Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 17:14 - ಕನ್ನಡ ಸತ್ಯವೇದವು C.L. Bible (BSI)

14 ಸುನ್ನತಿ ಮಾಡಿಸಿಕೊಳ್ಳದ ಗಂಡಸು ನನ್ನ ಒಡಂಬಡಿಕೆಯನ್ನು ಉಲ್ಲಂಘಿಸಿದವನಾದ ಕಾರಣ, ಅವನು ಕುಲದಿಂದ ಬಹಿಷ್ಕೃತನಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಸುನ್ನತಿಮಾಡಿಸಿಕೊಳ್ಳದ ಪುರುಷನಿಗೆ ನನ್ನ ಒಡಂಬಡಿಕೆಯನ್ನು ಉಲ್ಲಂಘಿಸಿದಂತೆ ಆಗುವ ಕಾರಣ ಅವನನ್ನು ಕುಲದಿಂದ ಬಹಿಷ್ಕರಿಸಬೇಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಸುನ್ನತಿ ಮಾಡಿಸಿಕೊಳ್ಳದ ಗಂಡಸು ನನ್ನ ಒಡಂಬಡಿಕೆಯನ್ನು ಮೀರಿದವನಾದ ಕಾರಣ ಅವನು ಕುಲದಿಂದ ತೆಗೆದುಹಾಕಲ್ಪಡಬೇಕು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಸುನ್ನತಿ ಮಾಡಿಸಿಕೊಳ್ಳದವನು ನನ್ನ ಒಡಂಬಡಿಕೆಯನ್ನು ಮೀರಿದ ಕಾರಣ, ಅವನನ್ನು ಜನರೊಳಗಿಂದ ಬಹಿಷ್ಕರಿಸಬೇಕು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 17:14
24 ತಿಳಿವುಗಳ ಹೋಲಿಕೆ  

ಏಳು ದಿನ ನಿಮ್ಮ ಮನೆಗಳಲ್ಲಿ ಹುಳಿಹಿಟ್ಟೇ ಇರಕೂಡದು. ಹುಳಿ ಬೆರಸಿದ್ದನ್ನು ತಿನ್ನುವವನು ಪರದೇಶದವನಾಗಿರಲಿ, ಸ್ವದೇಶದವನಾಗಿರಲಿ ಇಸ್ರಯೇಲ್ ಜನರಿಂದ ಬಹಿಷ್ಕೃತನು.


ಏಕೆಂದರೆ, ಅದು ಪ್ರಭುವಿನ ಶರೀರವೆಂದು ಪರಿಗ್ರಹಿಸದೆ, ಭುಜಿಸಿ ಪಾನಮಾಡುವಾತನು ನ್ಯಾಯತೀರ್ಪನ್ನು ತನ್ನ ಮೇಲೆ ಬರಮಾಡಿಕೊಳ್ಳುವುದಕ್ಕಾಗಿಯೇ ತಿನ್ನುತ್ತಾನೆ, ಕುಡಿಯುತ್ತಾನೆ.


ಯಾರಾದರೂ ಅಯೋಗ್ಯವಾಗಿ ಈ ರೊಟ್ಟಿಯನ್ನು ಭುಜಿಸಿದರೆ, ಅಥವಾ ಪ್ರಭುವಿನ ಪಾತ್ರೆಯಿಂದ ಪಾನಮಾಡಿದರೆ ಅವನು ಪ್ರಭುವಿನ ಶರೀರಕ್ಕೂ ರಕ್ತಕ್ಕೂ ದ್ರೋಹವೆಸಗುತ್ತಾನೆ.


ಈ ಒಡಂಬಡಿಕೆ, ನಾನು ಅವರ ಪೂರ್ವಜರನ್ನು ಕೈ ಹಿಡಿದು ಈಜಿಪ್ಟಿನಿಂದ ಕರೆದು ತಂದಾಗ ಅವರೊಡನೆ ಮಾಡಿಕೊಂಡ ಒಡಂಬಡಿಕೆ ಅಂಥದಾಗಿ ಇರುವುದಿಲ್ಲ. ನಾನು ಅವರಿಗೆ ಯಜಮಾನನಾಗಿ ಇದ್ದರೂ ಆ ನನ್ನ ಒಡಂಬಡಿಕೆಯನ್ನು ಅವರು ಮೀರಿನಡೆದರು.


ನನ್ನ ಮಾತನ್ನು ಕೇಳದೆಹೋದ ತಮ್ಮ ಮೂಲಪಿತೃಗಳ ದುಷ್ಕೃತ್ಯಗಳ ಕಡೆ ಈ ಜನರು ತಿರುಗಿಕೊಂಡಿದ್ದಾರೆ. ಅನ್ಯದೇವತೆಗಳನ್ನು ಹಿಂಬಾಲಿಸುತ್ತಿದ್ದಾರೆ. ಅವುಗಳನ್ನು ಪೂಜಿಸುತ್ತಿದ್ದಾರೆ. ನಾನು ಅವರ ಪೂರ್ವಜರ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ಇಸ್ರಯೇಲ್ ವಂಶದವರೂ ಜುದೇಯ ವಂಶದವರೂ ಮೀರಿದ್ದಾರೆ.


ರಾಜಮಾರ್ಗಗಳು ಬರಿದಾಗಿವೆ. ದಾರಿಗರೇ ಇಲ್ಲ.. ಶತ್ರುಗಳು ಒಪ್ಪಂದವನ್ನು ಮುರಿದಿದ್ದಾರೆ. ಸಾಕ್ಷಿಗಳನ್ನು ತಿರಸ್ಕರಿಸಿದ್ದಾರೆ. ಮಾನವರನ್ನು ಗಣನೆಗೆ ತಂದುಕೊಳ್ಳದವರಾಗಿದ್ದಾರೆ.


ಭೂನಿವಾಸಿಗಳು ಮೀರಿಹರು ದೈವಾಜ್ಞೆಗಳನು ಉಲ್ಲಂಘಿಸಿಹರು ದೈವನಿಯಮಗಳನು, ಭಂಗಪಡಿಸಿಹರು ಶಾಶ್ವತ ಒಡಂಬಡಿಕೆಯನ್ನು, ಮಲಿನವಾಗಿಸಿಹರು ನಡತೆಯಿಂದ ಲೋಕವನು.


ಮಿತ್ರರ ಮೇಲೆ ಕೈಯೆತ್ತಿರುವನು ಆ ನನ್ನ ಗೆಳೆಯನು I ತಾನು ಮಾಡಿದ ಒಪ್ಪಂದವನು ತಾನೆ ಮೀರಿ ನಡೆದಿಹನು II


ಅದರಲ್ಲಿ ಏನನ್ನಾದರೂ ತಿಂದವನು ಸರ್ವೇಶ್ವರನ ದ್ರವ್ಯವಾದ ಪರಿಶುದ್ಧತೆಯನ್ನು ಹೊಲೆಮಾಡುತ್ತಾನೆ. ಆದುದರಿಂದ ತನ್ನ ಪಾಪದ ಫಲವನ್ನು ಅನುಭವಿಸಲೇಬೇಕು. ಅವನು ಕುಲದಿಂದ ಬಹಿಷ್ಕೃತನಾಗಬೇಕು.


ಯಾರಾದರೂ ಈ ಅಸಹ್ಯವಾದ ಕಾರ್ಯಗಳಲ್ಲಿ ಒಂದನ್ನು ಮಾಡಿದ್ದೇ ಆದರೆ ಅವನನ್ನು ಕುಲದಿಂದ ತೆಗೆದುಬಿಡಬೇಕು.


ರಕ್ತವನ್ನು ಭೋಜನ ಮಾಡಿದವನು ಕುಲದಿಂದ ಬಹಿಷ್ಕೃತನಾಗಬೇಕು.”


ಜನರು ಸರ್ವೇಶ್ವರನಿಗೆ ಹೋಮ ಮಾಡುವಂಥ ಪ್ರಾಣಿಪಶುಗಳ ಕೊಬ್ಬನ್ನು ಯಾರಾದರು ತಿಂದರೆ ಅವರು ಕುಲದಿಂದ ಬಹಿಷ್ಕೃತರಾಗಬೇಕು.


ಕೇವಲ ಸುವಾಸನೆಗಾಗಿ ಅಂಥದ್ದನ್ನು ಮಾಡಿಕೊಳ್ಳುವವನನ್ನು ಅವನ ಕುಲದಿಂದ ಬಹಿಷ್ಕರಿಸಬೇಕು.”


ಇದರಂತೆ ತೈಲವನ್ನು ಮಾಡುವವನು ಹಾಗು ಇದನ್ನು ಯಾಜಕನಲ್ಲದವನ ಮೇಲೆ ಹಚ್ಚುವವನು ತನ್ನ ಕುಲದಿಂದ ಬಹಿಷ್ಕೃತನಾಗಬೇಕು.


ಏಳು ದಿವಸ ನೀವು ಹುಳಿರಹಿತ ರೊಟ್ಟಿಗಳನ್ನು ತಿನ್ನಬೇಕು. ಮೊದಲನೆಯ ದಿನದಲ್ಲೇ ಹುಳಿಹಿಟ್ಟನ್ನೆಲ್ಲಾ ನಿಮ್ಮ ಮನೆಗಳಿಂದ ತೆಗೆದುಬಿಡಬೇಕು. ಆ ಏಳು ದಿನಗಳಲ್ಲಿ ಯಾವನಾದರೂ ಹುಳಿಬೆರಸಿದ್ದನ್ನು ತಿಂದರೆ ಅವನನ್ನು ಇಸ್ರಯೇಲರಿಂದ ಬಹಿಷ್ಕರಿಸಬೇಕು.


ದೇವರುಅಬ್ರಹಾಮನಿಗೆ ಇನ್ನೂ ಹೇಳಿದ್ದು ಏನೆಂದರೆ: “ನೀನು ಇನ್ನು ಮುಂದೆ ನಿನ್ನ ಹೆಂಡತಿಯನ್ನು ಸಾರಯಳು ಎಂದು ಕರೆಯದೆ ಸಾರಳು ಎಂದು ಕರೆಯಬೇಕು.


“ಸುನ್ನತಿ ಇಲ್ಲದವರಿಗೆ ನಮ್ಮ ತಂಗಿಯನ್ನು ಕೊಡುವುದಕ್ಕೆ ಆಗುವುದಿಲ್ಲ. ಹಾಗೆ ಕೊಡುವುದು ನಮಗೆ ಅವಮಾನಕರ.


ಯಾವನಾದರು ಆ ದಿನದಲ್ಲಿ ಉಪವಾಸ ಮಾಡದೆಹೋದರೆ ಅವನನ್ನು ಕುಲದಿಂದ ತೆಗೆದುಹಾಕಬೇಕು.


ಒಬ್ಬನು ತಾನು ಶುದ್ಧನಾಗಿದ್ದರೂ ಪ್ರಯಾಣದಲ್ಲಿಲ್ಲದಿದ್ದರೂ ಪಾಸ್ಕ ಹಬ್ಬವನ್ನು ಆಚರಿಸಲು ತಪ್ಪಿದ್ದೇ ಆದರೆ ಅಂಥವನನ್ನು ಕುಲದಿಂದ ಹೊರಗೆ ಹಾಕಬೇಕು. ಅವನು ಸರ್ವೇಶ್ವರನಿಂದ ನಿಯಮಿತವಾದ ಬಲಿಯನ್ನು ಸಕಾಲದಲ್ಲಿ ಸಮರ್ಪಿಸದೆ ಹೋದುದರಿಂದ ತನ್ನ ಪಾಪಫಲವನ್ನು ಅನುಭವಿಸಲೇಬೇಕು.


ಇಸ್ರಯೇಲ್ ವಂಶದವರೇ, ನೀವು ನನ್ನ ಆಹಾರವಾದ ರಕ್ತಮೇದಸ್ಸುಗಳನ್ನು ಅರ್ಪಿಸುವಾಗ, ತನುಮನಗಳಲ್ಲಿ ಸುನ್ನತಿಹೀನರಾದ ಮ್ಲೇಚ್ಛರನ್ನು, ನನ್ನ ಪವಿತ್ರಾಲಯದೊಳಗೆ ಬರಮಾಡಿ ನನ್ನ ಮಂದಿರವನ್ನು ಅಶುದ್ಧಗೊಳಿಸಿದ್ದೀರಿ. ನನ್ನ ಒಡಂಬಡಿಕೆಯನ್ನು ಉಲ್ಲಂಘಿಸಿ ನಿಮ್ಮ ಅಮಿತ ದುರಾಚಾರಗಳ ಲೆಕ್ಕವನ್ನು ಹೆಚ್ಚಿಸಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು