Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 18:22 - ಕನ್ನಡ ಸತ್ಯವೇದವು C.L. Bible (BSI)

22 ಆಗ ಆ ಇಬ್ಬರು ಮನುಷ್ಯರು ಅಲ್ಲಿಂದ ಸೊದೋಮಿನ ಕಡೆಗೆ ಹೋದರು. ಆದರೆ ಅಬ್ರಹಾಮನು ಸರ್ವೇಶ್ವರ ಸ್ವಾಮಿಯ ಸಂಗಡವೇ ಉಳಿದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆ ಮನುಷ್ಯರು ಅಲ್ಲಿಂದ ಸೊದೋಮಿನ ಕಡೆಗೆ ಹೋದರು; ಆದರೆ ಅಬ್ರಹಾಮನು ಯೆಹೋವನಿಗೆ ಎದುರಾಗಿ ಇನ್ನೂ ನಿಂತುಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆ ಮನುಷ್ಯರು ಅಲ್ಲಿಂದ ಸೊದೋವಿುನ ಕಡೆಗೆ ಹೋದರು; ಆದರೆ ಅಬ್ರಹಾಮನು ಯೆಹೋವನ ಎದುರಾಗಿ ಇನ್ನೂ ನಿಂತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಆದ್ದರಿಂದ ಆ ಪುರುಷರು ಸೊದೋಮಿನ ಕಡೆಗೆ ನಡೆಯತೊಡಗಿದರು. ಆದರೆ ಅಬ್ರಹಾಮನು ಯೆಹೋವನ ಎದುರಿನಲ್ಲಿ ನಿಂತುಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆ ಮನುಷ್ಯರು ಅಲ್ಲಿಂದ ತಮ್ಮ ಮುಖಗಳನ್ನು ತಿರುಗಿಸಿಕೊಂಡು, ಸೊದೋಮಿನ ಕಡೆಗೆ ಹೋದರು. ಆದರೆ ಅಬ್ರಹಾಮನು ಇನ್ನೂ ಯೆಹೋವ ದೇವರ ಮುಂದೆ ನಿಂತುಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 18:22
11 ತಿಳಿವುಗಳ ಹೋಲಿಕೆ  

ಆ ದೂತರಿಬ್ಬರು ಸೊದೋಮಿಗೆ ಬಂದಾಗ ಸಾಯಂಕಾಲವಾಗಿತ್ತು. ಲೋಟನು ಆ ಊರಬಾಗಿಲಲ್ಲೇ ಕುಳಿತುಕೊಂಡಿದ್ದನು. ದೂತರನ್ನು ಕಂಡದ್ದೇ ಅವನು ಎದ್ದುಬಂದು, ಬಾಗಿ ನಮಸ್ಕರಿಸಿ,


ಆದರೆ ಸ್ತೇಫನನು ಪವಿತ್ರಾತ್ಮಭರಿತನಾಗಿ ಸ್ವರ್ಗದತ್ತ ಕಣ್ಣೆತ್ತಿನೋಡಿ ದೇವರ ಮಹಿಮೆಯನ್ನೂ ಅವರ ಬಲಪಾರ್ಶ್ವದಲ್ಲಿ ನಿಂತಿರುವ ಯೇಸುವನ್ನೂ ಕಂಡು,


ನಾನು ದೇಶವನ್ನು ಹಾಳುಮಾಡದಂತೆ ನನ್ನೆದುರಿಗೆ ದೇಶ ರಕ್ಷಣೆಗಾಗಿ, ಪೌಳಿಯ ಒಡಕಿನಲ್ಲಿ ನಿಲ್ಲುವುದಕ್ಕೂ ಗೋಡೆಯನ್ನು ಗಟ್ಟಿಮಾಡುವುದಕ್ಕೂ ತಕ್ಕವನನ್ನು ನಾನು ಹುಡುಕಿದರೂ ಯಾರೂ ಸಿಕ್ಕಲಿಲ್ಲ.


ಎಂತಲೇ ‘ಸಂಹರಿಸುವೆ’ ಎನ್ನಲು ಪ್ರಭು ಅವರನು I ಆಪ್ತ ಮೋಶೆಯು ಮಧ್ಯಸ್ಥನಾಗಿ ಬಂದನು I ಸಂಹರಿಸದಂತೆ ಶಮನಗೊಳಿಸಿದನಾ ಕೋಪವನು II


ಮೊತ್ತಮೊದಲು ಮಾನವರೆಲ್ಲರಿಗೋಸ್ಕರ ದೇವರಿಗೆ ವಿಜ್ಞಾಪನೆ, ಪ್ರಾರ್ಥನೆ, ಬಿನ್ನಹ ಹಾಗೂ ಕೃತಜ್ಞತಾಸ್ತುತಿಗಳನ್ನು ಸಲ್ಲಿಸಬೇಕೆಂದು ಕೇಳಿಕೊಳ್ಳುತ್ತೇನೆ.


ಮಾಡಿದ ಮೇಲಿಗೆ ಕೇಡಿನ ಪ್ರತಿಫಲವೆ? ನನ್ನ ಪ್ರಾಣ ಹಿಡಿಯಲು ಗುಂಡಿಯನ್ನು ತೋಡಿದ್ದಾರೆ. ಅವರ ಮೇಲೆ ನಿಮಗಿದ್ದ ಕೋಪಾವೇಶವನ್ನು ಶಮನಗೊಳಿಸಲು ನಿಮ್ಮ ಮುಂದೆ ನಿಂತು ನಾನು ವಿನಂತಿಸಿದ್ದನ್ನು ನೆನಪಿಗೆ ತಂದುಕೊಳ್ಳಿ.


ಸರ್ವೇಶ್ವರ ಸ್ವಾಮಿ ನನಗೆ ಹೀಗೆಂದರು : “ಮೋಶೆ ಮತ್ತು ಸಮುವೇಲನು ನನ್ನ ಮುಂದೆ ನಿಂತು ವಿಜ್ಞಾಪಿಸಿದರೂ ನಾನು ಈ ಜನರ ಬಗ್ಗೆ ನನ್ನ ಮನಸ್ಸನ್ನು ಬದಲಾಯಿಸೆನು. ಇವರನ್ನು ನನ್ನ ಸಮ್ಮುಖದಿಂದ ತಳ್ಳಿಬಿಡು; ತೊಲಗಿಹೋಗಲಿ!


ಆ ಮನುಷ್ಯರು ಅಲ್ಲಿಂದ ಹೊರಟು ಸೊದೋಮ್ ಕಾಣಿಸುತ್ತಿದ್ದ ಒಂದು ಸ್ಥಳಕ್ಕೆ ಬಂದರು. ಅವರನ್ನು ಸಾಗಕಳುಹಿಸುತ್ತಾ ಅಬ್ರಹಾಮನೂ ಅವರ ಜೊತೆಯಲ್ಲೇ ಅಲ್ಲಿಗೆ ಬಂದನು.


ಆಗ ಸರ್ವೇಶ್ವರ ತಮ್ಮೊಳಗೆ ಇಂತೆಂದುಕೊಂಡರು: “ನಾನು ಮಾಡಬೇಕು ಎಂದಿರುವ ಕಾರ್ಯವನ್ನು ಅಬ್ರಹಾಮನಿಂದ ಮರೆಮಾಡುವುದು ಸರಿಯಲ್ಲ,


ಇತ್ತ ಅಬ್ರಹಾಮನು ಬೆಳಿಗ್ಗೆ ಎದ್ದು ತಾನು ಸರ್ವೇಶ್ವರ ಸ್ವಾಮಿ ಸನ್ನಿಧಿಯಲ್ಲಿ ನಿಂತಿದ್ದ ಸ್ಥಳಕ್ಕೆ ಮರಳಿ ಬಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು