Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 15:13 - ಕನ್ನಡ ಸತ್ಯವೇದವು C.L. Bible (BSI)

13 ಆಗ ಅಬ್ರಾಮನಿಗೆ ಸರ್ವೇಶ್ವರ, “ಇದನ್ನು ನೀನು ಸ್ಪಷ್ಟವಾಗಿ ತಿಳಿದುಕೊಳ್ಳಬೇಕು: ನಿನ್ನ ಸಂತತಿಯವರು ಅನ್ಯ ನಾಡಿಗೆ ಆಗಂತುಕರಂತೆ ಹೋಗುವರು; ಆ ನಾಡಿಗರಿಗೆ ಗುಲಾಮರಾಗುವರು; ನಾನೂರು ವರ್ಷ ಅಲ್ಲಿಯವರ ಶೋಷಣೆಗೆ ಗುರಿಯಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆಗ ಯೆಹೋವನು ಅಬ್ರಾಮನಿಗೆ, “ನೀನು ಚೆನ್ನಾಗಿ ತಿಳಿಯತಕ್ಕದ್ದೇನೆಂದರೆ, ನಿನ್ನ ಸಂತತಿಯವರು ಅನ್ಯದೇಶದಲ್ಲಿ ಪ್ರವಾಸಿಯಾಗಿ ವಾಸವಾಗಿದ್ದು ಆ ದೇಶದವರಿಗೆ ದಾಸರಾಗುವರು. ನಾನೂರು ವರ್ಷ ಆ ದೇಶದವರಿಂದ ಬಾಧೆಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆಗ ಯೆಹೋವನು ಅವನಿಗೆ - ನೀನು ಚೆನ್ನಾಗಿ ತಿಳಿಯತಕ್ಕದ್ದೇನಂದರೆ - ನಿನ್ನ ಸಂತತಿಯವರು ಅನ್ಯದೇಶದಲ್ಲಿ ಕೆಲವು ಕಾಲವಾಸವಾಗಿದ್ದು ಆ ದೇಶದವರಿಗೆ ದಾಸರಾಗುವರು. ನಾನೂರು ವರುಷ ಆ ದೇಶದವರಿಂದ ಬಾಧೆಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆಗ ಯೆಹೋವನು ಅಬ್ರಾಮನಿಗೆ, “ನಿನಗೆ ಈ ವಿಷಯಗಳು ತಿಳಿದಿರಬೇಕು. ನಿನ್ನ ಸಂತತಿಯವರು ಪರದೇಶಿಯರಾಗಿ ತಮ್ಮದಲ್ಲದ ದೇಶದಲ್ಲಿ ವಾಸಮಾಡುವರು. ಅಲ್ಲಿನ ಜನರು ಅವರನ್ನು ಗುಲಾಮರನ್ನಾಗಿ ಮಾಡಿಕೊಳ್ಳುವರು. ಅಲ್ಲಿ ಅವರು ನಾನೂರು ವರ್ಷಗಳವರೆಗೆ ಬಾಧೆಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಯೆಹೋವ ದೇವರು ಅಬ್ರಾಮನಿಗೆ, “ನಿನ್ನ ಸಂತತಿಯವರು ತಮ್ಮದಲ್ಲದ ದೇಶದಲ್ಲಿ ಪ್ರವಾಸಿಗಳಾಗಿರುವರು, ಅವರು ಗುಲಾಮರಾಗಿ ನಾಲ್ಕುನೂರು ವರ್ಷಗಳವರೆಗೆ ದಬ್ಬಾಳಿಕೆಗೆ ಗುರಿಯಾಗುವರು ಎಂಬುದನ್ನು ನೀನು ಖಂಡಿತವಾಗಿಯೂ ತಿಳಿಯತಕ್ಕದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 15:13
26 ತಿಳಿವುಗಳ ಹೋಲಿಕೆ  

ಅದರಂತೆಯೇ ಅವನ ಜನರು ಇಸ್ರಯೇಲರಿಗೆ ಕಿರುಕುಳ ಕೊಡಲು ತೊಡಗಿದರು. ಪುಕ್ಕಟೆಯಾಗಿ ಕೆಲಸಮಾಡಿಸಿಕೊಂಡರು. ಬಿಟ್ಟೀ ಕೆಲಸ ಮಾಡಿಸುವ ಅಧಿಕಾರಿಗಳನ್ನು ನೇಮಿಸಿ ಫರೋಹನಿಗೆ ‘ಪಿತೋಮ್’ ಮತ್ತು ‘ರಾಮ್ಸೇಸ್’ ಎಂಬ ಉಗ್ರಾಣ ಪಟ್ಟಣಗಳನ್ನು ಕಟ್ಟಿಸಿದರು.


“ದೇವರು ಅಬ್ರಹಾಮನಿಗೆ ಮಾಡಿದ ವಾಗ್ದಾನವನ್ನು ನೆರವೇರಿಸುವ ಕಾಲವು ಸಮೀಪಿಸಿತು. ಈಗಾಗಲೇ ಈಜಿಪ್ಟ್ ದೇಶದಲ್ಲಿ ನಮ್ಮ ಜನರ ಸಂಖ್ಯೆ ಅಧಿಕವಾಗಿ ಬೆಳೆದಿತ್ತು.


ದೇವರು ಅಬ್ರಹಾಮನೊಂದಿಗೆ ಮಾಡಿಮುಗಿಸಿದ ಒಪ್ಪಂದವನ್ನು ನಾನೂರ ಮೂವತ್ತು ವರ್ಷಗಳಾದ ಮೇಲೆ ಬಂದ ಧರ್ಮಶಾಸ್ತ್ರದಿಂದ ರದ್ದುಪಡಿಸಲಾಗದು; ಆ ವಾಗ್ದಾನವನ್ನು ವ್ಯರ್ಥಪಡಿಸಲಾಗದು.


ಅವರು ನಿಮಗೆ ಸ್ವಂತನಾಡಿನವರಂತೆಯೇ ಇರಬೇಕು. ಅವರನ್ನು ನಿಮ್ಮಂತೆಯೇ ಪ್ರೀತಿಸಬೇಕು. ಈಜಿಪ್ಟಿನಲ್ಲಿದ್ದಾಗ ನೀವು ಕೂಡ ಅನ್ಯರಾಗಿದ್ದಿರಲ್ಲವೆ? ನಾನು ನಿಮ್ಮ ದೇವರಾದ ಸರ್ವೇಶ್ವರ.


ನೀನು ಪ್ರವಾಸವಾಗಿರುವ ಈ ಕಾನಾನ್ ನಾಡೆಲ್ಲವನ್ನು ನಿನಗೂ ನಿನ್ನ ಸಂತಾನಕ್ಕೂ ಶಾಶ್ವತವಾದ ಸೊತ್ತಾಗಿ ಕೊಡುತ್ತೇನೆ. ನಾನು ನಿಮ್ಮ ಕುಲದೇವರಾಗಿರುತ್ತೇನೆ.”


ಈಜಿಪ್ಟ್ ದೇಶದಲ್ಲಿ ನೀವೇ ಪರದೇಶಿಗಳಾಗಿ ಇದ್ದುದನ್ನು ಜ್ಞಾಪಿಸಿಕೊಂಡು ಪರದೇಶದವರಲ್ಲಿ ಪ್ರೀತಿಯಿಡಿ.


“ಪರದೇಶೀಯರನ್ನು ಪೀಡಿಸಬಾರದು. ನೀವು ಕೂಡ ಈಜಿಪ್ಟಿನಲ್ಲಿ ಪರದೇಶೀಯರಾಗಿದ್ದಿರಲ್ಲವೆ? ಅಂಥವರ ಮನೋವ್ಯಥೆ ನಿಮಗೆ ಗೊತ್ತೇ ಇದೆ.


“ಪರದೇಶೀಯನಿಗೆ ಅನ್ಯಾಯ ಮಾಡಬಾರದು, ಅವನನ್ನು ಪೀಡಿಸಬಾರದು. ನೀವು ಕೂಡ ಈಜಿಪ್ಟಿನಲ್ಲಿ ಪರದೇಶೀಯರಾಗಿದ್ದೀರಲ್ಲವೆ?


ನಿನ್ನ ಸಂತತಿಯವರು ನಾಲ್ಕನೆಯ ತಲಾಂತರವಾದ ಮೇಲೆ ಇಲ್ಲಿಗೆ ಮರಳಿ ಬರುವರು. ಏಕೆಂದರೆ ಅಮೋರಿಯರ ಪಾಪಕ್ರಮ ಇನ್ನೂ ಮಾಗಿಲ್ಲ,” ಎಂದರು.


ಕಾನಾನ್ ನಾಡಿನಲ್ಲಿ ಬರವು ಘೋರವಾದ್ದರಿಂದ ನಿಮ್ಮ ಸೇವಕರ ದನಕುರಿಗಳಿಗೆ ಮೇವು ಸಿಕ್ಕಲಿಲ್ಲ. ಆದ್ದರಿಂದ ಈ ದೇಶದಲ್ಲಿ ಸ್ವಲ್ಪಕಾಲ ಇರಬೇಕೆಂದು ಬಂದಿದ್ದೇವೆ. ಸೇವಕರು ಗೋಷೆನ್ ಪ್ರಾಂತ್ಯದಲ್ಲಿ ವಾಸಮಾಡುವಂತೆ ಅಪ್ಪಣೆಯಾಗಬೇಕು,” ಎಂದು ವಿನಂತಿಸಿದರು.


ಆದ್ದರಿಂದ ಇಸ್ರಯೇಲರ ಬಗ್ಗೆ ಈಜಿಪ್ಟರು ಸಹಿಸಲಾರದಷ್ಟು ಹೆದರಿಕೆ ಉಳ್ಳವರಾದರು. ಇಸ್ರಯೇಲರಿಂದ ಕ್ರೂರತನದಿಂದ ಸೇವೆಮಾಡಿಸಿಕೊಂಡರು.


ದೇವರು ಆ ಜನರ ನರಳಾಟವನ್ನು ಕೇಳಿ ತಾವು ಅಬ್ರಹಾಮ, ಇಸಾಕ, ಯಕೋಬರಿಗೆ ಮಾಡಿದ್ದ ವಾಗ್ದಾನವನ್ನು ನೆನಪಿಗೆ ತಂದುಕೊಂಡರು.


ಆದಕಾರಣ ಅವರನ್ನು ಈಜಿಪ್ಟಿನವರ ಕೈಯಿಂದ ಬಿಡಿಸುವುದಕ್ಕು ಮತ್ತು ಆ ದೇಶದಿಂದ ಹೊರತಂದು ಹಾಲೂ ಜೇನೂ ಹರಿಯುವ ಸವಿಸ್ತಾರವಾದ ಒಳ್ಳೆಯ ನಾಡಿಗೆ, ಅಂದರೆ ಕಾನಾನ್ಯರು, ಹಿತ್ತಿಯರು, ಆಮೋರಿಯರು, ಪೆರಿಜೀಯರು, ಹಿವ್ವಿಯರು ಹಾಗು ಯೆಬೂಸಿಯರು ವಾಸವಾಗಿರುವ ನಾಡಿಗೆ ನಡೆಸಿಕೊಂಡು ಹೋಗುವುದಕ್ಕು ಇಳಿದು ಬಂದಿದ್ದೇನೆ.


ಆದ್ದರಿಂದ ಹೋಗು; ನನ್ನ ಜನರಾಗಿರುವ ಇಸ್ರಯೇಲರನ್ನು ಈಜಿಪ್ಟ್ ದೇಶದಿಂದ ಹೊರತರುವುದಕ್ಕಾಗಿ ನಿನ್ನನ್ನು ಫರೋಹನ ಬಳಿಗೆ ಕಳಿಸುತ್ತಿದ್ದೇನೆ,” ಎಂದರು.


ಈಜಿಪ್ಟಿನಲ್ಲಿ ನಿಮಗುಂಟಾಗಿ ಇರುವ ಸಂಕಷ್ಟಗಳಿಂದ ನಿಮ್ಮನ್ನು ಪಾರುಮಾಡಿ ಹಾಲೂ ಜೇನೂ ಹರಿಯುವ ನಾಡಿಗೆ, ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು ಹಾಗು ಯೆಬೂಸಿಯರು ವಾಸವಾಗಿರುವ ನಾಡಿಗೆ ಬರಮಾಡಬೇಕೆಂದು ತೀರ್ಮಾನಿಸಿದ್ದೇನೆ’ ಎಂದು ತಿಳಿಸು.


ಈಜಿಪ್ಟ್ ದೇಶದಲ್ಲಿ ನೀವೂ ಗುಲಾಮತನದಲ್ಲಿದ್ದುದನ್ನೂ ನಿಮ್ಮ ದೇವರಾದ ಸರ್ವೇಶ್ವರ ಭುಜಪರಾಕ್ರಮದಿಂದ ಹಾಗು ಶಿಕ್ಷಾಹಸ್ತದಿಂದ ನಿಮ್ಮನ್ನು ಬಿಡುಗಡೆಮಾಡಿದ್ದನ್ನೂ ನೆನಪಿಗೆ ತಂದುಕೊಳ್ಳಿ. ನೀವು ವಿಶ್ರಾಂತಿ ದಿನವನ್ನು ಆಚರಿಸಬೇಕೆಂಬುದನ್ನು ನಿಮ್ಮ ದೇವರಾದ ಸರ್ವೇಶ್ವರ ಇದಕ್ಕಾಗಿಯೇ ಆಜ್ಞಾಪಿಸಿದ್ದಾರೆ.


ಸ್ಮರಿಸಿಕೊಂಡನು ಪ್ರಭು ತನ್ನ ವಾಗ್ದಾನವನು I ತನ್ನ ದಾಸ ಅಬ್ರಹಾಮನಿಗೆ ಕೊಟ್ಟಾ ಮಾತನು II


ಮಣ್ಣು ಅಗೆಯುವ ಕೆಲಸದಲ್ಲೂ ಇಟ್ಟಿಗೆ ಸುಡುವ ಕೆಲಸದಲ್ಲೂ ವ್ಯವಸಾಯದ ಮತ್ತಿತರ ಕೆಲಸಕಾರ್ಯಗಳಲ್ಲೂ ಕಠಿಣವಾಗಿ ಅವರಿಂದ ದುಡಿಸಿಕೊಂಡರು. ಅವರು ಮಾಡಿಸಿಕೊಳ್ಳುತ್ತಿದ್ದ ಪ್ರತಿಯೊಂದು ಕೆಲಸವು ಜೀವನವೇ ಬೇಡವೆನ್ನುವಷ್ಟು ಕಠೋರವಾಗಿ ಇರುತ್ತಿತ್ತು.


ನಮ್ಮ ಪೂರ್ವಜರು ಈಜಿಪ್ಟ್ ದೇಶಕ್ಕೆ ಹೋದದ್ದು, ಅಲ್ಲಿ ನಾವು ಬಹು ದಿವಸ ವಾಸವಾಗಿದ್ದದ್ದು, ಈಜಿಪ್ಟಿನವರು ನಮ್ಮನ್ನೂ ನಮ್ಮ ಪೂರ್ವಜರನ್ನೂ ಹಿಂಸಿಸಿದ್ದು, ಇವೆಲ್ಲಾ ತಿಳಿದ ವಿಷಯಗಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು