Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 17:19 - ಕನ್ನಡ ಸತ್ಯವೇದವು C.L. Bible (BSI)

19 ಅದಕ್ಕೆ ದೇವರು, “ಇಲ್ಲ, ನಿನ್ನ ಹೆಂಡತಿ ಸಾರಳೇ ನಿನಗೊಂದು ಮಗನನ್ನು ಹೆರುವಳು. ಅವನಿಗೆ ಇಸಾಕನೆಂದು ಹೆಸರಿಡಬೇಕು. ನನ್ನ ಒಡಂಬಡಿಕೆಯನ್ನು ಅವನೊಂದಿಗೂ ಅವನ ಸಂತತಿಯೊಂದಿಗೂ ಚಿರವಾದ ಒಡಂಬಡಿಕೆಯಾಗಿ ಸ್ಥಿರಗೊಳಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ದೇವರು, “ಹಾಗಲ್ಲ ನಿನ್ನ ಹೆಂಡತಿಯಾದ ಸಾರಳಲ್ಲಿಯೇ ನಿನಗೆ ಮಗನು ಹುಟ್ಟುವನು. ಅವನಿಗೆ ‘ಇಸಾಕ’ ಎಂದು ಹೆಸರಿಡಬೇಕು. ಅವನ ಸಂಗಡ ನನ್ನ ಒಡಂಬಡಿಕೆಯನ್ನು ಸ್ಥಾಪಿಸಿಕೊಳ್ಳುವೆನು; ಅದು ಅವನ ಸಂತತಿಯವರಲ್ಲಿಯೂ ಶಾಶ್ವತವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಹಾಗಲ್ಲ, ನಿನ್ನ ಪತ್ನಿಯಾದ ಸಾರಳಲ್ಲಿಯೇ ನಿನ್ನಿಂದ ಮಗನು ಹುಟ್ಟುವನು. ಅವನಿಗೆ ಇಸಾಕನೆಂದು ಹೆಸರಿಡಬೇಕು. ಅವನ ಸಂಗಡ ನನ್ನ ಒಡಂಬಡಿಕೆಯನ್ನು ಸ್ಥಾಪಿಸಿಕೊಳ್ಳುವೆನು; ಅದು ಅವನ ಸಂತತಿಯವರಲ್ಲಿಯೂ ಶಾಶ್ವತವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಅದಕ್ಕೆ ದೇವರು ಅವನಿಗೆ, “ಇಲ್ಲ! ನಿನ್ನ ಹೆಂಡತಿಯಾದ ಸಾರಳಿಗೆ ಒಬ್ಬ ಮಗನು ಹುಟ್ಟುವನು. ನೀನು ಅವನಿಗೆ, ‘ಇಸಾಕ’ ಎಂದು ಹೆಸರಿಡಬೇಕು. ನಾನು ಒಂದು ಒಡಂಬಡಿಕೆಯನ್ನು ಅವನೊಡನೆ ಮಾಡಿಕೊಳ್ಳುವೆನು. ಆ ಒಡಂಬಡಿಕೆಯು ಅವನ ಎಲ್ಲಾ ಸಂತತಿಯವರಲ್ಲಿಯೂ ಶಾಶ್ವತವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಅದಕ್ಕೆ ದೇವರು, “ನಿಶ್ಚಯವಾಗಿ ನಿನ್ನ ಹೆಂಡತಿ ಸಾರಳು ಮಗನನ್ನು ಹೆರುವಳು. ಅವನಿಗೆ, ‘ಇಸಾಕ್’ ಎಂದು ಹೆಸರಿಡಬೇಕು. ಅವನ ಸಂಗಡವೂ ಅವನ ತರುವಾಯ ಹುಟ್ಟುವ ಅವನ ಸಂತತಿಯವರ ಸಂಗಡವೂ ನಾನು ನನ್ನ ಶಾಶ್ವತವಾದ ಒಡಂಬಡಿಕೆಯನ್ನು ಸ್ಥಾಪಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 17:19
17 ತಿಳಿವುಗಳ ಹೋಲಿಕೆ  

ಸಾರಳು ಇಂತೆಂದುಕೊಂಡಳು: “ತಂದಿಹನಿದೋ ಎನಗೊಂದು ‘ನಗು’ವನು ಆ ದೇವನು, ನಕ್ಕು ನಲಿವರೆನ್ನೊಡನೆ ಇದನು ಕೇಳುವವರೆಲ್ಲರು.”


ನಾನು ಹೇಳುವ ನಾಡಿನಲ್ಲಿ ಇದ್ದು ಪ್ರವಾಸ ಮಾಡುತ್ತಿರು. ನಾನು ನಿನ್ನ ಸಂಗಡವಿದ್ದು ನೀನು ಏಳಿಗೆಯಾಗುವಂತೆ ಮಾಡುತ್ತೇನೆ; ಈ ನಾಡೆಲ್ಲವನ್ನು ನಿನಗೂ ನಿನ್ನ ಸಂತತಿಗೂ ಕೊಡುತ್ತೇನೆ.


ಆದರೆ ಆ ನನ್ನ ಒಡಂಬಡಿಕೆಯನ್ನು ಇಸಾಕನಲ್ಲಿಯೇ ಊರ್ಜಿತಗೊಳಿಸುತ್ತೇನೆ.


ಮರೆಯಲಿಲ್ಲ ಆತ ಕರುಣೆತೋರಲು ಅಬ್ರಹಾಮನಿಗೆ I ಅವನ ಸಂತತಿಗೆ, ಯುಗಯುಗಾಂತರದವರೆಗೆ II


ಇದಲ್ಲದೆ, ಪ್ರಾಯಮೀರಿದ ಸಾರಳು ಕೂಡ ವಿಶ್ವಾಸದ ಮೂಲಕವಾಗಿಯೇ ಗರ್ಭವತಿ ಆಗುವ ಶಕ್ತಿಯನ್ನು ಪಡೆದಳು; ವಾಗ್ದಾನಮಾಡಿದ ದೇವರು ನಂಬಿಕಸ್ಥರು ಎಂಬ ಭರವಸೆ ಆಕೆಗಿತ್ತು.


ಆ ಬಿಲ್ಲು ಮೇಘಗಳಲ್ಲಿ ಕಾಣಿಸುವಾಗ ನಾನು ಅದನ್ನು ನೋಡಿ ದೇವರಾದ ನನಗೂ ಭೂಮಿಯ ಮೇಲಿರುವ ಎಲ್ಲ ಜೀವಜಂತುಗಳಿಗೂ ಆದ ಶಾಶ್ವತ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳುತ್ತೇನೆ,”


ನಿನಗೂ ನಿನ್ನ ಸಂತತಿಗೂ ನಾನು ದೇವರಾಗಿರುತ್ತೇನೆ. ಈ ನನ್ನ ಒಡಂಬಡಿಕೆಯನ್ನು ನಿನಗೋಸ್ಕರವೂ ನಿನ್ನ ಸಂತತಿಗೋಸ್ಕರವೂ ತಲತಲಾಂತರದವರೆಗೂ ಚಿರಒಡಂಬಡಿಕೆಯಾಗಿ ಸ್ಥಿರಪಡಿಸುತ್ತೇನೆ.


ನಾನು ಆಕೆಯನ್ನು ಆಶೀರ್ವದಿಸಿದ್ದೇನೆ. ಆಕೆ ನಿನಗೊಬ್ಬ ಮಗನನ್ನು ಹೆರುವಳು. ನನ್ನ ಆಶೀರ್ವಾದ ಪಡೆದ ಆಕೆ ರಾಷ್ಟ್ರಗಳಿಗೆ ಮಾತೆಯಾಗುವಳು; ಆಕೆಯಿಂದ ರಾಷ್ಟ್ರಗಳೂ, ರಾಜರುಗಳೂ ಉತ್ಪತ್ತಿಯಾಗುವರು.”


“ಇಷ್ಮಾಯೇಲನು ಇದ್ದಾನಲ್ಲವೆ? ನಿಮ್ಮ ಸಮ್ಮುಖದಲ್ಲಿ ಅವನು ಬಾಳಿದರೆ ಸಾಕಲ್ಲವೆ?” ಎಂದನು.


ಅಲ್ಲಿ ಸರ್ವೇಶ್ವರ ಸ್ವಾಮಿ ಇಸಾಕನಿಗೆ ದರ್ಶನ ಕೊಟ್ಟು ಇಂತೆಂದರು: “ನೀನು ಈಜಿಪ್ಟಿಗೆ ಹೋಗಬೇಡ;


ಹುಟ್ಟುವನು ಮಗನೊಬ್ಬನು ಗರ್ಭಿಣಿಯಾದ ನಿನಗೆ ಇಷ್ಮಾಯೇಲೆಂಬ ಹೆಸರನು ಇಡು ಅವನಿಗೆ ಕಾರಣ - ಸರ್ವೇಶ್ವರ ಕಿವಿಗೊಟ್ಟಿಹನು ನಿನ್ನ ಮೊರೆಗೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು