Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 16:6 - ಕನ್ನಡ ಸತ್ಯವೇದವು C.L. Bible (BSI)

6 ಅದಕ್ಕೆ ಅಬ್ರಾಮನು, “ನಿನ್ನ ದಾಸಿ ನಿನ್ನ ಕೈಯಲ್ಲೇ ಇದ್ದಾಳೆ. ನಿನಗಿಷ್ಟ ಬಂದಂತೆ ಮಾಡು,” ಎಂದುಬಿಟ್ಟನು. ಬಳಿಕ ಸಾರಯಳು ಕೊಡುತ್ತಿದ್ದ ಕಿರುಕುಳವನ್ನು ತಾಳಲಾರದೆ ಹಾಗರಳು ಓಡಿಹೋದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆಗ ಅಬ್ರಾಮನು, “ನಿನ್ನ ದಾಸಿಯು ನಿನ್ನ ಕೈಯಲ್ಲೇ ಇದ್ದಾಳಲ್ಲಾ; ನಿನ್ನಗೆ ಮನಸ್ಸು ಬಂದಂತೆ ಮಾಡು” ಎಂದನು. ಆಗ ಸಾರಯಳು ಅವಳನ್ನು ಬಾಧಿಸಲು ಅವಳು ಓಡಿಹೋದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನಿನ್ನ ದಾಸಿಯು ನಿನ್ನ ಕೈಯಲ್ಲೇ ಇದ್ದಾಳೆ; ಮನಸ್ಸುಬಂದಂತೆ ಮಾಡು ಅಂದನು. ಆಗ ಸಾರಯಳು ಅವಳನ್ನು ಬಾಧಿಸಲು ಅವಳು ಓಡಿಹೋದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಅದಕ್ಕೆ ಅಬ್ರಾಮನು ಸಾರಯಳಿಗೆ, “ನೀನು ಹಾಗರಳ ಯಜಮಾನಿ. ನೀನು ಅವಳಿಗೆ ಏನುಬೇಕಾದರೂ ಮಾಡಬಹುದು” ಎಂದು ಹೇಳಿದನು. ಆದ್ದರಿಂದ ಸಾರಯಳು ಹಾಗರಳನ್ನು ಶಿಕ್ಷಿಸಿದಳು. ಆಗ ಹಾಗರಳು ಓಡಿಹೋದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆದರೆ ಅಬ್ರಾಮನು ಸಾರಯಳಿಗೆ, “ಇಗೋ, ನಿನ್ನ ದಾಸಿಯು ನಿನ್ನ ಕೈಯಲ್ಲಿ ಇದ್ದಾಳೆ. ನಿನ್ನ ಮನಸ್ಸಿಗೆ ಬಂದಂತೆ ಮಾಡು,” ಎಂದನು. ಆಗ ಸಾರಯಳು ಹಾಗರಳನ್ನು ಬಾಧಿಸಿದ್ದರಿಂದ, ಅವಳು ಸಾರಯಳಿಂದ ಓಡಿ ಹೋದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 16:6
15 ತಿಳಿವುಗಳ ಹೋಲಿಕೆ  

ಅದಕ್ಕೆ ಅರಸ ಚಿದ್ಕೀಯನು, “ಇಗೋ, ಯೆರೆಮೀಯನು ನಿಮ್ಮ ಕೈಯಲ್ಲಿದ್ದಾನೆ. ಅರಸನು ನಿಮಗೆ ಅಡ್ಡಬಂದು ಏನೂ ಮಾಡಬಲ್ಲವನಲ್ಲ,” ಎಂದನು.


ಅದೇ ಪ್ರಕಾರ ಪುರುಷರೇ, ಸರಿಯಾದ ತಿಳುವಳಿಕೆಯಿಂದ ನಿಮ್ಮ ನಿಮ್ಮ ಪತ್ನಿಯರೊಡನೆ ಸಹಜೀವನ ನಡೆಸಿರಿ. ಅವರು ಅಬಲೆಯರು ಮಾತ್ರವಲ್ಲ, ಸಜ್ಜೀವ ಕೊಡುಗೆಗೆ ನಿಮ್ಮೊಂದಿಗೆ ಸಮಬಾಧ್ಯರು ಎಂದು ತಿಳಿದು ಅವರನ್ನು ಗೌರವಿಸಿರಿ. ಆಗ ನಿಮ್ಮ ಪ್ರಾರ್ಥನೆಗೆ ಅಡಚಣೆ ಉಂಟಾಗದು.


ರಾಜನು ಸಿಟ್ಟುಗೊಂಡನೆಂದು ಉದ್ಯೋಗಕ್ಕೇ ರಾಜೀನಾಮೆ ಕೊಟ್ಟುಬಿಡಬೇಡ; ತಾಳ್ಮೆಯಿಂದ ಘನದೋಷಗಳನ್ನೂ ಅಳಿಸಬಹುದು.


ಮಾತಿನಿಂದ ಮಾತ್ರ ಸೇವಕನನ್ನು ತಿದ್ದಲಾಗದು; ಮಾತು ಕಿವಿಗೆ ಬಿದ್ದರೂ ಅದನ್ನು ಗ್ರಹಿಸಲಾರದು.


ಮನೆಬಿಟ್ಟು ಅಲೆಯುವ ವ್ಯಕ್ತಿ, ಗೂಡುಬಿಟ್ಟು ಅಲೆಯುವ ಹಕ್ಕಿ.


ಮೃದುವಾದ ಮಾತು ಸಿಟ್ಟನ್ನಾರಿಸುತ್ತದೆ; ಬಿರುಸಾದ ನುಡಿ ಸಿಟ್ಟನ್ನೇರಿಸುತ್ತದೆ.


ದೀರ್ಘಶಾಂತನು ಬಹು ಬುದ್ಧಿವಂತನು; ಉಗ್ರಕೋಪಿ ಎತ್ತಿಹಿಡಿವನು ಮೂರ್ಖತನವನ್ನು.


ಆಗ ಸರ್ವೇಶ್ವರ ಸೈತಾನನಿಗೆ, “ಸರಿ, ಆತನನ್ನು ನಿನ್ನ ಕೈಗೆ ಬಿಟ್ಟಿದ್ದೇನೆ. ಆದರೆ ಆತನ ಪ್ರಾಣವನ್ನು ಮಾತ್ರ ಮುಟ್ಟಕೂಡದು,” ಎಂದು ಆಜ್ಞಾಪಿಸಿದರು.


ನಡೆದ ಸಂಗತಿ ಫರೋಹನಿಗೆ ಮುಟ್ಟಿತು. ಅವನು ಮೋಶೆಯನ್ನು ಕೊಲ್ಲಿಸಬೇಕೆಂದು ಆಲೋಚಿಸುತ್ತಿದ್ದನು. ಆದುದರಿಂದ ಮೋಶೆ ಫರೋಹನ ಬಳಿಯಿಂದ ಪಲಾಯನಗೈದು ಮಿದ್ಯಾನ್ ನಾಡನ್ನು ಸೇರಿದನು.


ತರುವಾಯ ಆ ಸೇವಕ ತನ್ನ ಒಡೆಯನ ಒಂಟೆಗಳಲ್ಲಿ ಹತ್ತನ್ನು ಸಿದ್ಧಮಾಡಿಕೊಂಡು, ಅವನ ಆಸ್ತಿಯಿಂದ ಶ್ರೇಷ್ಠವಾದ ಒಡವೆಗಳನ್ನು ತೆಗೆದುಕೊಂಡು ಹೊರಟನು. ಎರಡು ನದಿಗಳ ಮಧ್ಯೆ ಇರುವ ಉತ್ತರ ಮೆಸಪೊಟೇಮಿಯಾ ನಾಡಿಗೆ ಬಂದನು. ಅಲ್ಲಿಂದ ನಾಹೋರನು ವಾಸಿಸಿದ್ದ ಊರನ್ನು ಮುಟ್ಟಿದನು.


ಅದಕ್ಕೆ ಆ ದೂತನು, “ನಿನ್ನ ಯಜಮಾನಿಯ ಬಳಿಗೆ ಹಿಂತಿರುಗು, ಅವಳಿಗೆ ತಗ್ಗಿ ನಡೆದುಕೊ,” ಎಂದು ತಿಳಿಸಿದನು.


ಇಗೋ, ಈಗ ನಾವು ನಿಮ್ಮ ಕೈಯಲ್ಲಿ ಇದ್ದೇವೆ. ನಿಮಗೆ ಯಾವುದು ಒಳ್ಳೆಯದು, ನ್ಯಾಯವಾದುದು ಎಂದು ತೋರುತ್ತದೋ ಅದರಂತೆ ನಮಗೆ ಮಾಡಿ,” ಎಂದು ಉತ್ತರಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು