Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 13:15 - ಕನ್ನಡ ಸತ್ಯವೇದವು C.L. Bible (BSI)

15 ನಿನ್ನ ಕಣ್ಣಿಗೆ ಕಾಣಿಸುವ ಈ ಪ್ರಾಂತ್ಯವನ್ನೆಲ್ಲಾ ನಿನಗೂ ನಿನ್ನ ಸಂತಾನಕ್ಕೂ ಶಾಶ್ವತವಾಗಿ ಕೊಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನೀನು ನೋಡುವ ಈ ದೇಶವನ್ನೆಲ್ಲಾ ನಿನಗೂ ನಿನ್ನ ಸಂತತಿಗೂ ಶಾಶ್ವತವಾಗಿ ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನೀನು ನೋಡುವ ಈ ದೇಶವನ್ನೆಲ್ಲಾ ನಿನಗೂ ನಿನ್ನ ಸಂತತಿಗೂ ಶಾಶ್ವತವಾಗಿ ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನೀನು ನೋಡುವ ಈ ದೇಶವನ್ನೆಲ್ಲಾ ನಿನಗೂ ನಿನ್ನ ನಂತರ ಜೀವಿಸುವ ನಿನ್ನ ಸಂತತಿಯವರಿಗೂ ಕೊಡುತ್ತೇನೆ. ಇದು ಎಂದೆಂದಿಗೂ ನಿನ್ನದಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಏಕೆಂದರೆ ನೀನು ಕಾಣುವ ದೇಶವನ್ನೆಲ್ಲಾ ನಾನು ನಿನಗೂ ನಿನ್ನ ಸಂತತಿಗೂ ಶಾಶ್ವತವಾಗಿ ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 13:15
31 ತಿಳಿವುಗಳ ಹೋಲಿಕೆ  

ನಮ್ಮ ದೇವರಾದ ನೀವು ನಿಮ್ಮ ಪ್ರಜೆಗಳಾದ ಇಸ್ರಯೇಲರ ಎದುರಿನಿಂದ ಈ ನಾಡಿನ ನಿವಾಸಿಗಳನ್ನು ಹೊರದೂಡಿಸಿ, ಇದನ್ನು ಮಿತ್ರ ಅಬ್ರಹಾಮನ ಸಂತಾನದವರಿಗೆ ಶಾಶ್ವತ ಸೊತ್ತಾಗಿ ಕೊಟ್ಟಿರಲ್ಲವೆ?


ಅಲ್ಲಿ ಸರ್ವೇಶ್ವರ ಸ್ವಾಮಿ ಅಬ್ರಾಮನಿಗೆ ದರ್ಶನವಿತ್ತು - “ಈ ನಾಡನ್ನು ನಾನು ನಿನ್ನ ಸಂತಾನಕ್ಕೆ ಕೊಡುತ್ತೇನೆ” ಎಂದು ಹೇಳಿದರು. ತನಗೆ ದರ್ಶನಕೊಟ್ಟ ಸರ್ವೇಶ್ವರನಿಗೆ ಅಬ್ರಾಮನು ಅಲ್ಲಿ ಒಂದು ಬಲಿಪೀಠವನ್ನು ಕಟ್ಟಿಸಿದನು.


ನಾನು ಅಬ್ರಹಾಮ್, ಇಸಾಕರಿಗೆ ವಾಗ್ಡಾನ ಮಾಡಿದ ನಾಡನ್ನು ನಿನಗೂ ನಿನ್ನ ತರುವಾಯ ಬರುವ ನಿನ್ನ ಸಂತತಿಗೂ ಕೊಡುವೆನು,” ಎಂದು ಹೇಳಿದರು.


ಸರ್ವೇಶ್ವರ ಅಂದೇ ಅಬ್ರಾಮನ ಸಂಗಡ ಒಂದು ಒಡಂಬಡಿಕೆಯನ್ನು ಮಾಡಿಕೊಂಡರು: ”ಈಜಿಪ್ಟಿನ ನದಿಯಿಂದ ಯೂಫ್ರೆಟಿಸ್ ಮಹಾನದಿಯವರೆಗೆ, ಕೊಡುವೆನು ಈ ನಾಡೆಲ್ಲವನ್ನು ನಿನ್ನ ಸಂತತಿಯವರಿಗೆ,”


ಆಗ ಇಲ್ಲಿ ಕಾಲಿಡುವಷ್ಟು ನೆಲವನ್ನು ಕೂಡ ದೇವರು ಅವನಿಗೆ ಸ್ವಾಸ್ತ್ಯವಾಗಿ ಕೊಡಲಿಲ್ಲ. ಸ್ವಂತ ಸೊತ್ತಾಗಿ ಅವನಿಗೂ ಅವನ ಬಳಿಕ ಅವನ ಸಂತತಿಗೂ ಕೊಡುವುದಾಗಿ ವಾಗ್ದಾನಮಾಡಿದರಷ್ಟೆ. ಆಗ ಅಬ್ರಹಾಮನಿಗೆ ಮಕ್ಕಳೇ ಇರಲಿಲ್ಲ.


ಸಜ್ಜನರು ಸಿರಿನಾಡಿಗೆ ಬಾಧ್ಯಸ್ಥರು I ಅಲ್ಲವರು ಶಾಶ್ವತವಾಗಿ ಬಾಳುವರು II


ಪ್ರಭುವಿನಿಂದ ಆಶೀರ್ವದಿತರು ನಾಡಿಗೆ ಬಾಧ್ಯಸ್ಥರು I ಆತನಿಂದ ಶಾಪಗ್ರಸ್ಥರು ಬಹಿಷ್ಕೃತರು II


ವಿನಯಶೀಲರು ಭಾಗ್ಯವಂತರು; ದೇವರ ವಾಗ್ದತ್ತ ನಾಡಿಗೆ ಬಾಧ್ಯಸ್ಥರು ಅವರು.


“ನೀನು ಇಸ್ರಯೇಲರಿಗೆ ಹೀಗೆಂದು ಆಜ್ಞಾಪಿಸು - ‘ಇಡೀ ಕಾನಾನ್ ನಾಡು ನಿಮಗೆ ಸ್ವಂತ ನಾಡಾಗಿ ದೊರಕುವುದು.


ಮೋಶೆಗೆ ಸರ್ವೇಶ್ವರ ಸ್ವಾಮಿ ಹೇಳಿದ ಮಾತುಗಳಿವು: “ನೀನು ಈಜಿಪ್ಟಿನಿಂದ ಕರೆದುತಂದ ಜನರನ್ನು ನಿನ್ನ ಸಂಗಡ ಕರೆದುಕೊಂಡು ಈ ಸ್ಥಳಬಿಟ್ಟು ತೆರಳು. ನಾನು ಅಬ್ರಹಾಮ್, ಇಸಾಕ್, ಯಕೋಬ್ ಎಂಬುವರೊಡನೆ ಅವನ ಸಂತತಿಯವರಿಗೆ ಕೊಡುವುದಾಗಿ ಪ್ರಮಾಣ ಮಾಡಿದ ನಾಡಿಗೆ ಹೊರಟುಹೋಗು.


‘ನಾನು ನಿನ್ನನ್ನು ಫಲಪ್ರದನನ್ನಾಗಿ ಮಾಡಿ ನಿನ್ನ ಸಂತತಿಯನ್ನು ಹೆಚ್ಚಿಸುವೆನು; ಅನೇಕ ಜನರಿಗೆ ನಿನ್ನನ್ನು ಮೂಲಪುರುಷನನ್ನಾಗಿ ಮಾಡುವೆನು; ನಿನ್ನ ತರುವಾಯ ನಿನ್ನ ಸಂತತಿಗೆ ಈ ನಾಡನ್ನು ಶಾಶ್ವತ ಸೊತ್ತನ್ನಾಗಿ ಕೊಡುವೆನು,’ ಎಂದು ಹೇಳಿದರು.


ಇದಲ್ಲದೆ, ಸರ್ವೇಶ್ವರಸ್ವಾಮಿ ಅವನ ಬಳಿಯಲ್ಲೇ ನಿಂತು, “ನಿನ್ನ ತಂದೆಯೂ ಅಬ್ರಹಾಮನ ದೇವರೂ ಇಸಾಕನ ದೇವರೂ ಆಗಿರುವ ಸರ್ವೇಶ್ವರ ನಾನೇ. ನೀನು ಮಲಗಿಕೊಂಡಿರುವ ಈ ನಾಡನ್ನು ನಿನಗೂ ನಿನ್ನ ಸಂತತಿಗೂ ಕೊಡುತ್ತೇನೆ.


ದೇವರು ಅಬ್ರಹಾಮನಿಗೆ ಕೊಟ್ಟ ಆಶೀರ್ವಾದವನ್ನು ನಿನಗೂ ನಿನ್ನ ಸಂತತಿಗೂ ಕೊಡಲಿ; ನೀನು ಪ್ರವಾಸಿಯಾಗಿರುವ ಈ ನಾಡನ್ನು, ಅಂದರೆ ಅಬ್ರಹಾಮನಿಗೆ ದೇವರು ವಾಗ್ದಾನಮಾಡಿದ್ದ ಈ ನಾಡನ್ನು, ನೀನು ಸ್ವಂತ ಸೊತ್ತಾಗಿಸಿಕೊಳ್ಳುವಂತಾಗಲಿ!” ಎಂದು ಹರಸಿ ಕಳುಹಿಸಿಬಿಟ್ಟನು.


ನನ್ನ ತಂದೆಯ ಮನೆಯಿಂದಲೂ ನಾನು ಹುಟ್ಟಿದ ನಾಡಿನಿಂದಲೂ ನನ್ನನ್ನು ಇಲ್ಲಿಗೆ ಕರೆತಂದು, ‘ನಿನ್ನ ಸಂತತಿಗೆ ಈ ನಾಡನ್ನು ಕೊಡುತ್ತೇನೆ,’ ಎಂದು ಪರಲೋಕ ದೇವರಾದ ಸರ್ವೇಶ್ವರ ಸ್ವಾಮಿ ಪ್ರಮಾಣಮಾಡಿ ಹೇಳಿದ್ದಾರೆ. ಅವರೇ ತಮ್ಮ ದೂತನನ್ನು ನಿನ್ನ ಮುಂದೆ ಕಳುಹಿಸಿ, ನೀನು ಅಲ್ಲಿಂದ ನನ್ನ ಮಗನಿಗೆ ಹೆಣ್ಣು ತರುವುದಕ್ಕೆ ಅನುಕೂಲ ಮಾಡಿಕೊಡುವರು.


ನಿಮ್ಮ ಸ್ವಕೀಯ ಜನರು ಸ್ವಲ್ಪಕಾಲ ಮಾತ್ರ ಅನುಭವಿಸಿದಾ ನಿಮ್ಮ ಪವಿತ್ರ ಗರ್ಭಗುಡಿಯನ್ನು ನಮ್ಮ ವೈರಿಗಳು ತುಳಿದು ಹಾಳುಮಾಡಿದರಲ್ಲಾ !


ಅನಂತರ, “ನಾನು ಅಬ್ರಹಾಮ್, ಇಸಾಕ್, ಯಕೋಬರಿಗೆ ಪ್ರಮಾಣಮಾಡಿ ಅವರ ಸಂತತಿಯವರಿಗೆ ಕೊಡುವೆನೆಂದು ವಾಗ್ದಾನ ಮಾಡಿದ ನಾಡು ಇದೇ; ಇದನ್ನು ನಿನಗೆ ಪ್ರತ್ಯಕ್ಷವಾಗಿ ತೋರಿಸಿದ್ದೇನೆ. ಆದರೆ ನೀನು ನದಿದಾಟಿ ಅಲ್ಲಿಗೆ ಹೋಗಕೂಡದು,” ಎಂದು ಹೇಳಿದರು.


ಅವನಿಂದ ಮಹಾ ಬಲಿಷ್ಠವಾದ ರಾಷ್ಟ್ರವೊಂದು ಹುಟ್ಟಬೇಕಾಗಿದೆ. ಅವನ ಮುಖಾಂತರ ಜಗದ ಎಲ್ಲ ರಾಷ್ಟ್ರಗಳಿಗೆ ನನ್ನ ಆಶೀರ್ವಾದ ದೊರಕಬೇಕಾಗಿದೆ.


ನೀನೆದ್ದು ಈ ನಾಡಿನ ಉದ್ದಗಲಕ್ಕೂ ತಿರುಗಾಡು; ಇದನ್ನು ನಾನು ನಿನಗೆ ಕೊಡುತ್ತೇನೆ, ಎಂದು ಹೇಳಿದರು.


ಸವೇಶ್ವರ ಬಳಿಕ ಅಬ್ರಾಮನಿಗೆ ಇಂತೆಂದರು: “ಈ ನಾಡನ್ನು ನಿನಗೆ ಸೊತ್ತಾಗಿ ಕೊಡಬೇಕೆಂದು ಬಾಬಿಲೋನಿನಲ್ಲಿರುವ ಊರ್ ಪಟ್ಟಣದಿಂದ ನಿನ್ನನ್ನು ಬರಮಾಡಿದ ಸರ್ವೇಶ್ವರ ನಾನೇ,” ಎಂದರು.


ನಿನ್ನ ಸಂತತಿ ಭೂಮಿಯ ಧೂಳಿನಂತೆ ಅಸಂಖ್ಯ ಆಗುವುದು; ನೀನು ಪೂರ್ವಪಶ್ಚಿಮ - ದಕ್ಷಿಣೋತ್ತರ ದಿಕ್ಕುಗಳಿಗೆ ಹರಡಿಕೊಳ್ಳುವೆ. ನಿನ್ನ ಮುಖಾಂತರ ಹಾಗೂ ನಿನ್ನ ಸಂತತಿಯ ಮುಖಾಂತರ ಜಗದ ಎಲ್ಲ ರಾಷ್ಟ್ರಗಳೂ ಆಶೀರ್ವಾದ ಪಡೆಯುವುವು.


ಜೋಸೆಫನು ತನ್ನ ಅಣ್ಣತಮ್ಮಂದಿರಿಗೆ, “ನನ್ನ ಮರಣಕಾಲವು ಸಮೀಪಿಸಿತು. ಆದರೆ ದೇವರು ನಿಶ್ಚಯವಾಗಿ ನಿಮ್ಮನ್ನು ಕಾಪಾಡಲು ಬರುವರು; ತಾವು ಅಬ್ರಹಾಮ್, ಇಸಾಕ್, ಯಕೋಬರಿಗೆ ಕೊಡುವುದಾಗಿ ವಾಗ್ದಾನಮಾಡಿರುವ ನಾಡಿಗೆ ನೀವು ಹೋಗಿ ಸೇರುವಂತೆ ಮಾಡುವರು,” ಎಂದು ಹೇಳಿದನು.


ತಮ್ಮ ದಾಸರಾದ ಅಬ್ರಹಾಮ್, ಇಸಾಕ್ ಹಾಗು ಯಕೋಬರನ್ನು ನೆನಪಿಗೆ ತಂದುಕೊಳ್ಳಿ. ತಾವು ತಮ್ಮ ಜೀವದಾಣೆ ಪ್ರಮಾಣ ಮಾಡಿ ಅವರಿಗೆ, ‘ನಾನು ನಿಮ್ಮ ಸಂತತಿಯನ್ನು ಹೆಚ್ಚಿಸಿ ಆಕಾಶದ ನಕ್ಷತ್ರಗಳಷ್ಟು ಅಸಂಖ್ಯವಾಗಿ ಮಾಡುವೆನು; ನಾನು ಸೂಚಿಸಿರುವ ಈ ಪ್ರದೇಶಗಳನ್ನೆಲ್ಲಾ ನಿಮ್ಮ ಸಂತತಿಯವರಿಗೆ ಕೊಡುವೆನು; ಮತ್ತು ಅವರು ಈ ನಾಡನ್ನು ಶಾಶ್ವತವಾಗಿ ಸ್ವಾಧೀನದಲ್ಲಿಟ್ಟುಕೊಳ್ಳುವರು’ ಎಂದು ತಾವು ಮಾತುಕೊಡಲಿಲ್ಲವೆ?” ಎಂದನು.


ನೀವು ಅವರ ನಾಡಿಗೆ ಬಂದು ಅದನ್ನು ಸ್ವಾಧೀನಮಾಡಿಕೊಳ್ಳುವುದಕ್ಕೆ ನಿಮ್ಮ ಪುಣ್ಯವೇ ಆಗಲಿ, ನಿಮ್ಮ ಸುಸ್ವಭಾವವೇ ಆಗಲಿ, ಕಾರಣವಲ್ಲ. ಆ ಜನಾಂಗಗಳ ದುರ್ನಡತೆಯ ಕಾರಣ ಹಾಗು ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಪಿತೃಗಳಾದ ಅಬ್ರಹಾಮ್, ಇಸಾಕ್, ಯಕೋಬರಿಗೆ ಪ್ರಮಾಣಪೂರ್ವಕವಾಗಿ ಮಾಡಿದ ವಾಗ್ದಾನವನ್ನು ನೆರವೇರಿಸಬೇಕೆಂಬ ಕಾರಣ ಅವರನ್ನು ನಿಮ್ಮ ಬಳಿಯಿಂದ ಹೊರಡಿಸಿಬಿಡುತ್ತಾರೆ.


“ನಾ ಕೊಡುವೆನು ಕಾನಾನ್ ನಾಡನು ನಿಮಗೆ I ಸ್ವಾಸ್ತ್ಯವಾಗುವುದಿದು ನಿಮ್ಮ ಸಂತತಿಗೆ” II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು