Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 14:14 - ಕನ್ನಡ ಸತ್ಯವೇದವು C.L. Bible (BSI)

14 ಅಬ್ರಾಮನು ತನ್ನ ತಮ್ಮನ ಮಗ ಸೆರೆಗೆ ಸಿಕ್ಕಿರುವುದನ್ನು ಕೇಳಿ ತನ್ನ ಮನೆಯಲ್ಲೇ ಹುಟ್ಟಿ ಬೆಳೆದು ಸುಶಿಕ್ಷಿತರಾದ 318 ಮಂದಿ ಆಳುಗಳನ್ನು ಯುದ್ಧಕ್ಕೆ ಸಿದ್ಧಮಾಡಿಕೊಂಡು ಹೊರಟನು. ಈ ನಾಲ್ಕು ಮಂದಿ ರಾಜರನ್ನು ದಾನೂರಿನವರೆಗೆ ಹಿಂದಟ್ಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅಬ್ರಾಮನು ತನ್ನ ತಮ್ಮನ ಮಗನು ಸೆರೆಗೆ ಸಿಕ್ಕಿದ್ದನ್ನು ಕೇಳಿ ತನ್ನ ಮನೆಯಲ್ಲೇ ಹುಟ್ಟಿ ಬೆಳೆದ ಶಿಕ್ಷಿತರಾದ ಮುನ್ನೂರ ಹದಿನೆಂಟು ಮಂದಿ ಆಳುಗಳನ್ನು ಯುದ್ಧಕ್ಕೆ ಸಿದ್ಧಮಾಡಿಕೊಂಡು ಹೊರಟು ಆ ರಾಜರನ್ನು ದಾನೂರಿನವರೆಗೂ ಹಿಂದಟ್ಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅಬ್ರಾಮನು ತನ್ನ ತಮ್ಮನ ಮಗನು ಸೆರೆಗೆ ಸಿಕ್ಕಿದ್ದನ್ನು ಕೇಳಿ ತನ್ನ ಮನೆಯಲ್ಲೇ ಹುಟ್ಟಿ ಬೆಳೆದ ಶಿಕ್ಷಿತರಾದ ಮುನ್ನೂರ ಹದಿನೆಂಟು ಮಂದಿ ಆಳುಗಳನ್ನು ಯುದ್ಧಕ್ಕೆ ಸಿದ್ಧಮಾಡಿಕೊಂಡು ಹೊರಟು ಆ ರಾಜರನ್ನು ದಾನೂರಿನವರೆಗೆ ಹಿಂದಟ್ಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಲೋಟನು ಸೆರೆಯಾಳಾಗಿರುವುದು ಅಬ್ರಾಮನಿಗೆ ತಿಳಿಯಿತು. ಆದ್ದರಿಂದ ಅಬ್ರಾಮನು ತನ್ನ ಮನೆಯಲ್ಲಿ ಹುಟ್ಟಿದ ಗಂಡಾಳುಗಳನ್ನೆಲ್ಲ ಒಟ್ಟಾಗಿ ಸೇರಿಸಿದನು. ಅವರಲ್ಲಿ ಮುನ್ನೂರ ಹದಿನೆಂಟು ಮಂದಿ ತರಬೇತಿ ಹೊಂದಿದ್ದ ಸೈನಿಕರಾಗಿದ್ದರು. ಅಬ್ರಾಮನು ಅವರೊಡನೆ ಹೊರಟು ಶತ್ರುಗಳನ್ನು ದಾನ್ ಊರಿನವರೆಗೂ ಹಿಂದಟ್ಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ತನ್ನ ಸಹೋದರನ ಮಗನು ಸೆರೆಯಾಗಿ ಹೋಗಿರುವುದನ್ನು ಕೇಳಿದಾಗ, ಅಬ್ರಾಮನು ತನ್ನ ಮನೆಯಲ್ಲಿ ಹುಟ್ಟಿ, ಶಿಕ್ಷಿತರಾಗಿದ್ದ ಮುನ್ನೂರ ಹದಿನೆಂಟು ಸೇವಕರನ್ನು ಯುದ್ಧಕ್ಕೆ ಸಿದ್ಧಮಾಡಿ, ದಾನಿನವರೆಗೆ ಹಿಂದಟ್ಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 14:14
26 ತಿಳಿವುಗಳ ಹೋಲಿಕೆ  

ಮುಂಚೆ ಲಯಿಷ್ ಎಂಬ ಹೆಸರಿದ್ದ ಆ ಪಟ್ಟಣಕ್ಕೆ ಈಗ ‘ದಾನ್’ ಎಂದು ಹೆಸರಿಟ್ಟರು. ದಾನ್ ಎಂಬುದು ಇವರ ಮೂಲ ಪುರುಷನೂ ಇಸ್ರಯೇಲನ ಮಗನೂ ಆದವನ ಹೆಸರು.


ನೀವು ನನಗೆ ಮಕ್ಕಳನ್ನು ಕೊಟ್ಟಿಲ್ಲ. ನನ್ನ ಮನೆದಾಸನೇ ನನಗೆ ಉತ್ತರಾಧಿಕಾರಿ,” ಎಂದನು.


ಗಂಡು ಹೆಣ್ಣಾಳುಗಳನ್ನು ಕೊಂಡುಕೊಂಡೆ. ಇವರಿಗಾದ ಮಕ್ಕಳು ನನಗೆ ಹುಟ್ಟುಗುಲಾಮರಾದರು. ಇದಲ್ಲದೆ ಜೆರುಸಲೇಮಿನಲ್ಲಿ ಹಿಂದೆ ಇದ್ದವರೆಲ್ಲರಿಗಿಂತಲೂ ಹೆಚ್ಚು ದನಕುರಿಗಳು ನನಗಾದವು; ನಾನು ಧನವಂತನಾದೆ.


ಮೋಶೆ ಮೋವಾಬ್ಯರ ಬಯಲು ನಾಡಿನಿಂದ ಜೆರಿಕೋ ಪಟ್ಟಣಕ್ಕೆ ಎದುರಾಗಿ ಇರುವ ನೆಬೋ ಪರ್ವತಕ್ಕೆ ಹೋಗಿ, ಪಿಸ್ಗಾ ಎಂಬ ಬೆಟ್ಟದ ಶಿಖರವನ್ನು ಹತ್ತಿದನು. ಆಗ ಸರ್ವೆಶ್ವರ ಕಾನಾನ್ ನಾಡೆಲ್ಲವನ್ನು ಅಂದರೆ, ದಾನ್ ಪಟ್ಟಣದವರೆಗಿದ್ದ ಗಿಲ್ಯಾದ್ ಪ್ರಾಂತ್ಯ,


ಅವನ ಮನೆಯಲ್ಲಿದ್ದ ಗಂಡಸರೆಲ್ಲರಿಗೂ ಮನೆಯಲ್ಲಿ ಹುಟ್ಟಿದ ಹಾಗೂ ಅನ್ಯರಿಂದ ಕ್ರಯಕ್ಕೆ ಕೊಂಡುಕೊಂಡಿದ್ದ ಜೀತದಾರರಿಗೂ ಅವನೊಂದಿಗೆ ಸುನ್ನತಿಯಾಯಿತು.


ಎಲ್ಲ ತಲಾಂತರಗಳಲ್ಲಿ ನಿಮ್ಮಲ್ಲಿರುವ ಪ್ರತಿಯೊಂದು ಗಂಡುಮಗುವಿಗೂ ಜೀತಗಾರರಿಗೂ ಮನೆಯಲ್ಲಿ ಹುಟ್ಟಿದ ಅಥವಾ ಅನ್ಯರಿಂದ ಕ್ರಯಕ್ಕೆ ಕೊಂಡುಕೊಂಡವರಿಗೂ, ಎಂಟು ದಿನಗಳ ವಯಸ್ಸಾದಾಗ ಸುನ್ನತಿ ಮಾಡಿಸಬೇಕು.


ತನ್ನ ಹೆಂಡತಿ ಸಾರಯಳನ್ನು, ತನ್ನ ತಮ್ಮನ ಮಗನಾದ ಲೋಟನನ್ನು, ತಾನು ಮತ್ತು ಲೋಟನು ಹಾರಾನಿನಲ್ಲಿ ಗಳಿಸಿದ ಆಸ್ತಿಪಾಸ್ತಿಯನ್ನು ಹಾಗು ದಾಸದಾಸಿಯರನ್ನು ತೆಗೆದುಕೊಂಡು ಹೋಗಿ ಕಾನಾನ್ ನಾಡನ್ನು ಸೇರಿದನು.


ನನ್ನ ಪ್ರಿಯ ಮಕ್ಕಳೇ, ಅಂತಿಮ ಕಾಲ ಸಮೀಪಿಸಿತು. ಕ್ರಿಸ್ತವಿರೋಧಿ ಬರುವನೆಂದು ನೀವು ಕೇಳಿದ್ದೀರಿ. ಈಗಾಗಲೇ ಅನೇಕ ಕ್ರಿಸ್ತವಿರೋಧಿಗಳು ತಲೆದೋರಿದ್ದಾರೆ. ಇದರಿಂದ ಅಂತಿಮಕಾಲ ಸನ್ನಿಹಿತವಾಯಿತೆಂದು ನಮಗೆ ತಿಳಿದುಬರುತ್ತದೆ.


ಓಡಿದರು, ದಂಡೊಡನೆ ಓಡಿದರು ದೊರೆಗಳು I ದೋಚಿಕೊಂಡರು ಕೊಳ್ಳೆಯನು ಗೃಹಿಣಿಯರು II


ದಾನ್ ಪಟ್ಟಣದಿಂದ ಬೇರ್ಷೆಬದವರೆಗಿರುವ ಪ್ರಾಂತ್ಯಗಳಲ್ಲಿಯೂ ಗಿಲ್ಯಾದಿನಲ್ಲಿಯೂ ಇರುವ ಇಸ್ರಯೇಲರೆಲ್ಲರು ಏಕ ಮನಸ್ಸಿನಿಂದ ಹೊರಟು ಮಿಚ್ಫೆಗೆ ಬಂದು ಸರ್ವೇಶ್ವರನ ಸನ್ನಿಧಿಯಲ್ಲಿ ಸಭೆ ಸೇರಿದರು.


ಅವನು ತನ್ನ ಪುತ್ರಪೌತ್ರರಿಗೆ, ‘ನೀವು ನ್ಯಾಯನೀತಿಯನ್ನು ಪಾಲಿಸುತ್ತಾ ಸರ್ವೇಶ್ವರ ಸ್ವಾಮಿಯ ಮಾರ್ಗದಲ್ಲೇ ನಡೆಯಬೇಕು; ಹಾಗೆ ಮಾಡಿದರೆ ವಾಗ್ದಾನ ಮಾಡಿದುದನ್ನೆಲ್ಲ ಈಡೇರಿಸುವರು,’ ಎಂದು ಬೋಧಿಸಲೆಂದೇ ನಾನು ಅವನನ್ನು ಆರಿಸಿಕೊಂಡಿದ್ದೇನೆ".


ಆದುದರಿಂದ ಅಬ್ರಾಮನು ಲೋಟನಿಗೆ ಹೀಗೆಂದನು: “ನನಗೂ ನಿನಗೂ, ನನ್ನ ದನಕಾಯುವವರಿಗೂ ನಿನ್ನ ದನಕಾಯುವವರಿಗೂ ಜಗಳವಿರಬಾರದು. ನಾವು ಬಳಗದವರು.


ಅವನು ಆಕೆಯನ್ನು ಅರಮನೆಗೆ ಕರೆಸಿದನು. ಆಕೆಯ ನಿಮಿತ್ತ ಅಬ್ರಾಮನಿಗೆ ಸತ್ಕಾರ ದೊರಕಿತು; ಕುರಿಮೇಕೆಗಳು, ದನಕರುಗಳು, ಗಂಡುಹೆಣ್ಣು ಕತ್ತೆಗಳು, ದಾಸದಾಸಿಯರು ಹಾಗು ಒಂಟೆಗಳು ದೊರೆತವು.


ಮಿತ್ರನ ಪ್ರೀತಿ ನಿರಂತರ; ಕಷ್ಟಕ್ಕಾದವನೆ ಹುಟ್ಟುನಂಟ.


ಸೊದೋಮಿನಲ್ಲಿ ವಾಸವಾಗಿದ್ದ ಅಬ್ರಾಮನ ತಮ್ಮನ ಮಗ ಲೋಟನನ್ನು ಅವನ ಆಸ್ತಿಪಾಸ್ತಿ ಸಹಿತ ಹಿಡಿದುಕೊಂಡು ಹೋದರು.


ಆ ರಾಜರು ಅಪಹರಿಸಿದ್ದ ಎಲ್ಲ ವಸ್ತುಗಳನ್ನು ಕಿತ್ತುಕೊಂಡನು. ತನ್ನ ತಮ್ಮನ ಮಗನಾದ ಲೋಟನನ್ನು ಬಿಡುಗಡೆಮಾಡಿದನು; ಅವನ ಆಸ್ತಿಪಾಸ್ತಿಯನ್ನು, ಸೆರೆಯಲ್ಲಿದ್ದ ಮಹಿಳೆಯರನ್ನು ಮತ್ತು ಇತರರನ್ನು ಬಿಡಿಸಿಕೊಂಡು ಹಿಂದಿರುಗಿದನು.


ಅದೇ ದಿನದಂದು ಅಬ್ರಹಾಮನು ದೇವರ ಅಪ್ಪಣೆಯ ಪ್ರಕಾರ ತನ್ನ ಮಗನಾದ ಇಷ್ಮಾಯೇಲನಿಗೂ ತನ್ನ ಮನೆಯಲ್ಲಿದ್ದ ಎಲ್ಲ ಗಂಡಸರಿಗೂ ಮನೆಯಲ್ಲಿ ಹುಟ್ಟಿದ ಹಾಗು ತಾನು ಕ್ರಯಕ್ಕೆ ಕೊಂಡುಕೊಂಡ ಜೀತದಾರರಿಗೂ ಸುನ್ನತಿಮಾಡಿಸಿದನು.


ಬೆನ್ಹದದನು ಅರಸ ಆಸನ ಮಾತನ್ನು ಕೇಳಿ, ತನ್ನ ಸೈನ್ಯಾಧಿಪತಿಗಳನ್ನು ಯುದ್ಧಕ್ಕಾಗಿ ಇಸ್ರಯೇಲರ ಪಟ್ಟಣಗಳಿಗೆ ಕಳುಹಿಸಿದನು. ಇವರು ಇಯ್ಯೋನ್, ದಾನ್, ಅಬೇಲ್ಬೇತ್ಮಾಕಾ, ಕಿನ್ನೆರೋತ್ ಪ್ರದೇಶ, ನಫ್ತಾಲ್ಯರ ಎಲ್ಲಾ ಪ್ರಾಂತ್ಯ ಇವುಗಳನ್ನು ಹಾಳುಮಾಡಿದರು.


ತಮ್ಮ ಸೈನಿಕರನ್ನೆಲ್ಲ ಕರೆದುಕೊಂಡು ನೆತನ್ಯನ ಮಗನಾದ ಇಷ್ಮಾಯೇಲನ ಮೇಲೆ ಯುದ್ಧಕ್ಕೆ ಹೊರಟು ಗಿಬ್ಯೋನಿನ ದೊಡ್ಡ ಕೆರೆಯ ಹತ್ತಿರ ಅವನನ್ನು ಹಿಡಿದರು.


ಅಮಾಲೇಕ್ಯರು ಒಯ್ದಿದ್ದ ಚಿಕ್ಕ ದೊಡ್ಡ ಒಡವೆಗಳಾಗಲಿ, ಗಂಡು-ಹೆಣ್ಣು ಮಕ್ಕಳಾಗಲಿ ಒಂದನ್ನೂ ಬಿಡದೆ, ಎಲ್ಲವನ್ನೂ ತೆಗೆದುಕೊಂಡು ಬಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು