ಆದಿಕಾಂಡ 15:7 - ಕನ್ನಡ ಸತ್ಯವೇದವು C.L. Bible (BSI)7 ಸವೇಶ್ವರ ಬಳಿಕ ಅಬ್ರಾಮನಿಗೆ ಇಂತೆಂದರು: “ಈ ನಾಡನ್ನು ನಿನಗೆ ಸೊತ್ತಾಗಿ ಕೊಡಬೇಕೆಂದು ಬಾಬಿಲೋನಿನಲ್ಲಿರುವ ಊರ್ ಪಟ್ಟಣದಿಂದ ನಿನ್ನನ್ನು ಬರಮಾಡಿದ ಸರ್ವೇಶ್ವರ ನಾನೇ,” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ನಂತರ ಆತನು ಅಬ್ರಾಮನಿಗೆ, “ಈ ದೇಶವನ್ನು ನಿನಗೆ ಬಾಧ್ಯಸ್ಥವಾಗಿ ಕೊಡುವುದಕ್ಕೋಸ್ಕರ ನಿನ್ನನ್ನು ಊರ್ ಎಂಬ ಕಲ್ದೀಯರ ಪಟ್ಟಣದಿಂದ ಬರಮಾಡಿದ ಯೆಹೋವನು ನಾನೇ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಆಮೇಲೆ ಆತನು ಅವನಿಗೆ - ಈ ದೇಶದ ಬಾಧ್ಯತೆಯನ್ನು ನಿನಗೆ ಕೊಡುವದಕ್ಕೋಸ್ಕರ ನಿನ್ನನ್ನು ಊರ್ ಎಂಬ ಕಲ್ದೀಯರ ಪಟ್ಟಣದಿಂದ ಬರಮಾಡಿದ ಯೆಹೋವನೇ ನಾನು ಎಂದು ಹೇಳಲು ಅವನು - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಆತನು ಅಬ್ರಾಮನಿಗೆ, “ಯೆಹೋವನಾದ ನಾನು ನಿನ್ನನ್ನು ಕಲ್ದೀಯರ ಊರ್ ಪಟ್ಟಣದಿಂದ ಬರಮಾಡಿದೆನು. ನಿನಗೆ ಈ ದೇಶವನ್ನು ಕೊಡಬೇಕೆಂತಲೂ ನೀನು ಈ ದೇಶವನ್ನು ಹೊಂದಿಕೊಳ್ಳಬೇಕೆಂತಲೂ ನಾನು ನಿನ್ನನ್ನು ಬರಮಾಡಿದೆನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ದೇವರು ಅವನಿಗೆ, “ಈ ದೇಶವನ್ನು ಸೊತ್ತಾಗಿ ನಿನಗೆ ಕೊಡಲು, ಕಸ್ದೀಯರ ಊರ್ ಎಂಬ ಪ್ರದೇಶದಿಂದ ನಿನ್ನನ್ನು ಹೊರಗೆ ತಂದ ಯೆಹೋವ ದೇವರು ನಾನೇ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿ |
ತಮ್ಮ ದಾಸರಾದ ಅಬ್ರಹಾಮ್, ಇಸಾಕ್ ಹಾಗು ಯಕೋಬರನ್ನು ನೆನಪಿಗೆ ತಂದುಕೊಳ್ಳಿ. ತಾವು ತಮ್ಮ ಜೀವದಾಣೆ ಪ್ರಮಾಣ ಮಾಡಿ ಅವರಿಗೆ, ‘ನಾನು ನಿಮ್ಮ ಸಂತತಿಯನ್ನು ಹೆಚ್ಚಿಸಿ ಆಕಾಶದ ನಕ್ಷತ್ರಗಳಷ್ಟು ಅಸಂಖ್ಯವಾಗಿ ಮಾಡುವೆನು; ನಾನು ಸೂಚಿಸಿರುವ ಈ ಪ್ರದೇಶಗಳನ್ನೆಲ್ಲಾ ನಿಮ್ಮ ಸಂತತಿಯವರಿಗೆ ಕೊಡುವೆನು; ಮತ್ತು ಅವರು ಈ ನಾಡನ್ನು ಶಾಶ್ವತವಾಗಿ ಸ್ವಾಧೀನದಲ್ಲಿಟ್ಟುಕೊಳ್ಳುವರು’ ಎಂದು ತಾವು ಮಾತುಕೊಡಲಿಲ್ಲವೆ?” ಎಂದನು.