Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 19:1 - ಕನ್ನಡ ಸತ್ಯವೇದವು C.L. Bible (BSI)

1 ಆ ದೂತರಿಬ್ಬರು ಸೊದೋಮಿಗೆ ಬಂದಾಗ ಸಾಯಂಕಾಲವಾಗಿತ್ತು. ಲೋಟನು ಆ ಊರಬಾಗಿಲಲ್ಲೇ ಕುಳಿತುಕೊಂಡಿದ್ದನು. ದೂತರನ್ನು ಕಂಡದ್ದೇ ಅವನು ಎದ್ದುಬಂದು, ಬಾಗಿ ನಮಸ್ಕರಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆ ದೂತರಿಬ್ಬರು ಸಾಯಂಕಾಲದಲ್ಲಿ ಸೊದೋಮಿಗೆ ಬಂದಾಗ ಲೋಟನು ಸೊದೋಮಿನ ಊರು ಬಾಗಿಲಲ್ಲಿ ಕುಳಿತುಕೊಂಡಿದ್ದನು. ಅವನು ಅವರನ್ನು ಕಂಡಾಗ ಎದ್ದು, ಎದುರುಗೊಂಡು ತಲೆ ಬಾಗಿ ನಮಸ್ಕರಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆ ದೂತರಿಬ್ಬರು ಸಾಯಂಕಾಲದಲ್ಲಿ ಸೊದೋವಿುಗೆ ಬಂದಾಗ ಲೋಟನು ಸೊದೋವಿುನ ಊರುಬಾಗಲಲ್ಲಿ ಕೂತುಕೊಂಡಿದ್ದನು. ಅವನು ಅವರನ್ನು ಕಂಡಾಗ ಎದ್ದು ಎದುರುಗೊಂಡು ಬೊಗ್ಗಿ ನಮಸ್ಕರಿಸಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಆ ಸಾಯಂಕಾಲ, ದೇವದೂತರಿಬ್ಬರು ಸೊದೋಮ್ ನಗರಕ್ಕೆ ಬಂದರು. ನಗರದ ಬಾಗಿಲುಗಳ ಬಳಿ ಕುಳಿತುಕೊಂಡಿದ್ದ ಲೋಟನು ದೇವದೂತರನ್ನು ಕಂಡು, ಅವರ ಬಳಿಗೆ ಹೋಗಿ ನಮಸ್ಕರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ದೂತರಿಬ್ಬರು ಸಾಯಂಕಾಲದಲ್ಲಿ ಸೊದೋಮಿಗೆ ಬಂದಾಗ, ಲೋಟನು ಸೊದೋಮಿನ ಬಾಗಿಲಲ್ಲಿ ಕುಳಿತಿದ್ದನು. ಲೋಟನು ಅವರನ್ನು ಎದುರುಗೊಳ್ಳುವುದಕ್ಕೆ ಎದ್ದು ನೆಲದವರೆಗೆ ಬಾಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 19:1
15 ತಿಳಿವುಗಳ ಹೋಲಿಕೆ  

ಆಗ ಆ ಇಬ್ಬರು ಮನುಷ್ಯರು ಅಲ್ಲಿಂದ ಸೊದೋಮಿನ ಕಡೆಗೆ ಹೋದರು. ಆದರೆ ಅಬ್ರಹಾಮನು ಸರ್ವೇಶ್ವರ ಸ್ವಾಮಿಯ ಸಂಗಡವೇ ಉಳಿದುಕೊಂಡನು.


ಅತಿಥಿಸತ್ಕಾರ ಮಾಡುವುದನ್ನು ಮರೆಯದಿರಿ. ಅದನ್ನು ಮಾಡುವಾಗ ಅರಿಯದೆ ಕೆಲವರು ದೇವದೂತರನ್ನೇ ಉಪಚರಿಸಿದ್ದಾರೆ.


ಪರದೇಶೀಯರು ಹೊರಬೀದಿಯಲ್ಲಿ ತಂಗಬೇಕಾಗಿರಲಿಲ್ಲ ಪ್ರಯಾಣಿಕರಿಗೆ ನನ್ನ ಬಾಗಿಲು ಸದಾ ತೆರೆದಿತ್ತಲ್ಲಾ.


ಅಂತೆಯೇ, ಲೋತನ ಕಾಲದಲ್ಲೂ ನಡೆಯಿತು. ಜನರು ಅನ್ನಪಾನೀಯಗಳಲ್ಲಿ ಆಸಕ್ತರಾಗಿದ್ದರು; ಲೇವಾದೇವಿಯಲ್ಲಿ ತೊಡಗಿದ್ದರು; ನೆಡುವುದರಲ್ಲೂ ನಿರ್ಮಿಸುವುದರಲ್ಲೂ ನಿರತರಾಗಿದ್ದರು.


ತೆರಹನ ವಂಶವೃಕ್ಷ: ತೆರಹನಿಗೆ ಅಬ್ರಾಮ, ನಾಹೋರ, ಹಾರಾನ ಇವರು ಹುಟ್ಟಿದರು. ಹಾರಾನನಿಗೆ ಲೋಟನು ಹುಟ್ಟಿದನು.


ಆ ಮನುಷ್ಯರು ಅಲ್ಲಿಂದ ಹೊರಟು ಸೊದೋಮ್ ಕಾಣಿಸುತ್ತಿದ್ದ ಒಂದು ಸ್ಥಳಕ್ಕೆ ಬಂದರು. ಅವರನ್ನು ಸಾಗಕಳುಹಿಸುತ್ತಾ ಅಬ್ರಹಾಮನೂ ಅವರ ಜೊತೆಯಲ್ಲೇ ಅಲ್ಲಿಗೆ ಬಂದನು.


ಸ್ವಾಮಿಗಳೇ, ನಿಮ್ಮ ದಾಸನ ಮನೆಗೆ ಬಂದು ರಾತ್ರಿ ತಂಗಿರಿ. ಕಾಲುಗಳನ್ನು ತೊಳೆದುಕೊಳ್ಳಿ. ಬೆಳಿಗ್ಗೆ ಎದ್ದು ನಿಮ್ಮ ಪ್ರಯಾಣವನ್ನು ಮುಂದುವರಿಸಬಹುದು,” ಎಂದನು.


ಅಷ್ಟರಲ್ಲಿ ಒಳಗಿದ್ದ ಆ ಮನುಷ್ಯರು ಕೈಚಾಚಿ ಲೋಟನನ್ನು ತಮ್ಮತ್ತ ಎಳೆದು ಮನೆಯೊಳಗೆ ಹಾಕಿಕೊಂಡು, ಬಾಗಿಲನ್ನು ಮುಚ್ಚಿದರು;


ಊರ ಬಾಗಿಲಲಿ ಕೂರುವವರ ಹರಟೆಗೆ ಕಾರಣನಾದೆನಯ್ಯಾ I ಸಾರಾಯಿ ಮದ್ಯಸಾರ ಕುಡಿವವರ ಪದ್ಯವಸ್ತುವಾದೆನಯ್ಯಾ II


ಅಬ್ರಾಮನು ಕಾನಾನ್ ನಾಡಿನಲ್ಲೇ ವಾಸಮಾಡಿದನು. ಲೋಟನು ಜೋರ್ಡನ್ ನದಿಯ ಸುತ್ತಣ ಊರುಗಳಲ್ಲಿ ವಾಸಮಾಡುತ್ತಾ ಸೋದೋಮ್‍ಗೆ ಸಮೀಪದಲ್ಲಿ ಗುಡಾರಹಾಕಿದನು.


ಅಬ್ರಹಾಮನು ಆ ನಾಡಿಗರಿಗೆ ಬಾಗಿ ವಂದಿಸಿದನು.


ಆಗ ಜೋಸೆಫನು ತಂದೆಯ ಮಡಲಿನಿಂದ ತನ್ನ ಮಕ್ಕಳನ್ನು ಎತ್ತಿಕೊಂಡು ತಂದೆಗೆ ನೆಲದ ತನಕ ಬಾಗಿ ನಮಸ್ಕರಿಸಿದನು.


ಇತ್ತ ಬೋವಜನು ಊರಿನ ಸಭಾಮಂಟಪದ ಬಳಿ ಹೋಗಿ ಅಲ್ಲಿ ಕುಳಿತುಕೊಂಡನು.


ನಾನು ಊರ ಮುಂದಿನ ಚಾವಡಿಗೆ ಹೋದಾಗ ಚೌಕದ ಪೀಠದಲ್ಲಿ ಕುಳಿತುಕೊಂಡಾಗ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು