Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 16:11 - ಕನ್ನಡ ಸತ್ಯವೇದವು C.L. Bible (BSI)

11 ಹುಟ್ಟುವನು ಮಗನೊಬ್ಬನು ಗರ್ಭಿಣಿಯಾದ ನಿನಗೆ ಇಷ್ಮಾಯೇಲೆಂಬ ಹೆಸರನು ಇಡು ಅವನಿಗೆ ಕಾರಣ - ಸರ್ವೇಶ್ವರ ಕಿವಿಗೊಟ್ಟಿಹನು ನಿನ್ನ ಮೊರೆಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಯೆಹೋವನ ದೂತನು ಅವಳಿಗೆ, “ನೀನು ಗರ್ಭಿಣಿಯಾಗಿದಿಯಾ; ನಿನಗೆ ಮಗನು ಹುಟ್ಟುವನು; ಯೆಹೋವನು ನಿನ್ನ ಕಷ್ಟದ ಕೂಗಿಗೆ ಕಿವಿಗೊಟ್ಟಿದ್ದರಿಂದ ಆ ಮಗನಿಗೆ ಇಷ್ಮಾಯೇಲ್ ಎಂದು ಹೆಸರಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಮತ್ತು ಯೆಹೋವನ ದೂತನು ಅವಳಿಗೆ - ನೀನು ಬಸುರಾಗಿದ್ದೀಯಷ್ಟೆ; ನಿನಗೆ ಮಗನು ಹುಟ್ಟುವನು; ಯೆಹೋವನು ನಿನ್ನ ಕಷ್ಟದ ಕೂಗಿಗೆ ಕಿವಿಗೊಟ್ಟದ್ದರಿಂದ ಆ ಮಗನಿಗೆ ಇಷ್ಮಾಯೇಲ್ ಎಂದು ಹೆಸರಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಇದಲ್ಲದೆ ದೇವದೂತನು ಆಕೆಗೆ, “ಹಾಗರಳೇ, ಈಗ ನೀನು ಗರ್ಭಿಣಿಯಾಗಿರುವೆ; ನಿನಗೆ ಒಬ್ಬ ಮಗನು ಹುಟ್ಟುವನು. ನೀನು ಅವನಿಗೆ ಇಷ್ಮಾಯೇಲ್ ಎಂದು ಹೆಸರಿಡಬೇಕು; ಯಾಕೆಂದರೆ ಯೆಹೋವನು ನಿನ್ನ ಕಷ್ಟಗಳನ್ನು ಕೇಳಿದ್ದಾನೆ; ಆತನು ನಿನಗೆ ಸಹಾಯ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅನಂತರ ಯೆಹೋವ ದೇವರ ದೂತನು ಆಕೆಗೆ ಹೀಗೆ ಹೇಳಿದನು: “ನೀನು ಈಗ ಗರ್ಭಿಣಿಯಾಗಿರುವೆ, ಒಬ್ಬ ಮಗನನ್ನು ಹೆರುವೆ. ಅವನಿಗೆ, ಇಷ್ಮಾಯೇಲ್ ಎಂದು ಹೆಸರಿಡಬೇಕು. ಏಕೆಂದರೆ ಯೆಹೋವ ದೇವರು ನಿನ್ನ ವ್ಯಥೆಗೆ ಕಿವಿಗೊಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 16:11
16 ತಿಳಿವುಗಳ ಹೋಲಿಕೆ  

ಆಗ ಸರ್ವೇಶ್ವರ, “ಈಜಿಪ್ಟಿನಲ್ಲಿರುವ ನನ್ನ ಜನರ ದುರವಸ್ಥೆಯನ್ನು ನಾನು ಕಣ್ಣಾರೆ ನೋಡಿದ್ದೇನೆ. ಬಿಟ್ಟೀ ಕೆಲಸ ಮಾಡಿಸಿಕೊಳ್ಳುವವರ ಬಗ್ಗೆ ಅವರು ಇಟ್ಟ ಮೊರೆ ನನಗೆ ಕೇಳಿಸಿದೆ. ಅವರ ಕಷ್ಟದುಃಖವನ್ನೆಲ್ಲಾ ನಾನು ಬಲ್ಲೆ.


ಆಗಲಿ, ಸರ್ವೇಶ್ವರ ನಿಮಗೊಂದು ಗುರುತನ್ನು ಕೊಡುವರು. ಇಗೋ, ಕನ್ಯೆಯೊಬ್ಬಳು ಗರ್ಭತಳೆದು ಪುತ್ರನೊಬ್ಬನನ್ನು ಪ್ರಸವಿಸುವಳು. ಇಮ್ಮಾನುವೇಲ್ ಎಂದು ಆತನಿಗೆ ಹೆಸರಿಡುವಳು.


ದಿನತುಂಬಿದ ಮೇಲೆ ಒಬ್ಬ ಮಗನನ್ನು ಹೆತ್ತಳು. “ನಾನು ಇವನನ್ನು ಸರ್ವೇಶ್ವರನಿಂದ ಬೇಡಿ ಪಡೆದೆ,” ಎಂದು ಹೇಳಿ ಆ ಮಗುವಿಗೆ ‘ಸಮುವೇಲ’ ಎಂದು ಹೆಸರಿಟ್ಟಳು.


ಅದಕ್ಕೆ ದೇವರು, “ಇಲ್ಲ, ನಿನ್ನ ಹೆಂಡತಿ ಸಾರಳೇ ನಿನಗೊಂದು ಮಗನನ್ನು ಹೆರುವಳು. ಅವನಿಗೆ ಇಸಾಕನೆಂದು ಹೆಸರಿಡಬೇಕು. ನನ್ನ ಒಡಂಬಡಿಕೆಯನ್ನು ಅವನೊಂದಿಗೂ ಅವನ ಸಂತತಿಯೊಂದಿಗೂ ಚಿರವಾದ ಒಡಂಬಡಿಕೆಯಾಗಿ ಸ್ಥಿರಗೊಳಿಸುತ್ತೇನೆ.


ಆಗ ಜಕರೀಯನು ಬರೆಯುವ ಒಂದು ಹಲಗೆಯನ್ನು ತರಿಸಿಕೊಂಡು, ‘ಇವನ ಹೆಸರು ಯೊವಾನ್ನ’ ಎಂದು ಬರೆದನು. ಎಲ್ಲರೂ ಬೆರಗಾದರು.


ಆಹಾರವನು ಒದಗಿಸುವವರಾರು ತಾಯಿ ಕಾಗೆಗೆ ಅದರ ಹಸಿದ ಮರಿಗಳು ಕೊಕ್ಕೆತ್ತಿ ದೇವರಿಗೆ ಮೊರೆಯಿಡುವಾಗ?


ಈಗ ಕೇಳು; “ಇಸ್ರಯೇಲರ ಮೊರೆ ನನಗೆ ಮುಟ್ಟಿದೆ. ಈಜಿಪ್ಟಿನವರು ಅವರಿಗೆ ಕೊಡುತ್ತಿರುವ ಉಪದ್ರವವನ್ನು ನಾನು ನೋಡಿದ್ದೇನೆ.


ಇಗೋ, ನೀನು ಗರ್ಭವತಿಯಾಗಿ ಒಬ್ಬ ಮಗನನ್ನು ಹೆರುವೆ. ಆತನಿಗೆ ‘ಯೇಸು’ ಎಂಬ ಹೆಸರಿಡಬೇಕು;


ದೂತನು ಅವನಿಗೆ, “ಜಕರೀಯಾ, ಭಯಪಡಬೇಡ! ನಿನ್ನ ಪ್ರಾರ್ಥನೆಯನ್ನು ದೇವರು ಆಲಿಸಿದ್ದಾರೆ. ನಿನ್ನ ಪತ್ನಿ ಎಲಿಜಬೇತಳಲ್ಲಿ ನಿನಗೆ ಒಂದು ಗಂಡುಮಗು ಹುಟ್ಟುವುದು. ನೀನು ಅವನಿಗೆ ‘ಯೊವಾನ್ನ’ ಎಂದು ನಾಮಕರಣ ಮಾಡಬೇಕು.


ತೃಣೀಕರಿಸನು, ತಿರಸ್ಕರಿಸನು ದಲಿತನನು I ವಿಮುಖನಾಗನು, ಪ್ರಾರ್ಥನೆಗೆ ಕಿವಿಗೊಡುವನು II


ತರುವಾಯ ಅವರು ಊಟಕ್ಕೆ ಕುಳಿತುಕೊಂಡರು. ಅಷ್ಟರಲ್ಲಿ, ಇಷ್ಮಾಯೇಲರ ಗುಂಪೊಂದು ಗಿಲ್ಯಾದಿನಿಂದ ಬರುವುದು ಅವರ ಕಣ್ಣಿಗೆ ಕಾಣಿಸಿತು. ಇವರು ತಮ್ಮ ಒಂಟೆಗಳ ಮೇಲೆ ಪರಿಮಳ ಪದಾರ್ಥ, ಸುಗಂಧ ತೈಲ, ರಸಗಂಧ ಇವುಗಳನ್ನು ಹೇರಿಕೊಂಡು, ಈಜಿಪ್ಟಿಗೆ ಪ್ರಯಾಣಮಾಡುತ್ತಿದ್ದರು.


ಇತ್ತ ಆ ಹುಡುಗನ ಕೂಗು ದೇವರಿಗೆ ಕೇಳಿಸಿತು. ದೇವದೂತನು ಆಕಾಶದಿಂದ ಹಾಗರಳನ್ನು ಕರೆದು, “ಹಾಗರಳೇ, ನಿನಗೇನು ಆಯಿತು? ಅಂಜಬೇಡ; ಆ ಹುಡುಗನು ಬಿದ್ದು ಇರುವ ಸ್ಥಳದಿಂದಲೇ ಅವನ ಕೂಗು ದೇವರನ್ನು ಮುಟ್ಟಿತು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು