Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 15:14 - ಕನ್ನಡ ಸತ್ಯವೇದವು C.L. Bible (BSI)

14 ಆದರೆ ಅವರನ್ನು ಗುಲಾಮರನ್ನಾಗಿಸಿಕೊಳ್ಳುವ ರಾಷ್ಟ್ರವನ್ನು ನಾನು ದಂಡಿಸುವೆನು. ಬಳಿಕ ಬಿಡುಗಡೆ ಹೊಂದಿ ಅಧಿಕ ಆಸ್ತಿವಂತರಾಗಿ ಹಿಂತಿರುಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅವರನ್ನು ದಾಸರನ್ನಾಗಿ ಮಾಡಿಸಿಕೊಂಡ ಜನಾಂಗವನ್ನು ನಾನು ದಂಡಿಸಿದ ನಂತರ ಅವರು ಬಹಳ ಸಂಪತ್ತುಳ್ಳವರಾಗಿ ಆ ದೇಶದಿಂದ ಬಿಡುಗಡೆಯಾಗಿ ಹೊರಟು ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅವರಿಂದ ಬಿಟ್ಟೀಕೆಲಸ ಮಾಡಿಸಿಕೊಂಡ ಜನಾಂಗವನ್ನು ನಾನು ಶಿಕ್ಷಿಸಿದ ನಂತರ ಅವರು ಬಹಳ ಆಸ್ತಿವಂತರಾಗಿ ಆ ದೇಶದಿಂದ ಬಿಡುಗಡೆಯಾಗಿ ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆದರೆ ನಾನೂರು ವರ್ಷಗಳಾದ ಮೇಲೆ ಅವರ ಮೇಲೆ ದೊರೆತನ ಮಾಡಿದ ಆ ದೇಶವನ್ನು ನಾನು ದಂಡಿಸುವೆನು; ನಿನ್ನ ಜನರು ಆ ದೇಶವನ್ನು ಬಿಟ್ಟು ಹೊರಡುವರು. ನಿನ್ನ ಜನರು ಅದನ್ನು ಬಿಡುವಾಗ ತಮ್ಮೊಡನೆ ಸಂಪತ್ತುಗಳನ್ನು ತೆಗೆದುಕೊಂಡು ಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆದರೆ ಅವರು ಗುಲಾಮರಾಗಿ ಸೇವೆ ಸಲ್ಲಿಸುತ್ತಿದ್ದ ದೇಶಕ್ಕೆ ನಾನು ನ್ಯಾಯತೀರಿಸುವೆನು. ತರುವಾಯ ಮಹಾ ಸಂಪತ್ತಿನೊಂದಿಗೆ ಅವರು ಹೊರಗೆ ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 15:14
24 ತಿಳಿವುಗಳ ಹೋಲಿಕೆ  

ಈಜಿಪ್ಟಿಗೆ ಬಂದ ಯಕೋಬನ ವಂಶದವರಾದ ನಮ್ಮ ಹಿರಿಯರು ಸರ್ವೇಶ್ವರನಿಗೆ ಮೊರೆಯಿಟ್ಟಾಗ, ಅವರು ಮೋಶೆ ಹಾಗು ಆರೋನರ ಮುಖಾಂತರ ಅವರನ್ನು ಈಜಿಪ್ಟಿನಿಂದ ಬಿಡಿಸಿ ತಂದು ಈ ನಾಡಿನಲ್ಲಿ ನೆಲೆಗೊಳಿಸಿದರು.


ದೊರಕಿಸುವನು ಪ್ರಭು ನ್ಯಾಯವನು ತನ್ನ ಪ್ರಜೆಗೆ I ತೋರುವನು ಅನುಕಂಪವನು ತನ್ನ ಭಕ್ತಾದಿಗಳಿಗೆ II


ನಾವು ದಾಸತ್ವದಲ್ಲಿದ್ದ ಈಜಿಪ್ಟಿನಿಂದ ನಮ್ಮನ್ನೂ ನಮ್ಮ ಪೂರ್ವಜರನ್ನೂ ಹೊರತಂದವರು ನಮ್ಮ ದೇವರಾದ ಸರ್ವೇಶ್ವರಸ್ವಾಮಿಯೇ. ನಮ್ಮೆದುರಿನಲ್ಲೇ ಅವರು ಮಾಡಿದ ಅದ್ಭುತಕಾರ್ಯಗಳನ್ನು ನೋಡಿದ್ದೇವೆ. ನಮ್ಮ ಎಲ್ಲಾ ಪ್ರಯಾಣಗಳಲ್ಲೂ ನಾವು ದಾಟಿಬಂದ ಜನಾಂಗಗಳಿಂದ ನಮ್ಮನ್ನು ಕಾಪಾಡಿದವರು ಅವರೇ.


ಭಯಂಕರ ಆದ ಮಹತ್ಕಾರ್ಯಗಳಿಂದ ಮತ್ತು ಸೂಚಕಕಾರ್ಯಗಳಿಂದ ಈಜಿಪ್ಟಿನವರನ್ನೂ ಫರೋಹನನ್ನೂ ಅವನ ಮನೆಯವರನ್ನೂ ನಮ್ಮ ಕಣ್ಣೆದುರಿನಲ್ಲೇ ಶಿಕ್ಷಿಸಿದರು.


ಆದರೆ ನಿಮ್ಮನ್ನು ತಮ್ಮ ಸ್ವಕೀಯ ಜನರನ್ನಾಗಿಸಿಕೊಳ್ಳಲು ಸಂಕಲ್ಪಿಸಿ ಕಬ್ಬಿಣ ಕರಗಿಸುವ ಕುಲುಮೆಯಂತಿದ್ದ ಆ ಈಜಿಪ್ಟ್ ದೇಶದಿಂದ ನಿಮ್ಮನ್ನು ಕರೆದುತಂದು ಇದ್ದಾರೆ ಆ ಸರ್ವೇಶ್ವರ. ಅಂತೆಯೇ ನೀವು ಇಂದಿಗೂ ಅವರ ಸ್ವಂತ ಜನರಾಗಿದ್ದೀರಿ.


ಓ ಈಜಿಪ್ಟೆ, ನಿನ್ನೊಳು ಮಾಡಿದನು ಅದ್ಭುತ ಪವಾಡಗಳನು I ಫರೋಹನ ಮೇಣ್ ಅವನ ಸೇವಕರ ವಿರುದ್ಧ ಗೈದನವುಗಳನು II


ಹೌದು ದೇವಾ, ನಿನಗೆ ದ್ರೋಹವೆಸಗಿದೆ I ನಿನ್ನ ಕಣ್ಗೆ ಕೆಟ್ಟದುದನೆ ಮಾಡಿದೆ II ನಿನ್ನ ನಿರ್ಣಯವು ನ್ಯಾಯಯುತ I ನೀ ನೀಡುವ ತೀರ್ಪು ನಿರ್ಲಿಪ್ತ II


ಆದ್ದರಿಂದ ಹೋಗು; ನನ್ನ ಜನರಾಗಿರುವ ಇಸ್ರಯೇಲರನ್ನು ಈಜಿಪ್ಟ್ ದೇಶದಿಂದ ಹೊರತರುವುದಕ್ಕಾಗಿ ನಿನ್ನನ್ನು ಫರೋಹನ ಬಳಿಗೆ ಕಳಿಸುತ್ತಿದ್ದೇನೆ,” ಎಂದರು.


ಸ್ಮರಿಸಿಕೊಂಡನು ಪ್ರಭು ತನ್ನ ವಾಗ್ದಾನವನು I ತನ್ನ ದಾಸ ಅಬ್ರಹಾಮನಿಗೆ ಕೊಟ್ಟಾ ಮಾತನು II


ಬಳಿಕ ಯಕೋಬನು ಜೋಸೆಫನಿಗೆ, “ನನಗೆ ಮರಣ ಸಮೀಪಿಸಿದೆ; ಆದರೆ ದೇವರು ನಿಮ್ಮೊಂದಿಗಿದ್ದು ನಿಮ್ಮನ್ನು ಪಿತೃಗಳ ನಾಡಿಗೆ ಮರಳಿ ಬರಮಾಡುವರು.


ಜೋಸೆಫನು ತನ್ನ ಅಣ್ಣತಮ್ಮಂದಿರಿಗೆ, “ನನ್ನ ಮರಣಕಾಲವು ಸಮೀಪಿಸಿತು. ಆದರೆ ದೇವರು ನಿಶ್ಚಯವಾಗಿ ನಿಮ್ಮನ್ನು ಕಾಪಾಡಲು ಬರುವರು; ತಾವು ಅಬ್ರಹಾಮ್, ಇಸಾಕ್, ಯಕೋಬರಿಗೆ ಕೊಡುವುದಾಗಿ ವಾಗ್ದಾನಮಾಡಿರುವ ನಾಡಿಗೆ ನೀವು ಹೋಗಿ ಸೇರುವಂತೆ ಮಾಡುವರು,” ಎಂದು ಹೇಳಿದನು.


ಅರ್ಧರಾತ್ರಿಯಲ್ಲಿ ಸರ್ವೇಶ್ವರ ಸ್ವಾಮಿ ಸಿಂಹಾಸನಾರೂಢನಾಗಬೇಕಾಗಿದ್ದ ಫರೋಹನ ಚೊಚ್ಚಲು ಮಗನು ಮೊದಲ್ಗೊಂಡು ಸೆರೆಯಲ್ಲಿದ್ದ ಖೈದಿಯ ಚೊಚ್ಚಲ ಮಗನವರೆಗೂ ಈಜಿಪ್ಟ್ ದೇಶದಲ್ಲಿದ್ದ ಎಲ್ಲ ಚೊಚ್ಚಲು ಮಕ್ಕಳನ್ನೂ ಪ್ರಾಣಿಗಳ ಚೊಚ್ಚಲ ಮರಿಗಳನ್ನೂ ಸಂಹಾರ ಮಾಡಿದರು.


ಅವರಿಂದ ಗುಲಾಮಗಿರಿಯನ್ನು ಪಡೆಯುವ ಜನಾಂಗಕ್ಕೆ ನಾನು ದಂಡನೆ ವಿಧಿಸುವೆನು. ಅನಂತರ ಅವರು ಅಲ್ಲಿಂದ ಹೊರಬಂದು ನನ್ನನ್ನು ಈ ಸ್ಥಳದಲ್ಲೇ ಆರಾಧಿಸುವರು,’ ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು