Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 18:8 - ಕನ್ನಡ ಸತ್ಯವೇದವು C.L. Bible (BSI)

8 ತರುವಾಯ ಅಬ್ರಹಾಮನು ಹಾಲು ಮೊಸರನ್ನು ಹಾಗು ಅಟ್ಟ ಮಾಂಸವನ್ನು ತೆಗೆದುಕೊಂಡು ಬಂದು ಆ ಮನುಷ್ಯರಿಗೆ ಬಡಿಸಿದನು. ಅವರು ಮರದ ಕೆಳಗೆ ಊಟಮಾಡಿ ಮುಗಿಸುವವರೆಗೂ ಅವನೇ ಹತ್ತಿರ ನಿಂತು ಉಪಚಾರ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆಳು ಬೇಗನೆ ಕೊಬ್ಬಿದ ಕರುವನ್ನು ಕಡಿದು, ಅಡಿಗೆ ಮಾಡಿದನು. ತರುವಾಯ ಅಬ್ರಹಾಮನು ಹಾಲು ಮೊಸರನ್ನೂ ಅಡಿಗೆ ಮಾಡಿದ ಮಾಂಸವನ್ನೂ ತೆಗೆದುಕೊಂಡು ಬಂದು ಆ ಮನುಷ್ಯರಿಗೆ ಬಡಿಸಿದನು. ಅವರು ಮರದ ಕೆಳಗೆ ಕುಳಿತು ಊಟ ಮಾಡುವವರೆಗೂ ಅವನು ಹತ್ತಿರ ನಿಂತು ಅವರಿಗೆ ಉಪಚಾರ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ತರುವಾಯ ಅಬ್ರಹಾಮನು ಹಾಲುಮೊಸರನ್ನೂ ಅಟ್ಟ ಮಾಂಸವನ್ನೂ ತೆಗೆದುಕೊಂಡು ಬಂದು ಆ ಮನುಷ್ಯರಿಗೆ ಬಡಿಸಿದನು. ಅವರು ಮರದ ಕೆಳಗೆ ಊಟಮಾಡುವವರೆಗೂ ಅವನು ಹತ್ತಿರ ನಿಂತುಕೊಂಡು ಉಪಚಾರ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಅಬ್ರಹಾಮನು ಆ ಮೂವರಿಗೆ ಮಾಂಸದ ಅಡಿಗೆಯನ್ನು ಬಡಿಸಿದನು. ಇದಲ್ಲದೆ ಅವನು ಹಾಲನ್ನೂ ಬೆಣ್ಣೆಯನ್ನೂ ಕೊಟ್ಟನು. ಆ ಮೂವರು ಊಟ ಮಾಡುವಾಗ ಅಬ್ರಹಾಮನು ಅವರ ಸಮೀಪದಲ್ಲಿ ಮರದ ಕೆಳಗೆ ನಿಂತುಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ತರುವಾಯ ಮೊಸರನ್ನೂ, ಹಾಲನ್ನೂ, ಪಕ್ವಮಾಡಿದ ಮಾಂಸವನ್ನೂ ತೆಗೆದುಕೊಂಡು ಅವರ ಮುಂದೆ ಇಟ್ಟನು. ಅವನಾದರೋ ಮರದ ಕೆಳಗೆ ಅವರ ಹತ್ತರ ನಿಂತುಕೊಂಡನು. ಅವರು ಊಟಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 18:8
17 ತಿಳಿವುಗಳ ಹೋಲಿಕೆ  

ಅವರು, “ಇಲ್ಲ, ನಾವು ಬೀದಿಯಲ್ಲೇ ರಾತ್ರಿಯನ್ನು ಕಳೆಯುತ್ತೇವೆ,” ಎಂದು ಉತ್ತರಿಸಿದರು. ಅವನು ಬಹಳವಾಗಿ ಒತ್ತಾಯಪಡಿಸಿದ್ದರಿಂದ ಅವನ ಮನೆಯಲ್ಲೇ ತಂಗಲು ಒಪ್ಪಿಕೊಂಡರು. ಅವರು ಮನೆಗೆ ಬಂದಾಗ ಲೋಟನು ಹುಳಿಯಿಲ್ಲದ ರೊಟ್ಟಿಗಳನ್ನು ಸುಡಿಸಿ ಔತಣವನ್ನು ಸಿದ್ಧಗೊಳಿಸಿದನು; ಅವರು ಊಟಮಾಡಿದರು.


ಇಗೋ, ಬಾಗಿಲ ಬಳಿ ನಿಂತು ತಟ್ಟುತ್ತಾ ಇದ್ದೇನೆ. ಯಾವನಾದರೂ ನನ್ನ ಸ್ವರವನ್ನು ಕೇಳಿಸಿಕೊಂಡು ಬಾಗಿಲನ್ನು ತೆರೆದರೆ ನಾನು ಮನೆಯೊಳಗೆ ಪ್ರವೇಶಿಸುತ್ತೇನೆ. ಅವನ ಸಂಗಡ ಊಟಮಾಡುತ್ತೇನೆ ಮತ್ತು ಅವನೂ ನನ್ನ ಸಂಗಡ ಊಟಮಾಡುತ್ತಾನೆ.


ಸಹೋದರರೇ, ನೀವು ಮುಕ್ತ ಸ್ವತಂತ್ರ ಜೀವನವನ್ನು ನಡೆಸಬೇಕೆಂದು ದೇವರು ನಿಮ್ಮನ್ನು ಕರೆದಿದ್ದಾರೆ. ಆದರೆ, ಆ ಸ್ವಾತಂತ್ರ್ಯವನ್ನು ದೈಹಿಕ ಬಯಕೆಗಳಿಗೆ ಸಾಧನವಾಗಿ ಮಾಡಿಕೊಳ್ಳಬೇಡಿ. ಬದಲಾಗಿ, ನೀವು ಒಬ್ಬರಿಗೊಬ್ಬರು ಪ್ರೀತಿಯಿಂದ ಸೇವೆಮಾಡಿರಿ.


ಅವರು ಕಾಣಿಸಿಕೊಂಡದ್ದು ಎಲ್ಲಾ ಜನರಿಗೆ ಅಲ್ಲ; ದೇವರಿಂದ ಸಾಕ್ಷಿಗಳಾಗಿ ಆಯ್ಕೆಯಾಗಿದ್ದ ನಮಗೆ. ಅವರು ಪುನರುತ್ಥಾನ ಹೊಂದಿದ ನಂತರ ಅವರೊಡನೆಯೇ ಊಟಮಾಡಿದವರು ನಾವು.


ಯೇಸುವಿಗೆ ಅಲ್ಲಿ ಒಂದು ಔತಣವನ್ನು ಏರ್ಪಡಿಸಲಾಗಿತ್ತು. ಮಾರ್ತಳು ಬಡಿಸುತ್ತಿದ್ದಳು. ಯೇಸುವಿನೊಡನೆ ಪಂಕ್ತಿಯಲ್ಲಿ ಊಟಕ್ಕೆ ಕುಳಿತಿದ್ದವರಲ್ಲಿ ಲಾಸರನೂ ಒಬ್ಬ.


ಯೇಸು ಅದನ್ನು ತೆಗೆದುಕೊಂಡು ಅವರ ಎದುರಿಗೇ ತಿಂದರು.


ಅವರ ಸಂಗಡ ಊಟಕ್ಕೆ ಕುಳಿತಾಗ, ಯೇಸು ರೊಟ್ಟಿಯನ್ನು ತೆಗೆದುಕೊಂಡು, ದೇವರಿಗೆ ಕೃತಜ್ಞತಾಸ್ತೋತ್ರ ಸಲ್ಲಿಸಿ, ಅದನ್ನು ಮುರಿದು ಅವರಿಗೆ ಕೊಟ್ಟರು.


ಅದಕ್ಕೆ ಬದಲಾಗಿ ‘ಊಟ ಸಿದ್ಧಮಾಡು; ನಾನು ಊಟಮಾಡಿ ಮುಗಿಸುವ ತನಕ ನಡುಕಟ್ಟಿಕೊಂಡು ನನಗೆ ಉಪಚಾರಮಾಡು. ಅನಂತರ ನೀನು ಊಟಮಾಡುವೆಯಂತೆ,’ ಎಂದು ಹೇಳುತ್ತಾರಲ್ಲವೇ?


ಯಜಮಾನನು ಬಂದು ಯಾವ ಯಾವ ಸೇವಕ ಎಚ್ಚರವಾಗಿದ್ದಾನೆಂದು ಕಂಡುಕೊಳ್ಳುತ್ತಾನೋ, ಅಂಥವರು ಭಾಗ್ಯವಂತರು. ಏಕೆಂದರೆ, ಯಜಮಾನನೇ ನಡುಕಟ್ಟಿನಿಂತು, ಅವರನ್ನು ಊಟಕ್ಕೆ ಕೂರಿಸಿ, ಒಬ್ಬೊಬ್ಬನಿಗೂ ತಾನೇ ಉಪಚಾರ ಮಾಡುವನೆಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ.


ಸೇವೆಮಾಡುತ್ತಿದ್ದ ಯಾಜಕರ ಮತ್ತು ಲೇವಿಯರ ವಿಷಯದಲ್ಲಿ ಯೆಹೂದ್ಯರಿಗೆ ಬಹು ಸಂತೋಷವುಂಟಾಯಿತು. ಆ ದಿನದಲ್ಲಿ ಅವರು ಧರ್ಮವಿಧಿಯ ಪ್ರಕಾರ ಆಯಾ ಊರುಗಳ ಭೂಮಿಯಿಂದ ಯಾಜಕರಿಗೂ ಲೇವಿಯರಿಗೂ ಸಿಕ್ಕತಕ್ಕ ಭಾಗಗಳನ್ನು ಅಂದರೆ, ದೇವರಿಗಾಗಿ ಪ್ರತ್ಯೇಕಿಸತಕ್ಕ ವಸ್ತು, ಪ್ರಥಮಫಲ, ದಶಮಾಂಶ ಇವುಗಳನ್ನು ಸಂಗ್ರಹಮಾಡತಕ್ಕ ಕೊಠಡಿಗಳ ಮೇಲೆ ಪಾರುಪತ್ಯಗಾರರನ್ನು ನೇಮಿಸಿದರು.


ಮತ್ತೆ ಮಾನೋಹನು ಸರ್ವೇಶ್ವರನ ದೂತನನ್ನು, “ನಾವು ನಿಮಗಾಗಿ ಒಂದು ಹೋತಮರಿಯನ್ನು ಅಡಿಗೆ ಮಾಡಿ ತರುವವರೆಗೆ ದಯವಿಟ್ಟು ಇಲ್ಲೇ ನಿಲ್ಲಬೇಕು ಎಂದು ಬೇಡಿಕೊಂಡನು. ಅವನು,


ನೀರು ಕೇಳಲು ಹಾಲು ಕೊಟ್ಟಳು ಉತ್ತಮ ಪಾತ್ರೆಯಲ್ಲಿ ಮೊಸರು ಕೊಟ್ಟಳು.


ಆಹಾರಕ್ಕಿತ್ತು, ಆಕಳಿನ ಮೊಸರೋಗರ ಆಡುಕುರಿಗಳ ಕ್ಷೀರ ಬಾಷಾನಿನ ಪುಷ್ಟಪಶು, ಹೋತ, ಕೊಬ್ಬಿದ ಕುರಿಟಗರಿನ ಮಾಂಸ, ಉತ್ತಮವಾದ ಗೋಧೂಮ; ಪಾನಕ್ಕಿತ್ತು ರಕ್ತಗೆಂಪಾದ ದ್ರಾಕ್ಷಾರಸ.


ಅನಂತರ ದನಗಳ ಹಟ್ಟಿಗೆ ಓಡಿಹೋಗಿ ಕೊಬ್ಬಿದ ಎಳೇ ಕರುವನ್ನು ತೆಗೆದು ಆಳಿನ ಕೈಗೆ ಕೊಟ್ಟನು. ಆಳು ಬೇಗನೆ ಅಡಿಗೆ ಮಾಡಿದನು.


ಬಳಿಕ, “ನಿನ್ನ ಹೆಂಡತಿ ಸಾರಳು ಎಲ್ಲಿ?” ಎಂದು ಆ ಅತಿಥಿಗಳು ವಿಚಾರಿಸಿದಾಗ, “ಅಲ್ಲಿ ಗುಡಾರದಲ್ಲಿದ್ದಾಳೆ,” ಎಂದು ಉತ್ತರಕೊಟ್ಟನು.


ಆತನು ‘ಕೆಟ್ಟದ್ದು ಬೇಡ, ಒಳ್ಳೆಯದು ಬೇಕು’ ಎನ್ನುವಷ್ಟು ಬಲ್ಲವನಾಗುವಾಗ ಮೊಸರನ್ನೂ ಜೇನುತುಪ್ಪವನ್ನೂ ತಿನ್ನುವನು.


ಹೌದು, ನಾಡಿನಲ್ಲಿ ಅಳಿದುಳಿದವರೆಲ್ಲರು ಹಾಲು ಜೇನನ್ನೇ ಉಣ್ಣುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು