Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 17:8 - ಕನ್ನಡ ಸತ್ಯವೇದವು C.L. Bible (BSI)

8 ನೀನು ಪ್ರವಾಸವಾಗಿರುವ ಈ ಕಾನಾನ್ ನಾಡೆಲ್ಲವನ್ನು ನಿನಗೂ ನಿನ್ನ ಸಂತಾನಕ್ಕೂ ಶಾಶ್ವತವಾದ ಸೊತ್ತಾಗಿ ಕೊಡುತ್ತೇನೆ. ನಾನು ನಿಮ್ಮ ಕುಲದೇವರಾಗಿರುತ್ತೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನೀನು ಪ್ರವಾಸಿಯಾಗಿರುವ ಕಾನಾನ್ ದೇಶವನ್ನೆಲ್ಲಾ ನಿನಗೂ ನಿನ್ನ ಸಂತತಿಗೂ ಶಾಶ್ವತ ಸ್ವತ್ತಾಗಿ ಕೊಟ್ಟು ಎಂದೆಂದಿಗೂ ಅವರಿಗೆ ದೇವರಾಗಿರುವೆನು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನೀನು ಪ್ರವಾಸವಾಗಿರುವ ಕಾನಾನ್‍ದೇಶವನ್ನೆಲ್ಲಾ ನಿನಗೂ ನಿನ್ನ ಸಂತತಿಗೂ ಶಾಶ್ವತ ಸ್ವಾಸ್ತ್ಯವನ್ನಾಗಿ ಕೊಟ್ಟು ಅವರಿಗೆ ದೇವರಾಗಿರುವೆನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನೀನು ಪ್ರಯಾಣ ಮಾಡುತ್ತಿರುವ ಈ ಕಾನಾನ್ ದೇಶವನ್ನೆಲ್ಲ ನಿನಗೂ ನಿನ್ನ ಸಂತತಿಯವರಿಗೂ ಶಾಶ್ವತವಾಗಿ ಕೊಡುವೆನು. ನಾನೇ ನಿಮ್ಮ ದೇವರಾಗಿರುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನೀನು ಪ್ರವಾಸಿಯಾಗಿರುವ ಕಾನಾನ್ ದೇಶವನ್ನೆಲ್ಲಾ ನಿನಗೂ ನಿನ್ನ ತರುವಾಯ ನಿನ್ನ ಸಂತತಿಗೂ ಶಾಶ್ವತವಾದ ಸ್ವತ್ತನ್ನಾಗಿ ಕೊಟ್ಟು, ನಾನು ಅವರಿಗೆ ದೇವರಾಗಿರುವೆನು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 17:8
47 ತಿಳಿವುಗಳ ಹೋಲಿಕೆ  

ನಿಮ್ಮ ನಡುವೆ ಸಂಚರಿಸುತ್ತಾ ನಿಮಗೆ ದೇವರಾಗಿರುವೆನು. ನೀವು ನನಗೆ ಪ್ರಜೆಗಳಾಗಿರುವಿರಿ.


“ನಾ ಕೊಡುವೆನು ಕಾನಾನ್ ನಾಡನು ನಿಮಗೆ I ಸ್ವಾಸ್ತ್ಯವಾಗುವುದು ಅದು ನಿಮ್ಮ ಸಂತತಿಗೆ” II


ನಾನು ನಿಮ್ಮನ್ನು ನನ್ನ ಪ್ರಜೆಯಾಗಿ ಮಾಡುವೆನು; ನಾನು ನಿಮ್ಮ ದೇವರಾಗಿರುವೆನು. ಈಜಿಪ್ಟಿನವರು ಹೊರಿಸುವ ದುಡಿಮೆಯನ್ನು ನಾನು ನಿಮ್ಮಿಂದ ಬಿಡಿಸಿದಾಗ ಸರ್ವೇಶ್ವರ ಎಂಬ ನಾನೇ ನಿಮ್ಮ ದೇವರೆಂದು ನಿಮಗೆ ತಿಳಿದುಬರುವುದು.


ಅಲ್ಲಿ ಸರ್ವೇಶ್ವರ ಸ್ವಾಮಿ ಅಬ್ರಾಮನಿಗೆ ದರ್ಶನವಿತ್ತು - “ಈ ನಾಡನ್ನು ನಾನು ನಿನ್ನ ಸಂತಾನಕ್ಕೆ ಕೊಡುತ್ತೇನೆ” ಎಂದು ಹೇಳಿದರು. ತನಗೆ ದರ್ಶನಕೊಟ್ಟ ಸರ್ವೇಶ್ವರನಿಗೆ ಅಬ್ರಾಮನು ಅಲ್ಲಿ ಒಂದು ಬಲಿಪೀಠವನ್ನು ಕಟ್ಟಿಸಿದನು.


ಸರ್ವೇಶ್ವರ ಸ್ವಾಮಿ ಆದರೋ ನಿಮ್ಮ ವಿಷಯದಲ್ಲಿ, ‘ಇವರು ನನ್ನ ಆಜ್ಞೆಗಳನ್ನೆಲ್ಲ ಅನುಸರಿಸುವವರಾದರೆ ನನ್ನ ವಾಗ್ದಾನಾನುಸಾರ ನನಗೆ ಸ್ವಕೀಯಜನರಾಗಿರುವರು.


ಏಕೆಂದರೆ ನೀವು ನಿಮ್ಮ ದೇವರಾದ ಸರ್ವೇಶ್ವರನಿಗೆ ಮೀಸಲು ಜನ. ಅವರು ಜಗದಲ್ಲಿರುವ ಸಮಸ್ತಜನಾಂಗಗಳಲ್ಲಿ ನಿಮ್ಮನ್ನೇ ಸ್ವಕೀಯಜನರಾಗುವುದಕ್ಕೆ ಆರಿಸಿಕೊಂಡಿದ್ದಾರೆ.


ನಿನ್ನ ಕಣ್ಣಿಗೆ ಕಾಣಿಸುವ ಈ ಪ್ರಾಂತ್ಯವನ್ನೆಲ್ಲಾ ನಿನಗೂ ನಿನ್ನ ಸಂತಾನಕ್ಕೂ ಶಾಶ್ವತವಾಗಿ ಕೊಡುತ್ತೇನೆ.


ಅಬ್ರಹಾಮನೊಡನೆ ಮಾಡಿಕೊಂಡ ಒಡಂಬಡಿಕೆಯನು I ಇಸಾಕನಿಗೆ ಆಣೆಯಿಟ್ಟು ಆತ ಹೇಳಿದುದನು II


ನಿಮ್ಮ ಪಿತೃಗಳನ್ನು ಪ್ರೀತಿಸಿ, ತರುವಾಯ ಅವರ ಸಂತತಿಯಾದ ನಿಮ್ಮನ್ನೂ ಆರಿಸಿಕೊಂಡರು.


ದೇವರು ಅಬ್ರಹಾಮನಿಗೆ ಕೊಟ್ಟ ಆಶೀರ್ವಾದವನ್ನು ನಿನಗೂ ನಿನ್ನ ಸಂತತಿಗೂ ಕೊಡಲಿ; ನೀನು ಪ್ರವಾಸಿಯಾಗಿರುವ ಈ ನಾಡನ್ನು, ಅಂದರೆ ಅಬ್ರಹಾಮನಿಗೆ ದೇವರು ವಾಗ್ದಾನಮಾಡಿದ್ದ ಈ ನಾಡನ್ನು, ನೀನು ಸ್ವಂತ ಸೊತ್ತಾಗಿಸಿಕೊಳ್ಳುವಂತಾಗಲಿ!” ಎಂದು ಹರಸಿ ಕಳುಹಿಸಿಬಿಟ್ಟನು.


ನೀನೆದ್ದು ಈ ನಾಡಿನ ಉದ್ದಗಲಕ್ಕೂ ತಿರುಗಾಡು; ಇದನ್ನು ನಾನು ನಿನಗೆ ಕೊಡುತ್ತೇನೆ, ಎಂದು ಹೇಳಿದರು.


ಹೌದು, ಸರ್ವೇಶ್ವರನ ಸನ್ನಿಧಿಯಲಿ ನನ್ನ ಮನೆತನ ಸುಸ್ಥಿರ ಆತನೊಂದಿಗೆ ನಾ ಮಾಡಿಲ್ಲವೆ ಚಿರವಾದ ಒಪ್ಪಂದ? ಅದೆಲ್ಲದರಲು ಸುವ್ಯವಸ್ಥಿತ, ಅದೆಂದಿಗೂ ನಿರ್ಭೀತ. ಆತನೇ ನನ್ನುದ್ಧಾರಕ್ಕೆ ಮೂಲಾಧಾರ ನನ್ನ ಆಶೆ ಆಕಾಂಕ್ಷೆಗಳ ಪೂರೈಸುವಾತ.


ಪರಾತ್ಪರ ದೇವರು ಜನಾಂಗಗಳನು ಬೇರೆಬೇರೆಮಾಡಿದಾಗ, ಅವರವರಿಗೆ ಸ್ವದೇಶಗಳನು ವಿಂಗಡಿಸಿಕೊಟ್ಟಾಗ, ದೇವಕುವರರ ಸಂಖ್ಯಾನುಸಾರ ಪ್ರದೇಶಗಳನು ಗೊತ್ತುಮಾಡಿದಾಗ.


ಆ ಒಪ್ಪಂದವೇನೆಂದರೆ ಅವನಿಗೂ ಅವನ ತರುವಾಯ ಅವನ ಸಂತತಿಯವರಿಗೂ ಯಾಜಕತ್ವವು ಶಾಶ್ವತವಾಗಿಯೇ ಇರುವುದೆಂದು ವಾಗ್ದಾನ ಮಾಡುತ್ತೇನೆ. ಅವನು ತನ್ನ ದೇವರ ಗೌರವದ ಬಗ್ಗೆ ಅಭಿಮಾನ ವ್ಯಕ್ತಪಡಿಸಿದ್ದಾನೆ; ಇಸ್ರಯೇಲರ ದೋಷಕ್ಕಾಗಿ ಪ್ರಾಯಶ್ಚಿತ್ತ ಮಾಡಿದ್ದಾನೆ. ಆದ್ದರಿಂದ ಅವನಿಗೇ ಈ ವಾಗ್ದಾನ ಮಾಡಿದ್ದೇನೆ.”


ಅವರಿಗೆ ಅಂಗಿಗಳನ್ನು ತೊಡಿಸಿ ಅವರು ನನಗೋಸ್ಕರ ಯಾಜಕರಾಗುವುದಕ್ಕಾಗಿ ನೀನು ಅವರ ತಂದೆಯನ್ನು ಅಭಿಷೇಕಿಸಿದಂತೆಯೇ ಅವರನ್ನು ಕೂಡ ಅಭಿಷೇಕಿಸು. ಈ ಅಭಿಷೇಕದಿಂದ ಯಾಜಕತ್ವವು ಅವರಿಗೂ ಅವರ ಸಂತತಿಯವರಿಗೂ ಶಾಶ್ವತವಾಗಿರುವುದು,” ಎಂದು ಹೇಳಿದರು.


‘ನಾನು ನಿನ್ನನ್ನು ಫಲಪ್ರದನನ್ನಾಗಿ ಮಾಡಿ ನಿನ್ನ ಸಂತತಿಯನ್ನು ಹೆಚ್ಚಿಸುವೆನು; ಅನೇಕ ಜನರಿಗೆ ನಿನ್ನನ್ನು ಮೂಲಪುರುಷನನ್ನಾಗಿ ಮಾಡುವೆನು; ನಿನ್ನ ತರುವಾಯ ನಿನ್ನ ಸಂತತಿಗೆ ಈ ನಾಡನ್ನು ಶಾಶ್ವತ ಸೊತ್ತನ್ನಾಗಿ ಕೊಡುವೆನು,’ ಎಂದು ಹೇಳಿದರು.


“ನಿಮ್ಮ ಮಧ್ಯೆ ನಾನೊಬ್ಬ ಹೊರನಾಡಿಗ, ಒಬ್ಬ ಪ್ರವಾಸಿ, ಮೃತಳಾಗಿರುವ ನನ್ನ ಪತ್ನಿಯನ್ನು ಸಮಾಧಿ ಮಾಡಲು ಸ್ವಲ್ಪ ಜಮೀನನ್ನು ನನ್ನ ಸ್ವಂತಕ್ಕೆ ಕೊಡಬೇಕೆಂದು ಕೇಳಿಕೊಳ್ಳುತ್ತೇನೆ,” ಎಂದನು.


ಈ ಕಾರಣ, ಯೇಸು ಹೊಸ ಒಡಂಬಡಿಕೆಯನ್ನು ಏರ್ಪಡಿಸಿದ ಮಧ್ಯಸ್ಥರಾಗಿದ್ದಾರೆ. ದೈವಕರೆ ಹೊಂದಿದವರು ದೇವರು ವಾಗ್ದಾನಮಾಡಿದ ಅಮರ ಸೌಭಾಗ್ಯವನ್ನು ಬಾಧ್ಯವಾಗಿ ಪಡೆಯುವಂತೆ ಈ ಒಡಂಬಡಿಕೆಯನ್ನು ಏರ್ಪಡಿಸಲಾಯಿತು. ಇದು ಯೇಸುವಿನ ಮರಣದ ಮೂಲಕವೇ ಉಂಟಾಯಿತು. ಈ ಮರಣವು ಹಳೆಯ ಒಡಂಬಡಿಕೆಯನ್ನು ಮೀರಿ ಮಾಡಿದ ಅಪರಾಧಗಳನ್ನೂ ಪರಿಹರಿಸುತ್ತದೆ.


ಭಯಭಕ್ತರಿಗೆ ಪ್ರಭುವಿನ ಪ್ರೀತಿಯಾದರೋ ಯುಗಯುಗಾಂತರಕು I ಅವರ ಮಕ್ಕಳ ಮಕ್ಕಳಿಗೆ ಆತನ ನೀತಿಯು ತಲತಲಾಂತರಕು II


ಇಸ್ರಯೇಲರ ಎಲ್ಲಾ ದೋಷಗಳನ್ನು ನಿವಾರಣೆಮಾಡುವುದಕ್ಕಾಗಿ ಅವರಿಗೋಸ್ಕರ ವರ್ಷಕ್ಕೆ ಒಂದಾವರ್ತಿ ಪ್ರಾಯಶ್ಚಿತ್ತ ಮಾಡಬೇಕಾದುದು ನಿಮಗೆ ಶಾಶ್ವತ ನಿಯಮವಾಗಿರಬೇಕು. ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆಯೇ ಆರೋನನು ಮಾಡಿದನು.


ಆಗ ಅವನ ಯಜಮಾನ ಅವನನ್ನು ದೇವರ ಸನ್ನಿಧಿಗೆ ಕರೆದುಕೊಂಡು ಬಂದು ಕದದ ಹತ್ತಿರ ಅಥವಾ ಬಾಗಿಲಿನ ನಿಲುವು ಪಟ್ಟಿಗಳ ಹತ್ತಿರ ನಿಲ್ಲಿಸಿ ದಬ್ಬಳದಿಂದ ಅವನ ಕಿವಿಚುಚ್ಚಬೇಕು. ಅಂದಿನಿಂದ ಯಜಮಾನನಿಗೆ ಶಾಶ್ವತ ಗುಲಾಮನಾಗಿರುವನು.


ಆಗ ಇಲ್ಲಿ ಕಾಲಿಡುವಷ್ಟು ನೆಲವನ್ನು ಕೂಡ ದೇವರು ಅವನಿಗೆ ಸ್ವಾಸ್ತ್ಯವಾಗಿ ಕೊಡಲಿಲ್ಲ. ಸ್ವಂತ ಸೊತ್ತಾಗಿ ಅವನಿಗೂ ಅವನ ಬಳಿಕ ಅವನ ಸಂತತಿಗೂ ಕೊಡುವುದಾಗಿ ವಾಗ್ದಾನಮಾಡಿದರಷ್ಟೆ. ಆಗ ಅಬ್ರಹಾಮನಿಗೆ ಮಕ್ಕಳೇ ಇರಲಿಲ್ಲ.


ಜಯಶಾಲಿಯಾದವನು ಆಗುವನು ಇದಕ್ಕೆಲ್ಲಾ ಬಾಧ್ಯನು ನಾನವನಿಗೆ ದೇವನಾಗಿರುವೆನು ಅವನೆನಗೆ ಪುತ್ರನಾಗಿರುವನು.


ಆ ರಾತ್ರಿ ಸರ್ವೇಶ್ವರ ಅವನಿಗೆ ದರ್ಶನವಿತ್ತು, “ನಿನ್ನ ತಂದೆ ಅಬ್ರಹಾಮನ ದೇವರು ನಾನೇ ಅಂಜಬೇಡ, ನಿನ್ನ ಸಂಗಡ ನಾನಿರುವೆ. ಆ ನನ್ನ ದಾಸ ಅಬ್ರಹಾಮನ ನಿಮಿತ್ತ ನಿನ್ನ ಹರಸಿ ನಾ ಹೆಚ್ಚಿಸುವೆ ನಿನ್ನ ಸಂತಾನವ” ಎಂದರು.


ಸಿರಿಸಂಪತ್ತು ಹೆಚ್ಚಾಗಿ ಇದ್ದುದರಿಂದ ಅವರಿಬ್ಬರೂ ಒಂದೇ ಸ್ಥಳದಲ್ಲಿ ವಾಸಮಾಡಲು ಅನುಕೂಲವಾಗಿರಲಿಲ್ಲ; ಪಶುಪ್ರಾಣಿಗಳು ಬಹಳ ಆಗಿದ್ದುದರಿಂದ ಅವರು ತಂಗಿದ್ದ ನಾಡು ಅವರಿಗೆ ಸಾಲದೆ ಹೋಯಿತು.


ಯಕೋಬನು ತನ್ನ ತಂದೆ ಪ್ರವಾಸಿ ಆಗಿದ್ದ ಕಾನಾನ್ ನಾಡಿನಲ್ಲಿ ವಾಸ ಆಗಿದ್ದನು. ಅವನ ಮಕ್ಕಳ ಚರಿತ್ರೆ ಇದು:


“ಸರ್ವೇಶ್ವರ ಸ್ವಾಮಿ ನಿಮಗೂ ನಿಮ್ಮ ಪೂರ್ವಜರಿಗೂ ಕೊಟ್ಟ ವಾಗ್ದಾನದ ಮೇರೆಗೆ ನಿಮ್ಮನ್ನು ಕಾನಾನ್ಯರ ನಾಡಿಗೆ ಬರಮಾಡಿ ಆ ನಾಡನ್ನು ನಿಮಗೆ ಕೊಟ್ಟನಂತರ


ತಮ್ಮ ಮಧ್ಯೆ ವಾಸವಾಗುವುದಕ್ಕಾಗಿಯೇ ತಮ್ಮನ್ನು ಈಜಿಪ್ಟಿನಿಂದ ಹೊರಗೆ ಬರಮಾಡಿದ ತಮ್ಮ ದೇವರಾದ ಸರ್ವೇಶ್ವರನು ನಾನೇ ಎಂದು ಅವರು ಅರಿತುಕೊಳ್ಳುವರು. ಹೌದು, ನಾನೇ ಅವರ ದೇವರಾದ ಸರ್ವೇಶ್ವರ ಸ್ವಾಮಿ.


ತಮ್ಮ ದಾಸರಾದ ಅಬ್ರಹಾಮ್, ಇಸಾಕ್ ಹಾಗು ಯಕೋಬರನ್ನು ನೆನಪಿಗೆ ತಂದುಕೊಳ್ಳಿ. ತಾವು ತಮ್ಮ ಜೀವದಾಣೆ ಪ್ರಮಾಣ ಮಾಡಿ ಅವರಿಗೆ, ‘ನಾನು ನಿಮ್ಮ ಸಂತತಿಯನ್ನು ಹೆಚ್ಚಿಸಿ ಆಕಾಶದ ನಕ್ಷತ್ರಗಳಷ್ಟು ಅಸಂಖ್ಯವಾಗಿ ಮಾಡುವೆನು; ನಾನು ಸೂಚಿಸಿರುವ ಈ ಪ್ರದೇಶಗಳನ್ನೆಲ್ಲಾ ನಿಮ್ಮ ಸಂತತಿಯವರಿಗೆ ಕೊಡುವೆನು; ಮತ್ತು ಅವರು ಈ ನಾಡನ್ನು ಶಾಶ್ವತವಾಗಿ ಸ್ವಾಧೀನದಲ್ಲಿಟ್ಟುಕೊಳ್ಳುವರು’ ಎಂದು ತಾವು ಮಾತುಕೊಡಲಿಲ್ಲವೆ?” ಎಂದನು.


ನೀವು ಅವರ ನಾಡಿಗೆ ಬಂದು ಅದನ್ನು ಸ್ವಾಧೀನಮಾಡಿಕೊಳ್ಳುವುದಕ್ಕೆ ನಿಮ್ಮ ಪುಣ್ಯವೇ ಆಗಲಿ, ನಿಮ್ಮ ಸುಸ್ವಭಾವವೇ ಆಗಲಿ, ಕಾರಣವಲ್ಲ. ಆ ಜನಾಂಗಗಳ ದುರ್ನಡತೆಯ ಕಾರಣ ಹಾಗು ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಪಿತೃಗಳಾದ ಅಬ್ರಹಾಮ್, ಇಸಾಕ್, ಯಕೋಬರಿಗೆ ಪ್ರಮಾಣಪೂರ್ವಕವಾಗಿ ಮಾಡಿದ ವಾಗ್ದಾನವನ್ನು ನೆರವೇರಿಸಬೇಕೆಂಬ ಕಾರಣ ಅವರನ್ನು ನಿಮ್ಮ ಬಳಿಯಿಂದ ಹೊರಡಿಸಿಬಿಡುತ್ತಾರೆ.


ಅವರು ತಂದ ಸಮಾಚಾರ ಇದು: ‘ನೀವೆಲ್ಲರು ನಿಮ್ಮನಿಮ್ಮ ದುರ್ಮಾರ್ಗದಿಂದಲೂ ದುಷ್ಕೃತ್ಯಗಳಿಂದಲೂ ಹಿಂದಿರುಗಬೇಕು. ಆಗ, ಸರ್ವೇಶ್ವರ ನಿಮಗೂ ನಿಮ್ಮ ಪೂರ್ವಜರಿಗೂ ಶಾಶ್ವತ ಸೊತ್ತಾಗಿ ಅನುಗ್ರಹಿಸಿದ ನಾಡಿನಲ್ಲಿ ನೀವು ನೆಲೆಗೊಳ್ಳುವಿರಿ.


ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ: “ಕಾಲ ಬರಲಿದೆ, ಆಗ ಇಸ್ರಯೇಲಿನ ಸಕಲ ಗೋತ್ರಗಳಿಗೆ ನಾನೇ ದೇವರಾಗಿರುವೆನು. ಅವರು ನನಗೆ ಪ್ರಜೆಯಾಗಿರುವರು.


ಯಕೋಬನು ತನ್ನ ತಂದೆ ಇಸಾಕನ ಬಳಿಗೆ ಮಮ್ರೆಗೆ ಬಂದನು. ಮಮ್ರೆಯು ಹೆಬ್ರೋನೆಂಬ ಕಿರ್ಯತರ್ಬಕ್ಕೆ ಸೇರಿದುದು. ಅದೇ ಅಬ್ರಹಾಮ್ ಹಾಗು ಇಸಾಕನು ಪರದೇಶಸ್ಥರಾಗಿ ವಾಸವಾಗಿದ್ದ ಸ್ಥಳ.


ಅಲ್ಲದೆ ಅವರು ಪ್ರವಾಸಿಗಳಾಗಿ ತಂಗಿದ್ದ ಕಾನಾನ್ ನಾಡನ್ನು ಅವರಿಗೆ ಸ್ವಂತ ನಾಡಾಗಿ ಕೊಡುವೆನೆಂದು ದೃಢವಾಗ್ದಾನ ಮಾಡಿದವನು ನಾನೇ.


“ನಿಮಗೆ ಸ್ವದೇಶವಾಗಿ ನಾನು ಕೊಡುವ ಕಾನಾನ್ ನಾಡಿಗೆ ನೀವು ಬಂದ ನಂತರ ಆ ನಾಡಿನ ಯಾವ ಮನೆಯ ಗೋಡೆಗಳಲ್ಲಿ ನಾನು ಕುಷ್ಠದ ಗುರುತನ್ನು ಸೂಚಿಸುತ್ತೇನೋ


ಮೋಶೆ ತನ್ನ ಮಾವನಾಗಿದ್ದ ಮಿದ್ಯಾನ್ಯನಾದ ರೆಗೂವೇಲನ ಮಗ ಹೋಬಾಬನಿಗೆ, “ಸರ್ವೇಶ್ವರ ನಮಗೆ ಕೊಡುವುದಾಗಿ ವಾಗ್ದಾನ ಮಾಡಿದ ನಾಡಿಗೆ ನಾವು ಪ್ರಯಾಣ ಮಾಡುತ್ತಿದ್ದೇವೆ. ಇಸ್ರಯೇಲರಿಗೆ ಒಳಿತನ್ನೇ ಮಾಡುವುದಾಗಿ ಸರ್ವೇಶ್ವರ ಸ್ವಾಮಿಯೇ ಹೇಳಿದ್ದಾರೆ. ಆದ್ದರಿಂದ ನೀನೂ ನಮ್ಮ ಸಂಗಡ ಬಾ; ನಮ್ಮಿಂದ ನಿನಗೂ ಒಳ್ಳೆಯದಾಗುವುದು,” ಎಂದು ಹೇಳಿದ.


ಸರ್ವೇಶ್ವರ ಮೋಶೆಗೆ ಹೀಗೆಂದರು: “ನೀನು ಈ ಅಬಾರೀಮ್ ಬೆಟ್ಟವನ್ನು ಹತ್ತಿ ಇಸ್ರಯೇಲರಿಗೆ ನಾನು ವಾಗ್ದಾನ ಮಾಡಿದ ನಾಡನ್ನು ನೋಡು.


ಅನಂತರ, “ನಾನು ಅಬ್ರಹಾಮ್, ಇಸಾಕ್, ಯಕೋಬರಿಗೆ ಪ್ರಮಾಣಮಾಡಿ ಅವರ ಸಂತತಿಯವರಿಗೆ ಕೊಡುವೆನೆಂದು ವಾಗ್ದಾನ ಮಾಡಿದ ನಾಡು ಇದೇ; ಇದನ್ನು ನಿನಗೆ ಪ್ರತ್ಯಕ್ಷವಾಗಿ ತೋರಿಸಿದ್ದೇನೆ. ಆದರೆ ನೀನು ನದಿದಾಟಿ ಅಲ್ಲಿಗೆ ಹೋಗಕೂಡದು,” ಎಂದು ಹೇಳಿದರು.


ನೀನೀಗ ಎದ್ದು ಸಮಸ್ತ ಪ್ರಜೆಯೊಂದಿಗೆ ಜೋರ್ಡನ್ ನದಿಯನ್ನು ದಾಟಿ, ನಾನು ಇಸ್ರಯೇಲರಿಗೆ ಕೊಡುವ ನಾಡಿಗೆ ಹೋಗು.


“ನಾ ಕೊಡುವೆನು ಕಾನಾನ್ ನಾಡನು ನಿಮಗೆ I ಸ್ವಾಸ್ತ್ಯವಾಗುವುದಿದು ನಿಮ್ಮ ಸಂತತಿಗೆ” II


ಕಲ್ಲಾದ ಹೃದಯವನ್ನು ಅವರೊಳಗಿಂದ ತೆಗೆದು ಮೃದುವಾದ ಹೃದಯವನ್ನು ಅವರಿಗೆ ಅನುಗ್ರಹಿಸುವೆನು; ಅವರು ನನಗೆ ಪ್ರಜೆಯಾಗಿರುವರು, ನಾನು ಅವರಿಗೆ ದೇವರಾಗಿರುವೆನು.


“ನರಪುತ್ರನೇ, ಇಸ್ರಯೇಲ್ ನಾಡಿನ ಹಾಳುಪ್ರದೇಶಗಳಲ್ಲಿ ವಾಸಿಸುವರು, ‘ಅಬ್ರಹಾಮನು ಒಂಟಿಗನಾಗಿದ್ದರೂ ಈ ನಾಡು ಅವನಿಗೆ ಸೊತ್ತಾಗಿ ಸಿಕ್ಕಿತು; ಅದು ಬಹುಜನರಾದ ನಮಗೆ ಸೊತ್ತಾಗಿ ಸಿಕ್ಕಿದ್ದು ಏನು ದೊಡ್ಡದು! ಎಂದುಕೊಳ್ಳುತ್ತಿದ್ದಾರೆ.


ಅವರು ಜೆರುಸಲೇಮಿನಲ್ಲೇ ವಾಸವಾಗಿರುವರು. ನಾನು ಅವರಿಗೆ ದೇವರಾಗಿರುವೆನು; ಅವರು ನನಗೆ ಸತ್ಸಂಬಂಧವುಳ್ಳ ಸದ್ಧರ್ಮದ ಪ್ರಜೆಗಳಾಗಿರುವರು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು