Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 18:14 - ಕನ್ನಡ ಸತ್ಯವೇದವು C.L. Bible (BSI)

14 ಸರ್ವೇಶ್ವರನಿಗೆ ಅಸಾಧ್ಯವಾದುದು ಯಾವುದು? ನಾನು ಹೇಳಿದಂತೆಯೇ ಬರುವ ವರ್ಷದ ಇದೇ ಕಾಲದಲ್ಲಿ ನಾನು ನಿನ್ನ ಬಳಿಗೆ ಬಂದಾಗ ಸಾರಳಿಗೆ ಮಗನಿರುತ್ತಾನೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಯೆಹೋವನಿಗೆ ಅಸಾಧ್ಯವಾದದ್ದುಂಟೋ? ನಾನು ಹೇಳಿದಂತೆಯೇ ಬರುವ ವರ್ಷದ ಇದೇ ಕಾಲದಲ್ಲಿ ನಾನು ನಿನ್ನ ಬಳಿಗೆ ಬಂದಾಗ ಸಾರಳಿಗೆ ಮಗನಿರುವನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಯೆಹೋವನಿಗೆ ಅಸಾಧ್ಯವಾದದ್ದುಂಟೋ? ನಾನು ಹೇಳಿದಂತೆಯೇ ಬರುವ ವರುಷದ ಇದೇ ಕಾಲದಲ್ಲಿ ನಾನು ನಿನ್ನ ಬಳಿಗೆ ಬಂದಾಗ ಸಾರಳಿಗೆ ಮಗನಿರುವನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಯೆಹೋವನಿಗೆ ಅಸಾಧ್ಯವಾದುದುಂಟೇ? ನಾನು ಮತ್ತೆ ವಸಂತಕಾಲದಲ್ಲಿ ಬರುವೆನು. ಆಗ ನಿನ್ನ ಹೆಂಡತಿಯಾದ ಸಾರಳಿಗೆ ಒಬ್ಬ ಮಗನಿದ್ದೇ ಇರುವನು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಯೆಹೋವ ದೇವರಿಗೆ ಅಸಾಧ್ಯವಾದದ್ದು ಯಾವುದಾದರೂ ಇದೆಯೋ? ಬರುವ ವರ್ಷ ಇದೇ ಸಮಯದಲ್ಲಿ ನಾನು ತಿರುಗಿ ನಿನ್ನ ಬಳಿಗೆ ಬರುವೆನು. ಆಗ ಸಾರಳಿಗೆ ಒಬ್ಬ ಮಗನಿರುವನು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 18:14
38 ತಿಳಿವುಗಳ ಹೋಲಿಕೆ  

ದೇವರಿಗೆ ಅಸಾಧ್ಯವಾದುದು ಯಾವುದೂ ಇಲ್ಲ,” ಎಂದನು.


ಯೇಸು ಅವರನ್ನು ನಿಟ್ಟಿಸಿ ನೋಡುತ್ತಾ, “ಮನುಷ್ಯರಿಗಿದು ಅಸಾಧ್ಯ; ಆದರೆ ದೇವರಿಗೆ ಎಲ್ಲವೂ ಸಾಧ್ಯ,” ಎಂದರು.


ಯೇಸು ಅವರನ್ನು ನಿಟ್ಟಿಸಿ ನೋಡಿ, “ಮನುಷ್ಯರಿಗೆ ಇದು ಅಸಾಧ್ಯ, ದೇವರಿಗಲ್ಲ. ದೇವರಿಗೆ ಎಲ್ಲವೂ ಸಾಧ್ಯ,” ಎಂದರು.


“ನೋಡು, ನಾನು ಸರ್ವೇಶ್ವರ, ನರಪ್ರಾಣಿಗಳಿಗೆ ದೇವರು. ನನಗೆ ಅಸಾಧ್ಯವಾದುದು ಯಾವುದು?


ನಮ್ಮಲ್ಲಿ ಕಾರ್ಯಸಾಧಿಸುವ ಹಾಗೂ ನಮ್ಮ ಆಶೆ-ಆಕಾಂಕ್ಷೆಗಿಂತಲೂ ಬೇಡಿಕೆ-ಕೋರಿಕೆಗಿಂತಲೂ ಅಧಿಕವಾದುದನ್ನು ಮಾಡಲು ದೇವರು ಶಕ್ತರು. ಅವರಿಗೆ ಧರ್ಮಸಭೆಯಲ್ಲೂ ಕ್ರಿಸ್ತಯೇಸುವಿನಲ್ಲೂ ಯುಗಯುಗಾಂತರಕ್ಕೂ ತಲತಲಾಂತರಕ್ಕೂ ಮಹಿಮೆ ಸಲ್ಲಲಿ! ಆಮೆನ್.


“ತಾವು ಎಲ್ಲಾ ಕಾರ್ಯಗಳನು ನಡೆಸಲು‍ ಶಕ್ತರೆಂದು ನಾನು ಬಲ್ಲೆ ಯಾವ ಯೋಜನೆಯು ನಿಮಗೆ ಅಸಾಧ್ಯವಿಲ್ಲವೆಂದು ನಾನು ಅರಿತಿರುವೆ.


ಸರ್ವೇಶನ ಶಕ್ತಿಯಿಂದ ಸರ್ವವನ್ನೂ ಸಾಧಿಸುವ ಸಾಮರ್ಥ್ಯ ನನಗಿದೆ.


“ಸ್ವಾಮಿ ಸರ್ವೇಶ್ವರಾ, ನೀವು ನಿಮ್ಮ ಭುಜಬಲದಿಂದಲೂ ಮಹಾಶಕ್ತಿಯಿಂದಲೂ ಭೂಮ್ಯಾಕಾಶಗಳನ್ನು ಸೃಷ್ಟಿಸಿದ್ದೀರಿ. ನಿಮಗೆ ಅಸಾಧ್ಯವಾದ ಕಾರ್ಯ ಯಾವುದೂ ಇಲ್ಲ.


ದೇವರು ತಾವು ವಾಗ್ದಾನ ಮಾಡಿದ್ದನ್ನು ಖಂಡಿತವಾಗಿಯೂ ನೆರವೇರಿಸಬಲ್ಲರೆಂದು ದೃಢವಾಗಿ ನಂಬಿದನು.


ಸರ್ವೇಶ್ವರ ಅವನಿಗೆ, “ಸರ್ವೇಶ್ವರನ ಕೈ ಮೋಟುಗೈಯೋ? ನನ್ನ ಮಾತು ನೆರವೇರುತ್ತದೋ ಇಲ್ಲವೋ ನೀನೇ ನೋಡುವೆ” ಎಂದರು.


ಎಲೀಷನು ಆಕೆಗೆ, “ನೀನು ಬರುವ ವರ್ಷ ಇದೇ ಕಾಲದಲ್ಲಿ ಒಬ್ಬ ಮಗನನ್ನು ಅಪ್ಪಿಕೊಂಡಿರುವೆ,” ಎಂದನು. ಅದಕ್ಕೆ ಆಕೆ, “ದೈವಪುರುಷರೇ, ಒಡೆಯರೇ, ಹೀಗೆ ಹೇಳಿ ನಿಮ್ಮ ದಾಸಿಯನ್ನು ವಂಚಿಸಬೇಡಿ,” ಎಂದು ನುಡಿದಳು.


ನೀವು ಆ ಜನರಿಗೆ ಹೆದರಿಕೊಳ್ಳಬೇಡಿ.


ಆ ಕ್ಷಣವೇ ಯೇಸು ಕೈಚಾಚಿ ಅವನನ್ನು ಹಿಡಿದುಕೊಂಡು, “ಅಲ್ಪವಿಶ್ವಾಸಿಯೇ, ಏಕೆ ಸಂದೇಹಪಟ್ಟೆ?” ಎಂದರು.


ಸೇನಾಧೀಶ್ವರ ಸರ್ವೇಶ್ವರ ಹೀಗೆನ್ನುತ್ತಾರೆ: “ಅಳಿದುಳಿದಿರುವ ಜನರಿಗೆ ಇಂಥ ಪರಿಸ್ಥಿತಿ ಅತಿಶಯವಾಗಿ ಕಾಣಬಹುದು. ಆದರೆ ನನಗೆ ಅದೇನೂ ಅತಿಶಯವಲ್ಲ.” ಇದು ಸರ್ವೇಶ್ವರನ ನುಡಿ.


ನಿಮ್ಮಂಥ ದೇವರು ಯಾರಿದ್ದಾರೆ? ತಮ್ಮ ಸ್ವಂತ ಜನರಲ್ಲಿ ಅಳಿದುಳಿದವರ ಅಪರಾಧಗಳನ್ನು ಲೆಕ್ಕಿಸದೆ, ಅವರ ದ್ರೋಹಗಳನ್ನು ಕ್ಷಮಿಸುವಂಥ ದೇವರು ಯಾರಿದ್ದಾರೆ? ನೀವು ನಿತ್ಯಕ್ಕೂ ಕೋಪಿಷ್ಠರಾಗಿರದೆ ಕರುಣೆ ತೋರಿಸುವುದರಲ್ಲೇ ಸಂತುಷ್ಟರಾಗುವಿರಿ.


ಏಕೆಂದರೆ ಪ್ರಭು ದೇವಾಧಿದೇವನು I ದೇವರುಗಳಲೆಲ್ಲ ರಾಜಾಧಿರಾಜನು II


ಆಗ, ನಿಮ್ಮ ದೇವರಾದ ಸರ್ವೇಶ್ವರ ದುರವಸ್ಥೆಯಿಂದ ನಿಮ್ಮನ್ನು ತಪ್ಪಿಸಿ, ನಿಮ್ಮನ್ನು ಕನಿಕರಿಸಿ, ನಿಮ್ಮನ್ನು ಚದುರಿಸಿದ ಎಲ್ಲ ದೇಶಗಳಿಂದ ಮತ್ತೆ ಕೂಡಿಸುವರು.


ಆಗ ಸರ್ವೇಶ್ವರ ಸ್ವಾಮಿ, “ಬರುವ ವರ್ಷ ಇದೇ ಕಾಲದಲ್ಲಿ ನಾನು ತಪ್ಪದೆ ಮರಳಿ ನಿನ್ನ ಬಳಿಗೆ ಬರುತ್ತೇನೆ; ಬಂದಾಗ ನಿನ್ನ ಹೆಂಡತಿ ಸಾರಳಿಗೆ ಮಗನಿರುತ್ತಾನೆ,” ಎಂದರು. ಈ ಮಾತು ಹಿಂದೆ ಗುಡಾರದ ಬಾಗಿಲಲ್ಲಿ ನಿಂತಿದ್ದ ಸಾರಳ ಕಿವಿಗೆ ಬಿದ್ದಿತು.


ದೂತನು ಅವನಿಗೆ, “ಜಕರೀಯಾ, ಭಯಪಡಬೇಡ! ನಿನ್ನ ಪ್ರಾರ್ಥನೆಯನ್ನು ದೇವರು ಆಲಿಸಿದ್ದಾರೆ. ನಿನ್ನ ಪತ್ನಿ ಎಲಿಜಬೇತಳಲ್ಲಿ ನಿನಗೆ ಒಂದು ಗಂಡುಮಗು ಹುಟ್ಟುವುದು. ನೀನು ಅವನಿಗೆ ‘ಯೊವಾನ್ನ’ ಎಂದು ನಾಮಕರಣ ಮಾಡಬೇಕು.


ದೇವರು ಸರ್ವಶಕ್ತನು, ಯಾರನ್ನೂ ತುಚ್ಛೀಕರಿಸನು ಆತನ ಬುದ್ಧಿಸಾಮರ್ಥ್ಯ ಅಪಾರವಾದುದು.


ಆದರೆ ಆ ನನ್ನ ಒಡಂಬಡಿಕೆಯನ್ನು ಇಸಾಕನಲ್ಲಿಯೇ ಊರ್ಜಿತಗೊಳಿಸುತ್ತೇನೆ.


ಏಕೆಂದರೆ, ಸತ್ತವರನ್ನು ದೇವರು ಜೀವಕ್ಕೆ ಎಬ್ಬಿಸಬಲ್ಲರು ಎಂಬುದನ್ನು ಅಬ್ರಹಾಮನು ತಿಳಿದಿದ್ದನು. ಅಂತೆಯೇ, ತನ್ನ ಮಗನನ್ನು ಸಾವಿನಿಂದ ಮರಳಿ ಪಡೆದನು. ಮುಂಬರಲಿರುವ ಘಟನೆಗೆ ಇಂದೊಂದು ಮುನ್ಸೂಚನೆಯಾಗಿತ್ತು.


ಇದನ್ನು ಕೇಳಿದ ಯೇಸು ಯಾಯೀರನಿಗೆ, “ಭಯಪಡಬೇಡ, ನಿನ್ನಲ್ಲಿ ವಿಶ್ವಾಸವೊಂದಿದ್ದರೆ ಸಾಕು, ನಿನ್ನ ಮಗಳು ಬದುಕುವಳು,” ಎಂದರು.


ಯೋನಾತಾನನು ತನ್ನ ಆಯುಧಗಳನ್ನು ಹೊರುವವನಿಗೆ, “ಸುನ್ನತಿಯಿಲ್ಲದ ಈ ಕಾವಲುದಂಡಿನವರೆಗೆ ನೇರವಾಗಿ ಹೋಗೋಣ ಬಾ; ಬಹುಶಃ ಸರ್ವೇಶ್ವರ ತಾವೇ ನಮ್ಮ ಪರವಾಗಿ ಕಾರ್ಯಸಾಧಿಸುವರು. ಬಹುಜನರಿಂದಾಗಲಿ, ಸ್ವಲ್ಪಜನರಿಂದಾಗಲಿ, ರಕ್ಷಿಸುವುದು ಸರ್ವೇಶ್ವರಸ್ವಾಮಿಗೆ ಅಸಾಧ್ಯವಲ್ಲ,” ಎಂದು ಹೇಳಿದನು.


ಅವರು ಸಮಸ್ತವನ್ನು ಸ್ವಾಧೀನಪಡಿಸಿಕೊಳ್ಳುವರು; ನಶ್ವರವಾದ ನಮ್ಮ ದೀನದೇಹಗಳನ್ನು ತಮ್ಮ ಶಕ್ತಿಯಿಂದ ರೂಪಾಂತರಗೊಳಿಸಿ ತಮ್ಮ ತೇಜೋಮಯ ಶರೀರದಂತೆ ಮಾಡುವರು.


ಅದಕ್ಕೆ ಜಕರೀಯನು, “ಈ ಮಾತು ನಿಜವಾಗುವುದೆಂದು ನಾನು ತಿಳಿಯುವುದಾದರೂ ಹೇಗೆ? ನಾನೋ ಮುದುಕ; ನನ್ನ ಪತ್ನಿಗೂ ಮುಪ್ಪು,” ಎಂದನು.


‘ಅಬ್ರಹಾಮನೇ ನಮ್ಮ ಪಿತಾಮಹ’ ಎಂದು ನಿಮ್ಮಲ್ಲೇ ಕೊಚ್ಚಿಕೊಳ್ಳಬೇಡಿ. ಈ ಕಲ್ಲುಗಳಿಂದಲೂ ದೇವರು ಅಬ್ರಹಾಮನಿಗೆ ಸಂತಾನ ಪ್ರಾಪ್ತವಾಗುವಂತೆ ಮಾಡಬಲ್ಲರೆಂದು ನಾನು ನಿಮಗೆ ಹೇಳುತ್ತೇನೆ.


ವಹಿಸಿಹನು ಪ್ರಭು, ರಾಜ್ಯಾಧಿಕಾರವನು I ಧರಿಸಿಹನು ಘನತೆಯ ವಸ್ತ್ರ ಲಾಂಛನವನು I ತೊಟ್ಟಿಹನು ಶೌರ್ಯವೆಂಬ ನಡುಕಟ್ಟನು I ಸ್ಥಿರಪಡಿಸಿಹನು ಕದಲದಂತೆ ಜಗವನು II


ಪ್ರಭು, ತಿರುಗಿ ಬಾ, ಕೋಪವೆಷ್ಟರ ತನಕ? I ನಿನ್ನೀ ಸೇವಕರ ಮೇಲಿರಲಿ ಮರುಕ II


ಅಬ್ರಹಾಮನಿಗೆ, ಸರ್ವೇಶ್ವರ “ 'ಸಾರಳು ತಾನು ಮುದುಕಿಯಾದ ಕಾರಣ ಹೆರಲು ಸಾಧ್ಯವೆ' ಎಂದು ನಕ್ಕಿದ್ದು ಏಕೆ?


ಆಗ ಸಾರಳು ಭಯದಿಂದ, “ನಾನು ನಗಲಿಲ್ಲ” ಎಂದು ನಿರಾಕರಿಸಿದಳು. ಸರ್ವೇಶ್ವರ, "ಹಾಗನ್ನಬೇಡಮ್ಮಾ, 'ನೀನು ನಕ್ಕದ್ದು ನಿಜ' ” ಎಂದರು.


ಸರ್ವೇಶ್ವರ ಸ್ವಾಮಿ ತಾವು ಹೇಳಿದ್ದಂತೆಯೇ ಸಾರಳಿಗೆ ನೆರವಾದರು. ಆಕೆಗೆ ಕೊಟ್ಟ ಮಾತನ್ನು ನೆರವೇರಿಸಿದರು.


ಆಕೆ ಗರ್ಭಿಣಿಯಾಗಿ ಅಬ್ರಹಾಮನಿಂದ ಒಬ್ಬ ಮಗನನ್ನು ಹೆತ್ತಳು, ಅದೂ ಅಬ್ರಹಾಮನು ಮುದುಕನಾಗಿದ್ದಾಗ, ದೇವರು ಮೊದಲೇ ನಿರ್ಧರಿಸಿದ್ದ ಕಾಲಕ್ಕೆ ಹೆತ್ತಳು.


ನಾನು ರಕ್ಷಿಸಲು ಬಂದಾಗ ಯಾರೂ ಕಾದಿರಲಿಲ್ಲ, ಏಕೆ? ನಾನು ಕೂಗಿಕರೆದಾಗ ಯಾರೂ ಉತ್ತರಕೊಡಲಿಲ್ಲ, ಏಕೆ? ನನ್ನ ಹಸ್ತವು ರಕ್ಷಿಸಲಾರದ ಮೋಟುಗೈಯೋ? ಉದ್ಧರಿಸುವ ಶಕ್ತಿ ನನ್ನಲ್ಲಿ ಇಲ್ಲವೋ? ಬರಿ ಗರ್ಜನೆಯಿಂದ ಬತ್ತಿಸಬಲ್ಲೆ ಸಮುದ್ರವನು ಬೆಂಗಾಡಾಗಿಸಬಲ್ಲೆ ನಾ ನದಿಸರೋವರಗಳನು ಬಾಯಾರಿ ಸತ್ತು ನಾರುವಂತೆ ಮಾಡಬಲ್ಲೆ ಅಲ್ಲಿಯ ಮೀನುಗಳನು.


ದಾನಿಯೇಲನಿದ್ದ ಗವಿಯ ಸಮೀಪಕ್ಕೆ ಬಂದು, ದುಃಖ ಧ್ವನಿಯಿಂದ ದಾನಿಯೇಲನನ್ನು ಕೂಗಿ, “ದಾನಿಯೇಲನೇ, ಜೀವಸ್ವರೂಪನಾದ ದೇವರ ದಾಸನೇ, ನೀನು ದಿನನಿತ್ಯವೂ ಆರಾಧಿಸುವ ನಿನ್ನ ದೇವರಿಗೆ ನಿನ್ನನ್ನು ಸಿಂಹಗಳಿಂದ ಉದ್ಧರಿಸಲು ಸಾಧ್ಯವಾಯಿತೋ?” ಎಂದು ಕೇಳಿದನು.


ನಾನು ಆಕೆಯನ್ನು ಆಶೀರ್ವದಿಸಿದ್ದೇನೆ. ಆಕೆ ನಿನಗೊಬ್ಬ ಮಗನನ್ನು ಹೆರುವಳು. ನನ್ನ ಆಶೀರ್ವಾದ ಪಡೆದ ಆಕೆ ರಾಷ್ಟ್ರಗಳಿಗೆ ಮಾತೆಯಾಗುವಳು; ಆಕೆಯಿಂದ ರಾಷ್ಟ್ರಗಳೂ, ರಾಜರುಗಳೂ ಉತ್ಪತ್ತಿಯಾಗುವರು.”


ಒಂದಾನೊಂದು ದಿನ ಸರ್ವೇಶ್ವರನ ದೂತ ಆಕೆಗೆ ಪ್ರತ್ಯಕ್ಷನಾಗಿ, “ಇಗೋ, ಬಂಜೆಯಾಗಿ ಮಕ್ಕಳಿಲ್ಲದಿರುವ ನೀನು ಗರ್ಭವತಿಯಾಗಿ ಒಬ್ಬ ಮಗನನ್ನು ಹೆರುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು