Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 15:16 - ಕನ್ನಡ ಸತ್ಯವೇದವು C.L. Bible (BSI)

16 ನಿನ್ನ ಸಂತತಿಯವರು ನಾಲ್ಕನೆಯ ತಲಾಂತರವಾದ ಮೇಲೆ ಇಲ್ಲಿಗೆ ಮರಳಿ ಬರುವರು. ಏಕೆಂದರೆ ಅಮೋರಿಯರ ಪಾಪಕ್ರಮ ಇನ್ನೂ ಮಾಗಿಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನಿನ್ನ ಸಂತತಿಯ ನಾಲ್ಕನೆಯ ತಲೆಮಾರಿನವರು ಇಲ್ಲಿಗೆ ತಿರುಗಿ ಬರುವರು, ಅಮೋರಿಯರ ಅಪರಾಧವು ಇನ್ನೂ ಪೂರ್ಣಸ್ಥಿತಿಗೆ ಬರಲಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನಿನ್ನ ಸಂತತಿಯವರು ನಾಲ್ಕನೆಯ ತಲಾಂತರದಲ್ಲಿ ಇಲ್ಲಿಗೆ ತಿರಿಗಿಬರುವರು; ಅಮೋರಿಯರ ಅಪರಾಧವು ಇನ್ನೂ ಪೂರ್ಣಸ್ಥಿತಿಗೆ ಬರಲಿಲ್ಲ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನಾಲ್ಕು ತಲೆಮಾರುಗಳ ನಂತರ ನಿನ್ನ ಜನರು ಈ ನಾಡಿಗೆ ಹಿಂತಿರುಗುವರು. ಆ ಕಾಲದಲ್ಲಿ ನಿನ್ನ ಜನರು ಅಮೋರಿಯರನ್ನು ಸೋಲಿಸುವರು. ಇಲ್ಲಿ ವಾಸಿಸುತ್ತಿರುವ ಅಮೋರಿಯರನ್ನು ನಿನ್ನ ಜನರ ಮೂಲಕ ನಾನೇ ಶಿಕ್ಷಿಸುವೆನು. ಇದು ಮುಂದೆ ನಡೆಯುವ ಸಂಗತಿ. ಯಾಕೆಂದರೆ ಆ ಸಮಯದಲ್ಲಿ ಅಮೋರಿಯರು ಅಂಥ ಶಿಕ್ಷೆ ಅನುಭವಿಸುವಷ್ಟು ಕೆಟ್ಟವರಾಗಿರಲಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆಗ ನಾಲ್ಕನೆಯ ಸಂತಾನದವರು ಇಲ್ಲಿಗೆ ತಿರುಗಿ ಬರುವರು. ಏಕೆಂದರೆ ಅಮೋರಿಯರ ಅಪರಾಧವು ಇನ್ನೂ ಪೂರ್ಣಸ್ಥಿತಿಗೆ ಬರಲಿಲ್ಲ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 15:16
18 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಇಸ್ರಯೇಲರ ನಾಡಿನಿಂದ ಓಡಿಸಿಬಿಟ್ಟ ಅಮೋರಿಯರಂತೆ ವಿಗ್ರಹಗಳನ್ನು ಪೂಜಿಸಿದ ಅಹಾಬನ ನಡತೆ ಬಹಳ ಅಸಹ್ಯವಾಗಿತ್ತು.


ಆ ರಾಜ್ಯಗಳ ಕಡೆಯಕಾಲ ಬಂದಾಗ, ಅಧರ್ಮಿಗಳ ಅಪರಾಧ ಭರ್ತಿಯಾದಾಗ, ಕ್ರೂರ ಮುಖನೂ ಕುತಂತ್ರ ವಚನ ನಿಪುಣನೂ ಆದ ಒಬ್ಬ ರಾಜನು ತಲೆದೋರುವನು.


ಯೆಹೂದ್ಯರಲ್ಲದ ಜನರಿಗೆ ಜೀವೋದ್ಧಾರವನ್ನು ತರುವ ಶುಭಸಂದೇಶವನ್ನು ನಾವು ಸಾರದಂತೆ ಅವರು ನಮ್ಮನ್ನು ತಡೆಗಟ್ಟುತ್ತಾರೆ. ಹೀಗೆ, ಅವರು ತಮ್ಮ ಪಾಪಕೃತ್ಯಗಳ ಪಟ್ಟಿಯನ್ನು ಸದಾ ಭರ್ತಿಮಾಡುತ್ತಾರೆ. ಕಡೆಗೆ, ದೇವರ ಕೋಪಾಗ್ನಿಯು ಅವರ ಮೇಲೆ ಬರುತ್ತದೆ.


ಇಸ್ರಯೇಲರು ಈಜಿಪ್ಟ್ ದೇಶದಲ್ಲಿ ನಾನೂರಮೂವತ್ತು ವರ್ಷಗಳ ಕಾಲ ವಾಸವಾಗಿದ್ದರು.


ಆಗ ಅಬ್ರಾಮನಿಗೆ ಸರ್ವೇಶ್ವರ, “ಇದನ್ನು ನೀನು ಸ್ಪಷ್ಟವಾಗಿ ತಿಳಿದುಕೊಳ್ಳಬೇಕು: ನಿನ್ನ ಸಂತತಿಯವರು ಅನ್ಯ ನಾಡಿಗೆ ಆಗಂತುಕರಂತೆ ಹೋಗುವರು; ಆ ನಾಡಿಗರಿಗೆ ಗುಲಾಮರಾಗುವರು; ನಾನೂರು ವರ್ಷ ಅಲ್ಲಿಯವರ ಶೋಷಣೆಗೆ ಗುರಿಯಾಗುವರು.


“ಇಂಥ ದುರಾಚಾರಗಳಾವುದರಿಂದಲೂ ನೀವು ಅಶುದ್ಧರಾಗಬಾರದು. ಏಕೆಂದರೆ ನಾನು ನಿಮಗೆ ಮುಂಚಿತವಾಗಿ ಹೊರಡಿಸುವ ಜನಾಂಗಗಳವರು ಇಂಥ ಅನಾಚಾರಗಳಿಂದಲೇ ಅಶುದ್ಧರಾದರು.


“ಯೆಹೂದ್ಯರ ಅರಸನಾದ ಮನಸ್ಸೆಯು, ಹಿಂದೆ ಇದ್ದ ಅಮೋರಿಯರ ಕೃತ್ಯಗಳಿಗಿಂತ ಅಸಹ್ಯವಾದ ಕೃತ್ಯಗಳನ್ನು ನಡೆಸಿದ್ದಾನೆ. ವಿಗ್ರಹಗಳಿಂದ ಯೆಹೂದ್ಯರನ್ನು ಪಾಪಕ್ಕೆ ಪ್ರೇರಿಸಿದ್ದಾನೆ;


ಇದಲ್ಲದೆ ಯೆಬೂಸಿಯರೂ ಅಮೋರಿಯರೂ ಗಿರ್ಗಾಷಿಯರೂ


ಬಳಿಕ ಯಕೋಬನು ಜೋಸೆಫನಿಗೆ, “ನನಗೆ ಮರಣ ಸಮೀಪಿಸಿದೆ; ಆದರೆ ದೇವರು ನಿಮ್ಮೊಂದಿಗಿದ್ದು ನಿಮ್ಮನ್ನು ಪಿತೃಗಳ ನಾಡಿಗೆ ಮರಳಿ ಬರಮಾಡುವರು.


ಜೋಸೆಫನು ತನ್ನ ಅಣ್ಣತಮ್ಮಂದಿರಿಗೆ, “ನನ್ನ ಮರಣಕಾಲವು ಸಮೀಪಿಸಿತು. ಆದರೆ ದೇವರು ನಿಶ್ಚಯವಾಗಿ ನಿಮ್ಮನ್ನು ಕಾಪಾಡಲು ಬರುವರು; ತಾವು ಅಬ್ರಹಾಮ್, ಇಸಾಕ್, ಯಕೋಬರಿಗೆ ಕೊಡುವುದಾಗಿ ವಾಗ್ದಾನಮಾಡಿರುವ ನಾಡಿಗೆ ನೀವು ಹೋಗಿ ಸೇರುವಂತೆ ಮಾಡುವರು,” ಎಂದು ಹೇಳಿದನು.


ಮೋಶೆ ಇಸ್ರಯೇಲರಿಗೆ, “ಗುಲಾಮತನದಲ್ಲಿದ್ದು ಈಜಿಪ್ಟ್ ದೇಶದಿಂದ ಬಿಡುಗಡೆಯಾದ ಈ ದಿನವನ್ನು ನೀವು ಸ್ಮರಿಸಬೇಕು. ಈ ದಿನದಲ್ಲೇ ಸರ್ವೇಶ್ವರ ಸ್ವಾಮಿ ತಮ್ಮ ಭುಜಬಲ ಪ್ರಯೋಗಿಸಿ ನಿಮ್ಮನ್ನು ಅಲ್ಲಿಂದ ವಿಮೋಚಿಸಿದರು. ಈ ದಿನದಂದು ನೀವು ಹುಳಿಬೆರತದ್ದನ್ನು ತಿನ್ನಕೂಡದು.


ಚೈತ್ರಮಾಸದ ಈ ದಿನದಂದು ನೀವು ಹೊರಟವರು.


“ನಿಮ್ಮ ದೇವರಾದ ಸರ್ವೇಶ್ವರ ಅವರನ್ನು ನಿಮ್ಮ ಬಳಿಯಿಂದ ಹೊರಡಿಸಿದನಂತರ ನೀವು ಮನಸ್ಸಿನಲ್ಲೇ, ‘ಸರ್ವೇಶ್ವರ ನಮ್ಮನ್ನು ಈ ನಾಡಿಗೆ ಕರೆತಂದು ಅದನ್ನು ನಮಗೆ ಸ್ವಾಧೀನಪಡಿಸಿದ್ದು ನಮ್ಮ ಪುಣ್ಯಫಲವೇ’ ಎಂದುಕೊಳ್ಳಬಾರದು. ಆ ಜನಾಂಗಗಳ ದುರ್ನಡತೆಯ ಕಾರಣದಿಂದಲೇ ಸರ್ವೇಶ್ವರ ನಿಮ್ಮ ಬಳಿಯಿಂದ ಅವರನ್ನು ಹೊರದಬ್ಬುತ್ತಾರೆ.


ನೀವು ಅವರ ನಾಡಿಗೆ ಬಂದು ಅದನ್ನು ಸ್ವಾಧೀನಮಾಡಿಕೊಳ್ಳುವುದಕ್ಕೆ ನಿಮ್ಮ ಪುಣ್ಯವೇ ಆಗಲಿ, ನಿಮ್ಮ ಸುಸ್ವಭಾವವೇ ಆಗಲಿ, ಕಾರಣವಲ್ಲ. ಆ ಜನಾಂಗಗಳ ದುರ್ನಡತೆಯ ಕಾರಣ ಹಾಗು ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಪಿತೃಗಳಾದ ಅಬ್ರಹಾಮ್, ಇಸಾಕ್, ಯಕೋಬರಿಗೆ ಪ್ರಮಾಣಪೂರ್ವಕವಾಗಿ ಮಾಡಿದ ವಾಗ್ದಾನವನ್ನು ನೆರವೇರಿಸಬೇಕೆಂಬ ಕಾರಣ ಅವರನ್ನು ನಿಮ್ಮ ಬಳಿಯಿಂದ ಹೊರಡಿಸಿಬಿಡುತ್ತಾರೆ.


ಹೊರತಂದನು ತನ್ನ ಪ್ರಜೆಯನು ಉಲ್ಲಾಸದಿಂದ I ತಾನಾರಿಸಿಕೊಂಡವರನು ಹರ್ಷೋದ್ಗಾರದಿಂದ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು