Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 14:23 - ಕನ್ನಡ ಸತ್ಯವೇದವು C.L. Bible (BSI)

23 ನಿನಗೆ ಸೇರಿದವುಗಳಲ್ಲಿ ಯಾವುದನ್ನೂ, ಒಂದು ದಾರವನ್ನಾಗಲಿ, ಕೆರದ ಬಾರನ್ನಾಗಲಿ ನಾನು ತೆಗೆದುಕೊಳ್ಳುವುದಿಲ್ಲ. ‘ನನ್ನಿಂದ ಅಬ್ರಾಮನು ಐಶ್ವರ್ಯವಂತನಾದ’ ಎಂದು ಹೇಳಿಕೊಳ್ಳುವುದಕ್ಕೂ ನಿನಗೆ ಆಸ್ಪದ ಇರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 “ಒಂದು ದಾರವನ್ನಾಗಲಿ, ಕೆರದ ಬಾರನ್ನಾಗಲಿ ನಿನ್ನದರಲ್ಲಿ ಯಾವುದನ್ನೂ ನಾನು ತೆಗೆದುಕೊಳ್ಳುವುದಿಲ್ಲವೆಂದು ಭೂಮ್ಯಾಕಾಶಗಳನ್ನು ನಿರ್ಮಾಣಮಾಡಿದ ಪರಾತ್ಪರನಾದ ದೇವರಾಗಿರುವ ಯೆಹೋವನ ಕಡೆಗೆ ಕೈ ಎತ್ತಿ ಪ್ರಮಾಣಮಾಡುತ್ತೇನೆ. ‘ನನ್ನಿಂದ ಅಬ್ರಾಮನು ಐಶ್ವರ್ಯವಂತನಾದನೆಂದು ಹೇಳಿಕೊಳ್ಳುವುದಕ್ಕೆ ನಿನಗೆ ಆಸ್ಪದವಾಗಬಾರದು, ನನಗೆ ಏನೂ ಬೇಡ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ನಿನ್ನದಾಗಿರುವ ಯಾವುದನ್ನೂ ನಾನು ಇಟ್ಟುಕೊಳ್ಳುವುದಿಲ್ಲ; ಅದು ದಾರವಾಗಿದ್ದರೂ, ಪಾದರಕ್ಷೆಯ ಬಾರಾಗಿದ್ದರೂ, ನಾನಿಟ್ಟುಕೊಳ್ಳುವುದಿಲ್ಲ. ‘ನಾನು ಅಬ್ರಾಮನನ್ನು ಐಶ್ವರ್ಯವಂತನನ್ನಾಗಿ ಮಾಡಿದೆ’ ಎಂದು ನೀನು ಹೇಳಿಕೊಳ್ಳುವುದು ನನಗೆ ಬೇಕಾಗಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ನಿನಗೆ ಸೇರಿದ ದಾರವನ್ನಾಗಲಿ, ಕೆರದ ಬಾರನ್ನಾಗಲಿ ನಾನು ತೆಗೆದುಕೊಳ್ಳುವುದಿಲ್ಲ. ಏಕೆಂದರೆ, ‘ನಾನು ಅಬ್ರಾಮನನ್ನು ಐಶ್ವರ್ಯವಂತನನ್ನಾಗಿ ಮಾಡಿದ್ದೇನೆ’ ಎಂದು ನೀನು ಹೇಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 14:23
8 ತಿಳಿವುಗಳ ಹೋಲಿಕೆ  

ಅದಕ್ಕೆ ಎಲೀಷನು, “ನಾನು ಸನ್ನಿಧಿಸೇವೆ ಮಾಡುತ್ತಿರುವ ಸರ್ವೇಶ್ವರನಾಣೆ, ನಿನ್ನಿಂದ ಏನೂ ತೆಗೆದುಕೊಳ್ಳುವುದಿಲ್ಲ,” ಎಂದನು. ನಾಮಾನನು ಎಷ್ಟು ಒತ್ತಾಯಪಡಿಸಿದರೂ ಅವನು ತೆಗೆದುಕೊಳ್ಳಲೇ ಇಲ್ಲ.


ಹಣದಾಶೆಗೆ ಬಲಿಯಾಗಬೇಡಿ. ನಿಮಗೆ ಇರುವುದರಲ್ಲಿಯೇ ತೃಪ್ತರಾಗಿರಿ. “ಎಂದೆಂದಿಗೂ ನಾನು ನಿನ್ನ ಕೈಬಿಡಲಾರೆ; ತ್ಯಜಿಸಲಾರೆ,” ಎಂದು ದೇವರೇ ಹೇಳಿದ್ದಾರೆ.


ಇಗೋ ಮೂರನೆಯ ಬಾರಿಗೆ ನಾನು ನಿಮ್ಮ ಬಳಿಗೆ ಬರಲು ಸಿದ್ಧನಿದ್ದೇನೆ. ಈ ಸಾರಿಯೂ ನಾನು ನಿಮಗೆ ಹೊರೆಯಾಗಿರಲಾರೆ. ನನಗೆ ಬೇಕಾದವರು ನೀವೇ ಹೊರತು ನಿಮ್ಮ ಹಣಕಾಸು ಅಲ್ಲ. ಮಕ್ಕಳು ಹೆತ್ತವರಿಗಾಗಿ ಅಲ್ಲ, ಹೆತ್ತವರು ಮಕ್ಕಳಿಗಾಗಿ ಆಸ್ತಿಪಾಸ್ತಿಯನ್ನು ಕೂಡಿಡುವುದು ನ್ಯಾಯ.


ನಾಮಾನನು ಸ್ವಲ್ಪದೂರಕ್ಕೆ ಹೋದನಂತರ ದೈವಪುರುಷನಾದ ಎಲೀಷನ ಸೇವಕ ಗೇಹಜಿಯು ಮನಸ್ಸಿನಲ್ಲೇ, “ನನ್ನ ಯಜಮಾನ ಆ ಸಿರಿಯಾದ ನಾಮಾನನಿಂದ ಏನೂ ತೆಗೆದುಕೊಳ್ಳದೆ ಅವನನ್ನು ಹಾಗೆಯೇ ಕಳುಹಿಸಿಬಿಟ್ಟರಲ್ಲಾ! ಸರ್ವೇಶ್ವರನಾಣೆ, ನಾನು ಅವನ ಹಿಂದೆ ಓಡುತ್ತಾ ಹೋಗಿ, ಅವನಿಂದ ಸ್ವಲ್ಪವನ್ನಾದರೂ ಬಾಚಿಕೊಂಡು ಬರುವೆನು,” ಎಂದುಕೊಂಡು ಹೊರಟನು.


ಆ ದೈವಭಕ್ತನು, “ನೀವು ನನಗೆ ನಿಮ್ಮ ಆಸ್ತಿಯಲ್ಲಿ ಅರ್ಧ ಕೊಟ್ಟರೂ ನಾನು ನಿಮ್ಮ ಸಂಗಡ ಬರುವುದಿಲ್ಲ. ಇಲ್ಲಿ ಅನ್ನಪಾನಗಳನ್ನು ತೆಗೆದುಕೊಳ್ಳುವುದಿಲ್ಲ.


ನನ್ನ ಬಳಿಕ ಬರಬೇಕಾಗಿದ್ದವರು ಅವರೇ. ಅವರ ಪಾದರಕ್ಷೆಗಳನ್ನು ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು