Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 15:3 - ಕನ್ನಡ ಸತ್ಯವೇದವು C.L. Bible (BSI)

3 ನೀವು ನನಗೆ ಮಕ್ಕಳನ್ನು ಕೊಟ್ಟಿಲ್ಲ. ನನ್ನ ಮನೆದಾಸನೇ ನನಗೆ ಉತ್ತರಾಧಿಕಾರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಪುನಃ ಅಬ್ರಾಮನು ಹೇಳಿದ್ದೇನೆಂದರೆ, “ನೀನು ನನಗೆ ಸಂತಾನ ಕೊಡಲಿಲ್ಲವಾದ್ದರಿಂದ, ನೋಡು, ನನ್ನ ಮನೆಯಲ್ಲಿ ಹುಟ್ಟಿದವನೇ ನನಗೆ ಬಾಧ್ಯಸ್ಥನಾಗಬೇಕಾಯಿತು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ತಿರಿಗಿ ಅಬ್ರಾಮನು - ನೀನು ನನಗೆ ಸಂತಾನ ಕೊಡಲಿಲ್ಲವಾದ್ದರಿಂದ ನನ್ನ ಮನೆಯಲ್ಲಿ ಹುಟ್ಟಿದವನೇ ನನಗೆ ಬಾಧ್ಯಸ್ಥನಾಗಬೇಕಾಯಿತು ಎಂದು ಹೇಳಲು ಯೆಹೋವನು ಅವನ ಸಂಗಡ ಮಾತಾಡಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಮತ್ತೆ ಅಬ್ರಾಮನು, “ನೀನು ನನಗೆ ಮಗನನ್ನೇ ಕೊಟ್ಟಿಲ್ಲ. ಆದ್ದರಿಂದ ನನ್ನ ಮನೆಯಲ್ಲಿ ಹುಟ್ಟಿದ ಸೇವಕನೊಬ್ಬನು ನನಗಿರುವುದನ್ನೆಲ್ಲ ಪಡೆದುಕೊಳ್ಳುವನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅನಂತರ ಅಬ್ರಾಮನು, “ನೀವು ನನಗೆ ಸಂತಾನವನ್ನು ಕೊಡಲಿಲ್ಲ. ನನ್ನ ಮನೆಯಲ್ಲಿರುವ ದಾಸನೇ ಉತ್ತರಾಧಿಕಾರಿಯಾಗಿರುವನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 15:3
10 ತಿಳಿವುಗಳ ಹೋಲಿಕೆ  

ಅಬ್ರಾಮನು ತನ್ನ ತಮ್ಮನ ಮಗ ಸೆರೆಗೆ ಸಿಕ್ಕಿರುವುದನ್ನು ಕೇಳಿ ತನ್ನ ಮನೆಯಲ್ಲೇ ಹುಟ್ಟಿ ಬೆಳೆದು ಸುಶಿಕ್ಷಿತರಾದ 318 ಮಂದಿ ಆಳುಗಳನ್ನು ಯುದ್ಧಕ್ಕೆ ಸಿದ್ಧಮಾಡಿಕೊಂಡು ಹೊರಟನು. ಈ ನಾಲ್ಕು ಮಂದಿ ರಾಜರನ್ನು ದಾನೂರಿನವರೆಗೆ ಹಿಂದಟ್ಟಿದನು.


ಬಾಲ್ಯದಿಂದ ಕೋಮಲವಾಗಿ ಸಾಕಲಾದ ಸೇವಕನು, ಕೊನೆಗೆ ಕುಮಾರನಂತೆ ನಿನ್ನದೆಲ್ಲವನ್ನು ಕಿತ್ತುಕೊಂಡಾನು.


ಗಂಡು ಹೆಣ್ಣಾಳುಗಳನ್ನು ಕೊಂಡುಕೊಂಡೆ. ಇವರಿಗಾದ ಮಕ್ಕಳು ನನಗೆ ಹುಟ್ಟುಗುಲಾಮರಾದರು. ಇದಲ್ಲದೆ ಜೆರುಸಲೇಮಿನಲ್ಲಿ ಹಿಂದೆ ಇದ್ದವರೆಲ್ಲರಿಗಿಂತಲೂ ಹೆಚ್ಚು ದನಕುರಿಗಳು ನನಗಾದವು; ನಾನು ಧನವಂತನಾದೆ.


ಸರ್ವೇಶ್ವರಾ, ನೀವು ಸತ್ಯಸ್ವರೂಪಿ. ನಿಮ್ಮೊಡನೆ ವ್ಯಾಜ್ಯ ನನಗೆ ಅಸಾಧ್ಯ. ಆದರೂ ನಿಮ್ಮೊಡನೆ ಚರ್ಚಿಸಬೇಕೆಂದಿರುವೆ ಈ ನ್ಯಾಯ : ದುರುಳರ ಬಾಳು ಬೆಳಗುತ್ತಿರುವುದು ಏಕೆ? ದ್ರೋಹಿಗಳೆಲ್ಲರು ನೆಮ್ಮದಿಯಾಗಿರುವುದು ಏಕೆ?


ಯಾರಿಗೂ ಬೇಡವಾದವಳಾಗಿದ್ದ ಮದುವೆಯಾದ ಚಂಡಿ, ಧರ್ಮಪತ್ನಿಯ ಸ್ಥಾನವನ್ನು ಕಸಿದುಕೊಂಡ ದಾಸಿ.


ಕೋರಿದ್ದು ತಡವಾದರೆ ಮನಸ್ಸಿಗೆ ತುಡಿತ; ಕೈಗೂಡಿದ ಇಷ್ಟಾರ್ಥ ಜೀವವೃಕ್ಷ.


ನಿನ್ನ ಸಂತಾನದವರನ್ನು ಭೂಮಿಯ ಧೂಳಿನಷ್ಟು ಅಸಂಖ್ಯಾತರನ್ನಾಗಿ ಮಾಡುತ್ತೇನೆ. ಭೂಮಿಯ ಧೂಳನ್ನು ಲೆಕ್ಕಿಸಲು ಸಾಧ್ಯವಾದಲ್ಲಿ ನಿನ್ನ ಸಂತಾನದವರನ್ನು ಲೆಕ್ಕಿಸಲು ಸಾಧ್ಯವಾದೀತು.


ನಾನು ನಿನ್ನನ್ನು ದೊಡ್ಡ ಜನಾಂಗವಾಗಿ ಮಾಡುತ್ತೇನೆ. ನಿನ್ನನ್ನು ಆಶೀರ್ವದಿಸಿ ನಿನ್ನ ಹೆಸರಿಗೆ ಘನತೆಗೌರವವನ್ನು ತರುತ್ತೇನೆ. ನೀನೇ ಆದರ್ಶದ ಆಶೀರ್ವಾದವಾಗಿ ಬೆಳಗುವೆ.


ಅದಕ್ಕೆ ಪ್ರತ್ಯುತ್ತರವಾಗಿ ಅಬ್ರಾಮನು - “ಸ್ವಾಮಿ ಸರ್ವೇಶ್ವರಾ, ನನಗೇ ಏನು ಕೊಟ್ಟರೇನು? ನಾನು ಪುತ್ರಸಂತಾನವಿಲ್ಲದವನು. ನನ್ನ ಮನೆಮಾರುಗಳಿಗೆ ಉತ್ತರಾಧಿಕಾರಿ ದಮಸ್ಕದ ಎಲೀಯೆಜರನೇ ಹೊರತು ಮತ್ತಾರೂ ಇಲ್ಲ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು