ಆದಿಕಾಂಡ 14:13 - ಕನ್ನಡ ಸತ್ಯವೇದವು C.L. Bible (BSI)13 ತಪ್ಪಿಸಿಕೊಂಡು ಓಡಿಹೋದವರಲ್ಲಿ ಒಬ್ಬ ವ್ಯಕ್ತಿ ಹಿಬ್ರಿಯನಾದ ಅಬ್ರಾಮನ ಬಳಿಗೆ ಬಂದು ನಡೆದುದನ್ನು ತಿಳಿಸಿದನು. ಅಬ್ರಾಮನು ಅಮೋರಿಯನಾದ ಮಮ್ರೆಯನ ತೋಪಿನ ಬಳಿ ವಾಸವಾಗಿದ್ದನು. ಮಮ್ರೆಯನಿಗೆ ಎಷ್ಕೋಲ ಮತ್ತು ಆನೇರ ಎಂಬ ಸಹೋದರರಿದ್ದರು. ಇವರಿಗೂ ಅಬ್ರಾಮನಿಗೂ ಒಪ್ಪಂದವಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ತಪ್ಪಿಸಿಕೊಂಡವನೊಬ್ಬನು, ಇಬ್ರಿಯನಾದ ಅಬ್ರಾಮನ ಬಳಿಗೆ ಬಂದು ಈ ಸಂಗತಿಯನ್ನು ತಿಳಿಸಿದನು. ಅಬ್ರಾಮನು ಅಮೋರಿಯನಾದ ಮಮ್ರೆಯನ ಮೋರೆ ತೋಪಿನ ಬಳಿಯಲ್ಲಿ ವಾಸವಾಗಿದ್ದನು. ಮಮ್ರೆಯನಿಗೆ ಎಷ್ಕೋಲ ಮತ್ತು ಆನೇರ ಎಂಬ ಸಹೋದರರಿದ್ದರು; ಇವರಿಬ್ಬರಿಗೂ ಅಬ್ರಾಮನಿಗೂ ಒಡಂಬಡಿಕೆಯಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ತಪ್ಪಿಸಿಕೊಂಡವನೊಬ್ಬನು ಇಬ್ರಿಯನಾದ ಅಬ್ರಾಮನ ಬಳಿಗೆ ಬಂದು ಇದನ್ನು ತಿಳಿಸಿದನು. ಅಬ್ರಾಮನು ಅಮೋರಿಯನಾದ ಮಮ್ರೆಯನ ತೋಪಿನ ಬಳಿಯಲ್ಲಿ ವಾಸವಾಗಿದ್ದನು. ಮಮ್ರೆಯನು ಎಷ್ಕೋಲ ಆನೇರರಿಗೆ ಸಹೋದರನು; ಇವರಿಬ್ಬರಿಗೂ ಅಬ್ರಾಮನಿಗೂ ಒಡಂಬಡಿಕೆಯಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ತಪ್ಪಿಸಿಕೊಂಡ ಒಬ್ಬನು ಇಬ್ರಿಯನಾದ ಅಬ್ರಾಮನ ಬಳಿಗೆ ಹೋಗಿ ನಡೆದ ವಿಷಯವನ್ನೆಲ್ಲಾ ತಿಳಿಸಿದನು. ಅಬ್ರಾಮನು ಅಮೋರಿಯನಾದ ಮಮ್ರೆಯನ ತೋಪಿನ ಬಳಿಯಲ್ಲಿ ವಾಸವಾಗಿದ್ದನು. ಮಮ್ರೆ, ಎಷ್ಕೋಲ ಮತ್ತು ಆನೇರ್ ಒಬ್ಬರಿಗೊಬ್ಬರು ಸಹಾಯಮಾಡಲು ಒಂದು ಒಪ್ಪಂದವನ್ನು ಮಾಡಿಕೊಂಡಿದ್ದರು. ಅಲ್ಲದೆ ಅಬ್ರಾಮನಿಗೂ ಸಹಾಯಮಾಡುವುದಾಗಿ ಒಂದು ಒಪ್ಪಂದಕ್ಕೆ ಸಹಿ ಮಾಡಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ತಪ್ಪಿಸಿಕೊಂಡವನೊಬ್ಬನು ಹೋಗಿ ಹಿಬ್ರಿಯನಾದ ಅಬ್ರಾಮನಿಗೆ ಇದನ್ನು ತಿಳಿಸಿದನು. ಆಗ ಅಬ್ರಾಮನು ಎಷ್ಕೋಲನಿಗೂ ಆನೇರನಿಗೂ ಸಹೋದರನಾಗಿದ್ದ ಅಮೋರಿಯನಾದ ಮಮ್ರೆಯನ ತೋಪಿನಲ್ಲಿ ವಾಸವಾಗಿದ್ದನು. ಇವರು ಅಬ್ರಾಮನೊಂದಿಗೆ ಒಡಂಬಡಿಕೆ ಮಾಡಿಕೊಂಡಿದ್ದರು. ಅಧ್ಯಾಯವನ್ನು ನೋಡಿ |