Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 13:4 - ಕನ್ನಡ ಸತ್ಯವೇದವು C.L. Bible (BSI)

4 ಬೇತೇಲಿಗೂ ಆಯಿ ಎಂಬ ಊರಿಗೂ ನಡುವೆ ತಾನು ಹಿಂದೆ ಗುಡಾರ ಹಾಕಿ ಬಲಿಪೀಠವನ್ನು ಕಟ್ಟಿದ ಕ್ಷೇತ್ರವನ್ನು ತಲುಪಿದನು. ಅಲ್ಲಿ ಸರ್ವೇಶ್ವರ ಸ್ವಾಮಿಯ ನಾಮಸ್ಮರಣೆ ಮಾಡಿ ಆರಾಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಡುವೆ ಪೂರ್ವದಲ್ಲಿ ಗುಡಾರ ಹಾಕಿಸಿ ಯಜ್ಞವೇದಿಯನ್ನು ಕಟ್ಟಿದ್ದ ಸ್ಥಳಕ್ಕೆ ಅಬ್ರಾಮನು ಹಿಂತಿರುಗಿ ಬಂದು ಅಲ್ಲಿ ಯೆಹೋವನ ಹೆಸರಿನಲ್ಲಿ ಆರಾಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಬೇತೇಲಿಗೂ ಆಯಿ ಎಂಬ ಊರಿಗೂ ನಡುವೆ ತಾನು ಪೂರ್ವದಲ್ಲಿ ಗುಡಾರಹಾಕಿಸಿ ಯಜ್ಞವೇದಿಯನ್ನು ಕಟ್ಟಿದ್ದ ಕ್ಷೇತ್ರಕ್ಕೆ ತಿರಿಗಿ ಬಂದು ಅಲ್ಲಿ ಯೆಹೋವನ ಹೆಸರನ್ನು ಹೇಳಿಕೊಂಡು ಆರಾಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಅಬ್ರಾಮನು ಯಜ್ಞವೇದಿಕೆಯನ್ನು ಕಟ್ಟಿದ್ದು ಈ ಸ್ಥಳದಲ್ಲೇ. ಅಬ್ರಾಮನು ಯೆಹೋವನನ್ನು ಆರಾಧಿಸಿದ್ದು ಈ ಸ್ಥಳದಲ್ಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅಲ್ಲಿ ಅಬ್ರಾಮನು ಯೆಹೋವ ದೇವರ ಹೆಸರನ್ನು ಹೇಳಿಕೊಂಡು ಆರಾಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 13:4
21 ತಿಳಿವುಗಳ ಹೋಲಿಕೆ  

ನೀವು ನನಗೆ ಮೊರೆಯಿಡುವಿರಿ, ನನ್ನನ್ನು ಪ್ರಾರ್ಥಿಸಲು ಬರುವಿರಿ; ನಾನು ಕಿವಿಗೊಡುವೆನು.


ಆಗ ನೀವು ಪ್ರಾರ್ಥಿಸಿದರೆ, ಆ ಸ್ವಾಮಿ ನಿಮಗೆ ಉತ್ತರಿಸುವರು; ಮೊರೆಯಿಟ್ಟು ಕರೆದರೆ ‘ಇಗೋ ಆಲಿಸುತ್ತಿದ್ದೇನೆ’ ಎನ್ನುವರು. ನೀವು ದಬ್ಬಾಳಿಕೆ ನಡೆಸುವುದನ್ನೂ ಇತರರನ್ನು ಜರೆಯುವುದನ್ನೂ ಕೇಡನ್ನು ನುಡಿಯುವುದನ್ನೂ ನಿಮ್ಮ ನಡುವೆಯಿಂದ ತೊಲಗಿಸಿದರೆ


“ಆಗ ಎಲ್ಲರೂ ಒಮ್ಮನಸ್ಸಿನಿಂದ ನನ್ನನ್ನು ಪೂಜಿಸಿ ನನ್ನ ಹೆಸರೆತ್ತಿ ಪ್ರಾರ್ಥಿಸುವಂತೆ ಜನಾಂಗಗಳ ಬಾಯನ್ನು ಪರಿವರ್ತಿಸಿ ಶುದ್ಧೀಕರಿಸುವೆನು.


ಆತನೆನ್ನ ಮೊರೆಗೆ ಕಿವಿಗೊಟ್ಟ ನಿಮಿತ್ತ I ವಿಜ್ಞಾಪಿಸುವೆ ಜೀವಮಾನ ಪರಿಯಂತ II


ಯೇಸುಕ್ರಿಸ್ತರು ನಮಗೂ ಸಮಸ್ತ ದೇವಜನರಿಗೂ ಪ್ರಭುವಾಗಿದ್ದಾರೆ.


ಪ್ರಭುವಿನ ಮಾರ್ಗ ಧರ್ಮಸಮ್ಮತ I ಆತನ ಕಾರ್ಯವೆಲ್ಲ ಪುನೀತ II


ಅರ್ಪಿಸುವೆ ನಾ ನಿನಗೆ ಕೃತಜ್ಞತಾ ಬಲಿಗಳನು I ಪ್ರಖ್ಯಾತಪಡಿಸುವೆನು ಪ್ರಭುವಿನ ನಾಮವನು II


ಹೊಗಳಲಿ ಪ್ರಭುವಿನಚಲ ಪ್ರೀತಿಯನು I ಜನರಿಗಾತ ಎಸಗಿದ ಅತಿಶಯಗಳನು II


ಕೃತಜ್ಞತೆಯಿಂದ ಸಲ್ಲಿಸಿರಿ ಪ್ರಭುವಿಗೆ ಸ್ತುತಿಯನು I ಆತನ ಪ್ರೀತಿ ಶಾಶ್ವತ, ಆತನು ಒಳ್ಳೆಯವನು II


ದುರುಳರ ಬಿಡಾರದಲಿ ನಾ ವಾಸಮಾಡುವುದರ ಬದಲು I ನಿನ್ನಾಲಯದ ದ್ವಾರಪಾಲಕನಾಗಿರುವುದೆ ಮೇಲು II


ಹೊಗಳಲಿ ಪ್ರಭುವಿನಚಲ ಪ್ರೀತಿಯನು I ಜನರಿಗೆ ಆತನೆಸಗಿದ ಅತಿಶಯಗಳನು II


ಪ್ರಿಯವಾದುದೆನಗೆ ನಿನ್ನ ನಿವಾಸದ ಮಂದಿರ I ಸುಪ್ರೀತವಾದುದು ನಿನ್ನ ಮಹಿಮೆಯ ಆಗರ II


ಅಬ್ರಾಮನು ಅಲ್ಲಿಂದ ಹೊರಟು ಅಲ್ಲಲ್ಲಿ ಗುಡಾರ ಹಾಕಿಸಿಕೊಳ್ಳುತ್ತಾ, ಹೆಬ್ರೋನಿನಲ್ಲಿರುವ ಮಮ್ರೆವೃಕ್ಷಗಳ ತೋಪಿಗೆ ಬಂದು ವಾಸಮಾಡಿದನು. ಸರ್ವೇಶ್ವರ ಸ್ವಾಮಿಗೆ ಅಲ್ಲಿ ಒಂದು ಬಲಿಪೀಠವನ್ನು ಕಟ್ಟಿಸಿದನು.


ತರುವಾಯ ಸೇತನು ಸಹ ಒಬ್ಬ ಮಗನನ್ನು ಪಡೆದು ಅವನಿಗೆ “ಏನೋಷ್” ಎಂದು ಹೆಸರಿಟ್ಟನು. ಜನರು “ಸರ್ವೇಶ್ವರ” ಎಂಬ ಹೆಸರನ್ನು ಆರಾಧಿಸುವುದಕ್ಕೆ ಪ್ರಾರಂಭಿಸಿದ್ದು ಆ ಕಾಲದಲ್ಲಿಯೇ.


ಇಸಾಕನು ಒಂದು ಬಲಿಪೀಠವನ್ನು ಕಟ್ಟಿಸಿ ಸರ್ವೇಶ್ವರ ಸ್ವಾಮಿಯ ನಾಮಸ್ಮರಣೆ ಮಾಡಿ ಆರಾಧಿಸಿ, ಅಲ್ಲಿ ಗುಡಾರ ಹಾಕಿಸಿಕೊಂಡನು. ಅವನ ಕೆಲಸಗಾರರು ಅಲ್ಲಿಯೂ ಒಂದು ಬಾವಿಯನ್ನು ತೋಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು