Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 16:9 - ಕನ್ನಡ ಸತ್ಯವೇದವು C.L. Bible (BSI)

9 ಅದಕ್ಕೆ ಆ ದೂತನು, “ನಿನ್ನ ಯಜಮಾನಿಯ ಬಳಿಗೆ ಹಿಂತಿರುಗು, ಅವಳಿಗೆ ತಗ್ಗಿ ನಡೆದುಕೊ,” ಎಂದು ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅದಕ್ಕೆ ಯೆಹೋವನ ದೂತನು, “ನೀನು ಯಜಮಾನಿಯ ಬಳಿಗೆ ಹಿಂದಿರುಗಿ ಹೋಗಿ ಅವಳಿಗೆ ಅಧೀನಳಾಗಿ ನಡೆದುಕೋ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅದಕ್ಕೆ ಯೆಹೋವನ ದೂತನು - ನೀನು ಯಜಮಾನಿಯ ಬಳಿಗೆ ಹಿಂದಿರುಗಿ ಹೋಗಿ ಅವಳಿಗೆ ತಗ್ಗಿ ನಡೆದುಕೋ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಯೆಹೋವನ ದೂತನು ಹಾಗರಳಿಗೆ, “ಸಾರಯಳು ನಿನ್ನ ಯಜಮಾನಿ. ನೀನು ಆಕೆಯ ಬಳಿಗೆ ಹಿಂತಿರುಗಿ ಹೋಗಿ ಆಕೆಗೆ ವಿಧೇಯಳಾಗಿರು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಯೆಹೋವ ದೇವರ ದೂತನು ಆಕೆಗೆ, “ನಿನ್ನ ಯಜಮಾನಿಯ ಬಳಿಗೆ ಹಿಂದಿರುಗಿ ಹೋಗಿ ಆಕೆಗೆ ಅಧೀನಳಾಗಿರು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 16:9
9 ತಿಳಿವುಗಳ ಹೋಲಿಕೆ  

ಮನೆಯಾಳುಗಳು ತಮ್ಮ ಯಜಮಾನರಿಗೆ ವಿಧೇಯರಾಗಿರಲಿ. ಎಲ್ಲಾ ವಿಷಯಗಳಲ್ಲೂ ಅವರನ್ನು ಮೆಚ್ಚಿಸಲು ಪ್ರಯತ್ನಿಸಲಿ. ಯಜಮಾನರಿಗೆ ಎದುರಾಡುವುದು, ಅವರ ವಸ್ತುಗಳನ್ನು ಕದಿಯುವುದು ಸರಿಯಲ್ಲ.


ಕ್ರಿಸ್ತಯೇಸುವಿನಲ್ಲಿ ಭಯಭಕ್ತಿಯುಳ್ಳವರಾಗಿದ್ದು, ಒಬ್ಬರಿಗೊಬ್ಬರು ನಮ್ರತೆಯಿಂದ ನಡೆದುಕೊಳ್ಳಿರಿ.


ರಾಜನು ಸಿಟ್ಟುಗೊಂಡನೆಂದು ಉದ್ಯೋಗಕ್ಕೇ ರಾಜೀನಾಮೆ ಕೊಟ್ಟುಬಿಡಬೇಡ; ತಾಳ್ಮೆಯಿಂದ ಘನದೋಷಗಳನ್ನೂ ಅಳಿಸಬಹುದು.


ಅದಕ್ಕೆ ಅಬ್ರಾಮನು, “ನಿನ್ನ ದಾಸಿ ನಿನ್ನ ಕೈಯಲ್ಲೇ ಇದ್ದಾಳೆ. ನಿನಗಿಷ್ಟ ಬಂದಂತೆ ಮಾಡು,” ಎಂದುಬಿಟ್ಟನು. ಬಳಿಕ ಸಾರಯಳು ಕೊಡುತ್ತಿದ್ದ ಕಿರುಕುಳವನ್ನು ತಾಳಲಾರದೆ ಹಾಗರಳು ಓಡಿಹೋದಳು.


“ಸಾರಯಳ ದಾಸಿಯಾದ ಹಾಗರಳೇ, ಎಲ್ಲಿಂದ ಬಂದೆ? ಎಲ್ಲಿಗೆ ಹೋಗುತ್ತಿರುವೆ?” ಎಂದು ವಿಚಾರಿಸಿದನು. “ನನ್ನ ಯಜಮಾನಿ ಸಾರಯಳ ಬಳಿಯಿಂದ ಓಡಿಹೋಗುತ್ತಿದ್ದೇನೆ,” ಎಂದು ಉತ್ತರಕೊಟ್ಟಳು.


ಅದೂ ಅಲ್ಲದೆ ಸ್ವಾಮಿಯ ದೂತನು, “ನಿನ್ನ ಸಂತಾನವನ್ನು ಲೆಕ್ಕಿಸಲಾಗದಷ್ಟು ದೊಡ್ಡದಾಗಿಸುವೆನು”, ಎಂದು ಹೇಳಿ ಇಂತೆಂದನು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು