Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 14:5 - ಕನ್ನಡ ಸತ್ಯವೇದವು C.L. Bible (BSI)

5 ಹದಿನಾಲ್ಕನೆಯ ವರ್ಷದಲ್ಲಿ ಕೆದೊರ್ಲಗೋಮರನೂ ಮತ್ತು ಅವನಿಗೆ ಸೇರಿದ ರಾಜರೂ ಬಂದು ಅಷ್ಟರೋತ್ ಕರ್ನಯಿಮ್ ಎಂಬಲ್ಲಿ ರೆಫಾಯರನ್ನೂ ಹಾಮ್ ಎಂಬಲ್ಲಿ ಏಮಿಯರನ್ನೂ ಸೋಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಹದಿನಾಲ್ಕನೆಯ ವರ್ಷದಲ್ಲಿ ಕೆದೊರ್ಲಗೋಮರನೂ ಅವನಿಗೆ ಸೇರಿದ್ದ ರಾಜರೂ ಬಂದು ಅಷ್ಟರೋತ್ ಕರ್ನಯಿಮಿನಲ್ಲಿ ರೆಫಾಯರನ್ನೂ ಹಾಮಿನಲ್ಲಿ ಜೂಜ್ಯರನ್ನೂ ಶಾವೆಕಿರ್ಯಾತಯಿಮಿನಲ್ಲಿ ಏಮಿಯರನ್ನೂ ಸೋಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಹದಿನಾಲ್ಕನೆಯ ವರುಷದಲ್ಲಿ ಕೆದೊರ್ಲಗೋಮರನೂ ಅವನಿಗೆ ಸೇರಿದ್ದ ರಾಜರೂ ಬಂದು ಅಷ್ಟರೋತ್ ಕರ್ನಯಿವಿುನಲ್ಲಿ ರೆಫಾಯರನ್ನೂ ಹಾವಿುನಲ್ಲಿ ಜೂಜ್ಯರನ್ನೂ ಶಾವೆಕಿರ್ಯಾತಯಿವಿುನಲ್ಲಿ ಏವಿುಯರನ್ನೂ ಸೋಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆದ್ದರಿಂದ ಹದಿನಾಲ್ಕನೆಯ ವರ್ಷದಲ್ಲಿ, ರಾಜನಾದ ಕೆದೊರ್ಲಗೋಮರನು ಮತ್ತು ಅವನೊಡನಿದ್ದ ರಾಜರುಗಳು ಅವರ ವಿರೋಧವಾಗಿ ಯುದ್ಧಮಾಡಲು ಬಂದರು. ಕೆದೊರ್ಲಗೋಮರನು ಮತ್ತು ಅವನೊಡನಿದ್ದ ರಾಜರುಗಳು ಅಷ್ಟರೋತ್-ಕರ್ನಯಿಮಿನಲ್ಲಿದ್ದ ರೆಫಾಯರನ್ನೂ ಹಾಮಿನಲ್ಲಿದ್ದ ಜೂಜ್ಯರನ್ನೂ ಶಾವೆಕೆರ್ಯಾತಯಿಮಿನಲ್ಲಿದ್ದ ಏಮಿಯರನ್ನೂ ಸೋಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಹದಿನಾಲ್ಕನೆಯ ವರ್ಷದಲ್ಲಿ ಕೆದೊರ್ಲಗೋಮರನೂ ಅವನ ಸಂಗಡ ಇದ್ದ ಅರಸರೂ ಬಂದು ಅಷ್ಟರೋತ್ ಕರ್ನಯಿಮಿನಲ್ಲಿ ರೆಫಾಯರನ್ನೂ, ಹಾಮಿನಲ್ಲಿ ಜೂಜ್ಯರನ್ನೂ, ಶಾವೆ ಕಿರ್ಯಾತಯಿಮಿನಲ್ಲಿ ಏಮಿಯರನ್ನೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 14:5
28 ತಿಳಿವುಗಳ ಹೋಲಿಕೆ  

(ರೆಫಾಯರೊಳಗೆ ಬಾಷಾನಿನ ಓಗನೊಬ್ಬನೇ ಉಳಿದಿದ್ದನು. ಅವನ ಮಂಚ ಕಬ್ಬಿಣದ್ದು; ಅಮ್ಮೋನಿಯರ ರಬ್ಬಾ ಎಂಬ ಪಟ್ಟಣದಲ್ಲಿ ಅದನ್ನು ಈಗಲೂ ನೋಡಬಹುದು. ಪುರುಷನ ಕೈಯಳತೆಯ ಪ್ರಕಾರ ಅದರ ಉದ್ದ ಒಂಭತ್ತು ಮೊಳ, ಅಗಲ ನಾಲ್ಕು ಮೊಳ.)


ಅಂದರೆ ಇಸ್ರಯೇಲರು ಈಜಿಪ್ಟ್ ದೇಶವನ್ನು ಬಿಟ್ಟ ನಲವತ್ತನೆಯ ವರ್ಷದ ಹನ್ನೊಂದನೆಯ ತಿಂಗಳಿನ ಮೊದಲನೆಯ ದಿನ ಸರ್ವೇಶ್ವರ ಸ್ವಾಮಿ ತನಗೆ ಆಜ್ಞಾಪಿಸಿದ್ದನ್ನೆಲ್ಲ ಇಸ್ರಯೇಲರಿಗೆ ತಿಳಿಸಿದನು.


ಹಿತ್ತಿಯರು, ಪೆರಿಜೀಯರು, ರೆಫಾಯರು,


ನೀವು ಅವರಿಗೆ ಭಯಪಡಬೇಡಿ; ನಿಮ್ಮ ದೇವರಾದ ಸರ್ವೇಶ್ವರ ಸ್ವಾಮಿಯೇ ನಿಮ್ಮ ಕಡೆಯವರಾಗಿ ಯುದ್ಧಮಾಡುವರು’ ಎಂದು ಆಜ್ಞಾಪಿಸಿದೆ.


ಕಿರ್ಯಾತಯಿಮ್, ಬೇತ್ ಗಾಮೂಲ್, ಬೇತ್‍ಮೆಯೋನ್, ಕೆರೀಯೋತ್,


ಇಸ್ರಯೇಲಿನ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರ ಮೋವಾಬನ್ನು ಕುರಿತು ಹೀಗೆನ್ನುತ್ತಾರೆ: “ನೆಬೋ ಊರಿನ ಗತಿಯನ್ನು ಅಯ್ಯೋ, ಏನೆಂದು ಹೇಳಲಿ, ಅದು ಹಾಳಾಯಿತು. ಕಿರ್ಯತಯಿಮ್ ಮಾನಭಂಗ ಹೊಂದಿದೆ ಶತ್ರು ಕೈಗೆ ಸಿಕ್ಕಿ. ಮಿಸ್ಗಾಬ್ ಅವಮಾನಕ್ಕೆ ಗುರಿಯಾಗಿದೆ ನೆಲಸಮವಾಗಿ.


ಅದು ಕೊಯ್ದ ಹೊಲದಂತಿರುವುದು, ತೆನೆಕತ್ತರಿಸಿದ ಹುಲ್ಲಿನಂತಿರುವುದು. ಕೂಳೆಯನ್ನೂ ಬಿಡದೆ ಆಯ್ದುಕೊಂಡ ರೆಫಾಯಿಮ್ ಕಣಿವೆಯಂತೆ ಇರುವುದು.


ಹಾಮನಾಡಿನಲಿ ಮಾಡಿದ ಅದ್ಭುತಗಳನು I ಕೆಂಗಡಲಬಳಿ ನಡೆದ ಘೋರ ಕೃತ್ಯಗಳನು II


ನೋಡಿದರಿವರು ಆತನ ಸೂಚಕಕಾರ್ಯಗಳನು I ಹಾಮ ನಾಡಿನಲಿ ನಾನಾ ಅದ್ಭುತಕಾರ್ಯಗಳನು II


ಬಂದನು ಆಗ ಇಸ್ರಯೇಲನು ಈಜಿಪ್ಟಿಗೆ I ಪ್ರವಾಸಿಯಾದ ಯಕೋಬನು ಹಾಮ ನಾಡಿಗೆ II


ಸಂಹರಿಸಿದನು ಈಜಿಪ್ಟಿನ ಚೊಚ್ಚಲ ಮಕ್ಕಳನು I ಹಾಮನ ಮನೆತನದ ಮೊತ್ತಮೊದಲ ಸಂತಾನವನು II


ಫಿಲಿಷ್ಟಿಯರು ರೆಫಾಯಿಮ್ ಕಣಿವೆಯನ್ನು ತಲುಪಿ ಸುಲಿಗೆಮಾಡಲು ಪ್ರಾರಂಭಿಸಿದರು.


ಅದುಲ್ಲಾಮ್ ಗವಿಯ ಹತ್ತಿರ ದಾವೀದನು ವಾಸಿಸುತ್ತಿದ್ದಾಗ, ಮೂವತ್ತು ಪ್ರಮುಖ ರಣವೀರರಲ್ಲಿ ಮೂವರು ಒಂದು ದಿನ ಒಂದು ಬಂಡೆಯ ಬಳಿಗೆ ಹೋದರು. ಅಲ್ಲಿ ಫಿಲಿಷ್ಟಿಯರ ಸೈನ್ಯವು ರೆಫಾಯಿಮ್ ಕೊಳ್ಳದಲ್ಲಿ ಬೀಡುಬಿಟ್ಟದ್ದನ್ನು ಕಂಡರು.


ಅಲ್ಲಿಯ ವಿಶಾಲ ಪ್ರದೇಶದಲ್ಲಿ ಸುಖಸಮೃದ್ಧಿಯುಳ್ಳ ಫಲವತ್ತಾದ ಹಸಿರುಗಾವಲು ಭೂಮಿ ಅವರಿಗೆ ದೊರೆಯಿತು. ಇವರಿಗಿಂತ ಮೊದಲು ಅಲ್ಲಿ ಹಾಮ್ಯರ್ ಜನಾಂಗದವರು ನೆಲೆಸಿದ್ದರು.


ಮೂವತ್ತು ಮಂದಿ ಪ್ರಸಿದ್ಧ ಶೂರರಲ್ಲಿ ಮೂರು ಮಂದಿ, ದಾವೀದನು ಅದುಲ್ಲಾಮ್ ಗವಿಯಲ್ಲಿದ್ದಾಗ, ಸುಗ್ಗೀಕಾಲದಲ್ಲಿ ಅವನ ಬಳಿಗೆ ಬಂದರು. ಫಿಲಿಷ್ಟಿಯರು ದಂಡೆತ್ತಿಬಂದು ರೆಫಾಯಿಮ್ ತಗ್ಗಿನಲ್ಲಿ ಪಾಳೆಯ ಮಾಡಿಕೊಂಡಾಗ


ಫಿಲಿಷ್ಟಿಯರು ಇನ್ನೊಮ್ಮೆ ಹೊರಟುಬಂದು ರೆಫಾಯೀಮ್ ತಗ್ಗಿನಲ್ಲಿ ಇಳಿದುಕೊಂಡರು.


ಫಿಲಿಷ್ಟಿಯರು ನಾಡಿನೊಳಗೆ ನುಗ್ಗಿ ರೆಫಾಯಿಮ್ ತಗ್ಗಿಗೆ ಬಂದು ಪಾಳೆಯ ಮಾಡಿಕೊಂಡರು.


ಗಿಲ್ಯಾದಿನ ಅರ್ಧಭಾಗ ಓಗನ ರಾಜಧಾನಿಗಳಾಗಿದ್ದ ಬಾಷಾನಿನ ಅಷ್ಟರೋತ್ ಹಾಗೂ ಎದ್ರೈ ಎಂಬ ನಗರಗಳು ಮನಸ್ಸೆಯ ಮಗ ಮಾಕೀರನ ಗೋತ್ರದ ಅರ್ಧಜನರಿಗೆ ಸಿಕ್ಕಿದವು.


ಕಿರ್ಯಾತಯಿಮ್, ಸಿಬ್ಮಾ ಎಂಬ ಹೆಷ್ಬೋನಿನ ಉಪಗ್ರಾಮಗಳು, ಕಣಿವೆಯಲ್ಲಿ ಇರುವ ಗುಡ್ಡದ ಮೇಲಿನ ಚೆರೆತ್ ಶಹರ್, ಬೇತ್ಪೆಗೋರ್ ಎಂಬ ನಗರಗಳು,


ಅಷ್ಟರೋತ್, ಎದ್ರೈ ಎಂಬ ಊರುಗಳಲ್ಲಿ ಆಳುತ್ತಿದ್ದ ರೆಫಾಯರ ವಂಶಸ್ಥನಾದ ಓಗನ ರಾಜ್ಯವಾಗಿದ್ದು ಸಲ್ಕಾ ನಗರದವರೆಗೆ ವಿಸ್ತರಿಸಿಕೊಂಡಿದ್ದ ಬಾಷಾನಿನ ಎಲ್ಲಾ ಪ್ರಾಂತ್ಯಗಳು. ಮೋಶೆಯೇ ಅವರನ್ನು ಜಯಿಸಿ ಅವರ ನಾಡುಗಳನ್ನು ಸ್ವಾಧೀನಮಾಡಿಕೊಂಡಿದ್ದನು.


ಅಷ್ಟರೋತ್ ಹಾಗೂ ಎದ್ರೈ ಎಂಬ ಊರುಗಳಲ್ಲಿ ವಾಸವಾಗಿದ್ದ ರೆಫಾಯರ ವಂಶಸ್ಥನೂ ಬಾಷಾನಿನ ಅರಸನೂ ಆದ ಓಗನು ವಧಿತರಾದವರಲ್ಲಿ ಎರಡನೆಯವನು.


ಅನಂತರ ನಿಮ್ಮಂತೆ ನಿಮ್ಮ ಸಹೋದರರಿಗೂ ಸರ್ವೇಶ್ವರನಿಂದ ವಿಶ್ರಾಂತಿ ದೊರಕಿದಾಗ ನಿಮ್ಮಲ್ಲಿ ಪ್ರತಿ ಒಬ್ಬನೂ ನಾನು ಕೊಟ್ಟ ಸೊತ್ತಿಗೆ ತಿರುಗಿ ಬರಬಹುದು’ ಎಂದು ಆಜ್ಞಾಪಿಸಿದೆ.


ಬೆರಗ ಮೊದಲಾದ ಈ ಐದು ಅರಸರು ಹನ್ನೆರಡು ವರ್ಷಕಾಲ ಕೆದೊರ್ಲಗೋಮರನಿಗೆ ಅಧೀನರಾಗಿ ಇದ್ದರು. ಹದಿಮೂರನೆಯ ವರ್ಷದಲ್ಲಿ ತಿರುಗಿಬಿದ್ದರು.


ರೂಬೇನ್ಯರು ಹೆಷ್ಬೋನ್, ಎಲೆಯಾಲೆ, ಕಿರ್ಯತಯಿಮ್, ಸಿಬ್ಮಾ ಎಂಬ ಊರುಗಳನ್ನು ಹಾಗು


ಗಿಲ್ಯಾದಿನ ಮಿಕ್ಕ ಭಾಗವನ್ನೂ ಓಗನ ರಾಜ್ಯ ಆಗಿದ್ದ ಅರ್ಗೋಬ್ ಎನಿಸಿಕೊಳ್ಳುವ ಸಮಸ್ತ ಬಾಷಾನ್ ನಾಡನ್ನೂ ಮನಸ್ಸೆಕುಲದ ಅರ್ಧ ಜನರಿಗೆ ಕೊಟ್ಟೆನು.


ಹೆಷ್ಬೋನಿನ ಅರಸ ಸೀಹೋನ್ ಮತ್ತು ಅಷ್ಟರೋತಿನಲ್ಲಿ ವಾಸವಾಗಿದ್ದ ಬಾಷಾನಿನ ಅರಸ ಓಗ್ ಎಂಬ ಈ ಇಬ್ಬರು ಅಮೋರಿಯರಿಗೆ ಆ ದೇವರು ಮಾಡಿದ್ದೆಲ್ಲವನ್ನು ಕೇಳಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು