Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 14:19 - ಕನ್ನಡ ಸತ್ಯವೇದವು C.L. Bible (BSI)

19 “ಭೂಮ್ಯಾಕಾಶಗಳನ್ನು ಉಂಟುಮಾಡಿದ ಪರಾತ್ಪರ ದೇವರ ಆಶೀರ್ವಾದ ಅಬ್ರಾಮನಿಗಿರಲಿ; ನಿನ್ನ ಶತ್ರುಗಳನ್ನು ನಿನ್ನ ಕೈವಶಮಾಡಿದ ಆ ಪರಾತ್ಪರ ದೇವರಿಗೆ ಸ್ತೋತ್ರವಾಗಲಿ!”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಇವನು ಅಬ್ರಾಮನನ್ನು ಆಶೀರ್ವದಿಸಿ, “ಭೂಮ್ಯಾಕಾಶವನ್ನು ನಿರ್ಮಾಣಮಾಡಿದ ಪರಾತ್ಪರನಾದ ದೇವರ ಆಶೀರ್ವಾದವು ಅಬ್ರಾಮನಿಗೆ ದೊರೆಯಲಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಭೂಮ್ಯಾಕಾಶಗಳನ್ನು ನಿರ್ಮಾಣಮಾಡಿದ ಪರಾತ್ಪರನಾದ ದೇವರ ಆಶೀರ್ವಾದವು ಅಬ್ರಾಮನಿಗೆ ಆಗಲಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಅಬ್ರಾಮನನ್ನು ಹೀಗೆ ಆಶೀರ್ವದಿಸಿದನು: “ಅಬ್ರಾಮನೇ, ಮಹೋನ್ನತನಾದ ದೇವರು ನಿನ್ನನ್ನು ಆಶೀರ್ವದಿಸಲಿ. ಆಕಾಶವನ್ನೂ ಭೂಮಿಯನ್ನೂ ಸೃಷ್ಟಿಸಿದಾತನು ಆತನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಇವನು ಅಬ್ರಾಮನನ್ನು ಹೀಗೆ ಆಶೀರ್ವದಿಸಿದನು: “ಅಬ್ರಾಮನು ಭೂಮಿ, ಆಕಾಶವನ್ನು ಸೃಷ್ಟಿಸಿದ ಮಹೋನ್ನತ ದೇವರಿಂದ ಆಶೀರ್ವಾದ ಹೊಂದಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 14:19
27 ತಿಳಿವುಗಳ ಹೋಲಿಕೆ  

ಅದಕ್ಕೆ ಅಬ್ರಾಮನು, “ಭೂಮ್ಯಾಕಾಶಗಳನ್ನು ಉಂಟುಮಾಡಿದ ಪರಾತ್ಪರ ದೇವರ ಕಡೆಗೆ ಕೈಯೆತ್ತಿ ಪ್ರಮಾಣ ಮಾಡುತ್ತೇನೆ:


ನಮ್ಮ ಪ್ರಭು ಯೇಸುಕ್ರಿಸ್ತರ ಪಿತನಾದ ದೇವರಿಗೆ ಸ್ತುತಿ ಸಲ್ಲಲಿ! ಪಿತದೇವರು ಸ್ವರ್ಗಲೋಕದಿಂದ ಎಲ್ಲಾ ಬಗೆಯ ಆಧ್ಯಾತ್ಮಿಕ ಆಶೀರ್ವಾದಗಳನ್ನು ಕ್ರಿಸ್ತಯೇಸುವಿನಲ್ಲಿ ನಮಗೆ ಅನುಗ್ರಹಿಸಿದ್ದಾರೆ.


ತಮ್ಮ ಪ್ರೀತಿಯ ಪುತ್ರನಲ್ಲೇ ಅವರು ನಮಗೆ ಉಚಿತವಾಗಿ ಅನುಗ್ರಹಿಸಿರುವ ಅತಿಶಯ ವರಪ್ರಸಾದಕ್ಕಾಗಿ ಅವರಿಗೆ ಸ್ತುತಿಸಲ್ಲಿಸೋಣ.


ಆ ಸಮಯದಲ್ಲಿ ಯೇಸುಸ್ವಾಮಿ, “ಪಿತನೇ, ಪರಲೋಕ ಭೂಲೋಕಗಳ ಒಡೆಯನೇ, ಜ್ಞಾನಿಗಳಿಗೂ ಮೇಧಾವಿಗಳಿಗೂ ಈ ವಿಷಯಗಳನ್ನು ಮರೆಮಾಡಿ ಮಕ್ಕಳಂಥವರಿಗೆ ನೀವು ಶ್ರುತಪಡಿಸಿದ್ದೀರಿ; ಇದಕ್ಕಾಗಿ ನಿಮ್ಮನ್ನು ವಂದಿಸುತ್ತೇನೆ.


ಪೊಡವಿಯೂ ಅದರಲ್ಲಿರುವುದೆಲ್ಲವೂ ಪ್ರಭುವಿನದೇ I ಜಗವೂ ಅದರ ಜೀವಜಂತುಗಳೆಲ್ಲವೂ ಆತನದೇ II


ಬೋವಜನು: “ಮಗಳೇ, ಸರ್ವೇಶ್ವರ ನಿನ್ನನ್ನು ಆಶೀರ್ವದಿಸಲಿ! ನೀನು ಬಡ ಯೌವನಸ್ಥನನ್ನಾಗಲೀ, ಸಿರಿವಂತ ಯೌವನಸ್ಥನನ್ನಾಗಲೀ ಅರಸಲಿಲ್ಲ. ನೀನು ನನಗೆ ತೋರಿದ ವಂಶ ಗೌರವವು ಇಲ್ಲಿಯವರೆಗೆ ನೀನು ಅತ್ತೆಗೆ ತೋರಿದ ಗೌರವಕ್ಕಿಂತಲೂ ಶ್ರೇಷ್ಠವಾದುದು.


ಅವಳು ಪೌಲನನ್ನು ಮತ್ತು ನಮ್ಮನ್ನು ಹಿಂಬಾಲಿಸುತ್ತಾ, “ಇವರು ಮಹೋನ್ನತ ದೇವರ ಕಿಂಕರರು; ಜೀವೋದ್ಧಾರದ ಮಾರ್ಗವನ್ನು ಇವರು ನಿಮಗೆ ಸಾರುತ್ತಾರೆ,” ಎಂದು ಚೀರುತ್ತಿದ್ದಳು.


ಅದೇ ಗಳಿಗೆಯಲ್ಲಿ ಯೇಸುಸ್ವಾಮಿ ಪವಿತ್ರಾತ್ಮರಿಂದ ಹರ್ಷಾವೇಶಗೊಂಡು, “ಪಿತನೇ, ಭೂಸ್ವರ್ಗಗಳ ಒಡೆಯನೇ, ಈ ವಿಷಯಗಳನ್ನು ಜ್ಞಾನಿಗಳಿಗೂ ಮೇಧಾವಿಗಳಿಗೂ ಮರೆಮಾಡಿ, ಮಕ್ಕಳಂಥವರಿಗೆ ನೀವು ಶ್ರುತಪಡಿಸಿದ್ದೀರಿ; ಇದಕ್ಕಾಗಿ ನಿಮ್ಮನ್ನು ವಂದಿಸುತ್ತೇನೆ. ಹೌದು ಪಿತನೇ, ಇದೇ ನಿಮ್ಮ ಸುಪ್ರೀತ ಸಂಕಲ್ಪ.


ನಾನು ಸರ್ವೇಶ್ವರಸ್ವಾಮಿಯ ಸನ್ನಿಧಿಗೆ ಯಾವ ಕಾಣಿಕೆಯೊಂದಿಗೆ ಹೋಗಲಿ? ಮಹೋನ್ನತ ದೇವರಿಗೆ ಹೇಗೆ ಅಡ್ಡಬೀಳಲಿ? ಹೋಮಕ್ಕಾಗಿ, ಒಂದು ವರ್ಷದ ಎಳೆಕರುಗಳನ್ನು ತೆಗೆದುಕೊಂಡುಹೋಗಲೇ?


ಪ್ರಭುವಿಗೆ ಸ್ವಂತವಾದುದು ಪರಲೋಕ I ನರರಿಗೆ ಕೊಟ್ಟಿಹನಾತನು ಭೂಲೋಕ II


ಆಗ ಅವನು ಅವರ ಬಳಿಗೆ ದೂತರನ್ನು ಕಳುಹಿಸಿ, “ನೀವು ರಾಜನಿಷ್ಠೆಯಿಂದ ನಿಮ್ಮ ಒಡೆಯ ಸೌಲನ ಶವವನ್ನು ಸಮಾಧಿಮಾಡಿದ್ದಕ್ಕಾಗಿ ಸರ್ವೇಶ್ವರನ ಆಶೀರ್ವಾದ ನಿಮಗೆ ಲಭಿಸಲಿ!


ಇವೇ ಇಸ್ರಯೇಲಿನ ಹನ್ನೆರಡು ಕುಲಗೋತ್ರಗಳು; ಇದೇ ಅವರ ತಂದೆ ಕೊಟ್ಟ ಆಶೀರ್ವಾದ: ಒಂದೊಂದು ಕುಲಕ್ಕೆ ಅವನು ನುಡಿದ ಒಂದೊಂದು ಆಶೀರ್ವಚನ.


ಫರೋಹನನ್ನು ಆಶೀರ್ವದಿಸಿ, ಅವನ ಸನ್ನಿಧಿಯಿಂದ ಹೊರಟುಹೋದನು.


ಬಳಿಕ ಜೋಸೆಫನು ತನ್ನ ತಂದೆ ಯಕೋಬನನ್ನು ಕರೆದುಕೊಂಡು ಬಂದು ಫರೋಹನ ಸನ್ನಿಧಿಯಲ್ಲಿ ನಿಲ್ಲಿಸಿದನು. ಯಕೋಬನು ಫರೋಹನನ್ನು ಆಶೀರ್ವದಿಸಿದನು.


ಅದರಿಂದ ನನಗಿಷ್ಟವಾಗಿರುವ ಸವಿಯೂಟವನ್ನೂ ಅಣಿಮಾಡಿ ಬಡಿಸು. ಸಾವು ಬರುವುದಕ್ಕೆ ಮುಂಚೆ ನಾನು ನಿನ್ನನ್ನು ಮನಸಾರೆ ಆಶೀರ್ವದಿಸುತ್ತೇನೆ,” ಎಂದು ಹೇಳಿದನು.


ಅನಂತರ ಆ ಮಕ್ಕಳನ್ನು ಅಪ್ಪಿಕೊಂಡು ಅವುಗಳ ಮೇಲೆ ಕೈಗಳನ್ನಿರಿಸಿ ಹರಸಿದರು.


ಕಾಡಿನಲ್ಲಿರುವ ಮೃಗಜಂತುಗಳೆಲ್ಲ ನನ್ನವೆ I ಗುಡ್ಡದಲ್ಲಿರುವ ಸಹಸ್ರಾರು ಪಶುಗಳು ನನ್ನವೆ II


“ನನ್ನ ಮಗ ಇಸಾಕನಿಗೆ ಹೆಣ್ಣನ್ನು ನಾನು ವಾಸಮಾಡುತ್ತಿರುವ ಕಾನಾನ್ಯರಿಂದ ತರಬಾರದು;


ಸಮುವೇಲನು ಅಲ್ಲಿಗೂ ಹೋದನು. ಸೌಲನು ಅವನನ್ನು ಕಂಡು, “ಸರ್ವೇಶ್ವರ ನಿನ್ನನ್ನು ಹರಸಲಿ! ನಾನು ಅವರ ಅಪ್ಪಣೆಯನ್ನು ನೆರವೇರಿಸಿದ್ದೇನೆ,” ಎಂದನು.


ಇಗೋ ಕೇಳಿ: ಉನ್ನತೋನ್ನತವಾದ ಆಕಾಶಮಂಡಲವು, ಭೂಮಿಯು ಹಾಗು ಅದರಲ್ಲಿರುವ ಎಲ್ಲವು ನಿಮ್ಮ ದೇವರಾದ ಸರ್ವೇಶ್ವರಸ್ವಾಮಿಯವೇ.


“ಹೇ ಸರ್ವೇಶ್ವರಾ, ನಮ್ಮ ಪಿತೃ ಯಕೋಬನ ದೇವರೇ, ಸದಾಕಾಲಕ್ಕೂ ಸ್ತುತಿಸ್ತೋತ್ರ ಸಲ್ಲಲಿ ನಿಮಗೆ! ಹೇ ಸರ್ವೇಶ್ವರಾ, ಮಹಿಮೆ, ಪ್ರತಾಪ, ವೈಭವ, ಪರಾಕ್ರಮ, ಪ್ರತಿಭೆ, ನಿಮ್ಮವೇ, ಭೂಮ್ಯಾಕಾಶಗಳಲ್ಲಿರುವ ಸಮಸ್ತವೂ ನಿಮ್ಮದೇ. ಸರ್ವೇಶ್ವರಾ, ರಾಜ್ಯಭಾರವೂ ನಿಮ್ಮದೇ. ಸರ್ವವನು ಮಹೋನ್ನತರಾಗಿ ಆಳುವವರೂ ನೀವೇ.


ಹಿಜ್ಕೀಯನೂ ಪದಾಧಿಕಾರಿಗಳೂ ಬಂದು ಆ ರಾಶಿಗಳನ್ನು ನೋಡಿದಾಗ ಸರ್ವೇಶ್ವರನನ್ನು ಕೊಂಡಾಡಿ ಅವರ ಪ್ರಜೆಗಳಾದ ಇಸ್ರಯೇಲರನ್ನು ಹರಸಿದರು.


ಇಹಪರಗಳನು ಉಂಟುಮಾಡಿದ ಪ್ರಭುವಿಂದ I ಲಭಿಸುವಂತಾಗಲಿ ನಿಮಗೆ ಆಶೀರ್ವಾದ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು