ಆದಿಕಾಂಡ 16:12 - ಕನ್ನಡ ಸತ್ಯವೇದವು C.L. Bible (BSI)12 ಬಾಳುವವನು ಕಾಡುಗತ್ತೆಯಂತೆ ಎತ್ತುವನು ಕೈಯನು ಎಲ್ಲರ ಮೇಲೆ, ಎತ್ತುವರೆಲ್ಲರು ಕೈ ಅವನ ಮೇಲೆ ಬಾಳುವನು ಸೋದರರಿಗೆ ಎದುರು ಬದುರಾಗೆ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಆ ಮನುಷ್ಯ ಕಾಡು ಕತ್ತೆಯಂತೆ ಇರುವನು. ಅವನು ಎಲ್ಲರ ಮೇಲೆ ಕೈಯೆತ್ತುವನು; ಹಾಗೆಯೇ ಅವನ ಮೇಲೆ ಎಲ್ಲರೂ ಕೈಯೆತ್ತುವರು. ತನ್ನ ಅಣ್ಣತಮ್ಮಂದಿರಿಗೆ ಎದುರಾಗಿ ವಾಸವಾಗಿರುವನು” ಎಂದು ಹೇಳಿ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಅವನು ಕಾಡುಗತ್ತೆಯಂತೆ ಇರುವನು. ಅವನು ಎಲ್ಲರ ಮೇಲೆ ಕೈಯೆತ್ತುವನು; ಹಾಗೆಯೇ ಅವನ ಮೇಲೆ ಎಲ್ಲರೂ ಕೈಯೆತ್ತುವರು. ತನ್ನ ಅಣ್ಣತಮ್ಮಂದಿರ ಎದುರುಗಡೆಯೇ ವಾಸವಾಗಿರುವನು ಎಂದು ಹೇಳಿ ಹೋದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಇಷ್ಮಾಯೇಲನು ಕಾಡುಕತ್ತೆಯಂತೆ ಗಡುಸಾಗಿದ್ದು ಸ್ವತಂತ್ರವಾಗಿರುವನು. ಅವನು ಪ್ರತಿಯೊಬ್ಬರಿಗೂ ವಿರೋಧವಾಗಿರುವನು; ಪ್ರತಿಯೊಬ್ಬರೂ ಅವನಿಗೆ ವಿರೋಧವಾಗಿರುವರು. ಅವನು ಸ್ಥಳದಿಂದ ಸ್ಥಳಕ್ಕೆ ಹೋಗುತ್ತಾ ತನ್ನ ಸಹೋದರರ ಸಮೀಪದಲ್ಲಿ ವಾಸಿಸಿದರೂ ಅವರಿಗೆ ವಿರೋಧವಾಗಿರುವನು.” ಎಂದು ಹೇಳಿ ಹೊರಟುಹೋದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಅವನು ಕಾಡುಕತ್ತೆಯಂತೆ ಇರುವನು. ಪ್ರತಿಯೊಬ್ಬರಿಗೂ ವಿರೋಧವಾಗಿ ಅವನು ಕೈ ಎತ್ತುವನು, ಪ್ರತಿಯೊಬ್ಬರ ಕೈಯೂ ಅವನ ವಿರೋಧವಾಗಿ ಇರುವುದು. ಅವನು ತನ್ನ ಸಹೋದರರೆಲ್ಲರ ಎದುರಿನಲ್ಲಿ ವಾಸವಾಗಿರುವನು.” ಅಧ್ಯಾಯವನ್ನು ನೋಡಿ |