Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 15:21 - ಕನ್ನಡ ಸತ್ಯವೇದವು C.L. Bible (BSI)

21 ಆಮೋರಿಯರು, ಕಾನಾನ್ಯರು, ಗಿರ್ಗಾಷಿಯರು ಹಾಗು ಯೆಬೂಸಿಯರು ವಾಸವಾಗಿರುವ ಪ್ರಾಂತಗಳಿಂದ ಕೂಡಿರುವ ಈ ನಾಡನ್ನು ಕೊಡುವೆನು,” ಎಂದು ವಾಗ್ದಾನ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅಮೋರಿಯರೂ, ಕಾನಾನ್ಯರೂ, ಗಿರ್ಗಾಷಿಯರೂ, ಯೆಬೂಸಿಯರೂ ವಾಸವಾಗಿರುವ ದೇಶವನ್ನು ನಾನು ನಿನ್ನ ಸಂತತಿಗೆ ಕೊಟ್ಟಿದ್ದೇನೆ,” ಎಂದು ವಾಗ್ದಾನ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಕಾನಾನ್ಯರೂ ಗಿರ್ಗಾಷಿಯರೂ ಯೆಬೂಸಿಯರೂ ವಾಸವಾಗಿರುವ ದೇಶವನ್ನು ಕೊಡುವೆನೆಂದು ವಾಗ್ದಾನ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಅಮೋರಿಯರ, ಕಾನಾನ್ಯರ, ಗಿರ್ಗಾಷಿಯರ ಮತ್ತು ಯೆಬೂಸಿಯರ ನಾಡು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಅಮೋರಿಯರೂ ಕಾನಾನ್ಯರೂ ಗಿರ್ಗಾಷಿಯರೂ ಯೆಬೂಸಿಯರೂ ವಾಸವಾಗಿರುವ ದೇಶವನ್ನು ನಾನು ನಿನ್ನ ಸಂತತಿಗೆ ಕೊಟ್ಟಿದ್ದೇನೆ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 15:21
17 ತಿಳಿವುಗಳ ಹೋಲಿಕೆ  

ಯೇಸುಸ್ವಾಮಿ ಗಲಿಲೇಯ ಸರೋವರವನ್ನು ದಾಟಿ, ಆಚೆಯ ಕಡೆಯಿದ್ದ ಗದರೇನ ಎಂಬ ಪ್ರಾಂತ್ಯಕ್ಕೆ ಬಂದರು. ದೆವ್ವ ಹಿಡಿದಿದ್ದ ಇಬ್ಬರು ಸಮಾಧಿಯ ಗುಹೆಗಳಿಂದ ಹೊರಬಂದು ಅವರಿಗೆ ಎದುರಾದರು. ಅವರಿಬ್ಬರೂ ಮಹಾಕ್ರೂರಿಗಳು. ಈ ಕಾರಣ ಯಾರೂ ಆ ಮಾರ್ಗವಾಗಿ ಹೋಗಲಾಗುತ್ತಿರಲಿಲ್ಲ.


“ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ನಾಡಿಗೆ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಸೇರಿಸಿ, ಸಂಖ್ಯೆಯಲ್ಲೂ ಶಕ್ತಿಯಲ್ಲೂ ನಿಮ್ಮನ್ನು ಮೀರುವ ಜನಾಂಗಗಳನ್ನು ಅಲ್ಲಿಂದ ನಿಮ್ಮ ಮುಂದೆಯೆ ಹೊರಡಿಸುವರು.


ನಾನು ಈ ದಿನ ನಿಮಗೆ ಆಜ್ಞಾಪಿಸುವುದನ್ನು ನೀವು ಅನುಸರಿಸಿ ನಡೆಯಬೇಕು. ಇಗೋ, ನಾನು ಅಮೋರಿಯರನ್ನು, ಕಾನಾನ್ಯರನ್ನು, ಹಿತ್ತಿಯರನ್ನು, ಪೆರಿಜೀಯರನ್ನು, ಹಿವ್ವಿಯರನ್ನು ಹಾಗು ಯೆಬೂಸಿಯರನ್ನು ನಿಮ್ಮ ಮುಂದೆಯೇ ಹೊರಡಿಸಿಬಿಡುವೆನು.


ನಾನು ಒಬ್ಬ ದೂತನನ್ನು ನಿನಗೆ ಮುಂದಾಗಿ ಕಳಿಸಿ ಕಾನಾನ್ಯರನ್ನು, ಅಮೋರಿಯರನ್ನು, ಹಿತ್ತಿಯರನ್ನು, ಪೆರಿಜೀಯರನ್ನು, ಹಿವ್ವಿಯರನ್ನು, ಹಾಗು ಯೆಬೂಸಿಯರನ್ನು ಅಲ್ಲಿಂದ ಹೊರದೂಡುವೆನು.


ಅಬ್ರಾಮನ ದನಕಾಯುವವರಿಗೂ ಲೋಟನ ದನಕಾಯುವವರಿಗೂ ಜಗಳ ಬೇರೆ. ಇದೂ ಅಲ್ಲದೆ, ಆ ಕಾಲದಲ್ಲಿ ಕಾನಾನ್ಯರೂ ಪೆರಿಜೀಯರೂ ಅದೇ ನಾಡಿನಲ್ಲಿ ವಾಸವಾಗಿದ್ದರು.


ಹಿತ್ತಿಯರು, ಪೆರಿಜೀಯರು, ರೆಫಾಯರು,


ಅಬ್ರಾಮನ ಹೆಂಡತಿ ಸಾರಯಳಿಗೆ ಮಕ್ಕಳಿರಲಿಲ್ಲ. ಆಕೆಗೆ ಈಜಿಪ್ಟ್ ದೇಶದವಳಾದ ಹಾಗರಳೆಂಬ ಒಬ್ಬ ದಾಸಿ ಇದ್ದಳು.


ಆದಕಾರಣ ಅವರನ್ನು ಈಜಿಪ್ಟಿನವರ ಕೈಯಿಂದ ಬಿಡಿಸುವುದಕ್ಕು ಮತ್ತು ಆ ದೇಶದಿಂದ ಹೊರತಂದು ಹಾಲೂ ಜೇನೂ ಹರಿಯುವ ಸವಿಸ್ತಾರವಾದ ಒಳ್ಳೆಯ ನಾಡಿಗೆ, ಅಂದರೆ ಕಾನಾನ್ಯರು, ಹಿತ್ತಿಯರು, ಆಮೋರಿಯರು, ಪೆರಿಜೀಯರು, ಹಿವ್ವಿಯರು ಹಾಗು ಯೆಬೂಸಿಯರು ವಾಸವಾಗಿರುವ ನಾಡಿಗೆ ನಡೆಸಿಕೊಂಡು ಹೋಗುವುದಕ್ಕು ಇಳಿದು ಬಂದಿದ್ದೇನೆ.


ಈಜಿಪ್ಟಿನಲ್ಲಿ ನಿಮಗುಂಟಾಗಿ ಇರುವ ಸಂಕಷ್ಟಗಳಿಂದ ನಿಮ್ಮನ್ನು ಪಾರುಮಾಡಿ ಹಾಲೂ ಜೇನೂ ಹರಿಯುವ ನಾಡಿಗೆ, ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು ಹಾಗು ಯೆಬೂಸಿಯರು ವಾಸವಾಗಿರುವ ನಾಡಿಗೆ ಬರಮಾಡಬೇಕೆಂದು ತೀರ್ಮಾನಿಸಿದ್ದೇನೆ’ ಎಂದು ತಿಳಿಸು.


ದಕ್ಷಿಣ ಪ್ರಾಂತದಲ್ಲಿ ಅಮಾಲೇಕ್ಯರು, ಮಲೆನಾಡಿನಲ್ಲಿ ಹಿತ್ತಿಯರು ಯೆಬೂಸಿಯರು ಹಾಗು ಅಮೋರಿಯರು ಮತ್ತು ಸಮುದ್ರ ತೀರದಲ್ಲಿ ಹಾಗೂ ಜೋರ್ಡನ್ ನದಿಯ ಪರಿಸರದಲ್ಲಿ ಕಾನಾನ್ಯರು ವಾಸವಾಗಿದ್ದಾರೆ,” ಎಂದು ವರದಿ ಮಾಡಿದರು.


ಹೀಗೆ ಇಸ್ರಯೇಲರು ಅಮ್ಮೋನಿಯರ ನಾಡಿನಲ್ಲಿ ವಾಸಮಾಡುವಂತಾಯಿತು.


ಬಳಿಕ ಮೋಶೆ ಯಗ್ಜೇರನ್ನು ನೋಡಿ ಬರಲು ಗೂಢಚಾರರನ್ನು ಕಳಿಸಿದನು. ಇದಾದ ಬಳಿಕ ಇಸ್ರಯೇಲರು ಅದರ ಗ್ರಾಮಗಳನ್ನು ವಶಪಡಿಸಿಕೊಂಡು ಅಲ್ಲಿದ್ದ ಅಮೋರಿಯರನ್ನು ಹೊರಡಿಸಿಬಿಟ್ಟರು.


ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಅಪ್ಪಣೆಕೊಟ್ಟಂತೆ ಇವರನ್ನು ಅಂದರೆ, ಹಿತ್ತಿಯರು, ಅಮೋರಿಯರು, ಕಾನಾನ್ಯರು, ಪೆರಿಜ್ಜೀಯರು, ಹಿವ್ವಿಯರು, ಯೆಬೂಸಿಯರು ಇವರೆಲ್ಲರನ್ನೂ ವಿನಾಶ ಶಾಪಗ್ರಸ್ತರನ್ನಾಗಿ ಮಾಡಿಬಿಡಬೇಕು.


ಚೈತನ್ಯಸ್ವರೂಪನಾದ ದೇವರು ನಿಮ್ಮ ಮಧ್ಯೆ ಇದ್ದಾರೆಂದು ನಿಮಗೆ ಈಗ ತಿಳಿಯುವುದು. ಅದೇ ಕಾನಾನ್ಯರನ್ನು, ಹಿತ್ತಿಯರನ್ನು, ಹಿವ್ವಿಯರನ್ನು, ಪೆರಿಜೀಯರನ್ನು, ಗಿರ್ಗಾಷಿಯರನ್ನು, ಅಮೋರಿಯರನ್ನು ಹಾಗೂ ಯೆಬೂಸಿಯರನ್ನು ನಿಮ್ಮ ಮುಂದಿನಿಂದ ಓಡಿಸಿಬಿಡುವರೆಂದು ನಿಮಗೆ ಗೊತ್ತಾಗುವುದು.


ಯೆಬೂಸಿಯ, ಅಮೋರಿಯ, ಗಿರ್ಗಾಷಿಯ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು