Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 18:21 - ಕನ್ನಡ ಸತ್ಯವೇದವು C.L. Bible (BSI)

21 ನನಗೆ ಮುಟ್ಟಿರುವ ದೂರಂತೆ ಅವರು ಮಾಡಿದರೋ ಇಲ್ಲವೋ ಎಂದು ನೋಡಿ ತಿಳಿದುಕೊಳ್ಳುತ್ತೇನೆ,” ಎಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ನಾನು ಇಳಿದು ಹೋಗಿ, ನನಗೆ ಮುಟ್ಟಿದ ಮೊರೆಯಂತೆಯೇ ಅವರು ಮಾಡಿರುವರೋ ಇಲ್ಲವೋ ಎಂದು ನೋಡಿ ತಿಳಿದುಕೊಳ್ಳುತ್ತೇನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ನಾನು ಇಳಿದು ಹೋಗಿ ನನಗೆ ಮುಟ್ಟಿದ ಮೊರೆಯಂತೆಯೇ ಅವರು ಮಾಡಿದರೋ ಇಲ್ಲವೋ ಎಂದು ನೋಡಿ ತಿಳುಕೊಳ್ಳುತ್ತೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಆದ್ದರಿಂದ ನಾನು ಕೆಳಗಿಳಿದು ಅಲ್ಲಿಗೆ ಹೋಗಿ ನಾನು ಕೇಳಿದ್ದು ನಿಜವೇ ಎಂದು ಪರೀಕ್ಷಿಸುವೆನು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ನಾನು ಇಳಿದು ಹೋಗಿ ನನ್ನ ಬಳಿಗೆ ಬಂದ ಆ ಊರಿನವರ ಕೂಗಿನ ಪ್ರಕಾರವೇ, ಅವರು ಮಾಡಿದ್ದಾರೋ, ಇಲ್ಲವೋ, ಎಂದು ನೋಡಿ ತಿಳಿದುಕೊಳ್ಳುವೆನು,” ಎಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 18:21
23 ತಿಳಿವುಗಳ ಹೋಲಿಕೆ  

ಆದಕಾರಣ ಅವರನ್ನು ಈಜಿಪ್ಟಿನವರ ಕೈಯಿಂದ ಬಿಡಿಸುವುದಕ್ಕು ಮತ್ತು ಆ ದೇಶದಿಂದ ಹೊರತಂದು ಹಾಲೂ ಜೇನೂ ಹರಿಯುವ ಸವಿಸ್ತಾರವಾದ ಒಳ್ಳೆಯ ನಾಡಿಗೆ, ಅಂದರೆ ಕಾನಾನ್ಯರು, ಹಿತ್ತಿಯರು, ಆಮೋರಿಯರು, ಪೆರಿಜೀಯರು, ಹಿವ್ವಿಯರು ಹಾಗು ಯೆಬೂಸಿಯರು ವಾಸವಾಗಿರುವ ನಾಡಿಗೆ ನಡೆಸಿಕೊಂಡು ಹೋಗುವುದಕ್ಕು ಇಳಿದು ಬಂದಿದ್ದೇನೆ.


ನರಮಾನವರು ಕಟ್ಟುತ್ತಿದ್ದ ಆ ಪಟ್ಟಣವನ್ನು ಹಾಗೂ ಗೋಪುರವನ್ನು ನೋಡಲು ಸರ್ವೇಶ್ವರ ಸ್ವಾಮಿ ಇಳಿದು ಬಂದರು.


“ಆಗ ದೀಪವನ್ನು ಹಿಡಿದುಕೊಂಡು ಜೆರುಸಲೇಮನ್ನೆಲ್ಲಾ ಹುಡುಕಿಬಿಡುವೆನು. ‘ಸರ್ವೇಶ್ವರ ಮೇಲನ್ನಾಗಲಿ, ಕೇಡನ್ನಾಗಲಿ ಏನನ್ನೂ ಮಾಡುವುದಿಲ್ಲ’ ಎಂದುಕೊಳ್ಳುವ ಮದ್ಯದ ಮಡ್ಡಿಯಂಥ ಜಡ ಮನಸ್ಕರನ್ನು ದಂಡಿಸುವೆನು.


ಸಾಕ್ಷಿ ನುಡಿದಿಹನು ನಿಮ್ಮ ವಿರುದ್ಧ ಸರ್ವೇಶ್ವರ ಪವಿತ್ರಾಲಯದಿಂದ ಇಳಿದುಬರುತಿಹನಿದೋ ಸ್ವಾಮಿ ತನ್ನ ಆಸ್ಥಾನದಿಂದ ಜಗದ ಉನ್ನತ ಪ್ರದೇಶಗಳಲ್ಲಿ ಸಂಚರಿಸಲಿಹನಾತ.


ಸರ್ವೇಶ್ವರನಾದ ನಾನು ಹೃದಯ ಪರಿಶೀಲಕ ಹೌದು, ಅಂತರಿಂದ್ರಿಯಗಳನ್ನು ಪರಿಶೋಧಿಸುವಾತ.


“ದೇವಾಧಿದೇವರಾದ ಸರ್ವೇಶ್ವರ ಇದಕ್ಕೆ ಸಾಕ್ಷಿ; ಆ ದೇವಾಧಿದೇವ ಸರ್ವೇಶ್ವರಸ್ವಾಮಿಗೆ ಇದು ಗೊತ್ತಿದೆ. ಇಸ್ರಯೇಲರಿಗೂ ಗೊತ್ತಾಗುವುದು. ನಾವು ದ್ರೋಹಿಗಳು, ಸರ್ವೇಶ್ವರನಿಗೆ ವಿರುದ್ಧ ಪಾಪಮಾಡಿದವರು ಆಗಿದ್ದರೆ ಆ ಸ್ವಾಮಿ ನಮ್ಮನ್ನು ಇಂದೇ ಜೀವದಿಂದುಳಿಸದಿರಲಿ.


“ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಈ ನಲವತ್ತು ವರ್ಷ ಮರುಭೂಮಿಯಲ್ಲಿ ನಡೆಸಿದ್ದನ್ನು ಹಾಗು ನೀವು ಅವರ ಆಜ್ಞೆಗಳನ್ನು ಕೈಕೊಳ್ಳುವವರೋ ಅಲ್ಲವೋ ಎಂದು ತಿಳಿದುಕೊಳ್ಳುವುದಕ್ಕೆ ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ ನಿಮ್ಮ ಮನೋಭಾವವನ್ನು ಪರೀಕ್ಷಿಸಿದ್ದನ್ನು ನೆನಪಿಗೆ ತಂದುಕೊಳ್ಳಿರಿ.


ಏಕೆಂದರೆ ಮೋಶೆಯ ಮುಖಾಂತರ ಸರ್ವೇಶ್ವರ, “ನೀವು ನನ್ನ ಆಜ್ಞೆಗಳಿಗೆ ಬಗ್ಗದ ಹಟಮಾರಿಗಳು. ನಾನು ಕ್ಷಣಮಾತ್ರ ನಿಮ್ಮೊಡನೆ ಬರುವುದಾದರೆ ನಿರ್ಮೂಲವಾಗಿಬಿಡುವಿರಿ, ಎಚ್ಚರಿಕೆ! ಆದ್ದರಿಂದ ನಿಮ್ಮ ಒಡವೆವಸ್ತುಗಳನ್ನು ತೆಗೆದುಬಿಡಿ. ನಿಮಗೇನು ಮಾಡಬೇಕೆಂದು ಆಲೋಚಿಸುವೆನು,” ಎಂದಿದ್ದರು.


ನಾವು ಹೋಗಿ ಇವರಲ್ಲಿ ಒಬ್ಬರ ಮಾತು ಒಬ್ಬರಿಗೆ ತಿಳಿಯದಂತೆ ಇವರ ಭಾಷೆಯನ್ನು ಗಲಿಬಿಲಿಗೊಳಿಸೋಣ,” ಎಂದರು.


ನಾವು ಯಾರಿಗೆ ಲೆಕ್ಕ ಒಪ್ಪಿಸಬೇಕಾಗಿದೆಯೋ, ಅವರ ಕಣ್ಣಿಗೆ ಮುಚ್ಚುಮರೆಯಾದುದು ಯಾವುದೂ ಇಲ್ಲ. ಅವರ ದೃಷ್ಟಿಗೆ ಎಲ್ಲವೂ ಬಟ್ಟಬಯಲು.


ಆಜ್ಞಾಘೋಷವಾದಾಗ, ಪ್ರಧಾನ ದೂತನ ಧ್ವನಿಯು ಕೇಳಿಬಂದಾಗ, ದೇವರ ತುತೂರಿ ನಾದಗೈದಾಗ, ಪ್ರಭುವೇ ಸ್ವರ್ಗದಿಂದ ಇಳಿದುಬರುತ್ತಾರೆ. ಆಗ, ಕ್ರಿಸ್ತಸ್ಥರಾಗಿ ಮೃತರಾದವರು ಮೊದಲು ಎದ್ದುಬರುತ್ತಾರೆ.


ನಿಮ್ಮಿಂದ ನಾನು ಏನನ್ನೂ ತೆಗೆದುಕೊಳ್ಳುತ್ತಿಲ್ಲವೇಕೆ? ನಿಮ್ಮ ಮೇಲೆ ಪ್ರೀತಿ ಇಲ್ಲದ್ದರಿಂದಲೋ? ಇಲ್ಲ, ನಿಮ್ಮ ಮೇಲೆ ನಮಗಿರುವ ಪ್ರೀತಿ ಎಷ್ಟೆಂದು ದೇವರೇ ಬಲ್ಲರು.


ನಾನು ಸ್ವರ್ಗದಿಂದ ಇಳಿದು ಬಂದುದು ನನ್ನ ಇಚ್ಛೆಯಂತೆ ನಡೆಯುವುದಕ್ಕಲ್ಲ, ನನ್ನನ್ನು ಕಳುಹಿಸಿದಾತನ ಚಿತ್ತದಂತೆ ನಡೆಯುವುದಕ್ಕೆ.


ಅದಕ್ಕೆ ಯೇಸು, “ನೀವು ಮಾನವರ ಮುಂದೆ ಸತ್ಪುರುಷರೆಂದು ತೋರಿಸಿಕೊಳ್ಳುತ್ತೀರಿ; ದೇವರಾದರೋ ನಿಮ್ಮ ಅಂತರಂಗವನ್ನು ಅರಿತಿದ್ದಾರೆ. ಮಾನವರಿಗೆ ಅಮೂಲ್ಯವಾದುದು ದೇವರಿಗೆ ಅಸಹ್ಯವಾದುದು,” ಎಂದರು.


ಸರ್ವೇಶ್ವರ ಸ್ವಾಮಿ ಜುದೇಯದ ಜನರಿಗೆ ಹೀಗೆನ್ನುತ್ತಾರೆ : “ಜುದೇಯದ ಪಾಪವನ್ನು ಕಬ್ಬಿಣದ ಲೇಖನಿಯಿಂದ, ವಜ್ರದ ಮೊನೆಯಿಂದ ಬರೆಯಲಾಗಿದೆ. ಅದನ್ನು ನಿಮ್ಮ ಜನರ ಹೃದಯದ ಹಲಗೆಯ ಮೇಲೂ ಅವರ ಬಲಿಪೀಠಗಳ ಕೊಂಬುಗಳ ಮೇಲೂ ಕೆತ್ತಲಾಗಿದೆ.


ನಿನ್ನ ನೋಟಕೆ ಮರೆಯಾಗಿಲ್ಲ ನಮ್ಮ ಪಾಪದೋಷಗಳು I ನಿನ್ನ ಮುಖಕಾಂತಿಗೆ ಬಟ್ಟಬಯಲಾಗಿವೆ ಗುಪ್ತಾಪರಾಧಗಳು II


ಆತನ ದೃಷ್ಟಿಯಿಂದ ದುರುಳರು ಅಡಗಿಕೊಳ್ಳುವಂತಿಲ್ಲ ಅಂಥವರನ್ನು ಅಡಗಿಸಬಲ್ಲ ಇರುಳಿಲ್ಲ ಕಾರಿರುಳೂ ಇಲ್ಲ.


ಅವನು ಹೇಳಿದಂತೆಯೇ ನಡೆದರೂ ನೀವು ಅವನ ಮಾತಿಗೆ ಕಿವಿಗೊಡಬಾರದು. ಏಕೆಂದರೆ ನಿಮ್ಮ ದೇವರಾದ ಸರ್ವೇಶ್ವರನನ್ನು ನೀವು ಪೂರ್ಣ ಹೃದಯದಿಂದ, ಪೂರ್ಣ ಮನಸ್ಸಿನಿಂದ ಪ್ರೀತಿಸುತ್ತೀರೊ ಇಲ್ಲವೋ ಎಂಬುದನ್ನು ತಿಳಿದುಕೊಳ್ಳುವುದಕ್ಕೆ ನಿಮ್ಮನ್ನು ಪರೀಕ್ಷಿಸುತ್ತಾರೆ.


ಆಗ ಸರ್ವೇಶ್ವರ ತಮ್ಮೊಳಗೆ ಇಂತೆಂದುಕೊಂಡರು: “ನಾನು ಮಾಡಬೇಕು ಎಂದಿರುವ ಕಾರ್ಯವನ್ನು ಅಬ್ರಹಾಮನಿಂದ ಮರೆಮಾಡುವುದು ಸರಿಯಲ್ಲ,


ಮಾನವರನು ಪ್ರಭು ಸ್ವರ್ಗದಿಂದ ಸಮೀಕ್ಷಿಸುತಿಹನು I ದೇವರನು ಅರಸುವ ಸನ್ಮತಿಗಳಾರೆಂದು ವೀಕ್ಷಿಸುತಿಹನು II


ಭೂನಿವಾಸಿಗಳೆಲ್ಲರು ತಮ್ಮ ನಡತೆಯನ್ನು ಕೆಡಿಸಿಕೊಂಡಿದ್ದರು.


“ನಿನೆವೆ ಮಹಾನಗರದ ನಿವಾಸಿಗಳು ಎಷ್ಟು ದುಷ್ಟರೆಂಬುದು ನನಗೆ ತಿಳಿದುಬಂದಿದೆ. ನೀನು ಅಲ್ಲಿಗೆ ಹೋಗು ಅವರನ್ನು ಕಟುವಾಗಿ ಖಂಡಿಸು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು