Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 16:5 - ಕನ್ನಡ ಸತ್ಯವೇದವು C.L. Bible (BSI)

5 ಆಗ ಸಾರಯಳು ಅಬ್ರಾಮನಿಗೆ, “ನನಗೆ ಅನ್ಯಾಯವಾಗುತ್ತಿದೆ; ಇದಕ್ಕೆ ನೀವೇ ಹೊಣೆ, ನನ್ನ ದಾಸಿಯನ್ನು ನಿಮಗೆ ಉಪಪತ್ನಿಯಾಗಿ ಕೊಟ್ಟೆನಷ್ಟೆ; ಇವಳೋ, ತಾನು ಗರ್ಭಿಣಿಯಾದೆನೆಂದು ತಿಳಿದದ್ದೆ, ನನ್ನನ್ನು ತಾತ್ಸಾರ ಮಾಡುತ್ತಿದ್ದಾಳೆ; ಈಗ ಸರ್ವೇಶ್ವರ ಸ್ವಾಮಿಯೇ ನಿಮಗೂ ನನಗೂ ನ್ಯಾಯ ತೀರಿಸಬೇಕು,” ಎಂದು ದೂರಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆಗ ಸಾರಯಳು ಅಬ್ರಾಮನಿಗೆ, “ನನ್ನ ಗೋಳು ನಿನಗೆ ತಟ್ಟಲಿ; ನನ್ನ ದಾಸಿಯನ್ನು ನಿನಗೆ ಹೆಂಡತಿಯಾಗಿ ಒಪ್ಪಿಸಿದೆನಷ್ಟೆ; ಅವಳು ತಾನು ಬಸುರಾದೆನೆಂದು ತಿಳಿದು ನನ್ನನ್ನು ತಾತ್ಸಾರಮಾಡುತ್ತಿದ್ದಾಳೆ; ನಿನಗೂ ನನಗೂ ನಡುವೆ ಯೆಹೋವನೇ ನ್ಯಾಯತೀರಿಸಲಿ” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆಗ ಸಾರಯಳು ಅಬ್ರಾಮನಿಗೆ - ನನ್ನ ಗೋಳು ನಿನಗೆ ತಗಲಲಿ; ನನ್ನ ದಾಸಿಯನ್ನು ನಿನಗೆ ಹೆಂಡತಿಯಾಗಿ ಒಪ್ಪಿಸಿದೆನಷ್ಟೆ; ಅವಳು ತಾನು ಬಸುರಾದೆನೆಂದು ತಿಳಿದು ನನ್ನನ್ನು ತಾತ್ಸಾರಮಾಡುತ್ತಾಳೆ; ನಿನಗೂ ನನಗೂ ಯೆಹೋವನೇ ನ್ಯಾಯತೀರಿಸಲಿ ಎಂದು ಹೇಳಲು ಅಬ್ರಾಮನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆಗ ಸಾರಯಳು ಅಬ್ರಾಮನಿಗೆ, “ನನ್ನ ಸಂಕಟಕ್ಕೆ ನೀನೇ ಕಾರಣ. ನಾನು ಅವಳನ್ನು ನಿನಗೆ ಕೊಟ್ಟೆನು. ಈಗ ಅವಳು ಗರ್ಭಿಣಿಯಾಗಿದ್ದಾಳೆ ಮತ್ತು ನನ್ನನ್ನೇ ಕಡೆಗಣಿಸುತ್ತಿದ್ದಾಳೆ. ಯೆಹೋವನೇ ನನಗೂ ನಿನಗೂ ನ್ಯಾಯ ತೀರಿಸಲಿ” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಸಾರಯಳು ಅಬ್ರಾಮನಿಗೆ, “ನನಗೆ ಆದ ಅನ್ಯಾಯಕ್ಕೆ ನೀನೇ ಹೊಣೆ. ನಾನು ನನ್ನ ದಾಸಿಯನ್ನು ನಿನಗೆ ಹೆಂಡತಿಯಾಗಿ ಕೊಟ್ಟೆನು. ಈಗ ಅವಳು ಗರ್ಭಿಣಿಯಾದ್ದರಿಂದ ನಾನು ಅವಳ ಕಣ್ಣಿಗೆ ತಿರಸ್ಕಾರಕ್ಕೆ ಯೋಗ್ಯಳಾದೆನು. ಯೆಹೋವ ದೇವರು ನಿನಗೂ ನನಗೂ ನ್ಯಾಯತೀರಿಸಲಿ,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 16:5
12 ತಿಳಿವುಗಳ ಹೋಲಿಕೆ  

ಅಬ್ರಹಾಮನ ದೇವರು. ನಾಹೋರನ ದೇವರು, ಅವರ ತಂದೆಗಳ ದೇವರು ನಿನಗೂ ನನಗೂ ನ್ಯಾಯ ತೀರಿಸಲಿ,” ಎಂದನು. ಅದೇ ಮೇರೆಗೆ ಯಕೋಬನು, ತನ್ನ ತಂದೆಯಾದ ಇಸಾಕನು ಭಯಭಕ್ತಿಯಿಂದ ಆರಾಧಿಸುವ ದೇವರ ಮೇಲೆ ಆಣೆಯಿಟ್ಟು ಪ್ರಮಾಣಮಾಡಿದನು.


ಅವರಿಗೆ ಆ ಮೇಸ್ತ್ರಿಗಳು, “ನೀವು ಮಾಡಿದ ದುಷ್ಕೃತ್ಯವನ್ನು ವಿಚಾರಿಸಿ ಸರ್ವೇಶ್ವರ ನಿಮಗೆ ತಕ್ಕ ಶಿಕ್ಷೆಯನ್ನು ವಿಧಿಸಲಿ. ಏಕೆಂದರೆ ಫರೋಹನಿಗೂ ಅವನ ಸೇವಕರಿಗೂ ನಾವು ಅಸಹ್ಯರಾಗುವಂತೆ ಮಾಡಿಬಿಟ್ಟಿರಿ. ನಮ್ಮನ್ನು ಕೊಲ್ಲಲು ಅವರ ಕೈಗೆ ಕತ್ತಿಯನ್ನೇ ಕೊಟ್ಟಂತಾಗಿದೆ,” ಎಂದು ನಿಂದಿಸಿದರು.


ನನ್ನ ನ್ಯಾಯವನು ನಿರ್ಣಯಿಸು ದೇವಾ ಎಚ್ಚೆತ್ತು I ನನ್ನ ವಿವಾದವನು ವಿಚಾರಿಸು ಪ್ರಭು ನೀನೆದ್ದು ನಿಂತು II


ಹೇ ಪ್ರಭು, ಜಗದ ಜನಾಂಗಕೆ ನ್ಯಾಯ ದೊರಕಿಸುವವನು ನೀನು I ನನಗೂ ನ್ಯಾಯ ದೊರಕಿಸು : ನಿರಪರಾಧಿ, ನೀತಿವಂತ ನಾನು II


ಜೆಕರ್ಯನ ತಂದೆ ಯೆಹೋಯಾದನಿಂದ ತನಗಾದ ಉಪಕಾರವನ್ನು ನೆನಪುಮಾಡಿಕೊಳ್ಳದೆ ಈ ಯೆಹೋವಾಷನು ಅವನ ಮಗನನ್ನು ಕೊಲ್ಲಿಸಿದನು. ಜೆಕರೀಯನು ಸಾಯುವಾಗ, “ಸರ್ವೇಶ್ವರಸ್ವಾಮಿಯೇ ಇದನ್ನು ನೋಡಿ ತಕ್ಕ ಶಾಸ್ತಿಮಾಡಲಿ,” ಎಂದನು.


ನಿರ್ಣಯಿಸು ನನ್ನ ನ್ಯಾಯವನು ಓ ದೇವಾ I ವಾದಿಸು ಆ ಭಕ್ತಿಹೀನ ಜನತೆಯ ವಿರುದ್ಧ I ಬಿಡಿಸೆನ್ನನು ವಂಚಕರಿಂದ, ಅಧರ್ಮಿಗಳಿಂದ II


ಅಬ್ರಾಮನು ಹಾಗರಳನ್ನು ಕೂಡಿದನು. ಅವಳು ಗರ್ಭಿಣಿಯಾದಳು. ತಾನು ಗರ್ಭಿಣಿಯಾದೆನೆಂದು ತಿಳಿದ ಅವಳು, ತನ್ನ ಯಜಮಾನಿಯನ್ನೇ ತಾತ್ಸಾರ ಮಾಡತೊಡಗಿದಳು.


ನಾನು ನಿನಗೆ ಯಾವ ಅನ್ಯಾಯವನ್ನೂ ಮಾಡಲಿಲ್ಲ. ನೀನು ಈಗ ನನಗೆ ವಿರೋಧವಾಗಿ ಯುದ್ಧಕ್ಕೆ ಬಂದದ್ದರಿಂದ ನೀನೇ ಅನ್ಯಾಯಮಾಡಿದ ಹಾಗಾಯಿತು. ನ್ಯಾಯಸ್ಥಾಪಕರಾದ ಸರ್ವೇಶ್ವರಸ್ವಾಮಿಯೇ ಈ ಹೊತ್ತು ಇಸ್ರಯೇಲರಿಗೂ ಅಮ್ಮೋನಿಯರಿಗೂ ಮಧ್ಯೆ ನ್ಯಾಯ ತೀರಿಸಲಿ,” ಎಂದು ಹೇಳಿಸಿದನು.


‘ನಮ್ಮ ಪ್ರಾಣವನ್ನು ಹಿಂಡಿದ ದೋಷ ಬಾಬಿಲೋನಿಗೆ ತಟ್ಟಲಿ’ ಎನ್ನುತ್ತದೆ ಸಿಯೋನ್. ‘ನಮ್ಮ ರಕ್ತವನ್ನು ಸುರಿಸಿದ ಅಪರಾಧ ಅದರ ಕಸ್ದೀಯರಿಗೆ ಬಡಿಯಲಿ!’ ಎನ್ನುತ್ತದೆ ಜೆರುಸಲೇಮ್.


ದಾವೀದನ ಮಾತುಗಳು ಮುಗಿದನಂತರ ಸೌಲನು, “ದಾವೀದನೇ, ನನ್ನ ಮಗನೇ, ಇದು ನಿಜವಾಗಿಯೂ ನಿನ್ನ ಸ್ವರವೇ?” ಎಂದು ಗಟ್ಟಿಯಾಗಿ ಅತ್ತನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು