Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 17:16 - ಕನ್ನಡ ಸತ್ಯವೇದವು C.L. Bible (BSI)

16 ನಾನು ಆಕೆಯನ್ನು ಆಶೀರ್ವದಿಸಿದ್ದೇನೆ. ಆಕೆ ನಿನಗೊಬ್ಬ ಮಗನನ್ನು ಹೆರುವಳು. ನನ್ನ ಆಶೀರ್ವಾದ ಪಡೆದ ಆಕೆ ರಾಷ್ಟ್ರಗಳಿಗೆ ಮಾತೆಯಾಗುವಳು; ಆಕೆಯಿಂದ ರಾಷ್ಟ್ರಗಳೂ, ರಾಜರುಗಳೂ ಉತ್ಪತ್ತಿಯಾಗುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನಾನು ಆಕೆಯನ್ನು ಆಶೀರ್ವದಿಸಿ, ಆಕೆಯಿಂದ ನಿನಗೆ ಒಬ್ಬ ಮಗನನ್ನು ಕೊಡುವೆನು. ನಾನು ಆಕೆಯನ್ನು ಆಶೀರ್ವದಿಸಿದ್ದರಿಂದ ಆಕೆಯಿಂದ ಅನೇಕ ಜನಾಂಗಗಳೂ ಅರಸರೂ ಉತ್ಪತ್ತಿಯಾಗುವರು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನಾನು ಆಕೆಯನ್ನು ಆಶೀರ್ವದಿಸಿ ಆಕೆಯಲ್ಲಿ ನಿನಗೆ ಮಗನನ್ನು ಕೊಡುವೆನು. ನಾನು ಆಕೆಯನ್ನು ಆಶೀರ್ವದಿಸಿದ್ದರಿಂದ ಆಕೆಯಿಂದ ಅನೇಕ ಜನಾಂಗಗಳೂ ಅರಸರೂ ಉತ್ಪತ್ತಿಯಾಗುವರು ಎಂದು ಹೇಳಲು ಅಬ್ರಹಾಮನು ಅಡ್ಡಬಿದ್ದು ನಕ್ಕು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನಾನು ಆಕೆಯನ್ನು ಆಶೀರ್ವದಿಸಿ ಆಕೆಗೆ ಒಬ್ಬ ಮಗನನ್ನು ದಯಪಾಲಿಸುವೆನು; ನೀನೇ ಅವನ ತಂದೆ. ಅನೇಕ ಜನಾಂಗಗಳಿಗೂ ರಾಜರುಗಳಿಗೂ ಆಕೆಯು ಮೂಲಮಾತೆಯಾಗಿರುವಳು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆಕೆಯನ್ನು ನಾನು ಆಶೀರ್ವದಿಸುತ್ತೇನೆ. ಆಕೆಯಿಂದ ನಿನಗೆ ಒಬ್ಬ ಮಗನನ್ನು ಸಹ ಕೊಡುತ್ತೇನೆ. ಆಕೆಯು ಜನಾಂಗಗಳ ತಾಯಿಯಾಗುವಂತೆ ಆಕೆಯನ್ನು ಆಶೀರ್ವದಿಸುತ್ತೇನೆ. ಆಕೆಯಿಂದ ರಾಷ್ಟ್ರಗಳೂ ಅರಸರೂ ಹುಟ್ಟುವರು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 17:16
17 ತಿಳಿವುಗಳ ಹೋಲಿಕೆ  

ಇದಲ್ಲದೆ ಅವನಿಗೆ ದೇವರು, “ನಾನೇ ಸರ್ವವಲ್ಲಭನಾದ ದೇವರು; ನೀನು ವೃದ್ಧಿಯಾಗಿ ಬಹುಸಂತಾನವುಳ್ಳವನಾಗು. ನಿನ್ನಿಂದ ರಾಷ್ಟ್ರವೊಂದು ಉಂಟಾಗುವುದು, ಅನೇಕ ರಾಷ್ಟ್ರಗಳೂ ರಾಜರುಗಳೂ ನಿನ್ನಿಂದ ಹುಟ್ಟುವರು.


ಸಾಕುತಂದೆಗಳಾಗುವರು ರಾಜರು ನಿನಗೆ ಸಾಕುತಾಯಿಯರಾಗುವರು ರಾಣಿಯರು ನಿನಗೆ. ನಿನ್ನ ಪಾದಧೂಳಿಯ ನೆಕ್ಕುವರವರು ಸಾಷ್ಟಾಂಗವೆರಗಿ ನನಗೆ. ಆಗ ನಿನಗೆ ಗೊತ್ತಾಗುವುದು ನಾನೇ ಸರ್ವೇಶ್ವರನೆಂದು ನನ್ನನ್ನು ನಿರೀಕ್ಷಿಸುವವರು ಆಶಾಭಂಗಪಡರೆಂದು.


ನಿನ್ನನ್ನು ಅತ್ಯಂತ ಫಲದಾಯಕ ಪುರುಷನನ್ನಾಗಿ ಮಾಡುತ್ತೇನೆ. ನಿನ್ನಿಂದ ರಾಷ್ಟ್ರಗಳೂ ರಾಜರುಗಳೂ ಉತ್ಪತ್ತಿಯಾಗುವರು.


ಉದಾಹರಣೆಗೆ: ಸಾರಳು ತನ್ನ ಪತಿ ಅಬ್ರಹಾಮನಿಗೆ ವಿಧೇಯಳಾಗಿದ್ದು ಆತನನ್ನು, “ಯಜಮಾನ” ಎಂದು ಕರೆಯುತ್ತಿದ್ದಳು. ಯಾವ ಭಯಭೀತಿಯಿಲ್ಲದೆ ಸತ್ಕಾರ್ಯಗಳನ್ನು ಮಾಡುವವರಾಗಿದ್ದರೆ, ನೀವೂ ಸಾರಳ ಕುಮಾರ್ತಿಯರೇ ಹೌದು.


ಆ ವಾಗ್ದಾನ ಹೀಗಿತ್ತು: “ನಿಯಮಿತ ಕಾಲದಲ್ಲಿ ನಾನು ಮರಳಿ ಬರುವೆನು. ಆಗ ಸಾರಳಿಗೆ ಒಬ್ಬ ಮಗನಿರುವನು.”


“ಸಾವಿರ, ಹತ್ತು ಸಾವಿರ, ಸಂತತಿಯಾಗಲಿ, ಎಲೆ ತಂಗಿ ನಿನಗೆ; ವೈರಿಗಳ ನಗರಗಳು ಸ್ವಾಧೀನವಾಗಲಿ ನಿನ್ನ ಸಂತತಿಗೆ!”


ನಾನು ನಿನ್ನನ್ನು ದೊಡ್ಡ ಜನಾಂಗವಾಗಿ ಮಾಡುತ್ತೇನೆ. ನಿನ್ನನ್ನು ಆಶೀರ್ವದಿಸಿ ನಿನ್ನ ಹೆಸರಿಗೆ ಘನತೆಗೌರವವನ್ನು ತರುತ್ತೇನೆ. ನೀನೇ ಆದರ್ಶದ ಆಶೀರ್ವಾದವಾಗಿ ಬೆಳಗುವೆ.


ಅವರನ್ನು ದೇವರು ಆಶೀರ್ವದಿಸಿ, “ನೀವು ಅಭಿವೃದ್ಧಿಯಾಗಿ, ಅನೇಕ ಮಕ್ಕಳನ್ನು ಪಡೆಯಿರಿ; ಭೂಮಿಯಲ್ಲಿ ಹರಡಿಕೊಂಡು ಅದನ್ನು ವಶಪಡಿಸಿಕೊಳ್ಳಿರಿ; ಸಮುದ್ರದ ಮೀನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಭೂಮಿಯಲ್ಲಿ ಚಲಿಸುವ ಎಲ್ಲ ಪ್ರಾಣಿಗಳ ಮೇಲೆಯೂ ದೊರೆತನ ಮಾಡಿರಿ.


ದಾಸಿಯ ಮಗ ಪ್ರಕೃತಿ ಸಹಜವಾಗಿ ಹುಟ್ಟಿದವನು; ಧರ್ಮಪತ್ನಿಯ ಮಗನಾದರೋ ವಾಗ್ದಾನದ ಫಲವಾಗಿ ಹುಟ್ಟಿದವನು.


ದೇವರುಅಬ್ರಹಾಮನಿಗೆ ಇನ್ನೂ ಹೇಳಿದ್ದು ಏನೆಂದರೆ: “ನೀನು ಇನ್ನು ಮುಂದೆ ನಿನ್ನ ಹೆಂಡತಿಯನ್ನು ಸಾರಯಳು ಎಂದು ಕರೆಯದೆ ಸಾರಳು ಎಂದು ಕರೆಯಬೇಕು.


ಅದಕ್ಕೆ ದೇವರು, “ಇಲ್ಲ, ನಿನ್ನ ಹೆಂಡತಿ ಸಾರಳೇ ನಿನಗೊಂದು ಮಗನನ್ನು ಹೆರುವಳು. ಅವನಿಗೆ ಇಸಾಕನೆಂದು ಹೆಸರಿಡಬೇಕು. ನನ್ನ ಒಡಂಬಡಿಕೆಯನ್ನು ಅವನೊಂದಿಗೂ ಅವನ ಸಂತತಿಯೊಂದಿಗೂ ಚಿರವಾದ ಒಡಂಬಡಿಕೆಯಾಗಿ ಸ್ಥಿರಗೊಳಿಸುತ್ತೇನೆ.


ಸರ್ವೇಶ್ವರ ಸ್ವಾಮಿ ತಾವು ಹೇಳಿದ್ದಂತೆಯೇ ಸಾರಳಿಗೆ ನೆರವಾದರು. ಆಕೆಗೆ ಕೊಟ್ಟ ಮಾತನ್ನು ನೆರವೇರಿಸಿದರು.


ಸರ್ವೇಶ್ವರ ಆಕೆಗೆ ಇಂತೆಂದರು: ನಿನ್ನ ಉದರದೊಳಿವೆ ಜನಾಂಗಗಳೆರಡು ಹುಟ್ಟಿನಿಂದ ವೈರಿಗಳಾ ರಾಷ್ಟ್ರಗಳೆರಡು ಬಲಿಷ್ಠವಿರುವುದು ಒಂದು ಮತ್ತೊಂದಕೆ ಜ್ಯೇಷ್ಠನೇ ದಾಸನಾಗುವನು ಕನಿಷ್ಠನಿಗೆ.


ಇಸ್ರಯೇಲರ ಅರಸರು ಆಳುವುದಕ್ಕೆ ಮುಂಚೆ ಎದೋಮ್ಯರ ನಾಡಲ್ಲಿ ಆಳುತ್ತಿದ್ದ ಅರಸರ ಹೆಸರುಗಳು ಹೀಗಿವೆ:


ಮತ್ತೆ ಸ್ವಾಮಿಯ ವಾಣಿ - “ಇಲ್ಲ, ಅವನು ಉತ್ತರಾಧಿಕಾರಿಯಾಗುವುದಿಲ್ಲ, ನಿನ್ನಿಂದ ಹುಟ್ಟಿದವನೇ ನಿನಗೆ ಉತ್ತರಾಧಿಕಾರಿ ಆಗುತ್ತಾನೆ” ಎಂದಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು