Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 15:12 - ಕನ್ನಡ ಸತ್ಯವೇದವು C.L. Bible (BSI)

12 ಹೊತ್ತು ಮುಳುಗುತ್ತಿದ್ದಾಗ ಅಬ್ರಾಮನಿಗೆ ಗಾಢನಿದ್ರೆ ಹತ್ತಿತು. ಭೀಕರವಾದ ಕಾರ್ಗತ್ತಲು ಅವನನ್ನು ಕವಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಹೊತ್ತು ಮುಣುಗುತ್ತಿರುವಾಗ ಅಬ್ರಾಮನಿಗೆ ಗಾಢನಿದ್ರೆ ಹತ್ತಿತು; ಕಾರ್ಗತ್ತಲು ಅವನ ಮೇಲೆ ಕವಿಯಿತು; ಅವನು ಮಹಾಭೀತಿಯಿಂದ ಭಯಭ್ರಾಂತನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಹೊತ್ತು ಮುಣುಗುತ್ತಿರುವಾಗ ಅಬ್ರಾಮನಿಗೆ ಗಾಢನಿದ್ರೆ ಹತ್ತಿತು; ಕಾರ್ಗತ್ತಲು ಅವನ ಮೇಲೆ ಕವಿಯಿತು; ಅವನು ಭಯಭ್ರಾಂತನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಸಾಯಂಕಾಲವಾಯಿತು, ಸೂರ್ಯ ಮುಳುಗತೊಡಗಿದಾಗ ಅಬ್ರಾಮನಿಗೆ ಗಾಢ ನಿದ್ರೆ ಬಂದಿತು. ಅವನು ನಿದ್ರೆ ಮಾಡುತ್ತಿರುವಾಗ ಕಾರ್ಗತ್ತಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಸೂರ್ಯನು ಅಸ್ತಮಿಸಲಾಗಿ ಅಬ್ರಾಮನಿಗೆ ಗಾಢನಿದ್ರೆ ಹತ್ತಿತ್ತು. ಭೀಕರವಾದ ಕಾರ್ಗತ್ತಲು ಅವನ ಮೇಲೆ ಕವಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 15:12
10 ತಿಳಿವುಗಳ ಹೋಲಿಕೆ  

ಹೀಗಿರುವಲ್ಲಿ ದೇವರಾದ ಸರ್ವೇಶ್ವರ ಆ ಮನುಷ್ಯನಿಗೆ ಗಾಢನಿದ್ರೆಯನ್ನು ಬರಮಾಡಿದರು. ಅವನು ನಿದ್ರಿಸುತ್ತಿರುವಾಗ ಅವನ ಪಕ್ಕೆಯ ಎಲುಬುಗಳಲ್ಲಿ ಒಂದನ್ನು ತೆಗೆದುಕೊಂಡು ಅದರ ಸ್ಥಳವನ್ನು ಮಾಂಸದಿಂದ ಮುಚ್ಚಿದರು.


ಮಾನವನಿಗೆ ಗಾಢನಿದ್ರೆ ಬಂದಾಗ ಹಾಸಿಗೆ ಮೇಲೆ ಮಲಗಿರುವಾಗ ಸ್ವಪ್ನ ಬಿದ್ದಾಗ, ಕನಸು ಕಾಣುವಾಗ.


ಸೌಲನ ತಲೆದಿಂಬಿನ ಬಳಿಯಲ್ಲಿದ್ದ ಭರ್ಜಿ ಹಾಗೂ ತಂಬಿಗೆಗಳನ್ನು ತೆಗೆದುಕೊಂಡು ಹೋದರು. ಯಾರೂ ಕಾಣಲಿಲ್ಲ; ಯಾರಿಗೂ ಗೊತ್ತಾಗಲಿಲ್ಲ, ಯಾರಿಗೂ ಎಚ್ಚರವಾಗಲಿಲ್ಲ. ಏಕೆಂದರೆ ಸರ್ವೇಶ್ವರ ಅವರಿಗೆ ಗಾಢನಿದ್ರೆಯನ್ನು ಬರಮಾಡಿದ್ದರು; ಒಬ್ಬರಿಗೂ ಎಚ್ಚರವಿಲ್ಲದೆ ಎಲ್ಲರು ಮೈಮರೆತು ನಿದ್ರೆಯಲ್ಲಿ ಮಗ್ನರಾಗಿದ್ದರು.


ಯುತಿಕ ಎಂಬ ಯುವಕನು ಕಿಟಕಿಯಲ್ಲಿ ಕುಳಿತುಕೊಂಡಿದ್ದನು. ಪೌಲನು ದೀರ್ಘಕಾಲ ಮಾತನಾಡುತ್ತಲೇ ಇದ್ದುದರಿಂದ ಯುತಿಕನಿಗೆ ಗಾಢನಿದ್ರೆ ಹತ್ತಿತು; ತೂಕಡಿಕೆ ಹೆಚ್ಚಾಗಿ ಅವನು ಮೂರನೆಯ ಅಂತಸ್ತಿನಿಂದ ನೆಲಕ್ಕೆ ಬಿದ್ದುಬಿಟ್ಟನು. ಅವನನ್ನು ಎತ್ತಿ ನೋಡುವಾಗ ಅವನು ಸತ್ತಿದ್ದನು.


ಆ ಪ್ರಾಣಿಗಳ ತುಂಡುಗಳ ಮೇಲೆ ರಣಹದ್ದುಗಳು ಎರಗಿದಾಗ ಅಬ್ರಾಮನು ಅವುಗಳನ್ನು ಓಡಿಸಿಬಿಟ್ಟನು.


ಪ್ರಯಾಣಮಾಡುತ್ತಾ ಅವನು ಒಂದು ಸ್ಥಳಕ್ಕೆ ಬಂದು ಸೇರಿದನು. ಹೊತ್ತು ಮುಳುಗಿದ್ದ ಕಾರಣ ಆ ರಾತ್ರಿ ಅಲ್ಲಿಯೇ ಇಳಿದುಕೊಂಡನು. ಅಲ್ಲಿದ್ದ ಕಲ್ಲುಗಳಲ್ಲಿ ಒಂದು ಕಲ್ಲನ್ನು ತಲೆದಿಂಬಾಗಿ ಇಟ್ಟುಕೊಂಡು ಆ ಸ್ಥಳದಲ್ಲೇ ಮಲಗಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು