Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 15:4 - ಕನ್ನಡ ಸತ್ಯವೇದವು C.L. Bible (BSI)

4 ಮತ್ತೆ ಸ್ವಾಮಿಯ ವಾಣಿ - “ಇಲ್ಲ, ಅವನು ಉತ್ತರಾಧಿಕಾರಿಯಾಗುವುದಿಲ್ಲ, ನಿನ್ನಿಂದ ಹುಟ್ಟಿದವನೇ ನಿನಗೆ ಉತ್ತರಾಧಿಕಾರಿ ಆಗುತ್ತಾನೆ” ಎಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯೆಹೋವನ ವಾಕ್ಯವು ಅವನ ಸಂಗಡ ಮಾತನಾಡಿ, “ಈ ಮನುಷ್ಯನು ನಿನಗೆ ಬಾಧ್ಯಸ್ಥನಾಗುವುದಿಲ್ಲ; ಆದರೆ ನಿನ್ನ ಹೊಟ್ಟೆಯಲ್ಲಿ ಹುಟ್ಟುವವನೇ ನಿನಗೆ ಬಾಧ್ಯಸ್ಥನಾಗುವನು” ಎಂದು ಹೇಳಿ ಅಬ್ರಾಮನನ್ನು ಹೊರಗೆ ಕರೆದುಕೊಂಡು ಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಇವನು ನಿನಗೆ ಬಾಧ್ಯಸ್ಥನಾಗುವದಿಲ್ಲ; ನಿನ್ನ ಹೊಟ್ಟೆಯಲ್ಲೇ ಹುಟ್ಟುವವನು ನಿನಗೆ ಬಾಧ್ಯಸ್ಥನಾಗುವನು ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆಗ ಯೆಹೋವನು ಅಬ್ರಾಮನಿಗೆ, “ನಿನ್ನ ಆಸ್ತಿಯನ್ನೆಲ್ಲ ಪಡೆದುಕೊಳ್ಳುವವನು ನಿನ್ನ ಸೇವಕನಲ್ಲ. ನೀನೇ ಮಗನನ್ನು ಪಡೆಯುವೆ; ನಿನ್ನ ಮಗನೇ ನಿನ್ನ ಆಸ್ತಿಯನ್ನೆಲ್ಲಾ ಪಡೆಯುವನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆಗ ಯೆಹೋವ ದೇವರ ವಾಕ್ಯವು, “ಈ ಮನುಷ್ಯನು ನಿನ್ನ ಉತ್ತರಾಧಿಕಾರಿಯಾಗುವುದಿಲ್ಲ. ನಿನ್ನಿಂದಲೇ ಹುಟ್ಟಿಬರುವ ನಿನ್ನ ಮಗನು ನಿನ್ನ ವಾರಸುದಾರನಾಗುವನು,” ಎಂದು ಹೇಳಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 15:4
8 ತಿಳಿವುಗಳ ಹೋಲಿಕೆ  

ನಾನು ಆಕೆಯನ್ನು ಆಶೀರ್ವದಿಸಿದ್ದೇನೆ. ಆಕೆ ನಿನಗೊಬ್ಬ ಮಗನನ್ನು ಹೆರುವಳು. ನನ್ನ ಆಶೀರ್ವಾದ ಪಡೆದ ಆಕೆ ರಾಷ್ಟ್ರಗಳಿಗೆ ಮಾತೆಯಾಗುವಳು; ಆಕೆಯಿಂದ ರಾಷ್ಟ್ರಗಳೂ, ರಾಜರುಗಳೂ ಉತ್ಪತ್ತಿಯಾಗುವರು.”


ಆದ್ದರಿಂದ ಪ್ರಿಯ ಸಹೋದರರೇ, ನೀವು ಇಸಾಕನಂತೆ ವಾಗ್ದಾನದ ಫಲವಾಗಿ ಹುಟ್ಟಿದ ಮಕ್ಕಳು.


ನಿನ್ನ ಆಯುಷ್ಕಾಲ ಮುಗಿದು ನೀನು ನಿನ್ನ ಪೂರ್ವಜರನ್ನು ಸೇರಿ ವಿಶ್ರಮಿಸುವಾಗ ನಿನ್ನ ಮಕ್ಕಳಲ್ಲಿ ಒಬ್ಬನನ್ನು ನಿನಗೆ ಉತ್ತರಾಧಿಕಾರಿಯನ್ನಾಗಿ ನೇಮಿಸಿ ಅವನ ರಾಜ್ಯವನ್ನು ಸ್ಥಿರಪಡಿಸುವೆನು.


ಅಸ್ಸೀರಿಯದ ಅರಸನ ದಂಡಿನಲ್ಲಿದ್ದ ಎಲ್ಲ ಶೂರರನ್ನೂ ನಾಯಕರನ್ನೂ ಅಧಿಪತಿಗಳನ್ನೂ ಸಂಹರಿಸಿದರು; ಆ ಅರಸನು ನಾಚಿಕೆಯಿಂದ ತನ್ನ ದೇಶಕ್ಕೆ ಹಿಂದಿರುಗಬೇಕಾಯಿತು. ಅಲ್ಲಿ ಅವನು ತನ್ನ ದೇವರ ಗುಡಿಗೆ ಹೋಗಿದ್ದಾಗ ಅವನ ಸ್ವಂತ ಮಕ್ಕಳೇ ಅವನನ್ನು ಕತ್ತಿಯಿಂದ ಕೊಂದರು.


ಆದರೆ ದೇವರು, ಅಬ್ರಹಾಮನಿಗೆ, “ನಿನ್ನ ಮಗನ ಹಾಗೂ ದಾಸಿಯ ಬಗ್ಗೆ ನಿನಗೆ ಚಿಂತೆಬೇಡ; ಸಾರಳು ಹೇಳಿದಂತೆಯೇ ಮಾಡು, ಏಕೆಂದರೆ ಇಸಾಕನಿಂದ ಹುಟ್ಟುವವರೇ ನಿನ್ನ ಸಂತತಿ ಎನಿಸಿಕೊಳ್ಳುವರು.


ನನಗಂತೂ ಇವನು ಪ್ರಾಣದಂತಿದ್ದರೂ ಈಗ ನಿನ್ನ ಬಳಿಗೆ ಕಳುಹಿಸುತ್ತಿದ್ದೇನೆ.


ಇದಲ್ಲದೆ ಅವನು ಅಬೀಷೈಗೂ ತನ್ನ ಎಲ್ಲಾ ಸೇವಕರಿಗೂ, “ನೋಡಿ, ನನ್ನಿಂದ ಹುಟ್ಟಿದ ನನ್ನ ಮಗನೇ ನನ್ನ ಪ್ರಾಣವನ್ನು ತೆಗೆಯಬೇಕೆಂದಿರುವಲ್ಲಿ ಈ ಬೆನ್ಯಾಮೀನ್ಯನು ಹೀಗೆ ಮಾಡುವುದು ಯಾವ ಲೆಕ್ಕ? ಬಿಡಿ, ಅವನು ಶಪಿಸಲಿ; ಹೀಗೆ ಮಾಡಬೇಕೆಂದು ಸರ್ವೇಶ್ವರನೇ ಅವನಿಗೆ ಆಜ್ಞಾಪಿಸಿದ್ದಾರೆ.


ಈ ಘಟನೆಗಳೆಲ್ಲ ನಡೆದ ಮೇಲೆ ಅಬ್ರಾಮನಿಗೆ ಒಂದು ದಿವ್ಯದರ್ಶನ ಆಯಿತು. ಅದರಲ್ಲಿ ಸರ್ವೇಶ್ವರ ಸ್ವಾಮಿಯ ಈ ವಾಣಿ ಕೇಳಿಸಿತು: “ಅಬ್ರಾಮನೇ ಭಯಪಡಬೇಡ, ನಿನ್ನನ್ನು ರಕ್ಷಿಸುವ ಕವಚ ನಾನೇ, ಘನವಾದ ಬಹುಮಾನ ಸಿಗುವುದು ನಿನಗೆ".


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು