Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 18:2 - ಕನ್ನಡ ಸತ್ಯವೇದವು C.L. Bible (BSI)

2 ಅವನು ಕಣ್ಣೆತ್ತಿ ನೋಡಿದಾಗ ಯಾರೋ ಮೂರು ಮಂದಿ ಪುರುಷರು ಹತ್ತಿರದಲ್ಲೇ ನಿಂತಿದ್ದರು. ಅವರನ್ನು ಎದುರುಗೊಳ್ಳಲು ಅಬ್ರಹಾಮನು ಕೂಡಲೆ ಗುಡಾರದ ಬಾಗಿಲಿನಿಂದ ಓಡಿಬಂದು, ತಲೆಬಾಗಿ ನಮಸ್ಕರಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಹೇಗೆಂದರೆ, ಅಬ್ರಹಾಮನು ಕಣ್ಣೆತ್ತಿ ನೋಡಲು ಅವನೆದುರಿನಲ್ಲಿ ಮೂವರು ಪುರುಷರು ನಿಂತಿದ್ದರು. ಕೂಡಲೆ ಅವರನ್ನು ಎದುರುಗೊಳ್ಳುವುದಕ್ಕೆ ಅವನು ಗುಡಾರದ ಬಾಗಿಲಿನಿಂದ ಓಡಿ ಹೋಗಿ ತಲೆಬಾಗಿ ನಮಸ್ಕರಿಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಹೇಗಂದರೆ, ಅಬ್ರಹಾಮನು ಕಣ್ಣೆತ್ತಿ ನೋಡಲು ಅವನ ಎದುರಿನಲ್ಲಿ ಯಾರೋ ಮೂರು ಮಂದಿ ಪುರುಷರು ನಿಂತಿದ್ದರು. ಕೂಡಲೆ ಅವರನ್ನು ಎದುರುಗೊಳ್ಳುವದಕ್ಕೆ ಅವನು ಗುಡಾರದ ಬಾಗಲಿನಿಂದ ಓಡಿ ಹೋಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಅಬ್ರಹಾಮನು ದೃಷ್ಟಿಸಿ ನೋಡಿದಾಗ ತನ್ನ ಮುಂದೆ ಮೂವರು ಪುರುಷರು ನಿಂತಿರುವುದನ್ನು ಕಂಡನು. ಕೂಡಲೇ ಅವರ ಬಳಿಗೆ ಓಡಿಹೋಗಿ ಅವರಿಗೆ ಸಾಷ್ಟಾಂಗನಮಸ್ಕಾರ ಮಾಡಿ ಅವರಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಗ ತನ್ನ ಕಣ್ಣುಗಳನ್ನೆತ್ತಿ ನೋಡಲು, ಮೂವರು ಪುರುಷರು ಹತ್ತಿರದಲ್ಲಿ ನಿಂತಿದ್ದರು. ಅವನು ಅವರನ್ನು ಕಂಡು ಅವರಿಗೆ ಎದುರಾಗಿ ಡೇರೆಯ ಬಾಗಿಲಿನಿಂದ ಓಡಿಬಂದು ನೆಲದವರೆಗೂ ಬಗ್ಗಿ ನಮಸ್ಕರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 18:2
23 ತಿಳಿವುಗಳ ಹೋಲಿಕೆ  

ಅತಿಥಿಸತ್ಕಾರ ಮಾಡುವುದನ್ನು ಮರೆಯದಿರಿ. ಅದನ್ನು ಮಾಡುವಾಗ ಅರಿಯದೆ ಕೆಲವರು ದೇವದೂತರನ್ನೇ ಉಪಚರಿಸಿದ್ದಾರೆ.


ಆಗ ಆ ಇಬ್ಬರು ಮನುಷ್ಯರು ಅಲ್ಲಿಂದ ಸೊದೋಮಿನ ಕಡೆಗೆ ಹೋದರು. ಆದರೆ ಅಬ್ರಹಾಮನು ಸರ್ವೇಶ್ವರ ಸ್ವಾಮಿಯ ಸಂಗಡವೇ ಉಳಿದುಕೊಂಡನು.


ಆ ದೂತರಿಬ್ಬರು ಸೊದೋಮಿಗೆ ಬಂದಾಗ ಸಾಯಂಕಾಲವಾಗಿತ್ತು. ಲೋಟನು ಆ ಊರಬಾಗಿಲಲ್ಲೇ ಕುಳಿತುಕೊಂಡಿದ್ದನು. ದೂತರನ್ನು ಕಂಡದ್ದೇ ಅವನು ಎದ್ದುಬಂದು, ಬಾಗಿ ನಮಸ್ಕರಿಸಿ,


ಒಂದಾನೊಂದು ದಿನ ಸರ್ವೇಶ್ವರನ ದೂತ ಆಕೆಗೆ ಪ್ರತ್ಯಕ್ಷನಾಗಿ, “ಇಗೋ, ಬಂಜೆಯಾಗಿ ಮಕ್ಕಳಿಲ್ಲದಿರುವ ನೀನು ಗರ್ಭವತಿಯಾಗಿ ಒಬ್ಬ ಮಗನನ್ನು ಹೆರುವೆ.


ಅಬ್ರಹಾಮನು ಎದ್ದುನಿಂತು ಆ ಹಿತ್ತಿಯ ನಾಡಿಗರಿಗೆ ಬಾಗಿ ನಮಸ್ಕರಿಸಿದನು.


ಯೆಹೋಶುವನು ಜೆರಿಕೋವಿಗೆ ಹತ್ತಿರವಿದ್ದಾಗ, ಒಮ್ಮೆ ಕಣ್ಣೆತ್ತಿ ನೋಡಿದನು. ಇಗೋ, ಒಬ್ಬ ವ್ಯಕ್ತಿ ಕಾಣಿಸಿಕೊಂಡನು. ಹಿರಿದ ಕತ್ತಿಯನ್ನು ಕೈಯಲ್ಲಿ ಹಿಡಿದು ನಿಂತಿದ್ದನು. ಯೆಹೋಶುವ ಅವನನ್ನು ಸಮೀಪಿಸಿ, “ನೀನು ನಮ್ಮವನೋ ಅಥವಾ ಶತ್ರು ಕಡೆಯವನೋ?” ಎಂದು ಕೇಳಿದನು.


ಯೆಹೂದನು ಮತ್ತು ಅವನ ಅಣ್ಣತಮ್ಮಂದಿರು ಜೋಸೆಫನ ಮನೆಗೆ ಹಿಂದಿರುಗಿದಾಗ ಜೋಸೆಫನು ಇನ್ನೂ ಮನೆಯಲ್ಲೇ ಇದ್ದನು. ಅವರು ಅವನಿಗೆ ಅಡ್ಡಬಿದ್ದರು.


ಅವರು ಮತ್ತೆ ನೆಲದವರೆಗೆ ಬಾಗಿ ನಮಸ್ಕಾರ ಮಾಡಿ, “ನಿಮ್ಮ ಸೇವಕರಾದ ನಮ್ಮ ತಂದೆ ಇಂದಿಗೂ ಕ್ಷೇಮದಿಂದ ಇದ್ದಾರೆ,” ಎಂದರು.


ಜೋಸೆಫನು ಮನೆಗೆ ಬಂದಾಗ ಅವರು ಅವನಿಗೆ ಕಾಣಿಕೆಯನ್ನು ತಂದುಕೊಟ್ಟು, ಅವನ ಮುಂದೆ ನೆಲದವರೆಗೂ ಬಾಗಿ ನಮಸ್ಕರಿಸಿದರು.


ಯಕೋಬನು ಒಂಟಿಗನಾಗಿ ಹಿಂದೆ ನಿಂತಿದ್ದನು, ಯಾರೋ ಒಬ್ಬ ಪುರುಷ ಬೆಳಗಾಗುವ ತನಕ ಅವನ ಸಂಗಡ ಹೋರಾಡಿದನು.


ಆ ಮನುಷ್ಯರು ಅಲ್ಲಿಂದ ಹೊರಟು ಸೊದೋಮ್ ಕಾಣಿಸುತ್ತಿದ್ದ ಒಂದು ಸ್ಥಳಕ್ಕೆ ಬಂದರು. ಅವರನ್ನು ಸಾಗಕಳುಹಿಸುತ್ತಾ ಅಬ್ರಹಾಮನೂ ಅವರ ಜೊತೆಯಲ್ಲೇ ಅಲ್ಲಿಗೆ ಬಂದನು.


ಆಗ ರೂತಳು ಅವನಿಗೆ ಸಾಷ್ಟಾಂಗವೆರಗಿ ನಮಸ್ಕರಿಸಿ, “ಒಡೆಯಾ, ನನ್ನ ಮೇಲೆ ಏಕೆ ಇಷ್ಟು ಕನಿಕರ? ಪರದೇಶಿಯಾದ ನನಗೆ ತಾವಿಷ್ಟು ದಯೆತೋರಿಸುವುದೇಕೆ?” ಎಂದಳು.


ಗೊಣಗುಟ್ಟದೆ ಒಬ್ಬರಿಗೊಬ್ಬರು ಅತಿಥಿಸತ್ಕಾರ ಮಾಡಿ.


ಕೊರತೆಯಲ್ಲಿರುವ ದೇವಜನರಿಗೆ ನೆರವು ನೀಡಿರಿ. ಅತಿಥಿಸತ್ಕಾರದಲ್ಲಿ ತತ್ಪರರಾಗಿರಿ.


ದೂರದಲ್ಲಿ ನಿಂತಿದ್ದ ಜೆರಿಕೋವಿನ ಪ್ರವಾದಿಮಂಡಲಿಯವರು ಇದನ್ನು ಕಂಡು, “ಎಲೀಯನಿಗಿದ್ದ ಆತ್ಮಶಕ್ತಿ ಎಲೀಷನ ಮೇಲೆ ಬಂದು ನೆಲಸಿದೆ,” ಎಂದು ತಿಳಿದುಕೊಂಡರು. ಅವನನ್ನು ಎದುರುಗೊಂಡು ಅವನಿಗೆ ಸಾಷ್ಟಾಂಗ ನಮಸ್ಕಾರ ಮಾಡಿದರು.


ಅಬ್ರಾಮನು ಅಡ್ಡಬಿದ್ದು ಸಾಷ್ಟಾಂಗ ಪ್ರಣಾಮ ಮಾಡಿದನು.


“ಸ್ವಾಮೀ, ದಯವಿರಲಿ, ದಾಸನ ಬಳಿಗೆ ದಯಮಾಡದೆ ಮುಂದೆ ಹೋಗಬೇಡಿ.


ಸಂಜೆ ವೇಳೆಯಲ್ಲಿ ಅವನು ವಿಶ್ರಾಂತಿಗಾಗಿ ತಿರುಗಾಡಲು ಹೋಗಿದ್ದನು. ಕಣ್ಣೆತ್ತಿ ನೋಡಿದಾಗ ಒಂಟೆಗಳು ಬರುತ್ತಿರುವುದು ಅವನಿಗೆ ಕಾಣಿಸಿತು.


ಅಬ್ರಹಾಮನು ಆ ನಾಡಿಗರಿಗೆ ಬಾಗಿ ವಂದಿಸಿದನು.


ಆಗ ಈಜಿಪ್ಟ್ ದೇಶದಲ್ಲಿ ಅಧಿಕಾರ ನಡೆಸುತ್ತಿದ್ದವನು ಹಾಗೂ ಜನರಿಗೆ ದವಸಧಾನ್ಯ ಮಾರಾಟ ಮಾಡಿಸುತ್ತಿದ್ದವನು ಜೋಸೆಫನೇ. ಇಂತಿರಲು ಅವನ ಅಣ್ಣಂದಿರು ಬಂದು ಅವನ ಮುಂದೆ ನೆಲದವರೆಗೂ ಬಾಗಿ ನಮಸ್ಕರಿಸಿದರು.


ಆಗ ಜೋಸೆಫನು ತಂದೆಯ ಮಡಲಿನಿಂದ ತನ್ನ ಮಕ್ಕಳನ್ನು ಎತ್ತಿಕೊಂಡು ತಂದೆಗೆ ನೆಲದ ತನಕ ಬಾಗಿ ನಮಸ್ಕರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು