Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 18:9 - ಕನ್ನಡ ಸತ್ಯವೇದವು C.L. Bible (BSI)

9 ಬಳಿಕ, “ನಿನ್ನ ಹೆಂಡತಿ ಸಾರಳು ಎಲ್ಲಿ?” ಎಂದು ಆ ಅತಿಥಿಗಳು ವಿಚಾರಿಸಿದಾಗ, “ಅಲ್ಲಿ ಗುಡಾರದಲ್ಲಿದ್ದಾಳೆ,” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಬಳಿಕ ಅವರು ಅವನಿಗೆ, “ನಿನ್ನ ಪತ್ನಿಯಾದ ಸಾರಳು ಎಲ್ಲಿದ್ದಾಳೆ” ಎಂದು ಕೇಳಲು ಅವನು “ಅಗೋ, ಗುಡಾರದಲ್ಲಿದ್ದಾಳೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಬಳಿಕ ಅವರು ಅವನನ್ನು - ನಿನ್ನ ಪತ್ನಿಯಾದ ಸಾರಳು ಎಲ್ಲಿದ್ದಾಳೆ ಎಂದು ಕೇಳಲು ಅವನು - ಅಗೋ, ಗುಡಾರದಲ್ಲಿದ್ದಾಳೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆ ಪುರುಷರು ಅಬ್ರಹಾಮನಿಗೆ, “ನಿನ್ನ ಹೆಂಡತಿಯಾದ ಸಾರಳು ಎಲ್ಲಿ?” ಎಂದು ಕೇಳಿದರು. ಅಬ್ರಹಾಮನು ಅವರಿಗೆ, “ಆಕೆ ಗುಡಾರದಲ್ಲಿ ಇದ್ದಾಳೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅವರು ಅಬ್ರಹಾಮನಿಗೆ, “ನಿನ್ನ ಹೆಂಡತಿ ಸಾರಳು ಎಲ್ಲಿ?” ಎಂದು ಕೇಳಲು, ಅವನು, “ಇಗೋ, ಡೇರೆಯಲ್ಲಿದ್ದಾಳೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 18:9
8 ತಿಳಿವುಗಳ ಹೋಲಿಕೆ  

ಗೃಹಿಣಿಯರು, ವಿವೇಕ ಬುದ್ಧಿಯುಳ್ಳವರು, ಪತಿವ್ರತೆಯರು, ಗೃಹಕೃತ್ಯಗಳನ್ನು ಗಮನಿಸುವವರು, ಸುಶೀಲೆಯರು, ಗಂಡಂದಿರಿಗೆ ವಿಧೇಯರು ಆಗಿ ಬಾಳುವುದನ್ನು ವೃದ್ಧಸ್ತ್ರೀಯರಿಂದ ಕಲಿತುಕೊಳ್ಳಲಿ. ಹೀಗೆ, ದೇವರ ವಾಕ್ಯಕ್ಕೆ ಯಾವ ಅಪವಾದವೂ ಬಾರದಂತೆ ಅವರು ನಡೆದುಕೊಳ್ಳಲಿ.


ಇಸಾಕನು ಆಕೆಯನ್ನು ತನ್ನ ತಾಯಿ ಸಾರಳ ಗುಡಾರಕ್ಕೆ ಕರೆದುಕೊಂಡು ಹೋದನು. ಹೀಗೆ ಅವನು ರೆಬೆಕ್ಕಳನ್ನು ವರಿಸಿದನು; ಆಕೆ ಅವನಿಗೆ ಪತ್ನಿಯಾದಳು. ಆಕೆಯ ಮೇಲಿನ ಪ್ರೀತಿ, ತನ್ನ ತಾಯಿ ಸಾರಳನ್ನು ಕಳೆದುಕೊಂಡಿದ್ದ ಅವನಿಗೆ ಸಾಂತ್ವನ ತಂದಿತು.


ಲಾಬಾನನು ಯಕೋಬನ ಗುಡಾರದಲ್ಲೂ, ಲೇಯಳ ಗುಡಾರದಲ್ಲೂ ಹಾಗು ಆ ಇಬ್ಬರು ದಾಸಿಯರ ಗುಡಾರದಲ್ಲೂ ಹುಡುಕಿದನು. ಏನೂ ಸಿಕ್ಕಲಿಲ್ಲ. ಲೇಯಳ ಗುಡಾರವನ್ನು ಬಿಟ್ಟು ರಾಖೇಲಳ ಗುಡಾರಕ್ಕೆ ಬಂದನು.


“ನಿನ್ನ ತಮ್ಮನೆಲ್ಲಿ?" ಎಂದು ಸರ್ವೇಶ್ವರ ಕೇಳಿದಾಗ “ನಾನರಿಯೆ, ನನ್ನ ತಮ್ಮನಿಗೆ ನಾನೇನು ಕಾವಲುಗಾರನೋ” ಎಂದು ಕಾಯಿನನು ಉತ್ತರ ಕೊಟ್ಟನು.


ದೇವರು ವಾಗ್ದಾನ ಮಾಡಿದ ನಾಡಿಗೆ ಬಂದಾಗಲೂ ಆತನು ಅದೇ ವಿಶ್ವಾಸದ ನಿಮಿತ್ತ ಒಬ್ಬ ಅನ್ಯದೇಶಿಯನಂತೆ ಬಾಳಿದನು. ಡೇರೆಗಳಲ್ಲಿದ್ದುಕೊಂಡು ಒಬ್ಬ ಪ್ರವಾಸಿಗನಂತೆ ಜೀವಿಸಿದನು. ಅದೇ ವಾಗ್ದಾನಕ್ಕೆ ಸಹಬಾಧ್ಯಸ್ಥರಾದ ಇಸಾಕನೂ ಯಕೋಬನೂ ಅವನಂತೆಯೇ ಡೇರೆಗಳಲ್ಲಿ ವಾಸಿಸಿದರು.


ಆದರೆ ಸರ್ವೇಶ್ವರನಾದ ದೇವರು, “ಎಲ್ಲಿರುತ್ತೀಯಾ?” ಎಂದು ಆದಾಮನನ್ನು ಕೂಗಿ ಕೇಳಿದರು.


ತರುವಾಯ ಅಬ್ರಹಾಮನು ಹಾಲು ಮೊಸರನ್ನು ಹಾಗು ಅಟ್ಟ ಮಾಂಸವನ್ನು ತೆಗೆದುಕೊಂಡು ಬಂದು ಆ ಮನುಷ್ಯರಿಗೆ ಬಡಿಸಿದನು. ಅವರು ಮರದ ಕೆಳಗೆ ಊಟಮಾಡಿ ಮುಗಿಸುವವರೆಗೂ ಅವನೇ ಹತ್ತಿರ ನಿಂತು ಉಪಚಾರ ಮಾಡಿದನು.


ಆಗ ಸರ್ವೇಶ್ವರ ಸ್ವಾಮಿ, “ಬರುವ ವರ್ಷ ಇದೇ ಕಾಲದಲ್ಲಿ ನಾನು ತಪ್ಪದೆ ಮರಳಿ ನಿನ್ನ ಬಳಿಗೆ ಬರುತ್ತೇನೆ; ಬಂದಾಗ ನಿನ್ನ ಹೆಂಡತಿ ಸಾರಳಿಗೆ ಮಗನಿರುತ್ತಾನೆ,” ಎಂದರು. ಈ ಮಾತು ಹಿಂದೆ ಗುಡಾರದ ಬಾಗಿಲಲ್ಲಿ ನಿಂತಿದ್ದ ಸಾರಳ ಕಿವಿಗೆ ಬಿದ್ದಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು