Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 15:1 - ಕನ್ನಡ ಸತ್ಯವೇದವು C.L. Bible (BSI)

1 ಈ ಘಟನೆಗಳೆಲ್ಲ ನಡೆದ ಮೇಲೆ ಅಬ್ರಾಮನಿಗೆ ಒಂದು ದಿವ್ಯದರ್ಶನ ಆಯಿತು. ಅದರಲ್ಲಿ ಸರ್ವೇಶ್ವರ ಸ್ವಾಮಿಯ ಈ ವಾಣಿ ಕೇಳಿಸಿತು: “ಅಬ್ರಾಮನೇ ಭಯಪಡಬೇಡ, ನಿನ್ನನ್ನು ರಕ್ಷಿಸುವ ಕವಚ ನಾನೇ, ಘನವಾದ ಬಹುಮಾನ ಸಿಗುವುದು ನಿನಗೆ".

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಈ ಸಂಗತಿಗಳು ನಡೆದ ಮೇಲೆ ಅಬ್ರಾಮನಿಗೆ ದರ್ಶನದಲ್ಲಿ ಯೆಹೋವನ ವಾಕ್ಯವುಂಟಾಗಿ ಹೇಳಿದೇನೆಂದರೆ, “ಅಬ್ರಾಮನೇ, ಭಯಪಡಬೇಡ, ನಾನು ನಿನಗೆ ಗುರಾಣಿಯಾಗಿದ್ದೇನೆ ಮತ್ತು ನಿನಗೆ ಅತ್ಯಧಿಕ ಬಹುಮಾನವು ದೊರೆಯುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಈ ಸಂಗತಿಗಳು ನಡೆದ ಮೇಲೆ ಅಬ್ರಾಮನಿಗೆ ದರ್ಶನದಲ್ಲಿ ಯೆಹೋವನ ವಾಕ್ಯವುಂಟಾಯಿತು; ಏನಂದರೆ- ಅಬ್ರಾಮನೇ, ಭಯಪಡಬೇಡ, ನಾನು ನಿನಗೆ ಗುರಾಣಿಯಾಗಿದ್ದೇನೆ; ನಿನಗೋಸ್ಕರ ಅತ್ಯಧಿಕ ಬಹುಮಾನವು ಇಟ್ಟದೆ ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಈ ಸಂಗತಿಗಳಾದ ಮೇಲೆ, ಅಬ್ರಾಮನಿಗೆ ದರ್ಶನದಲ್ಲಿ ಯೆಹೋವನ ಸಂದೇಶ ಬಂದಿತು. ದೇವರು ಅವನಿಗೆ, “ಅಬ್ರಾಮನೇ ಭಯಪಡಬೇಡ; ನಾನೇ ನಿನಗೆ ಗುರಾಣಿಯಾಗಿದ್ದೇನೆ. ನಾನು ನಿನಗೆ ದೊಡ್ಡ ಪ್ರತಿಫಲವನ್ನು ಕೊಡುತ್ತೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಇವುಗಳಾದ ಮೇಲೆ ಯೆಹೋವ ದೇವರ ವಾಕ್ಯವು ಅಬ್ರಾಮನಿಗೆ ದರ್ಶನದಲ್ಲಿ ಉಂಟಾಗಿ ಹೇಳಿದ್ದೇನೆಂದರೆ: “ಅಬ್ರಾಮನೇ, ಭಯಪಡಬೇಡ. ನಾನು ನಿನಗೆ ಗುರಾಣಿಯಾಗಿದ್ದೇನೆ. ನಾನೇ ನಿನಗೆ ಅತ್ಯಧಿಕ ಬಹುಮಾನವಾಗಿದ್ದೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 15:1
65 ತಿಳಿವುಗಳ ಹೋಲಿಕೆ  

ಹೆದರಬೇಡ, ನಾನಿದ್ದೇನೆ ನಿನ್ನೊಂದಿಗೆ ಭಯಭ್ರಾಂತನಾಗಬೇಡ, ನಾನೇ ದೇವರು ನಿನಗೆ. ಶಕ್ತಿ ನೀಡುವೆ, ಸಹಾಯಮಾಡುವೆ ನಿನಗೆ ನನ್ನ ವಿಜಯಹಸ್ತದ ಆಧಾರ ಇದೆ ನಿನಗೆ.


ನನ್ನಾಶ್ರಯವೂ ಕವಚವೂ ನೀನೇ I ನಿರೀಕ್ಷಿಸುತಿರುವೆ ನಿನ್ನ ವಾಕ್ಯವನೆ II


ದೇವನೆಮಗೆ ಬೆಳಕು ಕೊಡುವ ಸೂರ್ಯನು I ಕಾದಿಟ್ಟು ರಕ್ಷಿಸುವ ಗುರಾಣಿಯು I ಸನ್ಮಾರ್ಗಿಗೆ ಈವನು ಸಕಲ ವರಗಳನು II


ಆ ರಾತ್ರಿ ಸರ್ವೇಶ್ವರ ಅವನಿಗೆ ದರ್ಶನವಿತ್ತು, “ನಿನ್ನ ತಂದೆ ಅಬ್ರಹಾಮನ ದೇವರು ನಾನೇ ಅಂಜಬೇಡ, ನಿನ್ನ ಸಂಗಡ ನಾನಿರುವೆ. ಆ ನನ್ನ ದಾಸ ಅಬ್ರಹಾಮನ ನಿಮಿತ್ತ ನಿನ್ನ ಹರಸಿ ನಾ ಹೆಚ್ಚಿಸುವೆ ನಿನ್ನ ಸಂತಾನವ” ಎಂದರು.


ಸರ್ವೇಶ್ವರ ಇಂತೆನ್ನುತ್ತಾರೆ : “ಹುಳುವಿನಂತಿರುವ ಯಕೋಬೇ, ಇಸ್ರಯೇಲಿನ ಜನತೆಯೇ, ಭಯಪಡಬೇಡ, ನಾನೇ ನಿನಗೆ ಸಹಾಯಕ ಇಸ್ರಯೇಲಿನ ಪರಮಪಾವನ ಸ್ವಾಮಿಯೇ ನಿನಗೆ ವಿಮೋಚಕ.


“ನನ್ನ ಪಾಲಿನ ಸೊತ್ತು ಸರ್ವೇಶ್ವರನೇ, ನಿರೀಕ್ಷಿಸುತ್ತಿರುವೆನು ನಾನು ಆತನನ್ನೇ” ಇಂತೆಂದುಕೊಳ್ಳುತ್ತದೆ ನನ್ನ ಅಂತರಾತ್ಮ.


“ಪುಟ್ಟಮಂದೆಯೇ, ಭಯಪಡಬೇಡ. ನಿನ್ನ ತಂದೆ ತಮ್ಮ ಸಾಮ್ರಾಜ್ಯವನ್ನು ನಿನಗೆ ನೀಡಲು ಇಷ್ಟಪಟ್ಟಿದ್ದಾರೆ.


ಪ್ರಭುವೇ ನನ್ನ ಕಲ್ಲುಕೋಟೆ, ನನಗೆ ವಿಮೋಚಕ I ಆತನೇ ನನ್ನ ದೇವ, ನನ್ನಾಶ್ರಯ ದುರ್ಗ I ಆತನೆನಗೆ ಗುರಾಣಿ, ಗಿರಿ, ರಕ್ಷಣಾಶೃಂಗ II


ನೀನು ಮಾಡಿದ್ದಕ್ಕೆಲ್ಲಾ ದೇವರು ನಿನಗೆ ತಕ್ಕ ಪ್ರತಿಫಲವನ್ನೀಯಲಿ. ಇಸ್ರಯೇಲಿನ ದೇವರಾದ ಸರ್ವೇಶ್ವರಸ್ವಾಮಿಯ ಆಶ್ರಯವನ್ನರಸಿ ಬಂದಿರುವೆ. ಅವರು ನಿನಗೆ ಹೇರಳವಾದ ಆಶೀರ್ವಾದವನ್ನು ಅನುಗ್ರಹಿಸಲಿ!” ಎಂದನು.


ದೂತನು ಅವನಿಗೆ, “ಜಕರೀಯಾ, ಭಯಪಡಬೇಡ! ನಿನ್ನ ಪ್ರಾರ್ಥನೆಯನ್ನು ದೇವರು ಆಲಿಸಿದ್ದಾರೆ. ನಿನ್ನ ಪತ್ನಿ ಎಲಿಜಬೇತಳಲ್ಲಿ ನಿನಗೆ ಒಂದು ಗಂಡುಮಗು ಹುಟ್ಟುವುದು. ನೀನು ಅವನಿಗೆ ‘ಯೊವಾನ್ನ’ ಎಂದು ನಾಮಕರಣ ಮಾಡಬೇಕು.


ಭಯಪಡಬೇಡ, ನಾನಿರುವೆ ನಿನ್ನ ಸಂಗಡ ಕರೆತರುವೆ ನಿನ್ನ ಸಂತತಿಯನ್ನು ಮೂಡಣದಿಂದ ಒಟ್ಟುಗೂಡಿಸುವೆ ನಿನ್ನವರನ್ನು ಪಡುವಣದಿಂದ.


ಪ್ರಭುವೇ, ನನಗಾಶ್ರಯ ನೀನೇ I ನನ್ನ ಬಾಳಿನ ಸೊತ್ತು ನೀನೇ I ಕೂಗಿ ನಿನಗೆ ಮೊರೆಯಿಡುತ್ತೇನೆ II


ನೀನಾದರೋ ಪ್ರಭು, ನನಗೆ ರಕ್ಷೆ, ವಿಜಯದಾತ I ನಾನು ತಲೆಯೆತ್ತಿ ನಡೆಯುವಂತೆ ಮಾಡುವಾತ II


ಇತ್ತ ಆ ಹುಡುಗನ ಕೂಗು ದೇವರಿಗೆ ಕೇಳಿಸಿತು. ದೇವದೂತನು ಆಕಾಶದಿಂದ ಹಾಗರಳನ್ನು ಕರೆದು, “ಹಾಗರಳೇ, ನಿನಗೇನು ಆಯಿತು? ಅಂಜಬೇಡ; ಆ ಹುಡುಗನು ಬಿದ್ದು ಇರುವ ಸ್ಥಳದಿಂದಲೇ ಅವನ ಕೂಗು ದೇವರನ್ನು ಮುಟ್ಟಿತು;


ದೂತನು ಆಕೆಗೆ, “ಮರಿಯಾ, ನೀನು ಅಂಜಬೇಕಾಗಿಲ್ಲ; ದೇವರ ಅನುಗ್ರಹ ನಿನಗೆ ಲಭಿಸಿದೆ;


“ನ್ಯಾಯ ನಿರ್ಣಯಿಸುವಂಥ ದೇವನಿಹನು ಜಗದಲಿ I ಸಜ್ಜನರಿಗೆ ಸತ್ಫಲ ಕಟ್ಟಿಟ್ಟ ಬುತ್ತಿ,” ಇದು ನಾಣ್ನುಡಿ II


ಅದಕ್ಕೆ ಯೇಸು, “ಅಲ್ಪವಿಶ್ವಾಸಿಗಳೇ, ನಿಮಗೇಕೆ ಇಷ್ಟು ಭಯ?” ಎಂದರು. ಅನಂತರ ಎದ್ದು ನಿಂತು ಸುಂಟರಗಾಳಿಯನ್ನೂ ಸರೋವರವನ್ನೂ ಗದರಿಸಿದರು.


“ನಾನೆ, ನಾನೆ ನಿನ್ನನು ಸಂತೈಸುವವನಾಗಿರೆ, ನೀ ಭಯಪಡುವುದೇಕೆ ಮರ್ತ್ಯನಾದ ಮಾನವನಿಗೆ? ನೀ ಹೆದರಿ ನಡುಗುವುದೇಕೆ ಹುಲುಮಾನವನಿಗೆ?


ನನಗೆ ಬೆಳಕು, ನನಗೆ ರಕ್ಷೆ, ಪ್ರಭುವೆ I ನಾನಾರಿಗೂ ಅಳುಕೆನು II ನನ್ನ ಬಾಳಿಗಾಧಾರ ಪ್ರಭುವೆ I ನಾನಾರಿಗೂ ಅಂಜೆನು II


ದುರುಳನು ಪಡೆವ ಸಂಬಳ ಜೊಳ್ಳು ಸಂಬಳ; ನೀತಿಯನ್ನು ಬಿತ್ತುವವನು ಪಡೆವನು ಸತ್ಫಲ.


ಹುದುಗಿಸುವನು ನಿನ್ನನು ತನ್ನ ಗರಿಗಳ ತೆಕ್ಕೆಯಲಿ I ಆಶ್ರಯಪಡುವೆ ನೀ ಆತನ ರೆಕ್ಕೆಗಳಡಿಯಲಿ I ರಕ್ಷಣೆಯ ಕವಚವಿದೆ ಆತನು ಕೊಟ್ಟ ಮಾತಿನಲಿ II


ನೀವು ಶೂರರಾಗಿ ಧೈರ್ಯದಿಂದಿರಿ; ಅವರಿಗೆ ಅಂಜಬೇಡಿ, ಕಳವಳಪಡಬೇಡಿ. ನಿಮ್ಮ ದೇವರಾದ ಸರ್ವೇಶ್ವರನೇ ನಿಮ್ಮ ಸಂಗಡ ಇರುತ್ತಾರೆ; ಅವರು ನಿಮ್ಮನ್ನು ಕೈಬಿಡುವುದಿಲ್ಲ, ಅಪಜಯಕ್ಕೆ ಗುರಿಪಡಿಸುವುದೇ ಇಲ್ಲ,” ಎಂದು ಹೇಳಿದನು.


ಆಮೇಲೆ ಸರ್ವೇಶ್ವರ ನನಗೆ ಹೀಗೆಂದರು: “ನರಪುತ್ರನೇ, ನೀನು ಇಸ್ರಯೇಲ್ ವಂಶದವರ ಬಳಿಗೆ ಹೋಗಿ ನಾನು ತಿಳಿಸುವ ಮಾತುಗಳನ್ನು ಅವರಿಗೆ ಹೇಳು.


ನಿನ್ನನ್ನು ಸೃಷ್ಟಿಸಿದ ಸರ್ವೇಶ್ವರ ನಾನೆ ತಾಯ ಗರ್ಭದಿಂದ ನಿನ್ನನ್ನು ರೂಪಿಸಿದವನು ನಾನೆ ಅಂದಿನಿಂದ ನಿನಗೆ ನೆರವಾಗುತ್ತಾ ಬಂದವನು ನಾನೆ. ಭಯಪಡಬೇಡ, ನನ್ನ ದಾಸ ಯಕೋಬನೇ, ಅಂಜಬೇಡ, ನಾನು ಆರಿಸಿಕೊಂಡ ಯೆಶುರೂನೇ.


ಈಗಲಾದರೋ ಯಕೋಬ ವಂಶವೇ, ಇಸ್ರಯೇಲ್ ಸಂತಾನವೇ ಕೇಳು : ನಿನ್ನನ್ನು ಸೃಷ್ಟಿಸಿದ, ರೂಪಿಸಿದ ಸರ್ವೇಶ್ವರನ ನುಡಿಯನ್ನು ಕೇಳು; “ಭಯಪಡಬೇಡ, ನಿನ್ನನ್ನು ರಕ್ಷಿಸಿದಾತ ನಾನಲ್ಲವೆ? ನಿನ್ನನ್ನು ಹೆಸರು ಹಿಡಿದು ಕರೆದಾತ ನಾನಲ್ಲವೆ? ನೀನು ನನ್ನವನೇ ಅಲ್ಲವೆ?


ಚಂಚಲ ಹೃದಯರಿಗೆ ಹೀಗೆಂದು ಹೇಳಿ : “ಭಯಪಡಬೇಡಿ; ಎದೆಗುಂದಬೇಡಿ; ಬರುವನು ಆ ದೇವನು ಮುಯ್ಯಿತೀರಿಸಲು ಬರುವನು ಆ ದೇವನು ಪ್ರತೀಕಾರವೆಸಗಲು ತಾನೇ ಬರುವನು ನಿಮ್ಮನ್ನು ರಕ್ಷಿಸಲು.”


ಅದಕ್ಕೆ ಮೋಶೆ ಆ ಜನರಿಗೆ, “ಅಂಜಬೇಡಿ, ಸುಮ್ಮನಿರಿ, ಈ ದಿನ ಸರ್ವೇಶ್ವರ ನಿಮ್ಮನ್ನು ಹೇಗೆ ರಕ್ಷಿಸುತ್ತಾರೆಂದು ನೋಡಿ! ಈ ದಿನ ನೀವು ನೋಡುವ ಈಜಿಪ್ಟಿನವರನ್ನು ಇನ್ನೆಂದಿಗೂ ನೋಡುವುದಿಲ್ಲ.


ನಾನು ಅವರನ್ನು ಕಂಡಾಗ, ಸತ್ತವನಂತಾದೆ. ಅವರ ಪಾದಗಳ ಮುಂದೆ ಬಿದ್ದೆ. ಅವರು ತಮ್ಮ ಬಲಗೈಯನ್ನು ನನ್ನ ಮೇಲಿಟ್ಟು, “ಭಯಪಡಬೇಡ, ನಾನೇ ಮೊದಲನೆಯವನೂ ಕಡೆಯವನೂ


ಪೂರ್ವಕಾಲದಲ್ಲಿ ದೇವರು ನಮ್ಮ ಪಿತೃಗಳೊಡನೆ ಹಲವಾರು ವಿಧದಲ್ಲಿ, ಅನೇಕ ಸಾರಿ ಪ್ರವಾದಿಗಳ ಮುಖಾಂತರ ಮಾತನಾಡಿದರು.


ವಾಸ್ತವವಾಗಿ ಸಮಸ್ತವೂ ನಿಮ್ಮದೇ. ಪೌಲ, ಅಪೊಲೋಸ್, ಕೇಫ - ಇವರಾಗಲಿ; ಜಗತ್ತು, ಜೀವ, ಮರಣ - ಇವುಗಳಾಗಲಿ, ಅಥವಾ ವರ್ತಮಾನ, ಭವಿಷ್ಯತ್ಕಾಲಗಳಾಗಲಿ, ಇವೆಲ್ಲವೂ ನಿಮ್ಮವೇ.


“ಶತಾಧಿಪತಿ ಕೊರ್ನೇಲಿಯ ನಮ್ಮನ್ನು ಕಳುಹಿಸಿದರು. ಅವರೊಬ್ಬ ಸತ್ಪುರುಷರು, ದೈವಭಕ್ತರು, ಯೆಹೂದ್ಯ ಜನತೆಯಿಂದ ಗೌರವಾನ್ವಿತರು. ನಿಮ್ಮನ್ನು ತಮ್ಮ ಮನೆಗೆ ಆಹ್ವಾನಿಸಿ, ನೀವು ಹೇಳುವುದನ್ನು ಕೇಳಬೇಕೆಂದು ದೇವದೂತನಿಂದ ಆದೇಶಪಡೆದಿದ್ದಾರೆ,” ಎಂದರು.


ದೇವರ ಒಂದೊಂದು ಮಾತೂ ಪರಿಶುದ್ಧ; ಆತನೇ ಶರಣರ ಖೇಡ್ಯ;


ನಿನ್ನ ಮಂದಿರದಲಿ ಕಳೆದ ದಿನವೊಂದು I ತಿಳಿವೆನು ಸಾವಿರ ದಿನಕೂ ಮೇಲೆಂದು II


(ಪೂರ್ವಕಾಲದಲ್ಲಿ ಇಸ್ರಯೇಲರಲ್ಲಿ ಯಾವನಾದರೂ ದೇವೋತ್ತರ ಕೇಳಬೇಕಾದರೆ ದಾರ್ಶನಿಕನ ಬಳಿಗೆ ಹೋಗೋಣ ಬನ್ನಿ ಎನ್ನುವನು; ಈ ಕಾಲದಲ್ಲಿ ಪ್ರವಾದಿಗಳೆನಿಸಿಕೊಳ್ಳುವವರನ್ನು ಆ ಕಾಲದಲ್ಲಿ ದಾರ್ಶನಿಕರೆಂದು ಕರೆಯುತ್ತಿದ್ದರು.)


ಆ ಮೇಲೆ ದೇವರಾತ್ಮ ಪರವಶನಾದ ನನ್ನನ್ನು ಎತ್ತಿ, ದಿವ್ಯದರ್ಶನದ ಮುಖಾಂತರ ಬಾಬಿಲೋನಿಯ ದೇಶದಲ್ಲಿ ಸೆರೆಯಾಗಿದ್ದವರ ಬಳಿಗೆ ಒಯ್ದು ತಂದಿತು. ನನಗಾದ ದಿವ್ಯದರ್ಶನವು ಆಗ ಮಾಯವಾಯಿತು.


ಆಮೇಲೆ ದಾವೀದನು ತನ್ನ ಮಗ ಸೊಲೊಮೋನನಿಗೆ, “ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಕೆಲಸಕ್ಕೆ ಕೈಹಾಕು; ಅಂಜಬೇಡ, ಕಳವಳಗೊಳ್ಳಬೇಡ. ನನ್ನ ದೇವರಾಗಿರುವ ಸರ್ವೇಶ್ವರಸ್ವಾಮಿ ನಿನ್ನೊಂದಿಗೆ ಇರುತ್ತಾರೆ; ಅವರು ತಮ್ಮ ಆಲಯದ ಎಲ್ಲಾ ಕೆಲಸ ತೀರುವವರೆಗೂ ನಿನ್ನನ್ನು ಕೈಬಿಡುವುದಿಲ್ಲ, ತೊರೆಯುವುದಿಲ್ಲ.


ಮೂವತ್ತನೆಯ ವರ್ಷದ ನಾಲ್ಕನೆಯ ತಿಂಗಳಿನ ಐದನೆಯ ದಿನ ನಾನು ಗಡೀಪಾರಾಗಿದ್ದ ಯೆಹೂದ್ಯರ ಮಧ್ಯೆ ಕೆಬಾರ್ ನದಿಯ ಹತ್ತಿರ ಇದ್ದೆ. ಆಗ ಆಕಾಶ ತೆರೆಯಿತು. ನನಗೆ ದೇವದರ್ಶನಗಳಾದವು.


ಆಗ ದೂತನು ಆ ಮಹಿಳೆಯರಿಗೆ, “ಹೆದರಬೇಡಿ, ಶಿಲುಬೆಗೇರಿಸಿದ ಯೇಸುವನ್ನು ನೀವು ಹುಡುಕುತ್ತಿದ್ದೀರೆಂದು ನಾನು ಬಲ್ಲೆ. ಅವರು ಇಲ್ಲಿಲ್ಲ;


ಹೆದರಬೇಡಿ, ಅಂಜದಿರಿ, ನನ್ನ ಜನರೇ, ನನಗೆ ಸಾಕ್ಷಿಗಳು ನೀವೇ; ಪೂರ್ವಕಾಲದಿಂದ ನಡೆದವುಗಳನು ನಾ ನಿಮಗೆ ಮುಂತಿಳಿಸಿ ಶ್ರುತಪಡಿಸಿಲ್ಲವೆ? ನನ್ನ ಹೊರತು ಬೇರೆ ದೇವನಿರುವನೆ? ನನ್ನ ಹೊರತು ಬೇರೆ ಸೇನಾಧೀಶ್ವರನಿರುವನೆ? ಅಂಥವನಾರೋ ನಾನರಿಯೆ.”


ಅವರು ಸಮೀಪಿಸಿದಾಗ, “ನನ್ನ ಮಾತಿಗೆ ಕಿವಿಗೊಡಿ ನಿಮ್ಮಲ್ಲಿ ಪ್ರವಾದಿಯಿದ್ದರೆ ಅವನಿಗೆ ಕಾಣಿಸಿಕೊಳ್ಳುವೆ ಜ್ಞಾನದೃಷ್ಟಿಯಲ್ಲಿ ಇಲ್ಲವೆ ಅವನ ಸಂಗಡ ಮಾತಾಡುವೆ ಸ್ವಪ್ನದಲ್ಲಿ.


ಅದಕ್ಕೆ ಪ್ರತ್ಯುತ್ತರವಾಗಿ ಅಬ್ರಾಮನು - “ಸ್ವಾಮಿ ಸರ್ವೇಶ್ವರಾ, ನನಗೇ ಏನು ಕೊಟ್ಟರೇನು? ನಾನು ಪುತ್ರಸಂತಾನವಿಲ್ಲದವನು. ನನ್ನ ಮನೆಮಾರುಗಳಿಗೆ ಉತ್ತರಾಧಿಕಾರಿ ದಮಸ್ಕದ ಎಲೀಯೆಜರನೇ ಹೊರತು ಮತ್ತಾರೂ ಇಲ್ಲ;


ಮತ್ತೆ ಸ್ವಾಮಿಯ ವಾಣಿ - “ಇಲ್ಲ, ಅವನು ಉತ್ತರಾಧಿಕಾರಿಯಾಗುವುದಿಲ್ಲ, ನಿನ್ನಿಂದ ಹುಟ್ಟಿದವನೇ ನಿನಗೆ ಉತ್ತರಾಧಿಕಾರಿ ಆಗುತ್ತಾನೆ” ಎಂದಿತು.


ನಿಮ್ಮ ತಂದೆಯಾದರೋ ನನಗೆ ಮೋಸಮಾಡಿ ಹತ್ತು ಸಾರಿ ನನ್ನ ಸಂಬಳವನ್ನು ಬದಲಾಯಿಸಿದ್ದಾರೆ. ಅವರಿಂದ ನನಗೆ ಕೇಡಾಗದಂತೆ ದೇವರೇ ನೋಡಿಕೊಂಡರು.


ಇದಲ್ಲದೆ ಸರ್ವೇಶ್ವರ ಆರೋನನಿಗೆ ಹೀಗೆಂದರು: “ಇಸ್ರಯೇಲರ ನಾಡಿನಲ್ಲಿ ನಿನ್ನ ಸ್ವಂತ ಸೊತ್ತಾಗಿ ಯಾವ ಆಸ್ತಿಯೂ ಇರುವುದಿಲ್ಲ; ಅವರೊಂದಿಗೆ ನಿನಗೆ ಯಾವ ಪಾಲೂ ಇರುವುದಿಲ್ಲ. ಇಸ್ರಯೇಲರ ನಡುವೆ ನಾನೇ ನಿನಗೆ ಆಸ್ತಿಪಾಸ್ತಿ, ಪಾಲುಪಸುಗೆ.”


ದೈವೋಕ್ತಿಗಳನ್ನು ಕೇಳುವವನ ಭವಿಷ್ಯವಾಣಿ ಪರವಶನಾಗಿ ಕಣ್ದೆರೆದು ಸರ್ವಶಕ್ತನ ದರ್ಶನ ಹೊಂದಿದಾ ವ್ಯಕ್ತಿಯ ವಾಣಿ.


ಸರ್ವೇಶ್ವರ ಸಮುವೇಲನಿಗೆ, “ಸೌಲನನ್ನು ಅರಸನನ್ನಾಗಿ ಮಾಡಿದ್ದಕ್ಕೆ ಈಗ ವಿಷಾದಿಸುತ್ತೇನೆ. ಅವನು ನನಗೆ ವಿಮುಖನಾಗಿದ್ದಾನೆ. ನನ್ನ ಆಜ್ಞೆಗಳನ್ನು ನೆರವೇರಿಸುವುದಿಲ್ಲ,” ಎಂದು ಹೇಳಿದರು. ಸಮುವೇಲನು ಸಿಟ್ಟುಗೊಂಡು ರಾತ್ರಿಯೆಲ್ಲಾ ಸರ್ವೇಶ್ವರನಿಗೆ ಮೊರೆಯಿಟ್ಟನು.


ಆತನೇ ನನಗೆ ದೇವರು, ನನ್ನಾಶ್ರಯಗಿರಿ, ನನ್ನ ರಕ್ಷಣಾಶೃಂಗ, ನನ್ನ ದುರ್ಗ, ನನ್ನ ಗುರಾಣಿ.


ಈ ಘಟನೆಗಳಾದ ಬಳಿಕ ದೇವರು ಅಬ್ರಹಾಮನನ್ನು ಪರೀಕ್ಷಿಸುವುದಕ್ಕೋಸ್ಕರ, “ಅಬ್ರಹಾಮನೇ,” ಎಂದು ಕರೆದರು. ಅವನು “ಇಗೋ, ಸಿದ್ಧನಿದ್ದೇನೆ” ಎಂದನು.


ಕೆಲವು ಕಾಲವಾದ ಮೇಲೆ ಅಬ್ರಹಾಮನಿಗೆ ತನ್ನ ತಮ್ಮನಾದ ನಾಹೋರನಿಗೆ ಮಿಲ್ಕಳಿಂದ ಮಕ್ಕಳಾದುವೆಂಬ ಸಮಾಚಾರ ಮುಟ್ಟಿತು.


ಸ್ವದೇಶದವರಿಗೆ ದೊರಕುವಂತೆ ಅವರಿಗೆ ಸೊತ್ತು ದೊರಕುವುದಿಲ್ಲ. ಸರ್ವೇಶ್ವರ ಸ್ವಾಮಿಯೇ ಲೇವಿಯರ ಸೊತ್ತು. ಇದನ್ನು ಸ್ವಾಮಿಯೇ ಅವರಿಗೆ ಹೇಳಿದ್ದಾರೆ.


ಆಗ ಸರ್ವೇಶ್ವರನ ದೂತನು ಎಲೀಯನಿಗೆ, “ನೀನು ಇವನ ಸಂಗಡ ಹೋಗು; ಹೆದರಬೇಡ,” ಎಂದು ಹೇಳಿದನು. ಆದ್ದರಿಂದ ಎಲೀಯನು ಎದ್ದು ಇವನ ಜೊತೆಯಲ್ಲೇ ಅರಸನ ಬಳಿಗೆ ಹೋದನು.


ಸ್ವರವೆತ್ತಿ ಎನ್ನ ಪ್ರಭುವಿಗೆ ನಾ ಮೊರೆಯಿಡುವೆನು I ಸಿರಿಶಿಖರದಿಂದಾತನು ಸದುತ್ತರ ನೀಡುವನು II


ಪ್ರಭುವಿನಲ್ಲಿದೆ ಭರವಸೆ ಆರೋನನ ಕುಲಕೆ I ಆತನೇ ಸಹಾಯಕ, ರಕ್ಷಾಕವಚ ಅವರಿಗೆ II


ಇಗೋ, ಬರುತಿಹನು ಸ್ವಾಮಿ ಸರ್ವೇಶ್ವರ ಶೂರನಂತೆ ರಾಜ್ಯವಾಳುವನು ತನ್ನ ಭುಜಬಲದಿಂದಲೇ ಇಗೋ, ಶ್ರಮಕ್ಕೆ ತಕ್ಕ ಪ್ರತಿಫಲ ಆತನ ಕೈಯಲ್ಲಿದೆ ಆತ ಜಯಿಸಿದ ಪರಿವಾರ ಆತನ ಮುಂದಿದೆ.


ಆದರೆ ಆ ದಿನದಲ್ಲಿ ನಿನ್ನನ್ನು ನಾನು ಉದ್ಧರಿಸುವೆನು. ಇದು ಸರ್ವೇಶ್ವರನಾದ ನನ್ನ ನುಡಿ. ನೀನು ಯಾರಿಗಾಗಿ ಭಯಪಡುತ್ತಿಯೋ ಅವರ ಕೈಗೆ ಸಿಕ್ಕುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು