Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 16:4 - ಕನ್ನಡ ಸತ್ಯವೇದವು C.L. Bible (BSI)

4 ಅಬ್ರಾಮನು ಹಾಗರಳನ್ನು ಕೂಡಿದನು. ಅವಳು ಗರ್ಭಿಣಿಯಾದಳು. ತಾನು ಗರ್ಭಿಣಿಯಾದೆನೆಂದು ತಿಳಿದ ಅವಳು, ತನ್ನ ಯಜಮಾನಿಯನ್ನೇ ತಾತ್ಸಾರ ಮಾಡತೊಡಗಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವನು ಹಾಗರಳನ್ನು ಸಂಗಮಿಸಲು ಆಕೆಯು ಬಸುರಾದಳು. ತಾನು ಬಸುರಾದೆನೆಂದು ತಿಳಿದುಕೊಂಡಾಗ ಅವಳು ತನ್ನ ಯಜಮಾನಿಯನ್ನು ತಾತ್ಸಾರ ಮಾಡತೊಡಗಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅವನು ಹಾಗರಳನ್ನು ಕೂಡಲು ಬಸುರಾದಳು. ತಾನು ಬಸುರಾದೆನೆಂದು ತಿಳುಕೊಂಡಾಗ ಅವಳು ಯಾಜಮಾನಿಯನ್ನು ತಾತ್ಸಾರ ಮಾಡಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಹಾಗರಳು ಅಬ್ರಾಮನಿಂದ ಗರ್ಭಿಣಿಯಾದಾಗ ತನ್ನ ಯಜಮಾನಿಯಾದ ಸಾರಯಳನ್ನೇ ಕಡೆಗಣಿಸತೊಡಗಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವನು ಹಾಗರಳನ್ನು ಕೂಡಿದನು. ಆಗ ಅವಳು ಗರ್ಭಿಣಿಯಾದಳು. ತಾನು ಗರ್ಭಿಣಿಯಾದೆನೆಂದು ತಿಳಿದಾಗ, ಅವಳು ತನ್ನ ಯಜಮಾನಿಯನ್ನು ತಿರಸ್ಕರಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 16:4
11 ತಿಳಿವುಗಳ ಹೋಲಿಕೆ  

ಯಾರಿಗೂ ಬೇಡವಾದವಳಾಗಿದ್ದ ಮದುವೆಯಾದ ಚಂಡಿ, ಧರ್ಮಪತ್ನಿಯ ಸ್ಥಾನವನ್ನು ಕಸಿದುಕೊಂಡ ದಾಸಿ.


ಸಹೋದರರೇ, ನಿಮ್ಮ ಪ್ರಯೋಜನಕ್ಕಾಗಿ ಇದೆಲ್ಲವನ್ನು ನನಗೂ ಅಪೊಲೋಸನಿಗೂ ಅನ್ವಯಿಸಿ ಹೇಳಿದ್ದೇನೆ. ನೀವು ನಮ್ಮ ಆದರ್ಶವನ್ನು ಅನುಸರಿಸಬೇಕು. ಧರ್ಮಶಾಸ್ತ್ರದಲ್ಲಿ ಬರೆದಿರುವುದನ್ನು ಮೀರಬಾರದು. ನಿಮ್ಮಲ್ಲಿ ಯಾರೂ ಒಬ್ಬನ ಪಕ್ಷವಹಿಸಿ ಜಂಬ ಕೊಚ್ಚಿಕೊಂಡು ಮತ್ತೊಬ್ಬನನ್ನು ಕಡೆಗಣಿಸಬಾರದು.


ಮಂಜೂಷವು ದಾವೀದನಗರದೊಳಗೆ ಬರುತ್ತಿರುವಾಗ ಸೌಲನ ಮಗಳಾದ ಮೀಕಲಳು ಕಿಟಕಿಯಿಂದ ಇಣಿಕಿ ನೋಡಿ ದಾವೀದನು ಸರ್ವೇಶ್ವರನ ಮುಂದೆ ನಲಿದಾಡುತ್ತಾ ಕುಣಿಯುತ್ತಾ ಇರುವುದನ್ನು ಕಂಡು ಮನಸ್ಸಿನಲ್ಲೇ ಅವನನ್ನು ತಿರಸ್ಕರಿಸಿದಳು.


ಹೀಗೆ ಹತ್ತು ವರ್ಷ ಕಾನಾನ್ ನಾಡಿನಲ್ಲಿ ವಾಸಮಾಡಿದ ಮೇಲೆ ಅಬ್ರಾಮನ ಹೆಂಡತಿ ಸಾರಯಳು ಈಜಿಪ್ಟಿನ ಹಾಗರಳೆಂಬ ದಾಸಿಯನ್ನು ತನ್ನ ಗಂಡನಿಗೆ ಉಪಪತ್ನಿಯಾಗಿ ಒಪ್ಪಿಸಿದಳು.


ಆಗ ಸಾರಯಳು ಅಬ್ರಾಮನಿಗೆ, “ನನಗೆ ಅನ್ಯಾಯವಾಗುತ್ತಿದೆ; ಇದಕ್ಕೆ ನೀವೇ ಹೊಣೆ, ನನ್ನ ದಾಸಿಯನ್ನು ನಿಮಗೆ ಉಪಪತ್ನಿಯಾಗಿ ಕೊಟ್ಟೆನಷ್ಟೆ; ಇವಳೋ, ತಾನು ಗರ್ಭಿಣಿಯಾದೆನೆಂದು ತಿಳಿದದ್ದೆ, ನನ್ನನ್ನು ತಾತ್ಸಾರ ಮಾಡುತ್ತಿದ್ದಾಳೆ; ಈಗ ಸರ್ವೇಶ್ವರ ಸ್ವಾಮಿಯೇ ನಿಮಗೂ ನನಗೂ ನ್ಯಾಯ ತೀರಿಸಬೇಕು,” ಎಂದು ದೂರಿದಳು.


ಇಂತಿರಲು, ಅವನ ಹಿರಿಯ ಮಗಳು ತನ್ನ ತಂಗಿಗೆ ಹೀಗೆಂದಳು. “ನಮ್ಮ ತಂದೆ ಮುದುಕ; ಲೋಕ ಪದ್ಧತಿಯ ಪ್ರಕಾರ ನಮ್ಮನ್ನು ಮದುವೆ ಮಾಡಿಕೊಳ್ಳುವ ಗಂಡುಗಳು ಇಲ್ಲೆಲ್ಲಿಯೂ ಇಲ್ಲ.


ಈಜಿಪ್ಟಿನ ಹಾಗರಳಿಂದ ಅಬ್ರಹಾಮನಿಗೆ ಹುಟ್ಟಿದ ಹುಡುಗನು ತನ್ನ ಮಗ ಇಸಾಕನೊಡನೆ ನಕ್ಕುನಲಿದಾಡುವುದನ್ನು ಸಾರಳು ಕಂಡಳು.


ಅಂತೆಯೇ ದಾಸಿ ಬಿಲ್ಹಾಳನ್ನು ತನ್ನ ಗಂಡನಿಗೆ ಒಪ್ಪಿಸಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು