ಆದಿಕಾಂಡ 15:18 - ಕನ್ನಡ ಸತ್ಯವೇದವು C.L. Bible (BSI)18 ಸರ್ವೇಶ್ವರ ಅಂದೇ ಅಬ್ರಾಮನ ಸಂಗಡ ಒಂದು ಒಡಂಬಡಿಕೆಯನ್ನು ಮಾಡಿಕೊಂಡರು: ”ಈಜಿಪ್ಟಿನ ನದಿಯಿಂದ ಯೂಫ್ರೆಟಿಸ್ ಮಹಾನದಿಯವರೆಗೆ, ಕೊಡುವೆನು ಈ ನಾಡೆಲ್ಲವನ್ನು ನಿನ್ನ ಸಂತತಿಯವರಿಗೆ,” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಆ ದಿನದಲ್ಲಿ ಯೆಹೋವನು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು, “ಐಗುಪ್ತ ದೇಶದ ನದಿಯಿಂದ ಯೂಫ್ರೆಟಿಸ್ ಮಹಾ ನದಿಯವರೆಗೂ ಇರುವ ಈ ದೇಶವನ್ನೆಲ್ಲಾ ನಿನ್ನ ಸಂತತಿಯವರಿಗೆ ಕೊಟ್ಟಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಆ ದಿನದಲ್ಲಿ ಯೆಹೋವನು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು - ಐಗುಪ್ತದೇಶದ ನದಿಯಿಂದ ಯೂಫ್ರೇಟೀಸ್ ಮಹಾನದಿಯವರೆಗೂ ಈ ದೇಶವನ್ನೆಲ್ಲಾ ನಿನ್ನ ಸಂತತಿಯವರಿಗೆ ಕೊಟ್ಟಿದ್ದೇನೆ ಅಂದನು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಆದ್ದರಿಂದ ಅಂದು ಯೆಹೋವನು ಒಂದು ವಾಗ್ದಾನವನ್ನು ಮಾಡಿ ಅಬ್ರಾಮನೊಡನೆ ಒಂದು ಒಡಂಬಡಿಕೆಯನ್ನು ಮಾಡಿಕೊಂಡನು. ಯೆಹೋವನು ಅವನಿಗೆ, “ನಾನು ನಿನ್ನ ಸಂತತಿಯವರಿಗೆ ಈ ನಾಡನ್ನು ಕೊಡುವೆನು. ನಾನು ಅವರಿಗೆ ಈಜಿಪ್ಟ್ ನದಿಯಿಂದ ಯೂಫ್ರೇಟೀಸ್ ಮಹಾನದಿಯವರೆಗೂ ಇರುವ ನಾಡನ್ನು ಕೊಡುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಅದೇ ದಿನದಲ್ಲಿ ಯೆಹೋವ ದೇವರು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು, “ಈಜಿಪ್ಟ್ ದೇಶದ ನದಿಯಿಂದ ಮಹಾನದಿ ಯೂಫ್ರೇಟೀಸ್ ನದಿಯವರೆಗೆ ವಾಸಿಸುವ ಅಧ್ಯಾಯವನ್ನು ನೋಡಿ |
ತಮ್ಮ ದಾಸರಾದ ಅಬ್ರಹಾಮ್, ಇಸಾಕ್ ಹಾಗು ಯಕೋಬರನ್ನು ನೆನಪಿಗೆ ತಂದುಕೊಳ್ಳಿ. ತಾವು ತಮ್ಮ ಜೀವದಾಣೆ ಪ್ರಮಾಣ ಮಾಡಿ ಅವರಿಗೆ, ‘ನಾನು ನಿಮ್ಮ ಸಂತತಿಯನ್ನು ಹೆಚ್ಚಿಸಿ ಆಕಾಶದ ನಕ್ಷತ್ರಗಳಷ್ಟು ಅಸಂಖ್ಯವಾಗಿ ಮಾಡುವೆನು; ನಾನು ಸೂಚಿಸಿರುವ ಈ ಪ್ರದೇಶಗಳನ್ನೆಲ್ಲಾ ನಿಮ್ಮ ಸಂತತಿಯವರಿಗೆ ಕೊಡುವೆನು; ಮತ್ತು ಅವರು ಈ ನಾಡನ್ನು ಶಾಶ್ವತವಾಗಿ ಸ್ವಾಧೀನದಲ್ಲಿಟ್ಟುಕೊಳ್ಳುವರು’ ಎಂದು ತಾವು ಮಾತುಕೊಡಲಿಲ್ಲವೆ?” ಎಂದನು.
“ನಾನು ಈಗ ನಿಮಗೆ ಬೋಧಿಸುವ ಈ ಇಡೀ ಧರ್ಮೋಪದೇಶವನ್ನು ನೀವು ಅನುಸರಿಸಬೇಕು. ನಿಮ್ಮ ದೇವರಾದ ಸರ್ವೇಶ್ವರನನ್ನು ಪ್ರೀತಿಸಿ ಅವರು ಹೇಳುವ ಮಾರ್ಗದಲ್ಲೇ ಯಾವಾಗಲು ನಡೆಯಬೇಕು. ಆಗ ಅವರು ನಿಮ್ಮ ಪಿತೃಗಳಿಗೆ ವಾಗ್ದಾನಮಾಡಿದಂತೆ ನಿಮ್ಮ ರಾಜ್ಯವನ್ನು ವಿಸ್ತರಿಸಿ, ನಿಮ್ಮ ಪಿತೃಗಳಿಗೆ ಸೂಚಿಸಿದ ಪ್ರದೇಶವನ್ನೆಲ್ಲಾ ಕೊಡುವರು. ಆಗ ಈ ಮೂರು ನಗರಗಳಲ್ಲದೆ ಇನ್ನೂ ಮೂರು ನಗರಗಳನ್ನು ಗೊತ್ತುಮಾಡಬೇಕು.