Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 14:18 - ಕನ್ನಡ ಸತ್ಯವೇದವು C.L. Bible (BSI)

18 ಸಾಲೇಮಿನ ಅರಸನೂ ಪರಾತ್ಪರ ದೇವರ ಯಾಜಕನೂ ಆಗಿದ್ದ ಮೆಲ್ಕಿಸದೇಕನು ಸಹ ಅಲ್ಲಿಗೆ ಬಂದು ರೊಟ್ಟಿಯನ್ನೂ ದ್ರಾಕ್ಷಾರಸವನ್ನೂ ಅರ್ಪಿಸಿ ಅಬ್ರಾಮನಿಗೆ ಇಂತೆಂದು ಆಶೀರ್ವಾದ ಮಾಡಿದನು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಸಾಲೇಮಿನ ಅರಸನಾದ ಮೆಲ್ಕೀಚೆದೆಕನು ಸಹ ಬಂದು ರೊಟ್ಟಿಯನ್ನೂ ದ್ರಾಕ್ಷಾರಸವನ್ನೂ ಕೊಟ್ಟನು. ಇವನು ಪರಾತ್ಪರನಾದ ದೇವರ ಯಾಜಕನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಸಾಲೇವಿುನ ಅರಸನಾದ ಮೆಲ್ಕೀಚೆದೆಕನು ಸಹ ಬಂದು ರೊಟ್ಟಿಯನ್ನೂ ದ್ರಾಕ್ಷಾರಸವನ್ನೂ ಕೊಟ್ಟನು. ಇವನು ಪರಾತ್ಪರನಾದ ದೇವರ ಯಾಜಕನಾಗಿದ್ದು ಅಬ್ರಾಮನನ್ನು ಆಶೀರ್ವದಿಸಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಸಾಲೇಮಿನ ರಾಜನಾದ ಮೆಲ್ಕೀಚೆದೆಕನು ಸಹ ಅಬ್ರಾಮನನ್ನು ಭೇಟಿಯಾಗಲು ಹೋದನು. ಮಹೋನ್ನತನಾದ ದೇವರ ಯಾಜಕನಾಗಿದ್ದ ಅವನು ರೊಟ್ಟಿಯನ್ನೂ ದ್ರಾಕ್ಷಾರಸವನ್ನೂ ತೆಗೆದುಕೊಂಡು ಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಸಾಲೇಮಿನ ಅರಸ ಮೆಲ್ಕಿಜೆದೇಕನು ರೊಟ್ಟಿ ಮತ್ತು ದ್ರಾಕ್ಷಾರಸವನ್ನು ತಂದನು. ಇವನು ಮಹೋನ್ನತರಾದ ದೇವರ ಯಾಜಕನೂ ಆಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 14:18
23 ತಿಳಿವುಗಳ ಹೋಲಿಕೆ  

ಸದಾಕಾಲವೂ ಮೆಲ್ಕಿಸದೇಕನ ಪರಂಪರೆಗೆ ಸೇರಿದ ಪ್ರಧಾನಯಾಜಕರಾದ ಯೇಸು ನಮ್ಮ ಮುಂದಾಳಾಗಿ ಹೋಗಿ ಆ ಗರ್ಭಗುಡಿಯನ್ನು ಪ್ರವೇಶಿಸಿದ್ದಾರೆ.


“ಮೆಲ್ಕಿಸೆದೆಕ್ ಪರಂಪರೆಯ ಯಾಜಕ ನೀ ನಿರುತ” I ಬದಲಿಸನು ಪ್ರಭು ತಾನಿತ್ತ ಪ್ರಮಾಣದೀ ಮಾತ II


ಅವರೇ ಮತ್ತೊಂದು ಕಡೆಯಲ್ಲಿ : “ನೀನು ಸದಾಕಾಲವೂ ಮೆಲ್ಕಿಸದೇಕನ ಪರಂಪರೆಗೆ ಸೇರಿದ ಯಾಜಕ,” ಎಂದಿದ್ದಾರೆ.


ಅಲ್ಲದೆ, ದೇವರಿಂದ, “ಮೆಲ್ಕಿಸದೇಕನ ಪರಂಪರೆಗೆ ಸೇರಿದ ಪ್ರಧಾನಯಾಜಕ,” ಎನಿಸಿಕೊಂಡರು.


ಆತನ ಬಿಡಾರ ಸಾಲೇಮಿನಲಿ I ಆತನ ನಿವಾಸ ಸಿಯೋನಿನಲಿ II


ಅವಳು ಪೌಲನನ್ನು ಮತ್ತು ನಮ್ಮನ್ನು ಹಿಂಬಾಲಿಸುತ್ತಾ, “ಇವರು ಮಹೋನ್ನತ ದೇವರ ಕಿಂಕರರು; ಜೀವೋದ್ಧಾರದ ಮಾರ್ಗವನ್ನು ಇವರು ನಿಮಗೆ ಸಾರುತ್ತಾರೆ,” ಎಂದು ಚೀರುತ್ತಿದ್ದಳು.


ನನ್ನ ಕಾರ್ಯವನು ಕೈಗೂಡಿಸುವ ದೇವನಿಗೆ I ನಾ ಮೊರೆಯಿಡುವೆ ಪರಾತ್ಪರನಾದಾ ಕರ್ತನಿಗೆ II


ಸತ್ಯಸ್ವರೂಪನಾದ ಸ್ವಾಮಿಗೆ ನನ್ನ ವಂದನೆ I ಪರಾತ್ಪರ ಪ್ರಭುವಿನ ನಾಮಕ್ಕೆ ಸ್ತುತಿಸಂಕೀರ್ತನೆ II


ಬೋವಜನು: “ಮಗಳೇ, ಸರ್ವೇಶ್ವರ ನಿನ್ನನ್ನು ಆಶೀರ್ವದಿಸಲಿ! ನೀನು ಬಡ ಯೌವನಸ್ಥನನ್ನಾಗಲೀ, ಸಿರಿವಂತ ಯೌವನಸ್ಥನನ್ನಾಗಲೀ ಅರಸಲಿಲ್ಲ. ನೀನು ನನಗೆ ತೋರಿದ ವಂಶ ಗೌರವವು ಇಲ್ಲಿಯವರೆಗೆ ನೀನು ಅತ್ತೆಗೆ ತೋರಿದ ಗೌರವಕ್ಕಿಂತಲೂ ಶ್ರೇಷ್ಠವಾದುದು.


ಎಂದೇ ಸಮಯಸಂದರ್ಭಗಳು ಇರುವಾಗಲೇ ಸರ್ವರಿಗೂ ಉಪಕಾರಮಾಡೋಣ. ಅದರಲ್ಲೂ ಮುಖ್ಯವಾಗಿ, ಒಂದೇ ಕುಟುಂಬದವರಂತೆ ಇರುವ ಕ್ರೈಸ್ತವಿಶ್ವಾಸಿಗಳಿಗೆ ಉಪಕಾರ ಮಾಡೋಣ.


ಆದರೆ ಪರಾತ್ಪರ ದೇವರು ಮಾನವ ನಿರ್ಮಿತ ಆಲಯಗಳಲ್ಲಿ ಮನೆಮಾಡುವುದಿಲ್ಲ.


ನಾನು ಸರ್ವೇಶ್ವರಸ್ವಾಮಿಯ ಸನ್ನಿಧಿಗೆ ಯಾವ ಕಾಣಿಕೆಯೊಂದಿಗೆ ಹೋಗಲಿ? ಮಹೋನ್ನತ ದೇವರಿಗೆ ಹೇಗೆ ಅಡ್ಡಬೀಳಲಿ? ಹೋಮಕ್ಕಾಗಿ, ಒಂದು ವರ್ಷದ ಎಳೆಕರುಗಳನ್ನು ತೆಗೆದುಕೊಂಡುಹೋಗಲೇ?


ದೇವರಿಗೆ ಧನ್ಯವಾದವೆ ನಿನ್ನ ಬಲಿಯರ್ಪಣೆಯಾಗಿರಲಿ I ಪರಾತ್ಪರನಿಗೆ ಮಾಡಿದ ಹರಕೆಗಳು ಸಮರ್ಪಿತವಾಗಲಿ II


ಆಗ ಅವನು ಅವರ ಬಳಿಗೆ ದೂತರನ್ನು ಕಳುಹಿಸಿ, “ನೀವು ರಾಜನಿಷ್ಠೆಯಿಂದ ನಿಮ್ಮ ಒಡೆಯ ಸೌಲನ ಶವವನ್ನು ಸಮಾಧಿಮಾಡಿದ್ದಕ್ಕಾಗಿ ಸರ್ವೇಶ್ವರನ ಆಶೀರ್ವಾದ ನಿಮಗೆ ಲಭಿಸಲಿ!


ಈ ಮೆಲ್ಕಿಸದೇಕನು ಸಾಲೇಮ್ ನಗರದ ರಾಜನೂ ಮಹೋನ್ನತ ದೇವರ ಯಾಜಕನೂ ಆಗಿದ್ದನು. ಶತ್ರುರಾಜರನ್ನು ಗೆದ್ದು ಹಿಂದಿರುಗುತ್ತಿದ್ದ ಅಬ್ರಹಾಮನನ್ನು ಈತನು ಎದುರುಗೊಂಡು ಆಶೀರ್ವದಿಸಿದನು.


ಒದಗಿಸುವೆ ಬೇಸಾಯದ ಆಹಾರವನು I ಹೃದಯವನು ಮುದಗೊಳಿಸುವ ದ್ರಾಕ್ಷಾರಸವನು I ಮುಖಕೆ ಮೆರಗನ್ನೀಯುವ ತಿಳಿತೈಲಗಳನು I ದೇಹವನು ಗಟ್ಟಿಮುಟ್ಟಾಗಿಸುವ ರೊಟ್ಟಿಯನು II


ಇಸ್ರಯೇಲರಿಂದ ನಿಮಗೆ ಸಲ್ಲುವ ಹತ್ತನೆಯ ಒಂದು ಪಾಲಿನಲ್ಲಿ ನೀವು ಸರ್ವೇಶ್ವರನಿಗೆ ಹತ್ತನೆಯ ಒಂದು ಭಾಗವನ್ನು ಪ್ರತ್ಯೇಕಿಸಿ ಯಾಜಕ ಆರೋನನಿಗೆ ಒಪ್ಪಿಸಬೇಕು.


ಮನೋದೃಷ್ಟಿಯಿಂದ ನೋಡುವ ಪುರುಷನ ವಾಣಿ ದೈವೋಕ್ತಿಗಳನ್ನು ಕೇಳುವವನ ಭವಿಷ್ಯವಾಣಿ ಪರಾತ್ಪರನ ಜ್ಞಾನವನ್ನು ಪಡೆದವನ ವಾಣಿ ಪರವಶನಾಗಿ ಕಣ್ದೆರೆದು ಸರ್ವಶಕ್ತನ ದರ್ಶನ ಹೊಂದಿದವನ ಭವಿಷ್ಯವಾಣಿ:


ಚೂರು ಚೂರು ಮಾಡಿಹನಲ್ಲಿ ಥಳಥಳಿಸುವ ಬಾಣಗಳನು I ಖಡ್ಗ, ಗುರಾಣಿ ಎಂಬೆಲ್ಲ ಯುದ್ಧಾಯುಧಗಳನು II


ಈ ಮಾತು ಅವನ ಬಾಯಿಂದ ಹೊರಡುತ್ತಿರುವಾಗಲೆ, “ಎಲೈ ರಾಜ ನೆಬೂಕದ್ನೆಚ್ಚರನೇ, ನಿನ್ನ ವಿಷಯವಾದ ಈ ದೈವೋಕ್ತಿಯನ್ನು ಕೇಳು -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು