Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 18:27 - ಕನ್ನಡ ಸತ್ಯವೇದವು C.L. Bible (BSI)

27 ಆಗ ಅಬ್ರಹಾಮನು, “ನಾನಂತೂ ಮಣ್ಣುಬೂದಿ, ಆದರೂ ಸ್ವಾಮಿಯ ಸಂಗಡ ವಾದಿಸುವುದಕ್ಕೆ ಧೈರ್ಯಗೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಅದಕ್ಕೆ ಅಬ್ರಹಾಮನು, “ಇಗೋ, ಮಣ್ಣೂ ಬೂದಿಯೂ ಆಗಿರುವ ನಾನು ಸ್ವಾಮಿಯ ಸಂಗಡ ವಾದಿಸುವುದಕ್ಕೆ ಧೈರ್ಯಗೊಂಡಿದ್ದೇನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಅದಕ್ಕೆ ಅಬ್ರಹಾಮನು - ಇಗೋ, ಮಣ್ಣೂ ಬೂದಿಯೂ ಆಗಿರುವ ನಾನು ಸ್ವಾವಿುಯ ಸಂಗಡ ವಾದಿಸುವದಕ್ಕೆ ಧೈರ್ಯಗೊಂಡಿದ್ದೇನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಆಗ ಅಬ್ರಹಾಮನು ಯೆಹೋವನಿಗೆ, “ನಿನಗೆ ನನ್ನನ್ನು ಹೋಲಿಸಿಕೊಂಡರೆ, ನಾನು ಕೇವಲ ಧೂಳು ಮತ್ತು ಬೂದಿ. ಆದರೆ ಈ ಪ್ರಶ್ನೆಯನ್ನೂ ಕೇಳಲು ನನಗೆ ಅವಕಾಶಕೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಆಗ ಅಬ್ರಹಾಮನು, “ಇಗೋ, ಮಣ್ಣೂ, ಬೂದಿಯೂ ಆಗಿರುವ ನಾನು ಯೆಹೋವ ದೇವರ ಸಂಗಡ ಮಾತನಾಡುವುದಕ್ಕೆ ಧೈರ್ಯಗೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 18:27
18 ತಿಳಿವುಗಳ ಹೋಲಿಕೆ  

ಆಗ ನಾನು “ಅಯ್ಯೋ, ನನ್ನ ಗತಿಯೇನು? ನನ್ನ ಕಥೆ ಮುಗಿಯಿತು. ಅಶುದ್ಧ ವದನದವನು ನಾನು. ಅಶುದ್ಧ ವದನದವರ ಮಧ್ಯೆ ಬಾಳುವವನು. ನನ್ನ ಕಣ್ಣುಗಳು ರಾಜಾಧಿರಾಜನನ್ನು, ಸೇನಾಧೀಶ್ವರ ಸರ್ವೇಶ್ವರನನ್ನು ಕಂಡೆವಲ್ಲಾ !” ಎಂದು ಕೂಗಿಕೊಂಡೆನು.


ಇದನ್ನು ಕಂಡ ಸಿಮೋನ್ ಪೇತ್ರನು ಯೇಸುವಿನ ಕಾಲಿಗೆ ಬಿದ್ದು, “ಸ್ವಾಮೀ, ನಾನು ಪಾಪಾತ್ಮ; ನನ್ನಿಂದ ದೂರವಿರಿ!” ಎಂದನು.


ನೀನುತ್ಪತ್ತಿಯಾದ ಮಣ್ಣಿಗೆ ಮರಳಿ ಸೇರುವ ತನಕ ಗಳಿಸಬೇಕು ಕವಳವನ್ನು ನೆತ್ತಿಬೆವರಿಡುತ. ಮಣ್ಣಿನಿಂದಲೇ ಬಂದವನು ನೀನು ಮರಳಿ ಮಣ್ಣಿಗೆ ಸೇರತಕ್ಕವನು."


ನಿರಾಶರಾಗದೆ ನಿರಂತರವಾಗಿ ಪ್ರಾರ್ಥನೆ ಮಾಡಬೇಕು ಎಂಬುದನ್ನು ಕಲಿಸಲು, ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಈ ಸಾಮತಿಯನ್ನು ಹೇಳಿದರು:


ಆದರೂ ಸ್ವಾಮಿ ಸರ್ವೇಶ್ವರಾ, ನೀವು ನಮ್ಮ ತಂದೇ. ನಾವು ಜೇಡಿಮಣ್ಣು, ನೀವೇ ಕುಂಬಾರ; ನಾವೆಲ್ಲರು ನಿಮ್ಮ ಕೈಯ ಕೃತಿಗಳು.


ಮಣ್ಣಿನ ದೇಹ ತನ್ನ ಭೂಮಿಗೆ ಸೇರಿಹೋಗುವುದು; ಆತ್ಮವು ತನ್ನನ್ನು ದಯಪಾಲಿಸಿದ ದೇವರ ಬಳಿಗೆ ಸೇರುವುದು. (ಇಷ್ಟರೊಳಗೆ ನಿನ್ನ ಸೃಷ್ಟಿಕರ್ತನನ್ನು ಸ್ಮರಿಸದಿರಬೇಡ).


ನನ್ನನು ಕೆಸರಿನಲ್ಲಿ ಕೆಡವಿದ್ದಾರೆ ನನ್ನನು ಭಸ್ಮಕ್ಕೆ ಸಮಾನನನ್ನಾಗಿಸಿದ್ದಾರೆ.


ಇಂತಿರಲು ದೂಳಿನಲ್ಲಿ ತಳವೂರಿ, ಮಣ್ಣಿನೊಡಲ ಹೊಕ್ಕು ಬಾಳಿ ಹುಳುವಿನಷ್ಟು ಸುಲಭವಾಗಿ ಅಳಿದುಹೋಗುವವರಲ್ಲಿ ಮತ್ತೆಷ್ಟು ತಪ್ಪೆಣಿಸಲಾರನಾತ ಅಂಥ ನರಮಾನವರಲ್ಲಿ?


ಹೀಗಿರಲು ದೇವರಾದ ಸರ್ವೇಶ್ವರ ನೆಲದ ಮಣ್ಣಿನಿಂದ ಮನುಷ್ಯನನ್ನು ರೂಪಿಸಿ ಅವನ ಮೂಗಿನಲ್ಲಿ ಜೀವಶ್ವಾಸವನ್ನು ಊದಿದರು. ಆಗ ಮನುಷ್ಯನು ಜೀವಾತ್ಮನಾದನು.


ಹೇ ಪ್ರಭೂ, ಮನುಜನು ಎಷ್ಟರವನು, ನೀನವನನು ಲಕ್ಷಿಸಲು I ನರಮಾನವನು ಏತರವನು, ನೀನವನನು ಪರಾಮರಿಸಲು II


ಇಂತಿರಲು, ಮನುಜನು ಎಷ್ಟರವನು ನೀನವನನು ಲಕ್ಷಿಸಲು? I ಏತರದವನು ನರಮಾನವನು ನೀನವನನು ಪರಾಮರಿಸಲು? II


“ನನ್ನ ದೇವರೇ, ನಾನು ಮನಗುಂದಿದವನು ಆಗಿದ್ದೇನೆ; ನಿಮ್ಮ ಕಡೆಗೆ ಮುಖವನ್ನು ಎತ್ತುವುದಕ್ಕೆ ನಾಚಿಕೊಳ್ಳುತ್ತೇನೆ. ನನ್ನ ದೇವರೇ, ನಮ್ಮ ಪಾಪಗಳು ನಮ್ಮ ತಲೆಮೀರಿ ಬೆಳೆದಿವೆ; ನಮ್ಮ ಅಪರಾಧ ಆಕಾಶವನ್ನು ಮುಟ್ಟುವಷ್ಟು ದೊಡ್ಡದಾಗಿದೆ!


ಒಂದು ವೇಳೆ ಐವತ್ತು ಮಂದಿ ಸಜ್ಜನರಿಗೆ ಐದು ಮಂದಿ ಕಡಿಮೆಯಾಗಿದ್ದಾರು. ಐದು ಮಂದಿ ಕಡಿಮೆಯಾದುದಕ್ಕೆ ಪಟ್ಟಣವನ್ನೆಲ್ಲ ನಾಶಮಾಡುವಿರೋ?” ಎಂದು ಕೇಳಲು ಸರ್ವೇಶ್ವರ, “ಅಲ್ಲಿ ನಲವತ್ತೈದು ಮಂದಿ ಸಿಕ್ಕಿದರೆ ಅದನ್ನು ನಾಶಮಾಡುವುದಿಲ್ಲ” ಎಂದರು.


ಆಗ ಮೋಶೆ ತನ್ನ ದೇವರಾದ ಸರ್ವೇಶ್ವರನನ್ನು ಹೀಗೆಂದು ಬೇಡಿಕೊಂಡನು: “ಸ್ವಾಮಿ ಸರ್ವೇಶ್ವರಾ, ಮಹಾಶಕ್ತಿಯಿಂದಲೂ ಭುಜಬಲದಿಂದಲೂ ತಾವೇ ಈಜಿಪ್ಟಿನಿಂದ ಬಿಡಿಸಿದ ತಮ್ಮ ಪ್ರಜೆಯ ಮೇಲೆ ಕೋಪಾಗ್ನಿ ಕಾರಬಹುದೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು