Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 14:17 - ಕನ್ನಡ ಸತ್ಯವೇದವು C.L. Bible (BSI)

17 ಅಬ್ರಾಮನು ಕೆದೊರ್ಲಗೋಮರನನ್ನೂ ಅವನೊಂದಿಗಿದ್ದ ರಾಜರನ್ನೂ ಸೋಲಿಸಿ ಬಂದಾಗ ಸೊದೋಮಿನ ಅರಸನು ಅವನನ್ನು ಶಾವೆ ತಗ್ಗಿನಲ್ಲಿ (ಅದಕ್ಕೆ ಅರಸನ ತಗ್ಗು ಎಂಬ ಹೆಸರೂ ಉಂಟು) ಭೇಟಿಯಾಗಲು ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅವನು ಕೆದೊರ್ಲಗೋಮರನ್ನೂ ಅವನೊಂದಿಗೆ ಇದ್ದ ರಾಜರನ್ನೂ ಸೋಲಿಸಿ ಬಂದ ಮೇಲೆ ಸೊದೋಮಿನ ಅರಸನು ಅವನನ್ನು ಅರಸನ ತಗ್ಗು ಎನ್ನಿಸಿಕೊಳ್ಳುವ ಶಾವೆ ತಗ್ಗಿನಲ್ಲಿ ಅಬ್ರಾಮನನ್ನು ಎದುರುಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಅವನು ಕೆದೊರ್ಲಗೋಮರನನ್ನೂ ಅವನೊಂದಿಗೆ ಇದ್ದ ರಾಜರನ್ನೂ ಹೊಡೆದು ಬಂದಮೇಲೆ ಸೊದೋವಿುನ ಅರಸನು ಅವನನ್ನು ಅರಸನ ತಗ್ಗು ಎನ್ನಿಸಿಕೊಳ್ಳುವ ಶಾವೆ ತಗ್ಗಿನಲ್ಲಿ ಎದುರುಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಅಬ್ರಾಮನು ಕೆದೊರ್ಲಗೋಮರನನ್ನೂ ಮತ್ತು ಅವನೊಡನಿದ್ದ ರಾಜರುಗಳನ್ನೂ ಸೋಲಿಸಿದ ಮೇಲೆ ತನ್ನ ಮನೆಗೆ ಹಿಂತಿರುಗಿದನು. ಆಗ ಸೊದೋಮಿನ ರಾಜನು ಅಬ್ರಾಮನನ್ನು ಭೇಟಿಯಾಗಲು ಶಾವೆ ಕಣಿವೆಗೆ ಹೋದನು. (ಈಗ ಇದಕ್ಕೆ ರಾಜನ ಕಣಿವೆ ಎಂದು ಕರೆಯುತ್ತಾರೆ.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅವನು ಕೆದೊರ್ಲಗೋಮರನನ್ನೂ, ಅವನ ಸಂಗಡ ಇದ್ದ ರಾಜರನ್ನೂ ಸೋಲಿಸಿ, ಹಿಂದಿರುಗಿ ಬಂದಾಗ, ಸೊದೋಮಿನ ಅರಸನು ಹೊರಟು ಶಾವೆ ತಗ್ಗು ಎಂಬ ಅರಸನ ತಗ್ಗಿನಲ್ಲಿ ಅಬ್ರಾಮನನ್ನು ಎದುರುಗೊಳ್ಳುವುದಕ್ಕಾಗಿ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 14:17
9 ತಿಳಿವುಗಳ ಹೋಲಿಕೆ  

ಅಬ್ಷಾಲೋಮನು ಇನ್ನೂ ಜೀವದಿಂದಿದ್ದಾಗ, ತನ್ನ ಹೆಸರನ್ನುಳಿಸುವ ಮಗ ಇಲ್ಲದ್ದರಿಂದ ಒಂದು ಕಲ್ಲಿನ ಕಂಬವನ್ನು ತರಿಸಿ, ಅದನ್ನು ಅರಸನ ಕಣಿವೆಯಲ್ಲಿ ತನ್ನ ಜ್ಞಾಪಕಾರ್ಥವಾಗಿ ನಿಲ್ಲಿಸಿ, ಅದಕ್ಕೆ ತನ್ನ ಹೆಸರನ್ನಿಟ್ಟಿದ್ದನು. ಅದನ್ನು ಇಂದಿನವರೆಗೂ ‘ಅಬ್ಷಾಲೋಮನ ಸ್ಮಾರಕಸ್ತಂಭ’ ಎಂದು ಕರೆಯಲಾಗುತ್ತದೆ.


ಈ ಮೆಲ್ಕಿಸದೇಕನು ಸಾಲೇಮ್ ನಗರದ ರಾಜನೂ ಮಹೋನ್ನತ ದೇವರ ಯಾಜಕನೂ ಆಗಿದ್ದನು. ಶತ್ರುರಾಜರನ್ನು ಗೆದ್ದು ಹಿಂದಿರುಗುತ್ತಿದ್ದ ಅಬ್ರಹಾಮನನ್ನು ಈತನು ಎದುರುಗೊಂಡು ಆಶೀರ್ವದಿಸಿದನು.


ಧನವಂತನಿಗೆ ಸ್ನೇಹಿತರು ಬಹುಮಂದಿ; ಬಡವನಿಗಿದ್ದ ಗೆಳೆಯನೂ ಪರಾರಿ.


ಬಡವನನ್ನು ನೆರೆಯವರೂ ತುಚ್ಛವಾಗಿ ಕಾಣುವರು; ಹಣವಂತನಿಗಾದರೊ ಬಹುಜನ ಮಿತ್ರರು.


ದಾವೀದನು ಫಿಲಿಷ್ಟಿಯರನ್ನು ಸಂಹರಿಸಿ ಸರ್ವಸೈನಿಕರೊಡನೆ ಹಿಂದಿರುಗಿ ಬರುವಾಗ ಇಸ್ರಯೇಲರ ಎಲ್ಲ ಪಟ್ಟಣಗಳಿಂದ ಮಹಿಳೆಯರು ಹೊರಗೆ ಬಂದು, ತಾಳ ತಮ್ಮಟೆಗಳನ್ನು ಹಿಡಿದು, ಸಂತೋಷದಿಂದ ಹಾಡುತ್ತಾ, ಕುಣಿಯುತ್ತಾ, ಅರಸ ಸೌಲನನ್ನು ಎದುರುಗೊಂಡರು.


ಯೆಪ್ತಾಹನು ಮಿಚ್ಫೆಯಲ್ಲಿದ್ದ ತನ್ನ ಮನೆಯನ್ನು ಸಮೀಪಿಸಿದಾಗ ಅವನ ಮಗಳು ದಮ್ಮಡಿ ಬಡಿಯುತ್ತಾ ನಾಟ್ಯವಾಡುತ್ತಾ ಅವನನ್ನು ಎದುರುಗೊಳ್ಳುವುದಕ್ಕಾಗಿ ಬಂದಳು. ಆಕೆ ಅವನ ಒಬ್ಬಳೇ ಮಗಳು. ಆಕೆಯ ಹೊರತು ಅವನಿಗೆ ಬೇರೆ ಗಂಡುಹೆಣ್ಣು ಮಕ್ಕಳೇ ಇರಲಿಲ್ಲ.


ಆ ದಿನಗಳಲ್ಲಿ ಬಾಬೆಲೋನಿನ ಅರಸ ಅಮ್ರಾಫೆಲನು, ಎಲ್ಲಸಾರಿನ ಅರಸ ಅರಿಯೋಕನು, ಎಲಾಮಿನ ಅರಸ ಕೆದೊರ್ಲಗೋಮರನು ಮತ್ತು ಗೋಯಿಮದ ಅರಸ ತಿದ್ಗಾಲನು - ಈ ನಾಲ್ವರು


ಹದಿನಾಲ್ಕನೆಯ ವರ್ಷದಲ್ಲಿ ಕೆದೊರ್ಲಗೋಮರನೂ ಮತ್ತು ಅವನಿಗೆ ಸೇರಿದ ರಾಜರೂ ಬಂದು ಅಷ್ಟರೋತ್ ಕರ್ನಯಿಮ್ ಎಂಬಲ್ಲಿ ರೆಫಾಯರನ್ನೂ ಹಾಮ್ ಎಂಬಲ್ಲಿ ಏಮಿಯರನ್ನೂ ಸೋಲಿಸಿದರು.


ಆ ಸಿದ್ದೀಮ್ ತಗ್ಗಿನಲ್ಲಿ ಕಲ್ಲರಗಿನ ಕೆಸರುಗುಣಿಗಳು ಬಹಳವಿದ್ದವು. ಸೊದೋಮ್ ಗೊಮೋರದ ರಾಜರಕಡೆಯವರು ಹಿಮ್ಮೆಟ್ಟಿ ಓಡಿಹೋಗುವಾಗ ಆ ಗುಣಿಗಳಲ್ಲಿ ಬಿದ್ದು ಸತ್ತರು. ಉಳಿದವರು ಬೆಟ್ಟಗಳಿಗೆ ಓಡಿಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು