Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 16:2 - ಕನ್ನಡ ಸತ್ಯವೇದವು C.L. Bible (BSI)

2 ಎಂದೇ ಸಾರಯಳು ಅಬ್ರಾಮನಿಗೆ, “ನೋಡಿ, ನನಗೇನೋ ಸರ್ವೇಶ್ವರ ಸ್ವಾಮಿ ಮಕ್ಕಳನ್ನು ದಯಪಾಲಿಸಲಿಲ್ಲ; ನೀವು ನನ್ನ ದಾಸಿಯನ್ನು ಸೇರಬೇಕು. ಬಹುಶಃ ಅವಳ ಮೂಲಕವಾದರೂ ನನಗೆ ಮಕ್ಕಳಾದೀತು,” ಎಂದು ಹೇಳಿದಳು. ಅಬ್ರಾಮನು ಆಕೆಯ ಮಾತಿಗೆ ಸಮ್ಮತಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಹೀಗಿರಲಾಗಿ ಸಾರಯಳು ಅಬ್ರಾಮನಿಗೆ, “ಯೆಹೋವನು ನನಗೆ ಮಕ್ಕಳನ್ನು ಕೊಡಲಿಲ್ಲವಲ್ಲಾ; ನೀನು ನನ್ನ ದಾಸಿಯಾದ ಹಾಗರಳ ಬಳಿಗೆ ಹೋಗಬೇಕು; ಒಂದು ವೇಳೆ ಅವಳ ಮೂಲಕ ನನಗೆ ಸಂತಾನವಾದೀತು” ಎಂದು ಹೇಳಲು ಅಬ್ರಾಮನು ಆಕೆಯ ಮಾತಿಗೆ ಸಮ್ಮತಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಹೀಗಿರಲಾಗಿ ಸಾರಯಳು ಅಬ್ರಾಮನಿಗೆ - ಯೆಹೋವನು ನನಗೆ ಮಕ್ಕಳನ್ನು ಕೊಡಲಿಲ್ಲವಷ್ಟೆ; ನೀನು ನನ್ನ ದಾಸಿಯ ಬಳಿಗೆ ಹೋಗಬೇಕು; ಒಂದು ವೇಳೆ ಅವಳ ಮೂಲಕ ನನಗೆ ಸಂತಾನವಾದೀತು ಎಂದು ಹೇಳಲು ಅಬ್ರಾಮನು ಆಕೆಯ ಮಾತಿಗೆ ಸಮ್ಮತಿಪಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಸಾರಯಳು ಅಬ್ರಾಮನಿಗೆ, “ಯೆಹೋವನು ನನಗೆ ಮಕ್ಕಳನ್ನು ಪಡೆಯುವ ಅವಕಾಶವನ್ನು ಕೊಡಲಿಲ್ಲ. ಆದ್ದರಿಂದ ನನ್ನ ಸೇವಕಿಯಾದ ಹಾಗರಳ ಬಳಿಗೆ ಹೋಗು. ಆಕೆಯಲ್ಲಿ ಹುಟ್ಟುವ ಮಗುವನ್ನು ನನ್ನ ಮಗುವಂತೆ ಸ್ವೀಕರಿಸಿಕೊಳ್ಳುವೆನು” ಎಂದು ಹೇಳಿದಳು. ಅಬ್ರಾಮನು ತನ್ನ ಹೆಂಡತಿಯಾದ ಸಾರಯಳಿಗೆ ವಿಧೇಯನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಗ ಸಾರಯಳು ಅಬ್ರಾಮನಿಗೆ, “ನಾನು ಮಕ್ಕಳನ್ನು ಹೆರದಂತೆ ಯೆಹೋವ ದೇವರು ನನಗೆ ಅಡ್ಡಿ ಮಾಡಿದ್ದಾರೆ. ದಯಮಾಡಿ ನೀನು ನನ್ನ ದಾಸಿಯ ಬಳಿಗೆ ಹೋಗು. ಒಂದು ವೇಳೆ ನಾನು ಅವಳ ಮೂಲಕ ಕುಟುಂಬವನ್ನು ಕಟ್ಟಬಲ್ಲೆ,” ಎಂದಳು. ಅಬ್ರಾಮನು ಸಾರಯಳ ಮಾತನ್ನು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 16:2
16 ತಿಳಿವುಗಳ ಹೋಲಿಕೆ  

ಅವನ ಯಜಮಾನ ಅವನಿಗೆ ಮದುವೆ ಮಾಡಿಸಿ ಆ ಹೆಂಡತಿಗೆ ಗಂಡು ಇಲ್ಲವೆ ಹೆಣ್ಣು ಮಕ್ಕಳಾಗಿದ್ದರೆ ಆ ಹೆಂಡತಿ ಹಾಗು ಅವಳ ಮಕ್ಕಳು ಯಜಮಾನನ ಸೊತ್ತಾಗುವರು. ಆ ಗುಲಾಮನು ಒಂಟಿಯಾಗಿಯೇ ಹೊರಟು ಹೋಗಲಿ.


ಆಗ ಸರ್ವೇಶ್ವರ ಸ್ವಾಮಿ, “ಬರುವ ವರ್ಷ ಇದೇ ಕಾಲದಲ್ಲಿ ನಾನು ತಪ್ಪದೆ ಮರಳಿ ನಿನ್ನ ಬಳಿಗೆ ಬರುತ್ತೇನೆ; ಬಂದಾಗ ನಿನ್ನ ಹೆಂಡತಿ ಸಾರಳಿಗೆ ಮಗನಿರುತ್ತಾನೆ,” ಎಂದರು. ಈ ಮಾತು ಹಿಂದೆ ಗುಡಾರದ ಬಾಗಿಲಲ್ಲಿ ನಿಂತಿದ್ದ ಸಾರಳ ಕಿವಿಗೆ ಬಿದ್ದಿತು.


ಅನಂತರ ಆದಾಮನಿಗೆ: “ತಿನ್ನಬಾರದೆಂದು ನಾ ವಿಧಿಸಿದ ಮರದ ಹಣ್ಣನ್ನು ತಿಂದೆ ನೀನು, ಕೇಳಿ ನಿನ್ನಾ ಮಡದಿಯ ಮಾತನ್ನು. ಇದಕಾರಣ ಹಾಕಿರುವೆನು ಶಾಪ ಹೊಲನೆಲಕ್ಕೆ ದುಡಿವೆ ನೀನು ಜೀವಮಾನವಿಡೀ ಅದರ ಕೃಷಿಗೆ.


ಪ್ರಭುವಿನಿಂದ ಬಂದ ಸೊತ್ತು - ಪುತ್ರಸಂತಾನ I ಕರುಳ ಕುಡಿಯು ಆತ ನೀಡುವ ಬಹುಮಾನ II


ಆಗ ಊರಿನ ಹಿರಿಯರು ಮತ್ತು ನೆರೆದಿದ್ದ ಸಭಿಕರು: “ಹೌದು, ನಾವೆಲ್ಲರೂ ಸಾಕ್ಷಿಗಳು. ಇಸ್ರಯೇಲಿನ ಮನೆತನವನ್ನು ವೃದ್ಧಿಗೊಳಿಸಿದ ರಾಹೆಲ್ ಮತ್ತು ಲೆಯಾ ಎಂಬ ಕುಲೀನೆಯರನ್ನು ಸರ್ವೇಶ್ವರ ಆಶೀರ್ವದಿಸಲಿ! ಎಫ್ರಾತ ಕುಲದಲ್ಲಿ ಧನವಂತನಾಗು;


ಇದಾದ ಬಳಿಕ ದೇವರು ರಾಖೇಲಳನ್ನು ನೆನೆಸಿಕೊಂಡರು. ಆಕೆಯ ಮೊರೆಯನ್ನು ಕೇಳಿ ಆಕೆಗೂ ಮಕ್ಕಳಾಗುವಂತೆ ಅನುಗ್ರಹಿಸಿದರು.


ರೆಬೆಕ್ಕಳಿಗೆ ಮಕ್ಕಳಾಗಲಿಲ್ಲ. ಸರ್ವೇಶ್ವರ ಅವನ ವಿಜ್ಞಾಪನೆಯನ್ನು ಆಲಿಸಿದರು. ರೆಬೆಕ್ಕಳು ಗರ್ಭವತಿಯಾದಳು.


ಇದಕ್ಕೆ ಮುಂಚೆ ಅಬ್ರಹಾಮನ ಹೆಂಡತಿ ಸಾರಳ ನಿಮಿತ್ತ ಅಬೀಮೆಲೆಕನ ಮನೆಯಲ್ಲಿದ್ದ ಮಹಿಳೆಯರೆಲ್ಲರನ್ನು ಸರ್ವೇಶ್ವರ ಸ್ವಾಮಿ ಬಂಜೆಯರನ್ನಾಗಿಸಿದ್ದರು.


ನಾನು ಆಕೆಯನ್ನು ಆಶೀರ್ವದಿಸಿದ್ದೇನೆ. ಆಕೆ ನಿನಗೊಬ್ಬ ಮಗನನ್ನು ಹೆರುವಳು. ನನ್ನ ಆಶೀರ್ವಾದ ಪಡೆದ ಆಕೆ ರಾಷ್ಟ್ರಗಳಿಗೆ ಮಾತೆಯಾಗುವಳು; ಆಕೆಯಿಂದ ರಾಷ್ಟ್ರಗಳೂ, ರಾಜರುಗಳೂ ಉತ್ಪತ್ತಿಯಾಗುವರು.”


ಅದಕ್ಕೆ ಆದಾಮನು, “ನನ್ನ ಜೊತೆಯಲ್ಲಿ ಇರಲು ತಾವು ಕೊಟ್ಟ ಮಹಿಳೆ ಆ ಮರದ ಹಣ್ಣನ್ನು ನನಗೆ ಕೊಟ್ಟಳು; ನಾನು ತಿಂದೆ,” ಎಂದನು


ಆಗ ರಾಖೇಲಳು, “ದೇವರು ನನಗೆ ನ್ಯಾಯ ದೊರಕಿಸಿದ್ದಾರೆ, ನನ್ನ ಮೊರೆಯನ್ನು ಕೇಳಿ ನನಗೆ ಮಗನನ್ನು ಅನುಗ್ರಹಿಸಿದ್ದಾರೆ,” ಎಂದು ಹೇಳಿ ಆ ಮಗುವಿಗೆ ‘ದಾನ್’ ಎಂದು ಹೆಸರಿಟ್ಟಳು.


ಇಂತಿರಲು, ಅವನ ಹಿರಿಯ ಮಗಳು ತನ್ನ ತಂಗಿಗೆ ಹೀಗೆಂದಳು. “ನಮ್ಮ ತಂದೆ ಮುದುಕ; ಲೋಕ ಪದ್ಧತಿಯ ಪ್ರಕಾರ ನಮ್ಮನ್ನು ಮದುವೆ ಮಾಡಿಕೊಳ್ಳುವ ಗಂಡುಗಳು ಇಲ್ಲೆಲ್ಲಿಯೂ ಇಲ್ಲ.


ಸಾರಯಳು ಬಂಜೆ, ಆಕೆಗೆ ಮಕ್ಕಳಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು