Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 18:20 - ಕನ್ನಡ ಸತ್ಯವೇದವು C.L. Bible (BSI)

20 ಇದಲ್ಲದೆ ಸರ್ವೇಶ್ವರ, “ಸೊದೋಮ್ ಗೊಮೋರಗಳ ವಿರುದ್ಧ ಎಷ್ಟೋ ಘನತರವಾದ ದೂರುಗಳು ನನಗೆ ಬಂದಿವೆ; ಆ ಊರಿನವರ ಮೇಲೆ ಹೊರಿಸಲಾಗಿರುವ ಪಾಪಕೃತ್ಯವೂ ಘೋರವಾದುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಇದಲ್ಲದೆ ಯೆಹೋವನು, “ಸೊದೋಮ್ ಗೊಮೋರಗಳ ದೊಡ್ಡ ಮೊರೆ ನನಗೆ ಮುಟ್ಟಿತು; ಆ ಊರಿನವರ ಮೇಲೆ ಹೊರಿಸಿರುವ ಪಾಪವು ಎಷ್ಟೋ ಘೋರವಾದದ್ದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಇದಲ್ಲದೆ ಯೆಹೋವನು - ಸೊದೋಮ್ ಗೊಮೋರಗಳ ವಿಷಯವಾಗಿ ಎಷ್ಟೋ ದೊಡ್ಡ ಮೊರೆ ನನಗೆ ಮುಟ್ಟಿತು; ಆ ಊರಿನವರ ಮೇಲೆ ಹೊರಿಸಿರುವ ಪಾಪವು ಎಷ್ಟೋ ಘೋರವಾದದ್ದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಇದಲ್ಲದೆ ಯೆಹೋವನು, “ಸೊದೋಮ್ ಮತ್ತು ಗೊಮೋರಗಳ ಜನರು ಬಹಳ ಕೆಟ್ಟವರೆಂದು ಅನೇಕ ಸಲ ಕೇಳಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಇದಲ್ಲದೆ ಯೆಹೋವ ದೇವರು, “ಸೊದೋಮ್ ಗೊಮೋರಗಳ ಕೂಗು ದೊಡ್ಡದಾಗಿದೆ. ಅವರ ಪಾಪವೂ ಘೋರವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 18:20
14 ತಿಳಿವುಗಳ ಹೋಲಿಕೆ  

ನಾವು ಈ ಸ್ಥಳವನ್ನು ನಾಶಮಾಡುವುದಕ್ಕೆ ಬಂದವರು. ಇಲ್ಲಿಯವರ ವಿಷಯವಾಗಿ ಬಂದ ಆಪಾದನೆ ದೊಡ್ಡದಾದುದರಿಂದ ಇವರನ್ನು ನಾಶಮಾಡುವುದಕ್ಕಾಗಿ ಸರ್ವೇಶ್ವರ ನಮ್ಮನ್ನು ಕಳಿಸಿದ್ದಾರೆ,” ಎಂದು ತಿಳಿಸಿದರು.


ಅವರ ಮುಖಲಕ್ಷಣವೇ ಅವರ ವಿರುದ್ಧ ಸಾಕ್ಷಿಯಾಗಿದೆ. ಅವರು ಸೊದೋಮಿನವರಂತೆ ತಮ್ಮ ಪಾಪಗಳನ್ನು ಮುಚ್ಚುಮರೆಯಿಲ್ಲದೆ ಮೆರೆಯಿಸುತ್ತಾರೆ. ಅಯ್ಯೋ, ಅವರಿಗೆ ಕೇಡು! ತಮಗೆ ತಾವೇ ಕೇಡನ್ನು ಬರಮಾಡಿಕೊಂಡಿದ್ದಾರೆ.


ಸೋದೋಮಿನ ಪಟ್ಟಣದವರು ಬಹಳ ದುಷ್ಟರು; ಪ್ರಭುವಿನ ದೃಷ್ಟಿಯಲ್ಲಿ ಕಡುಪಾಪಿಗಳು.


ಆಗ ಸರ್ವೇಶ್ವರ, “ನೀನು ಎಂಥ ಕೃತ್ಯ ಎಸಗಿದೆ? ಪ್ರತೀಕಾರಕ್ಕಾಗಿ ನೆಲದಿಂದ ನಿನ್ನ ತಮ್ಮನ ರಕ್ತ ಕೂಗಿ ನನಗೆ ಮೊರೆಯಿಡುತ್ತಿದೆ, ಕೇಳು.


ನಿಮ್ಮ ಹೊಲಗಳಲ್ಲಿ ದುಡಿದ ಆಳುಗಳ ಕೂಲಿಯನ್ನು ಮೋಸದಿಂದ ಹಿಡಿದಿಟ್ಟುಕೊಂಡಿದ್ದೀರಿ. ನೀವು ಕೊಡದ ಕೂಲಿಯೇ ನಿಮಗೆ ವಿರುದ್ಧವಾಗಿ ಕೂಗಿಕೊಳ್ಳುತ್ತಿದೆ. ಕೂಲಿಯಾಳುಗಳ ಗೋಳಾಟ ಸ್ವರ್ಗಸೇನಾಧೀಶ್ವರನಾದ ಪ್ರಭುವಿನ ಕಿವಿಗೂ ಬಿದ್ದಿದೆ.


ಸರ್ವೇಶ್ವರಾ, ನಮ್ಮ ದ್ರೋಹಗಳು ಹಲವು ನಿಮಗೆ ವಿರುದ್ಧ ಪಾಪಮಾಡಿದೆವು. ನಮ್ಮ ಅಪರಾಧಗಳೇ ನಮಗೆ ವಿರುದ್ಧ ಸಾಕ್ಷಿ ನೀಡುತ್ತಿವೆ ಆದರೂ ನಿಮ್ಮ ನಾಮದ ನಿಮಿತ್ತ ಕೈನೀಡು ನಮಗೆ.


ಇಸ್ರಯೇಲ್ ಮನೆತನವೇ ಸೇನಾಧೀಶ್ವರ ಸರ್ವೇಶ್ವರ ನೆಟ್ಟ ಆ ದ್ರಾಕ್ಷಿಯ ತೋಟ. ಜುದೇಯದ ಜನರೇ ಆತ ನಾಟಿಮಾಡಿದಾ ಸುಂದರ ಸಸಿತೋಟ. ನ್ಯಾಯನೀತಿಯನು ನಿರೀಕ್ಷಿಸಿದನಾತ ಆದರೆ ಸಿಕ್ಕಿತವನಿಗೆ ರಕ್ತಪಾತ ! ಸತ್ಸಂಬಂಧವನು ಎದುರುನೋಡಿದನಾತ ಇಗೋ, ದಕ್ಕಿತವನಿಗೆ ದುಃಖಿತರ ಆರ್ತನಾದ !


ಆದರೆ ಅವರು ಮಲಗುವುದಕ್ಕೆ ಮುಂಚೆ ಆ ಸೊದೋಮ್ ಪಟ್ಟಣದ ಗಂಡಸರು, ಹುಡುಗರು-ಮುದುಕರು ಎನ್ನದೆ, ಎಲ್ಲರೂ ಬಂದು ಆ ಮನೆಯನ್ನು ಮುತ್ತಿದರು.


ಜೆರುಸಲೇಮಿನ ಪ್ರವಾದಿಗಳಲ್ಲೂ ಭೀಕರವಾದುವನ್ನು ನೋಡಿರುವೆನು ವ್ಯಭಿಚಾರ ಮಾಡುತ್ತಾರೆ, ಸುಳ್ಳು ಹಾದಿಯನ್ನು ಹಿಡಿಯುತ್ತಾರೆ ದುರುಳರು ದುರಾಚಾರವನ್ನು ಬಿಡದಂತೆ ದೃಢಪಡಿಸುತ್ತಾರೆ. ನನ್ನ ದೃಷ್ಟಿಗೆ ಅವರೆಲ್ಲರು ಸೊದೋಮಿನಂತೆ, ಆ ಪುರನಿವಾಸಿಗಳು ನನ್ನ ಕಣ್ಣಿಗೆ ಗೊಮೋರದಂತೆ.”


“ನಿನ್ನ ಉತ್ತರಕ್ಕೆ ತನ್ನ ಕುವರಿಯರೊಂದಿಗೆ ವಾಸಿಸುವ ಸಮಾರಿಯ, ನಿನ್ನ ಅಕ್ಕ; ನಿನ್ನ ದಕ್ಷಿಣ ಕಡೆಯಲ್ಲಿ ಕುವರಿಯರೊಂದಿಗೆ ವಾಸಿಸುವ ಸೊದೋಮ್, ನಿನ್ನ ತಂಗಿ.


ಸ್ವಾಮಿಯ ಶೂರರೇ, ಕುಡುಗೋಲನ್ನು ಹಾಕಿರಿ; ಫಲ ಪಕ್ವವಾಗಿದೆ. ಬನ್ನಿ, ದ್ರಾಕ್ಷಿಯನ್ನು ತುಳಿಯಿರಿ; ಆಲೆಯು ಭರ್ತಿಯಾಗಿದೆ, ತೊಟ್ಟಿಗಳು ತುಂಬಿತುಳುಕುತ್ತಿವೆ; ರಾಷ್ಟ್ರಗಳ ದುಷ್ಟತನವು ಮಿತಿಮೀರಿದೆ.


“ನಿನೆವೆ ಮಹಾನಗರದ ನಿವಾಸಿಗಳು ಎಷ್ಟು ದುಷ್ಟರೆಂಬುದು ನನಗೆ ತಿಳಿದುಬಂದಿದೆ. ನೀನು ಅಲ್ಲಿಗೆ ಹೋಗು ಅವರನ್ನು ಕಟುವಾಗಿ ಖಂಡಿಸು.”


ಭೂನಿವಾಸಿಗಳೆಲ್ಲರು ತಮ್ಮ ನಡತೆಯನ್ನು ಕೆಡಿಸಿಕೊಂಡಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು