Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 18:25 - ಕನ್ನಡ ಸತ್ಯವೇದವು C.L. Bible (BSI)

25 ಹೀಗೆ ದುಷ್ಟರಿಗೂ ಶಿಷ್ಟರಿಗೂ ಭೇದಮಾಡದೆ ದುಷ್ಟರ ಸಂಗಡ ಸಜ್ಜನರನ್ನೂ ಸಂಹರಿಸುವುದು ನಿಮ್ಮಿಂದ ಎಂದಿಗೂ ಆಗಬಾರದು. ಇಡೀ ಜಗತ್ತಿನ ನ್ಯಾಯಾಧಿಪತಿ ಸರಿಯಾಗಿ ನ್ಯಾಯತೀರಿಸಬೇಕಲ್ಲವೇ?" ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆ ರೀತಿಯಾಗಿ ದುಷ್ಟರಿಗೂ ಶಿಷ್ಟರಿಗೂ ಭೇದ ಮಾಡದೆ ದುಷ್ಟರ ಸಂಗಡ ನೀತಿವಂತರನ್ನೂ ಸಂಹರಿಸುವುದು ನಿನ್ನಿಂದ ಎಂದಿಗೂ ಆಗಬಾರದು; ಸರ್ವಲೋಕಕ್ಕೆ ನ್ಯಾಯತೀರಿಸುವವನು ನ್ಯಾಯವನ್ನೇ ನಡಿಸುವನಲ್ಲವೇ” ಎಂದು ಹೇಳಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಆ ರೀತಿಯಾಗಿ ದುಷ್ಟರಿಗೂ ಶಿಷ್ಟರಿಗೂ ಭೇದಮಾಡದೆ ದುಷ್ಟರ ಸಂಗಡ ನೀತಿವಂತರನ್ನೂ ಸಂಹರಿಸುವದು ನಿನ್ನಿಂದ ಎಂದಿಗೂ ಆಗಬಾರದು; ಸರ್ವಲೋಕಕ್ಕೆ ನ್ಯಾಯತೀರಿಸುವವನು ನ್ಯಾಯವನ್ನೇ ನಡಿಸುವನಲ್ಲವೇ ಎಂದು ಹೇಳಲು ಯೆಹೋವನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಖಂಡಿತವಾಗಿಯೂ ನೀನು ಆ ಪಟ್ಟಣವನ್ನು ನಾಶಮಾಡುವುದಿಲ್ಲ. ಕೆಟ್ಟವರನ್ನು ಕೊಲ್ಲುವುದಕ್ಕಾಗಿ ನೀನು ಐವತ್ತು ಮಂದಿ ನೀತಿವಂತರನ್ನು ಕೊಲ್ಲುವುದಿಲ್ಲ. ಒಂದುವೇಳೆ ನೀನು ಕೊಂದರೆ, ಒಳ್ಳೆಯವರೂ ಕೆಟ್ಟವರೂ ಸರಿಸಮಾನರಾಗುವರು. ಅವರಿಬ್ಬರೂ ದಂಡನೆಗೆ ಗುರಿಯಾಗುವರು. ನೀನು ಲೋಕದವರಿಗೆಲ್ಲ ನ್ಯಾಯಾಧಿಪತಿ. ನೀನು ನ್ಯಾಯವಾದದ್ದನ್ನೇ ಮಾಡುವೆ ಎಂದು ನನಗೆ ಗೊತ್ತಿದೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಈ ರೀತಿಯಾಗಿ ನೀತಿವಂತರಿಗೂ ದುಷ್ಟರಿಗೂ ಭೇದ ಮಾಡದೆ, ನೀತಿವಂತರನ್ನು ದುಷ್ಟರ ಸಂಗಡ ಕೊಲ್ಲುವುದು ನಿಮ್ಮಿಂದ ಎಂದಿಗೂ ಆಗಬಾರದು. ಭೂಲೋಕಕ್ಕೆಲ್ಲಾ ನ್ಯಾಯಾಧಿಪತಿಯಾಗಿರುವ ತಾವು ನ್ಯಾಯವಾದದ್ದನ್ನೇ ಮಾಡಬೇಕಲ್ಲವೇ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 18:25
35 ತಿಳಿವುಗಳ ಹೋಲಿಕೆ  

ಅನ್ಯಾಯವಾದ ತೀರ್ಪನು ಕೊಡುತ್ತಾನೆಯೆ ದೇವರು? ಸತ್ಯವನ್ನು ಡೊಂಕುಮಾಡುತ್ತಾನೆಯೆ ಸರ್ವಶಕ್ತನು?


ದೇವರು ನಿರ್ದೋಷಿಯನು ತ್ಯಜಿಸಿಬಿಡುವುದಿಲ್ಲ ಕೆಡುಕರಿಗೆ ನೆರವಾಗಲು ಆತ ಕೈ ನೀಡುವುದಿಲ್ಲ.


“ನ್ಯಾಯ ನಿರ್ಣಯಿಸುವಂಥ ದೇವನಿಹನು ಜಗದಲಿ I ಸಜ್ಜನರಿಗೆ ಸತ್ಫಲ ಕಟ್ಟಿಟ್ಟ ಬುತ್ತಿ,” ಇದು ನಾಣ್ನುಡಿ II


“ನಿಮಗೆ ಪೊರೆಬಂಡೆ ಆತ, ಆತನ ಕಾರ್ಯ ದೋಷರಹಿತ ಆತನ ಮಾರ್ಗ ನ್ಯಾಯಯುತ, ಆ ದೇವ ನಂಬಿಕಸ್ತ. ಆತ ನಿರ್ವಂಚಕ, ಯಥಾರ್ಥನು ಹಾಗು ನೀತಿವಂತ.”


ಪ್ರಭೂ, ಲೋಕದ ನ್ಯಾಯಾಧಿಪತಿ I ಏಳು, ಗರ್ವಿಗಳಿಗೆ ಮಾಡು ತಕ್ಕಶಾಸ್ತಿ II


ನಾವು ಎಲ್ಲರೂ ನ್ಯಾಯವಿಚಾರಣೆಗಾಗಿ ಕ್ರಿಸ್ತಯೇಸುವಿನ ಮುಂದೆ ನಿಲ್ಲಲೇಬೇಕು. ಪ್ರತಿಯೊಬ್ಬನೂ ತನ್ನ ದೈಹಿಕ ಜೀವನದಲ್ಲಿ ಮಾಡಿದ ಪಾಪ ಪುಣ್ಯಕಾರ್ಯಗಳಿಗೆ ತಕ್ಕ ಪ್ರತಿಫಲವನ್ನು ಪಡೆಯಲೇಬೇಕು.


ಆಗ ಸಜ್ಜನರಿಗೂ ದುರ್ಜನರಿಗೂ, ದೇವರಸೇವೆ ಮಾಡುವವರಿಗೂ ಮಾಡದವರಿಗೂ ಇರುವ ವ್ಯತ್ಯಾಸವನ್ನು ಮತ್ತೆ ನೀವು ಮನಗಾಣುವಿರಿ.


ಏಕೆನೆ ಬರುವನಾತ ಇಹಲೋಕಕೆ ನ್ಯಾಯತೀರಿಸಲು I ಜಗಕು, ಜನತೆಗು, ನ್ಯಾಯನೀತಿಗನುಸಾರ ತೀರ್ಪುಕೊಡಲು II


ಸರ್ವೇಶ್ವರಾ, ನೀವು ಸತ್ಯಸ್ವರೂಪಿ. ನಿಮ್ಮೊಡನೆ ವ್ಯಾಜ್ಯ ನನಗೆ ಅಸಾಧ್ಯ. ಆದರೂ ನಿಮ್ಮೊಡನೆ ಚರ್ಚಿಸಬೇಕೆಂದಿರುವೆ ಈ ನ್ಯಾಯ : ದುರುಳರ ಬಾಳು ಬೆಳಗುತ್ತಿರುವುದು ಏಕೆ? ದ್ರೋಹಿಗಳೆಲ್ಲರು ನೆಮ್ಮದಿಯಾಗಿರುವುದು ಏಕೆ?


ಸಜ್ಜನನು ಸದ್ಧರ್ಮಿಯಾಗಿ ಜೀವಿಸುತ್ತಾ ಗತಿಸಿಹೋಗುತ್ತಾನೆ; ದುರ್ಜನನಾದರೋ ಅಧರ್ಮದಲ್ಲಿ ಬಹುಕಾಲ ಬದುಕುತ್ತಾನೆ. ಇದನ್ನು ಎಲ್ಲಾ ನನ್ನ ನಿರರ್ಥಕ ಜೀವನದಲ್ಲಿ ಎಷ್ಟೋ ನೋಡಿದ್ದೇನೆ.


ಸ್ವರ್ಗದಲ್ಲಿ ದಾಖಲೆಯಾಗಿರುವ ಜೇಷ್ಠಪುತ್ರನ ಸಭೆಗೆ; ನೀವು ಬಂದಿರುವುದು ಸಕಲ ಮಾನವರ ನ್ಯಾಯಮೂರ್ತಿಯಾದ ದೇವರ ಸನ್ನಿಧಿಗೆ; ಸಿದ್ಧಿಗೆ ಬಂದ ಸತ್ಪುರುಷರ ಆತ್ಮಗಳ ಸಮೂಹಕ್ಕೆ;


ಒಂದು ವೇಳೆ ಆ ಊರೊಳಗೆ ಐವತ್ತು ಮಂದಿ ಸಜ್ಜನರಿದ್ದಾರು. ಅದರಲ್ಲಿ ಐವತ್ತು ಮಂದಿ ಸಜ್ಜನರಿದ್ದರೂ ಆ ಸ್ಥಳವನ್ನು ಉಳಿಸದೆ ನಾಶಮಾಡುವಿರೋ?


ಆ ನ್ಯಾಯಾಧಿಪತಿಗಳಿಗೆ ನಾನು ಆಗ ಕೊಟ್ಟ ಸೂಚನೆ ಇದು: ‘ನೀವು ಸರ್ವಕುಲದವರ ವ್ಯಾಜ್ಯಗಳನ್ನು ವಿಚಾರಿಸಬೇಕು. ಅದು ಇಸ್ರಯೇಲರ ವ್ಯಾಜ್ಯವಾಗಿರಬಹುದು. ಅನ್ಯರೊಡನೆ ವ್ಯಾಜ್ಯವಾಗಿರಬಹುದು. ಎಲ್ಲವನ್ನು ನೀವು ನ್ಯಾಯದ ಪ್ರಕಾರವೇ ತೀರ್ಮಾನಿಸಬೇಕು.


ನ್ಯಾಯ ವಿಚಾರಿಸುವಾಗ ಮುಖದಾಕ್ಷಿಣ್ಯ ಮಾಡಬಾರದು; ಅಧಿಕಾರಿಗೂ ಅಲ್ಪರಿಗೂ ಸಮನಾಗಿ ಕಿವಿಗೊಡಿ; ನೀವು ದೇವರ ಹೆಸರಿನಲ್ಲಿ ನ್ಯಾಯ ತೀರಿಸುವುದರಿಂದ ಯಾವ ಮನುಷ್ಯನಿಗೂ ಹೆದರಬೇಡಿ. ನೀವು ತೀರಿಸಲಿಕ್ಕಾಗದ ವ್ಯಾಜ್ಯಗಳನ್ನು ನನ್ನ ಬಳಿಗೆ ತನ್ನಿ; ನಾನೇ ಅವುಗಳನ್ನು ತೀರಿಸುತ್ತೇನೆ,’ ಎಂದು ಹೇಳಿದೆ.


ನಾನು ನಿನಗೆ ಯಾವ ಅನ್ಯಾಯವನ್ನೂ ಮಾಡಲಿಲ್ಲ. ನೀನು ಈಗ ನನಗೆ ವಿರೋಧವಾಗಿ ಯುದ್ಧಕ್ಕೆ ಬಂದದ್ದರಿಂದ ನೀನೇ ಅನ್ಯಾಯಮಾಡಿದ ಹಾಗಾಯಿತು. ನ್ಯಾಯಸ್ಥಾಪಕರಾದ ಸರ್ವೇಶ್ವರಸ್ವಾಮಿಯೇ ಈ ಹೊತ್ತು ಇಸ್ರಯೇಲರಿಗೂ ಅಮ್ಮೋನಿಯರಿಗೂ ಮಧ್ಯೆ ನ್ಯಾಯ ತೀರಿಸಲಿ,” ಎಂದು ಹೇಳಿಸಿದನು.


ಹೀಗಿರುವಲ್ಲಿ, ನಿಮಗೆ ಅವರ ಭಯಭಕ್ತಿಯಿರಲಿ. ನಿಮ್ಮ ದೇವರಾದ ಸರ್ವೇಶ್ವರನಲ್ಲಿ ಅನ್ಯಾಯ, ಮುಖದಾಕ್ಷಿಣ್ಯ ಹಾಗು ಲಂಚಕೋರತನ ಇಲ್ಲ. ಆದುದರಿಂದ ಜಾಗರೂಕತೆಯಿಂದ ಕೆಲಸಮಾಡಿ,” ಎಂದು ಎಚ್ಚರಿಸಿದನು.


ನಮ್ಮ ಮೇಲೆ ನೀವೆಷ್ಟೇ ಕೇಡನು ಬರಮಾಡಿದರೂ ನೀವು ನ್ಯಾಯವಂತರು, ಸತ್ಯಸ್ವರೂಪಿ, ನಾವೋ ದುಷ್ಟರು!


ಹೀಗಿರಲು ಬುದ್ದಿವಂತರೇ, ನನ್ನ ಮಾತುಗಳಿಗೆ ಕಿವಿಗೊಡಿ ದೇವರು ಕೆಟ್ಟದ್ದನ್ನು ಮಾಡಿಯಾನೆಂಬ ಯೋಚನೆ ದೂರವಿರಲಿ ಸರ್ವಶಕ್ತನು ಅನ್ಯಾಯವನು ಎಸಗಿಯಾನೆಂಬ ಭಾವನೆ ಬಾರದಿರಲಿ.


ಆಗ ನಾನು ಮನಸ್ಸಿನಲ್ಲೇ, “ದೇವರು ಸಜ್ಜನರಿಗೂ ದುರ್ಜನರಿಗೂ ನ್ಯಾಯತೀರಿಸುವರು. ಅವರ ನ್ಯಾಯಕ್ರಮದಲ್ಲಿ ಎಲ್ಲ ಕೆಲಸಕಾರ್ಯಗಳಿಗೂ ತಕ್ಕ ಸಮಯ ಉಂಟಲ್ಲವೆ?” ಎಂದುಕೊಂಡೆ.


ಆಗ ನಾನು, “ಸೇನಾಧೀಶ್ವರರಾದ ಸರ್ವೇಶ್ವರಾ, ನೀವು ಹೃನ್ಮನಗಳನ್ನು ಪರೀಕ್ಷಿಸಿ ನ್ಯಾಯವಾದ ತೀರ್ಪನ್ನು ನೀಡುವವರು. ನೀವು ಅವರಿಗೆ ಮಾಡುವ ಪ್ರತೀಕಾರವನ್ನು ನಾನು ಕಾಣುವೆನು. ನನ್ನ ವ್ಯಾಜ್ಯವನ್ನು ನಿಮ್ಮ ಕೈಗೊಪ್ಪಿಸಿದ್ದೇನೆ,” ಎಂದೆನು.


“ಆದರೆ ನೀವು, ‘ಸರ್ವೇಶ್ವರನ ಕ್ರಮ ಸರಿಯಲ್ಲ’ ಎಂದು ಹೇಳುತ್ತಿದ್ದೀರಿ; ಇಸ್ರಯೇಲ್ ವಂಶದವರೇ, ನನ್ನ ಕ್ರಮವು ಸರಿಯಲ್ಲವೆ? ನಿಮ್ಮ ಕ್ರಮವೇ ಸರಿಯಲ್ಲವಷ್ಟೆ.


ಮೋಶೆ ಮತ್ತು ಆರೋನರು ಅಡ್ಡಬಿದ್ದು, “ದೇವರೇ, ಸರ್ವ ದೇಹಾತ್ಮಗಳಿಗೆ ದೇವರಾಗಿರುವವರೇ, ಒಬ್ಬನೇ ಒಬ್ಬನು ಪಾಪ ಮಾಡಿರುವಲ್ಲಿ ನೀವು ಸಮುದಾಯದ ಎಲ್ಲರ ಮೇಲೆ ಕೋಪಗೊಳ್ಳಬಹುದೆ?” ಎಂದು ಭಿನ್ನವಿಸಿದರು.


ಉಲ್ಲಾಸಿಸಲಿ ಹೊಲಗದ್ದೆಗಳು ಪೈರುಪಚ್ಚೆಗಳು I ಹರ್ಷಧ್ವನಿಗೈಯಲಿ ಕಾಡಿನ ಫಲವೃಕ್ಷಗಳು II


ಹೌದು, ದೇವರು ಎಂದಿಗೂ ಕೆಡುಕನು ಮಾಡನು ಸರ್ವಶಕ್ತನು ಎಂದಿಗೂ ನೇರವಾದುದನು ಡೊಂಕುಮಾಡನು.


ತೀಡುವನು ಕತ್ತಿಯನು, ಹೂಡುವನು ಬಾಣವನು I ಪಡೆಯದಿರೆ ದುರುಳನು ಮನಪರಿವರ್ತನೆಯನು II


ದೇವನೇ ಸತ್ಯಸ್ವರೂಪಿ, ನ್ಯಾಯಾಧಿಪತಿ I ಇದನು ಸಾರಿ ಹೇಳಲಿ ಆಕಾಶ ಪ್ರಕೃತಿ II


ಇಳೆಯು ಭೂನಿವಾಸಿಗಳ ಸಮೇತ ತಳಮಳಗೊಳ್ಳಲು I ಅದರ ತಳಹದಿಯ ಬಿಗಿಹಿಡಿದಿರುವವನು ನಾನಿಲ್ಲದಿನ್ನಾರು? II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು