Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 18:19 - ಕನ್ನಡ ಸತ್ಯವೇದವು C.L. Bible (BSI)

19 ಅವನು ತನ್ನ ಪುತ್ರಪೌತ್ರರಿಗೆ, ‘ನೀವು ನ್ಯಾಯನೀತಿಯನ್ನು ಪಾಲಿಸುತ್ತಾ ಸರ್ವೇಶ್ವರ ಸ್ವಾಮಿಯ ಮಾರ್ಗದಲ್ಲೇ ನಡೆಯಬೇಕು; ಹಾಗೆ ಮಾಡಿದರೆ ವಾಗ್ದಾನ ಮಾಡಿದುದನ್ನೆಲ್ಲ ಈಡೇರಿಸುವರು,’ ಎಂದು ಬೋಧಿಸಲೆಂದೇ ನಾನು ಅವನನ್ನು ಆರಿಸಿಕೊಂಡಿದ್ದೇನೆ".

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅವನು ತನ್ನ ಮಕ್ಕಳಿಗೂ ಮನೆಯವರಿಗೂ ನ್ಯಾಯ ನೀತಿಗಳನ್ನು ತಿಳಿಸಿ ಯೆಹೋವನ ಮಾರ್ಗವನ್ನು ಅನುಸರಿಸಬೇಕೆಂದು ಬೋಧಿಸುವಂತೆ ಅವನನ್ನು ನಾನು ಆರಿಸಿಕೊಂಡೆನಲ್ಲಾ; ಅವನು ಹೀಗೆ ಮಾಡುವುದರಿಂದ ಯೆಹೋವನಾದ ನನ್ನ ವಾಗ್ದಾನವು ನೆರವೇರುವುದು” ಅಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅವನು ತನ್ನ ಪುತ್ರಪೌತ್ರರಿಗೆ - ನೀವು ನ್ಯಾಯನೀತಿಗಳನ್ನು ನಡಿಸಿ ಯೆಹೋವನ ಮಾರ್ಗವನ್ನು ಅನುಸರಿಸಬೇಕೆಂದು ಬೋಧಿಸುವಂತೆ ಅವನನ್ನು ನಾನು ಆದುಕೊಂಡೆನಲ್ಲಾ; ಅವನು ಹೀಗೆ ಮಾಡುವದರಿಂದ ಯೆಹೋವನಾದ ನನ್ನ ವಾಗ್ದಾನವು ನೆರವೇರುವದು ಅಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ನಾನು ಅವನೊಡನೆ ವಿಶೇಷವಾದ ಒಡಂಬಡಿಕೆಯನ್ನು ಮಾಡಿಕೊಂಡಿದ್ದೇನೆ. ಅವನು ತನ್ನ ಮಕ್ಕಳಿಗೂ ಸಂತತಿಯವರಿಗೂ ನನಗೆ ವಿಧೇಯರಾಗುವಂತೆ ಮತ್ತು ನ್ಯಾಯನೀತಿಗಳಿಂದ ಜೀವಿಸುವಂತೆ ಆಜ್ಞಾಪಿಸಲೆಂದು ನಾನು ಅವನೊಂದಿಗೆ ಒಡಂಬಡಿಕೆಯನ್ನು ಮಾಡಿಕೊಂಡೆನು. ಅವರು ಹೀಗೆ ಜೀವಿಸಿದರೆ, ನನ್ನ ವಾಗ್ದಾನಗಳನ್ನೆಲ್ಲಾ ನೆರವೇರಿಸುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಏಕೆಂದರೆ, ಅವನು ತನ್ನ ಮಕ್ಕಳಿಗೂ ಅವನ ತರುವಾಯ ಅವನ ಮನೆಯವರಿಗೂ ಯೆಹೋವ ದೇವರ ಮಾರ್ಗವನ್ನು ಕೈಗೊಂಡು, ನೀತಿ ನ್ಯಾಯಗಳನ್ನು ಅನುಸರಿಸಬೇಕೆಂದು ಆಜ್ಞಾಪಿಸುವನು. ಆಗ ಯೆಹೋವ ದೇವರಾದ ನಾನು ಅಬ್ರಹಾಮನಿಗೆ ಹೇಳಿದ್ದು ನೆರವೇರುವದು,” ಎಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 18:19
39 ತಿಳಿವುಗಳ ಹೋಲಿಕೆ  

ನಿನ್ನ ಬೋಧಕರು ಯಾರೆಂಬುದು ನಿನಗೆ ಗೊತ್ತಿದೆ. ಚಿಕ್ಕಂದಿನಿಂದಲೇ ನೀನು ಪವಿತ್ರಗ್ರಂಥವನ್ನು ಪರಿಚಯಮಾಡಿಕೊಂಡಿರುವೆ. ಯೇಸುಕ್ರಿಸ್ತರನ್ನು ವಿಶ್ವಾಸಿಸುವುದರ ಮೂಲಕ ಜೀವೋದ್ಧಾರವನ್ನು ಪಡೆಯಬಹುದೆಂಬ ಜ್ಞಾನವು ಲಭಿಸುವುದು ಆ ಪವಿತ್ರಗ್ರಂಥದಿಂದಲೇ.


ತಂದೆತಾಯಿಗಳೇ, ನಿಮ್ಮ ಮಕ್ಕಳನ್ನು ಕೆಣಕಿ ಕೆರಳಿಸಬೇಡಿ. ಪ್ರತಿಯಾಗಿ ಪ್ರಭುವಿಗೆ ಮೆಚ್ಚುಗೆಯಾಗುವ ರೀತಿಯಲ್ಲಿ ಅವರಿಗೆ ಶಿಕ್ಷಣವನ್ನು ಕೊಟ್ಟು ಶಿಸ್ತಿನಿಂದ ಸಾಕಿಸಲಹಿರಿ.


ಆದರೆ ದೇವರು ಹಾಕಿದಂಥ ಸುಸ್ಥಿರವಾದ ಅಸ್ತಿವಾರವನ್ನು ಯಾರಿಂದಲೂ ಕದಲಿಸಲಾಗದು. ಅದರಲ್ಲಿ “ತನ್ನವರು ಯಾರು ಎಂದು ಪ್ರಭು ಅರಿತಿದ್ದಾರೆ; ಮತ್ತು ತಾನು ಪ್ರಭುವಿನವನೆಂದು ಹೇಳಿಕೊಳ್ಳುವವರೆಲ್ಲರೂ ದುರ್ಮಾರ್ಗದಿಂದ ದೂರವಿರಲಿ,” ಎಂದು ಲಿಖಿತವಾಗಿದೆ.


ಸಭಾಸೇವಕರು ಏಕಪತ್ನಿಯುಳ್ಳವರಾಗಿದ್ದು ತಮ್ಮ ಮಕ್ಕಳನ್ನೂ ಕುಟುಂಬವನ್ನೂ ಜವಾಬ್ದಾರಿಯುತವಾಗಿ ನಡೆಸಿಕೊಂಡು ಹೋಗುವವರಾಗಿರಬೇಕು.


ಬಾಲ್ಯದಲ್ಲೇ ಮಕ್ಕಳನ್ನು ಸರಿದಾರಿಯಲ್ಲಿ ಪಳಗಿಸು; ಮುಪ್ಪಿನಲ್ಲೂ ಅವರು ಆ ಪದ್ಧತಿ ಮೀರಿ ನಡೆಯದಿರಲಿ.


“ನನ್ನ ಮಗ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಪೂರ್ಣಹೃದಯದಿಂದ ಹಾಗೂ ಮನಸ್ಸಂತೋಷದಿಂದ ಅವರೊಬ್ಬರಿಗೇ ಸೇವೆ ಸಲ್ಲಿಸು. ಸರ್ವೇಶ್ವರನು ಎಲ್ಲಾ ಹೃದಯಗಳನ್ನು ಶೋಧಿಸುವವರೂ ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವರೂ ಆಗಿದ್ದಾರೆ. ನೀನು ಅವರನ್ನು ಆರಿಸಿದರೆ ಅವರು ನಿನಗೆ ಸಿಗುವರು; ಅವರನ್ನು ಬಿಟ್ಟರೆ ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವರು.


ಸರ್ವೇಶ್ವರನಿಗೆ ಸೇವೆಸಲ್ಲಿಸಿರಿ. ನಿಮಗೆ ಇದು ಸರಿಕಾಣದಿದ್ದರೆ ಯಾರಿಗೆ ಸೇವೆಸಲ್ಲಿಸಬೇಕೆಂದಿದ್ದೀರಿ? ಇಂದೇ ಆರಿಸಿಕೊಳ್ಳಿ: ನಿಮ್ಮ ಪೂರ್ವಜರು ಯೂಫ್ರಟಿಸ್ ನದಿಯ ಆಚೆಯಲ್ಲಿ ಪೂಜಿಸುತ್ತಿದ್ದ ದೇವತೆಗಳಿಗೋ? ಈ ನಾಡಿನ ಮೂಲನಿವಾಸಿಗಳಾದ ಅಮೋರಿಯರ ದೇವತೆಗಳಿಗೋ? ಹೇಳಿ. ನಾನು ಮತ್ತು ನನ್ನ ಮನೆಯವರು ಮಾತ್ರ ಸರ್ವೇಶ್ವರನಿಗೇ ಸೇವೆ ಸಲ್ಲಿಸುತ್ತೇವೆ,” ಎಂದನು.


“ನಾನು ಈಗ ನಿಮಗೆ ಹೇಳಿದ ಎಚ್ಚರಿಕೆಯ ಮಾತುಗಳನ್ನೆಲ್ಲ ಮನಸ್ಸಿನಲ್ಲಿಟ್ಟುಕೊಳ್ಳಿರಿ; ನಿಮ್ಮ ಸಂತತಿಯವರಿಗೆ ಈ ಧರ್ಮಶಾಸ್ತ್ರದ ನಿಯಮಗಳನ್ನು ಅನುಸರಿಸಬೇಕೆಂದು ಆಜ್ಞಾಪಿಸಿರಿ.


ಸಜ್ಜನರನು ಪ್ರಭು ಕಟಾಕ್ಷಿಸುವನು I ಅವರ ಮೊರೆಗಾತ ಕಿವಿಗೊಡುವನು II


ಪ್ರಭು ಪ್ರಸನ್ನವಿರುವನು ಪವಿತ್ರಾಲಯದಲಿ I ಸ್ಥಾಪಿಸಿಹನು ಸಿಂಹಾಸನವನು ಪರದಲಿ I ನರಮಾನವರನು ನೋಡುತಿಹನು ನೇತ್ರಗಳಲಿ I ಪರೀಕ್ಷಿಸುತಿಹನು ಅವರನು ಸೂಕ್ಷ್ಮರೀತಿಯಲಿ II


ಔತಣದ ಸರದಿ ತೀರಿದ ಬಳಿಕ, ಯೋಬನು ತನ್ನ ಮಕ್ಕಳು ಒಂದು ವೇಳೆ ಪಾಪಮಾಡಿ ಮನದಲ್ಲೇ ದೇವರನ್ನು ದೂಷಿಸಿರಬಹುದೆಂದುಕೊಂಡು, ಅವರನ್ನು ಕರೆಸಿ ಶುದ್ಧೀಕರಣ ಮಾಡಿಸುತ್ತಿದ್ದನು. ಬೆಳಿಗ್ಗೆ ಎದ್ದು ಅವರೊಬ್ಬೊಬ್ಬರಿಗಾಗಿ ದಹನಬಲಿಗಳನ್ನು ಅರ್ಪಿಸುತ್ತಿದ್ದನು; ಇದು ಯೋಬನ ದೈನಂದಿನ ವಾಡಿಕೆಯಾಗಿತ್ತು.


ನಿನ್ನ ದೃಢವಿಶ್ವಾಸವು ನನ್ನ ನೆನಪಿನಲ್ಲಿದೆ. ನಿನ್ನ ಅಜ್ಜಿ ಲೋವಿಯಳಲ್ಲೂ ತಾಯಿ ಯೂನಿಸಳಲ್ಲೂ ನೆಲೆಗೊಂಡಿದ್ದ ವಿಶ್ವಾಸ ಈಗ ನಿನ್ನಲ್ಲೂ ಪೂರ್ಣವಾಗಿ ನೆಲೆಗೊಂಡಿದೆಯೆಂದು ನಾನು ನಂಬಿದ್ದೇನೆ.


ಆಗ ಪೌಲನು ಶತಾಧಿಪತಿಯನ್ನು ಮತ್ತು ಸೈನಿಕರನ್ನು ಉದ್ದೇಶಿಸಿ, “ಈ ನಾವಿಕರು ಹಡಗಿನಲ್ಲೇ ಉಳಿಯದಿದ್ದರೆ ನಿಮ್ಮ ಪ್ರಾಣ ಉಳಿಯದು,” ಎಂದು ಎಚ್ಚರಿಸಿದನು.


ನಾನಾದರೋ ಉತ್ತಮ ಕುರಿಗಾಹಿ. ಪಿತನು ನನ್ನನ್ನು ಬಲ್ಲರು; ನಾನೂ ಪಿತನನ್ನು ಬಲ್ಲೆ. ಅಂತೆಯೇ ನಾನು ನನ್ನ ಕುರಿಗಳನ್ನು ಬಲ್ಲೆನು; ಅವು ನನ್ನನ್ನು ಬಲ್ಲವು. ಅವುಗಳಿಗೋಸ್ಕರ ನಾನು ನನ್ನ ಪ್ರಾಣವನ್ನೇ ಕೊಡುತ್ತೇನೆ.


ಜೀವಂತನು, ಜೀವಂತನು ಮಾತ್ರವೇ ನಿನ್ನ ಸ್ತುತಿಮಾಡುವಂತೆ ನಾನಿಂದು ನಿನ್ನನ್ನು ಜೀವಂತನಾಗಿ ಸ್ತುತಿಮಾಡುತ್ತಿರುವೆ ನಿನ್ನ ಸತ್ಯಸಂಧತೆಯನ್ನು ಮಕ್ಕಳಿಗೆ ಬೋಧಿಸುವನು ತಂದೆ.


ಸಜ್ಜನರ ಮಾರ್ಗಕ್ಕಿದೆ ಪ್ರಭುವಿನ ಪಾಲನ I ದುರ್ಜನರ ಮಾರ್ಗಕ್ಕಿದೆ ಸಂಪೂರ್ಣ ವಿನಾಶನ II


ಸರ್ವೇಶ್ವರಾ, ಸರ್ವೇಶ್ವರಾ, ನಿಮ್ಮ ದಾಸ ದಾವೀದನನ್ನು ಚೆನ್ನಾಗಿ ಬಲ್ಲಿರಿ; ನಾನು ಇನ್ನೇನು ಹೇಳಲಿ?


ಮೂರನೇ ಬಾರಿಯೂ ಯೇಸು, “ಯೊವಾನ್ನನ ಮಗನಾದ ಸಿಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯಾ?” ಎಂದು ಕೇಳಿದರು. “ನೀನು ನನ್ನನ್ನು ಪ್ರೀತಿಸುತ್ತೀಯಾ?” ಎಂದು ಯೇಸು ಮೂರನೇ ಬಾರಿ ಕೇಳಿದ್ದನ್ನು ಕಂಡು ಪೇತ್ರನು ನೊಂದುಕೊಂಡನು. “ಪ್ರಭುವೇ, ನಿಮಗೆ ಎಲ್ಲವು ತಿಳಿದೇ ಇದೆ. ನಾನು ನಿಮ್ಮನ್ನು ಪ್ರೀತಿಸುತ್ತೇನೆ ಎಂದೂ ನಿಮಗೆ ತಿಳಿದಿದೆ,” ಎಂದು ಹೇಳಿದನು. ಅದಕ್ಕೆ ಯೇಸು, “ನನ್ನ ಕುರಿಗಳನ್ನು ಮೇಯಿಸು;


“ಜಗದ ಜನಾಂಗಗಳಲ್ಲಿ ನನಗೆ ಆಪ್ತರಾದವರೆಂದರೆ ನೀವು. ಆದಕಾರಣ ನೀವು ಮಾಡಿರುವ ಎಲ್ಲಾ ಪಾಪಗಳಿಗೆ ತಕ್ಕ ಪ್ರಾಯಶ್ಚಿತ್ತವನ್ನು ಸವಿಯುವಂತೆ ಮಾಡುವೆನು.”


ನಾನು ನಿನ್ನನ್ನು ದೊಡ್ಡ ಜನಾಂಗವಾಗಿ ಮಾಡುತ್ತೇನೆ. ನಿನ್ನನ್ನು ಆಶೀರ್ವದಿಸಿ ನಿನ್ನ ಹೆಸರಿಗೆ ಘನತೆಗೌರವವನ್ನು ತರುತ್ತೇನೆ. ನೀನೇ ಆದರ್ಶದ ಆಶೀರ್ವಾದವಾಗಿ ಬೆಳಗುವೆ.


"ನಿನ್ನನ್ನು ಹರಸುವವರನು ನಾ ಹರಸುವೆ, ನಿನ್ನನ್ನು ಶಪಿಸುವವರನು ನಾ ಶಪಿಸುವೆ. ಧರೆಯ ಕುಲದವರಿಗೆಲ್ಲ ನಿನ್ನ ಮುಖೇನ ದೊರಕುವುದು ನನ್ನಿಂದ ಆಶೀರ್ವಾದ.”


ಇದಲ್ಲದೆ ದೇವರು ಅಬ್ರಹಾಮನಿಗೆ ಹೀಗೆಂದು ಹೇಳಿದರು: “ನೀನು ಕೂಡ ನನ್ನ ಒಡಂಬಡಿಕೆಯನ್ನು ಕೈಗೊಂಡು ನಡೆಯಬೇಕು ನೀನು ಮಾತ್ರವಲ್ಲ, ನಿನ್ನ ಸಂತತಿಯವರು ತಲತಲಾಂತರಕ್ಕೂ ಅದನ್ನು ಕೈಗೊಂಡು ನಡೆಯಬೇಕು.


ನೀನು ನನ್ನ ಮಾತನ್ನು ಕೇಳಿದ್ದರಿಂದ ವಿಶ್ವದ ಎಲ್ಲ ರಾಷ್ಟ್ರಗಳಿಗೂ ನಿನ್ನ ಸಂತತಿಯ ಮೂಲಕ ಆಶೀರ್ವಾದವುಂಟಾಗುವುದು ಎಂಬುದಾಗಿ ಸರ್ವೇಶ್ವರನೇ ಆಣೆಯಿಟ್ಟು ಹೇಳಿದ್ದಾರೆ,” ಎಂದನು.


ಆಗ ಯಕೋಬನು ತನ್ನ ಮನೆಯವರಿಗೂ ಹಾಗು ತನ್ನ ಸಂಗಡ ಇದ್ದ ಎಲ್ಲರಿಗೂ, “ನಿಮ್ಮಲ್ಲಿ ಇರುವ ಅನ್ಯ ದೇವರುಗಳನ್ನು ತೊರೆದುಬಿಡಿ; ನಿಮ್ಮನ್ನೇ ಶುದ್ಧೀಕರಿಸಿಕೊಂಡು ಮಡಿವಸ್ತ್ರಗಳನ್ನು ಹಾಕಿಕೊಳ್ಳಿ; ನಾವು ಬೇತೇಲಿಗೆ ಹೊರಟುಹೋಗೋಣ.


ದೇವರನು ತೊರೆದು ದುರುಳನಾಗದೆ ನಾನನುಸರಿಸಿದೆ ಸರ್ವೇಶ್ವರನ ಮಾರ್ಗವನೆ.


ಸರ್ವೇಶ್ವರಾ, ಅಬ್ರಾಮನನು ನೀವು ಆರಿಸಿಕೊಂಡಿರಿ ಬಾಬಿಲೋನಿನ ‘ಊರ್’ ನಗರದಿಂದ ಆತನನು ಬರಮಾಡಿದಿರಿ ದೇವರಾದ ನೀವೇ ಆತನಿಗೆ ‘ಅಬ್ರಹಾಮ’ ಎಂದು ಹೆಸರಿಟ್ಟಿರಿ.


ಆಗ ಬೇರೆ ಕಲ್ಲುಗಳನ್ನು ತರಿಸಿ ಮೊದಲಿದ್ದ ಕಲ್ಲುಗಳ ಸ್ಥಳದಲ್ಲಿ ಹಾಕಿಸಿ ಹೊಸಮಣ್ಣನ್ನು ತರಿಸಿ ಆ ಗೋಡೆಗಳಿಗೆ ಮೆತ್ತಬೇಕು.


“ಹೌದು, ನಾನೇ,” ಎಂದನು. ಆಗ ಮಾನೋಹನು, “ನೀವು ಹೇಳಿದ್ದು ನೆರವೇರಿದಾಗ ನಾವು ಆ ಮಗುವಿಗಾಗಿ ಮಾಡತಕ್ಕದ್ದೇನು? ಅವನನ್ನು ಹೇಗೆ ನಡಿಸತಕ್ಕದ್ದು?” ಎಂದು ಕೇಳಿದನು.


ಇವನು ಅನ್ಯದೇವತೆಗಳ ಯಜ್ಞವೇದಿಗಳನ್ನೂ ಪೂಜಾಸ್ಥಳಗಳನ್ನೂ ತೆಗೆದುಹಾಕಿಸಿದನು. ಕಲ್ಲುಕಂಬಗಳನ್ನು ಒಡೆದು ಹಾಕಿಸಿದನು. ಅಶೇರ ವಿಗ್ರಹಸ್ತಂಭಗಳನ್ನು ಕೆಡವಿಬಿಟ್ಟನು.


ಎರಡು ಪಡೆದವನೂ ಹಾಗೆಯೇ ಮಾಡಿ ಇನ್ನೂ ಎರಡನ್ನು ಸಂಪಾದಿಸಿದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು