ್ಕ ಶಿಕ್ಷೆಯನ್ನು ತಮ್ಮ ಮೇಲೆ ಬರಮಾಡಿಕೊಂಡರು.


ನನ್ನ ಕಣ್ಣಿಗೆ ಬೀಳದಂತೆ ಯಾವನಾದರು ಗುಪ್ತಸ್ಥಳಗಳಲ್ಲಿ ಮರೆಮಾಚಿಕೊಳ್ಳಲು ಸಾಧ್ಯವೇ? ನಾನು ಭೂಮ್ಯಾಕಾಶಗಳಲ್ಲಿ ವ್ಯಾಪಿಸಿರುವವನಲ್ಲವೆ?


ನಾವು ಯಾರಿಗೆ ಲೆಕ್ಕ ಒಪ್ಪಿಸಬೇಕಾಗಿದೆಯೋ, ಅವರ ಕಣ್ಣಿಗೆ ಮುಚ್ಚುಮರೆಯಾದುದು ಯಾವುದೂ ಇಲ್ಲ. ಅವರ ದೃಷ್ಟಿಗೆ ಎಲ್ಲವೂ ಬಟ್ಟಬಯಲು.


ನೀವು ಹೋಗಿ, ನನಗೆ ಬೇಕಾದುದು ದಯೆ, ಯಜ್ಞಬಲಿಯಲ್ಲ’ ಎಂದು ಪವಿತ್ರಗ್ರಂಥದಲ್ಲಿ ಬರೆದಿರುವ ವಾಕ್ಯದ ಅರ್ಥವನ್ನು ಕಲಿತುಕೊಳ್ಳಿ. ನಾನು ಕರೆಯಲು ಬಂದಿರುವುದು ಧರ್ಮಿಷ್ಠರನ್ನಲ್ಲ, ಪಾಪಿಷ್ಠರನ್ನು,” ಎಂದರು.


ಇದಲ್ಲದೆ ಸರ್ವೇಶ್ವರ, “ಸೊದೋಮ್ ಗೊಮೋರಗಳ ವಿರುದ್ಧ ಎಷ್ಟೋ ಘನತರವಾದ ದೂರುಗಳು ನನಗೆ ಬಂದಿವೆ; ಆ ಊರಿನವರ ಮೇಲೆ ಹೊರಿಸಲಾಗಿರುವ ಪಾಪಕೃತ್ಯವೂ ಘೋರವಾದುದು.


ದೇವರು ಪಾಪಿಗಳಿಗೆ ಓಗೊಡುವುದಿಲ್ಲ. ಯಾರು ಭಕ್ತಿಯಿಂದ ಅವರ ಚಿತ್ತದಂತೆ ನಡೆಯುತ್ತಾರೋ ಅವರಿಗೆ ಓಗೊಡುತ್ತಾರೆಂದು ನಮಗೆಲ್ಲಾ ಚೆನ್ನಾಗಿ ತಿಳಿದಿದೆ.


ಇದಾದ ಮೇಲೆ ಯೇಸುಸ್ವಾಮಿ ಮತ್ತಾಯನ ಮನೆಯಲ್ಲಿ ಊಟಕ್ಕೆ ಕುಳಿತಿದ್ದರು. ಬಹುಮಂದಿ ‘ಸುಂಕದವರೂ’ ‘ಪಾಪಿಷ್ಠರೂ’ ಅಲ್ಲಿಗೆ ಬಂದರು. ಯೇಸು ಮತ್ತು ಅವರ ಶಿಷ್ಯರು ಕುಳಿತಿದ್ದ ಪಂಕ್ತಿಯಲ್ಲೇ ಇವರೂ ಊಟಕ್ಕೆ ಕುಳಿತರು.


ಸೇನಾಧೀಶ್ವರ ಸರ್ವೇಶ್ವರ ಕೆಲವು ಜನರನ್ನಾದರೂ ಉಳಿಸದೆಹೋಗಿದ್ದರೆ, ಸೊದೋಮಿನ ಗತಿಯೇ, ಗೊಮೋರದ ದುರ್ದೆಶೆಯೇ ನಮಗೆ ಸಂಭವಿಸುತ್ತಿತ್ತು.


ಇದಲ್ಲದೆ ಅವನು ತನ್ನ ಮಗನನ್ನು ಬಲಿಯಗ್ನಿಪರೀಕ್ಷೆಗೆ ಗುರಿಯಾಗಿಸಿದನು. ಕಣಿ ಹೇಳಿಸುವುದು, ತಂತ್ರಮಂತ್ರಗಳನ್ನು ಮಾಡಿಸುವುದು, ಭೂತಪ್ರೇತಗಳನ್ನು ವಿಚಾರಿಸುವವರನ್ನು ಸಂಪರ್ಕಿಸುವುದು ಇವೇ ಮೊದಲಾದ ದುಷ್ಕೃತ್ಯಗಳಿಂದ ಸರ್ವೇಶ್ವರನಿಗೆ ಕೋಪವನ್ನೆಬ್ಬಿಸಿದನು.


ಅವರು ನಿನಗೆ, ‘ಹೊರಟು ಹೋಗಿ ದುಷ್ಟರಾದ ಅಮಾಲೇಕ್ಯರೊಡನೆ ಯುದ್ಧಮಾಡಿ ಅವರೆಲ್ಲರನ್ನೂ ಸಂಪೂರ್ಣವಾಗಿ ನಾಶಮಾಡು’ ಎಂದು ಹೇಳಿದರು.


ಆದರೆ ಯೆಹೂದನ ಈ ಹಿರಿಯ ಮಗ ಸರ್ವೇಶ್ವರ ಸ್ವಾಮಿಯ ದೃಷ್ಟಿಯಲ್ಲಿ ಕೆಟ್ಟವನಾಗಿದ್ದನು. ಆದ್ದರಿಂದ ಸರ್ವೇಶ್ವರ ಅವನನ್ನು ಸಾವಿಗೀಡುಮಾಡಿದರು.


ನಿನ್ನ ಸಂತತಿಯವರು ನಾಲ್ಕನೆಯ ತಲಾಂತರವಾದ ಮೇಲೆ ಇಲ್ಲಿಗೆ ಮರಳಿ ಬರುವರು. ಏಕೆಂದರೆ ಅಮೋರಿಯರ ಪಾಪಕ್ರಮ ಇನ್ನೂ ಮಾಗಿಲ್ಲ,” ಎಂದರು.


ದೇವರ ದೃಷ್ಟಿಯಲ್ಲಿ ದಿಟ್ಟ ಬೇಟೆಗಾರ. "ಪ್ರಭು ನಿನ್ನನ್ನು ನಿಮ್ರೋದನಂಥ ದಿಟ್ಟಬೇಟೆಗಾರನಾಗಿಸಲಿ" ಎಂಬ ನಾಣ್ನುಡಿ ಇಂದಿಗೂ ಇದೆ.


ಜಗತ್ತು ದೇವರ ದೃಷ್ಟಿಯಲ್ಲಿ ಕೆಟ್ಟುಹೋಗಿತ್ತು. ಹಿಂಸಾಚಾರದಿಂದ ತುಂಬಿತುಳುಕುತ್ತಿತ್ತು.


ಅಧಿಕಾರಿಗಳು ಆ ಹುಟ್ಟು ಕುರುಡನನ್ನು ಮತ್ತೆ ಕರೆಯಿಸಿ, “ನೀನು ದೇವರ ಮುಂದೆ ಪ್ರಮಾಣಮಾಡಿ ಹೇಳು. ಆ ಮನುಷ್ಯ ಪಾಪಿಯೆಂದು ನಮಗೆ ಗೊತ್ತು,” ಎಂದು ಕೇಳಿದರು.


ಈ ಮನೆಯಲ್ಲಿ ನನಗಿಂತ ಹೆಚ್ಚಿನ ಅಧಿಕಾರ ಪಡೆದವರು ಒಬ್ಬರೂ ಇಲ್ಲ; ನಿಮ್ಮನ್ನು ಬಿಟ್ಟು ಮಿಕ್ಕ ಎಲ್ಲವನ್ನು ನನಗೆ ಅಧೀನಮಾಡಿದ್ದಾರೆ. ನೀವು ಅವರ ಧರ್ಮಪತ್ನಿ ಅಲ್ಲವೆ? ಹೀಗಿರುವಲ್ಲಿ, ನಾನು ಇಂತಹ ಮಹಾದುಷ್ಕೃತ್ಯವೆಸಗಿ ದೇವರಿಗೆ ವಿರುದ್ಧ ಹೇಗೆ ಪಾಪಮಾಡಲಿ?” ಎಂದು ಆಕೆಗೆ ಉತ್ತರಕೊಟ್ಟ.


ನೀವು ಹಾಗೇನಾದರೂ ಮಾಡದೆ ಹೋದರೆ ಸರ್ವೇಶ್ವರನಿಗೆ ವಿರುದ್ಧ ಪಾಪಮಾಡಿದವರಾಗುವಿರಿ. ನಿಮ್ಮನ್ನು ದಂಡಿಸುವ ತನಕ ನಿಮ್ಮ ಪಾಪ ನಿಮ್ಮ ಬೆನ್ನತ್ತಿಬರುವುದೆಂದು ತಿಳಿದಿರಿ.


ನಾವು ಈ ಸ್ಥಳವನ್ನು ನಾಶಮಾಡುವುದಕ್ಕೆ ಬಂದವರು. ಇಲ್ಲಿಯವರ ವಿಷಯವಾಗಿ ಬಂದ ಆಪಾದನೆ ದೊಡ್ಡದಾದುದರಿಂದ ಇವರನ್ನು ನಾಶಮಾಡುವುದಕ್ಕಾಗಿ ಸರ್ವೇಶ್ವರ ನಮ್ಮನ್ನು ಕಳಿಸಿದ್ದಾರೆ,” ಎಂದು ತಿಳಿಸಿದರು.


ಹೀಗೆ ಸರ್ವೇಶ್ವರನ ನೈವೇದ್ಯವನ್ನು ತುಚ್ಛವಾಗಿ ಕಾಣುತ್ತಿದ್ದುದರಿಂದ ದೇವರ ದೃಷ್ಟಿಯಲ್ಲಿ ಏಲಿಯ ಮಕ್ಕಳ ಪಾಪ ಘೋರವಾಗಿತ್ತು.


ಜೆರುಸಲೇಮಿನ ಪ್ರವಾದಿಗಳಲ್ಲೂ ಭೀಕರವಾದುವನ್ನು ನೋಡಿರುವೆನು ವ್ಯಭಿಚಾರ ಮಾಡುತ್ತಾರೆ, ಸುಳ್ಳು ಹಾದಿಯನ್ನು ಹಿಡಿಯುತ್ತಾರೆ ದುರುಳರು ದುರಾಚಾರವನ್ನು ಬಿಡದಂತೆ ದೃಢಪಡಿಸುತ್ತಾರೆ. ನನ್ನ ದೃಷ್ಟಿಗೆ ಅವರೆಲ್ಲರು ಸೊದೋಮಿನಂತೆ, ಆ ಪುರನಿವಾಸಿಗಳು ನನ್ನ ಕಣ್ಣಿಗೆ ಗೊಮೋರದಂತೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು